ಮೈಸೂರು: ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿಧಿ ದುರ್ಬಳಕೆ ಕುರಿತಂತೆ ಕೇಂದ್ರೀಯ ತನಿಖಾ ದಳ (CBI) ಕೇಸ್ ದಾಖಲಿಸಿದೆ. ಸುಮಾರು 300 ಕೋಟಿ ರೂ. ನಿಧಿಯನ್ನು ದುರ್ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಕೋರಿತ್ತು. 2009 ರಿಂದ 2016ರ ನಡುವಿನ ವ್ಯವಹಾರ ತನಿಖೆ ನಡೆಸುವಂತೆ ಕೋರಿ ಸಿಬಿಐಗೆ ರಾಜ್ಯ ಸರ್ಕಾರ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಸಿಬಿಐ ತನಿಖಾ ಪ್ರಕ್ರಿಯೆಯನ್ನು ಬಿರುಸುಗೊಳಿಸಿದೆ. . ಕೆಎಸ್‌ಒಯು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯಡಿ 2009-10 ರಿಂದ 2012-13 ರ ನಡುವೆ 250 ಕೋಟಿ ರೂ., 2013-14 ರಲ್ಲಿ 50 ಕೋಟಿ ರೂ. ಅಕ್ರಮ ಎಸಗಿರುವುದು ಲೆಕ್ಕ ಪರಿಶೋಧನೆ ವೇಳೆ ಬೆಳಕಿಗೆ ತ್ತು. ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2009 ರಿಂದ…
Year: 2023
ಸಿಕ್ಕಿಂನಲ್ಲಿ ಮೇಘಸ್ಫೋಟ; 19 ಮಂದಿ ಸಾವು, ನೂರಕ್ಕೂ ಹೆಚ್ಚು ಮಂದಿ ಕಾಣೆ
ಗ್ಯಾಂಗ್ಟಕ್: ಈಶಾನ್ಯ ಭಾರತದಲ್ಲಿ ಮಳೆ ಅವಾಂತರ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸಿಕ್ಕಿಂ ರಾಜ್ಯದ ಹಲವು ಜಿಲ್ಲೆಗಳೂ ತತ್ತರಗೊಂಡಿದ್ದು ಪ್ರವಾಹಕ್ಕೆ ಈ ವರೆಗೆ 19 ಮಂದಿ ಬಲಿಯಾಗಿದ್ದಾರೆ. ಸಿಕ್ಕಿಂನ ಉತ್ತರ ಭಾಗದ ಜಿಲ್ಲೆಗಳಲ್ಲಿರುವ ಲ್ಹೋನಕ್ ಸರೋವರದ ಬಳಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಸಿಂಗ್ಟಾಮ್, ಬುರ್ದಾಂಗ್, ಲಾಚೆನ್, ಲಾಚುಂಗ್ ಸುತ್ತಮುತ್ತಲ ಪ್ರದೇಶಗಳಲ್ಲಿ ಹಲವಾರು ಮಂದಿ ಪ್ರವಾಸಿಗರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಭಾರೀ ಸಾವು ನೋವಿಗೆ ಕಾರಣವಾದ ಈ ಪ್ರವಾಹದಲ್ಲಿ 100ಕ್ಕೂ ಹೆಚ್ಚು ಮಂದಿ ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದ ಹೊಡೆತಕ್ಕೆ ಸಿಲುಕಿ ಹಾಲು ಸೈನಿಕರೂ ನಾಪತ್ತೆಯಾಗಿದ್ದಾರೆ. ಸುಮಾರು 22 ಸೈನಿಕರು ನಾಪತ್ತೆಯಾಗಿರುವ ಶಂಕೆ ಇದ್ದು ಅವರ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹಲವರನ್ನು ರಕ್ಷಿಸಲಾಗಿದ್ದು ಆ ವೇಳೆ ಗಾಯಗೊಂಡಿರುವ 26 ಮಂದಿಯನ್ನು ಸಿಕ್ಕಿಂನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. Praying…
ಕರಾವಳಿ-ಮಲೆನಾಡಿನಲ್ಲಿ ಅ.10ರಿಂದ 3 ದಿನ ಮಳೆ ಸಾಧ್ಯತೆ
ಬೆಂಗಳೂರು: ಕರಾವಳಿ-ಮಲೆನಾಡಿನಲ್ಲಿ ಅಕ್ಟೋಬರ್ 10ರಿಂದ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಹಂಚಿಕೊಂಡಿದೆ.
ಮುಂಬೈ ಜೈ ಭವಾನಿ ಕಟ್ಟಡ ಅಗ್ನಿದುರಂತ: ಸತ್ತವರ ಸಂಖ್ಯೆ 6ಕ್ಕೆ ಏರಿಕೆ
ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮುಂಬೈನ ಗೋರೆಗಾಂವ್ ಪಶ್ಚಿಮ ಪ್ರದೇಶದ ಜೈ ಭವಾನಿ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡ ಬೆಂಕಿಗೆ ಆಹುತಿಯಾಯಿತು. ಕಟ್ಟಡದಲ್ಲಿದ್ದವರು ಹೊರಗೆ ಬರಲಾಗದೆ ಭೀಕರ ಮಾರಣಹೋಮವೇ ನಡೆದು ಹೋಗಿದೆ. ಗೋರೆಗಾಂವ್ ವೆಸ್ಟ್‌ನ ಆಜಾದ್ ನಗರ ಪ್ರದೇಶದ ನೆಲಮಹಡಿ ಸೇರಿದಂತೆ 6 ಮಹಡಿಗಳನ್ನು ಹೊಂದಿರುವ ಜೈ ಭವಾನಿ ಕಟ್ಟಡದಲ್ಲಿ ಬೆಳಗಿನ ಜಾವ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸುದೀರ್ಘ ಹೊತ್ತು ಕಾರ್ಯಾಚರಣೆ ಕೈಗೊಂಡು ಹಲವರನ್ನು ರಕ್ಷಿಸಿದೆ. ಈ ಬೆಂಕಿ ಅನಾಹುತದಲ್ಲಿ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ನಟ ಮಿಲಿಂದ್ ಗೌತಮ್, ರಾಚೆಲ್ ಅಭಿನಯದ ‘ಅನ್ ಲಾಕ್’ ಹೀಗಿದೆ
ನಟ ವಿಜಯ್ ಅಭಿನಯದ ‘ಲಿಯೋ’; ಟ್ರೈಲರ್ ಬಗ್ಗೆ ಖುಷ್
ದೊಡ್ಡಬಳ್ಳಾಪುರ ಪೊಲೀಸರ ಭರ್ಜರಿ ಬೇಟೆ… ವಿವಿಧ ಪ್ರಕರಣಗಳಲ್ಲಿ 30 ಆರೋಪಿಗಳ ಬಂಧನ
ಬೆಂಗಳೂರು: ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳವು, ಸರಗಳ್ಳತನ, ಗಾಂಜಾ ಪ್ರಕರಣ ಸೇರಿದಂತೆ 56 ಕೇಸುಗಳನ್ನು ಬೇಧಿಸಿರುವ ಪೊಲೀಸರು 30 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಮಾಲು ವಶಪಡಿಸಿಕೊಂಡಿದ್ದಾರೆ. ಬಂಧಿತರಿಂದ ಸುಮಾರು ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಮಾಲು ವಶಪಡಿಸಿಕೊಂಡಿದ್ದಾರೆ.ಈ ಕುರಿತು ದೊಡ್ಡಬಳ್ಳಾಪುರ ನಗರ ಡಿವೈಎಸ್ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ವಿವಿಧ ಠಾಣೆಗಳಲ್ಲಿ ಬೇಧಿಸಿರುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. ಎಎಸ್ಪಿ ಪುರುಷೋತ್ತಮ್, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ರವಿ, ಪಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕಳುವಾಗಿರುವ ಮಾಲುಗಳ ಪತ್ತೆಗೆ ಉಪ ವಿಭಾಗ ಮಟ್ಟದಲ್ಲಿ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿದ್ದು, ಪ್ರಕರಣಗಳ ಬೆನ್ನ ಹತ್ತಿದ ಪೊಲೀಸರು 30 ಮಂದಿ…
ಮರುಹಂಚಿಕೆ ವಿವಾದ; ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ? ಸಿಟಿಜನ್ ರೈಟ್ಸ್ ಫೌಂಡೇಶನ್ ಆತಂಕ
ಬೆಂಗಳೂರು: ಕಾಲೇಜು ಅನುಮತಿ ವಿಳಂಬ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ಮರುಹಂಚಿಕೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆಗಳಿವೆ ಎಂದು ಸಿಟಿಜನ್ ರೈಟ್ಸ್ ಫೌಂಡೇಶನ್ (CRF) ಅಭಿಪ್ರಾಯಪಟ್ಟಿದೆ. ಮಂಗಳೂರಿನ GMRC ಕಾಲೇಜಿನಲ್ಲಿನ ವಿದ್ಯಾರ್ಥಿಗಳ ಪ್ರವೇಶ ವಿಚಾರವಾಗಿ ಸರ್ಕಾರ ಆತುರದ ನಿರ್ಧಾರ ಕೈಗೊಂಡು ವಿದ್ಯಾರ್ಥಿಗಳನ್ನು ಮರು ಹಂಚಿಕೆ ಮಾಡಿದರೆ ಅದರಿಂದ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಯಿತೆಂದು ತಿಳಿಯಬಹುದೇ ಹೊರತು, ವಿದ್ಯಾರ್ಥಿಗಳು ಶಾಶ್ವತವಾಗಿ ತೊಂದರೆ ಅನುಭವಿಸಬಹುದು ಎಂದು (CRF) ಹೇಳಿದೆ. ಮಂಗಳೂರಿನ GMRC ಕಾಲೇಜಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡುವಲ್ಲಿ ವಿಳಂಬವಾಗಿದ್ದು ಈ ಕುರಿತಂತೆ ಹಲವು ಧಾವೆಗಳು ಮಾನ್ಯ ಹೈಕೋರ್ಟಿನಲ್ಲಿ ವಿಚಾರಣಾ ಹಂತದಲ್ಲಿವೆ. ಇದೇ ವೇಳೆ, ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಅವಕಾಶ ನೀಡುವ ಬಗ್ಗೆ ಮಾಹಿತಿ ನೀಡುವಂತೆ ಸೆಪ್ಟೆಂಬರ್ 26ರಂದು ನ್ಯಾಯಪೀಠ ನಿರ್ದೇಶನ ನೀಡಿದ್ದು, ನ್ಯಾಯಪೀಠದ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…
ಖಾಲಿ ಬಿಂದಿಗೆ ಹೊತ್ತು ‘ಕಾವೇರಿ ನೀರು ಉಳಿಸಿ’ ಧರಣಿ; ಫ್ರೀಡಂ ಪಾರ್ಕಲ್ಲಿ 4ನೇ ದಿನವೂ ಜಲ ಸಂರಕ್ಷಣಾ ಸಮಿತಿ ಹೋರಾಟ
ಬೆಂಗಳೂರು; ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಜಲಸಂರಕ್ಷಣಾ ಸಮಿತಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಗುರುವಾರ 4ನೇ ದಿನವೂ ಮುಂದುವರಿಯಿತು. ಖಾಲಿ ಬಿಂದಿಗೆ ಹೊತ್ತು ‘ಕಾವೇರಿ ನೀರು ಉಳಿಸಿ’ ಎಂದು ನಡೆಸಿದ ಧರಣಿ ಗಮನಸೆಳೆಯಿತು. ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಬೆದರಿಕೆಗೆ ಅಂಜಿ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುವ ನೀರು ನಿಲ್ಲಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಮಂತ್ರಿಗಳಿಗೆ ಘೇರಾವ್ ಮಾಡುವ ಚಳುವಳಿ, ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ ಹೋರಾಟಗಾರರು ಈ ವಿಚಾರದಲ್ಲಿ ಸರ್ಕಾರ ರಾಜ್ಯದ ಹಿತವನ್ನು ನಿರ್ಲಕ್ಷಿಸಿದರೆ ದಸರಾ ಆಚರಣೆಗೆ ಅಡ್ಡಿ ಪಡಿಸುವುದಾಗಿ ಎಚ್ಚರಿಕೆ ಮಾಡಬೇಕಾಗುತ್ತದೆ ಎಂಬ ಸಂದೇಶವನ್ನು ರವಾನಿಸಿದರು. ಧರಣಿ ಸತ್ಯಾಗ್ರಹ ಸಂದರ್ಭದಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್, ರಾಜ್ಯದ ಮುಖ್ಯಮಂತ್ರಿ, ನೀರಾವರಿ ಮಂತ್ರಿಗೆ ಇಂಡಿಯಾ ಒಕ್ಕೂಟ ಬೇಕೂ ಅಥವಾ ರಾಜ್ಯದ…
ಬಿಟ್‌ಕಾಯಿನ್ ಹಗರಣ: ಅಂತಾರಾಷ್ಟ್ರೀಯ ಹ್ಯಾಕರ್ ರಾಜೇಂದ್ರಸಿಂಗ್ ಬಗ್ಗೆ ಕುತೂಹಲ
ಬೆಂಗಳೂರು: ಬಿಟ್‌ಕಾಯಿನ್ ಹಗರಣ ಸಂಬಂಧ ತನಿಖೆ ಕೈಗೊಂಡಿರುವ ಎಸ್ಐಟಿ ಪೊಲೀಸರು ಅಂತಾರಾಷ್ಟ್ರೀಯ ಹ್ಯಾಕರ್ ರಾಜೇಂದ್ರಸಿಂಗ್ ನನ್ನುಬಂಧಿಸಿದ್ದಾರೆ. ಸುಮಾರು ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಹ್ಯಾಕರ್ ರಾಜೇಂದ್ರಸಿಂಗ್ ನನ್ನು ಬಂಧಿಸಿದ್ದು ಈತ ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ನಲ್ಲಿ ಹಲವಾರು ಕೃತ್ಯಗಳನ್ನು ನಡೆಸಿದ್ದಾನೆ ಎನ್ನಲಾಗಿದೆ. ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದಈತನಿಗಾಗಿ ಕೇಂದ್ರ ತನಿಖಾ ಸಂಸ್ಥೆಗಳು ಸುದೀರ್ಘ ಕಾಲದಿಂದ ಹುಡುಕಾಟ ನಡೆಸುತ್ತಿದ್ದವು. ಇದೀಗ ಈತ ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದ ತಂಡದ ಬಲೆಗೆ ಬಿದ್ದಿದ್ದಾನೆ. ಪಂಜಾಬ್ ಮೂಲದ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಪ್ರಕರಣದಲ್ಲಿ ಮತ್ತಷ್ಟು ಸತ್ಯ ಹೊರತರುವ ಪ್ರಯತ್ನದಲ್ಲಿದ್ದಾರೆ.
