ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ

ಹ್ಯಾಂಗ್‌ಝೌ: 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಭರ್ಜರಿ ಸೆಣಸಾಟದ ಮೂಲಕ ರೋಮಾಂಚಕಾರಿ ಆತ ಆಡಿದ ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದಾರೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದ್ದು, ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ. Golden Boy Subedar #NeerajChopra does it again. Clinched the #GoldMedal🥇 at the #AsianGames2022 with a spectacular 88.88 meter throw. His dedication, discipline & perseverance is testimony to the indomitable spirit of the #IndianArmy. Congratulations.#AsianGames… pic.twitter.com/gqbfY2PBT6 — ADG PI – INDIAN ARMY (@adgpi) October 4, 2023

ಏಷ್ಯನ್ ಗೇಮ್ಸ್‌ 2023: ಮಹಿಳೆಯರ ರಿಲೇ ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ

ಹ್ಯಾಂಗ್‌ಝೌ: 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದ್ದು, ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇನ್ನೊಂದೆಡೆ ಮಹಿಳೆಯರ 4X400M ರಿಲೇ ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ. ವಿತ್ಯಾ ರಾಮರಾಜ್, ಐಶ್ವರ್ಯ ಕೈಲಾಶ್ ಮಿಶ್ರಾ, ಪ್ರಾಚಿ, ಶುಭಾ ವೆಂಕಟೇಶನ್ ತಂಡ ಫೈನಲ್‌ನಲ್ಲಿ 2:03.75 ಟೈಮಿಂಗ್ ನೊಂದಿಗೆ ಎರಡನೇ ಸ್ಥಾನ ಪಡೆದು ಭಾರತಕ್ಕೆ ಪದಕ ತಂದುಕೊಟ್ಟಿದೆ.

ಏಷ್ಯನ್ ಗೇಮ್ಸ್‌ ಬಾಕ್ಸಿಂಗ್: ಬೆಳ್ಳಿ ಪದಕ ಗೆದ್ದ ಲೊವ್ಲಿನಾ

ಹ್ಯಾಂಗ್‌ಝೌ: 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬೆಳ್ಳಿ ಪದಕ ಗೆದ್ದಿದಾರೆ. ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಅಂತಿಮ ಹಣಾಹಣಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಲಿ ಕಿಯಾನ್ ವಿರುದ್ಧ ವೀರೋಚಿತ ಸೋಲುಂಡರೂ ಲೊವ್ಲಿನಾ ಬೊರ್ಗೊಹೈನ್‌ ಅವರು ಭಾರತದ ಪಾಲಿಗೆ ಬೆಳ್ಳಿ ಪದಕ ತಂದುಕೊಟ್ಟರು. Not the result I was hoping for but still happy with my overall performance in the #AsianGames. I would like to thank MYAS, Assam Govt, SAI, BFI, my coaches & support staff @assampolice @RFYouthSports IOSfor their continued support & faith in me.See you…

ರಾಗಿಗುಡ್ಡ ಗಲಭೆ ಪ್ರಕರಣ: ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ ಭೇಟಿ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಗಲಭೆ ನಡೆದ ರಾಗಿಗುಡ್ಡಕ್ಕೆ ಗುರುವಾರ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ, ಶಿವಮೊಗ್ಗಕ್ಕೆ ಭೇಟಿ ನೀಡುವ ಸತ್ಯಶೋಧನ ತಂಡದಲ್ಲಿ ನಳಿನ್‍ಕುಮಾರ್ ಕಟೀಲ್ ನೇತೃತ್ವದ ಈ ತಂಡದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಡಾ|| ಸಿ.ಎನ್. ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಶಾಸಕರಾದ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಅಬಕಾರಿ ಹಗರಣ; AAP ಸಂಸದ ಸಂಜಯ್ ಸಿಂಗ್ ಬಂಧನ

ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬಂಧನಕ್ಕೊಳಗಾಗಿದ್ದಾರೆ. ಜಾರಿ ನಿರ್ದೇಶನಾಲಯ ಬುಧವಾರ ಬೆಳಿಗ್ಗೆ ಸಂಜಯ್ ಸಿಂಗ್ ಅವರನ್ನು ಬಂಧಿಸಿದ್ದು, ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಮಹತ್ವದ ಮಾಹಿತಿಯನ್ನು ಕಲೆಹಾಕಿದೆ. ರಾಜ್ಯಸಭಾ ಸದಸ್ಯರಾಗಿರುವ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇವರು ಆಮ್ ಆದ್ಮಿ ಪಕ್ಷದ ಎರಡನೇ ನಾಯಕರಾಗಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ದೆಹಲಿಡಿಸಿಎಂ ಮನೀಶ್ ಸಿಸೋಡಿಯಾ ಅವರು ಬಂಧನಕ್ಕೊಳಗಾಗಿದ್ದರು.

ಬಿಜೆಪಿ ಜೊತೆ ಜೆಡಿಎಸ್: ಹೆಚ್ಡಿಕೆ ವಿರುದ್ಧ ಇಬ್ರಾಹಿಂ ಗರಂ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಗೆಲುವು ಸಾಧಿಸಲು ವಿಫಲವಾಗಿರುವ ಜೆಡಿಎಸ್, ಇದೀಗ ಮುಂಬರುವ ಲೋಕಸಭಾ ಚುನಾವಣೆಯತ್ತ ಚಿತ್ತ ಹರಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದ್ದು, ಈ ಸಂಬಂಧ ಎನ್ಡಿಎ ಸೇರ್ಪಡೆ ಪ್ರಕ್ರಿಯೆ ಆರಂಭವಾಗಿದ್ದೇ ತಡ, ಜೆಡಿಎಸ್ ನಾಯಕರಲ್ಲಿ ಮುನಿಸು ಕಾಣಿಸಿಕೊಂಡಿದೆ. ಬಿಜೆಪಿ ನೇತೃತ್ವದ ಮಿತ್ರಪಕ್ಷವಾಗಿ ಗುರುತಿಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ನಿರ್ಧಾರದ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರೇ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪಕ್ಷದೊಳಗಿನ ವಿದ್ಯಮಾನಗಳನ್ನು ಬಹಿರಂಗ ಪಡಿಸಿದ ಸಿಎಂ ಇಬ್ರಾಹಿಂ, ಪಕ್ಷದ ಈ ಮೈತ್ರಿ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ 19 ಶಾಸಕರ ಪೈಕಿ 11 ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ‘ಅನೇಕ ಶಾಸಕರು ನನ್ನೊಂದಿಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾ 20 ರಷ್ಟು ಮುಸ್ಲಿಮರು ಜೆಡಿಎಸ್‌ಗೆ ಮತ ಹಾಕಿದ್ದಾರೆ,…

ದೆಹಲಿಯಲ್ಲಿ ಭೂಮಿ ನಡುಗಿದ ಅನುಭವ; ರಾಜಧಾನಿ ತಲ್ಲಣ

ದೆಹಲಿ: ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಇಂದು ಭೂಕಂಪನ ಉಂಟಾಗಿದೆ. ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು ಹಲವು ಪ್ರದೇಶಗಳಲ್ಲಿ ಜನರು ಬಹುಮಹಡಿ ಕಟ್ಟಡಗಳಿಂದ ಹೊರಗಡೆ ತೆರಳಿ ಪ್ರಾಣಾಪಾಯದಿಂದ ಪಾರಾಗಲು ಪ್ರಯತ್ನಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ದೆಹಲಿ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಹಳೇ ಹುಬ್ಬಳ್ಳಿ ಗಲಭೆ ಕೇಸ್​ ಹಿಂಪಡೆಯಲ್ಲ; ಸಿಎಂ ಸ್ಪಷ್ಟನೆ

ಬೆಳಗಾವಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್​ಗಳು ಹಿಂಪಡೆಯುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್​ಗಳು ಹಿಂಪಡೆಯುವ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ, ಗೃಹ ಇಲಾಖೆಗೆ ಡಿಸಿಎಂ ಪತ್ರ ಬರೆದ ಬಗ್ಗೆ ಬೆಳಗಾವಿ ಏರ್​ಪೋರ್ಟ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣಗಳು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದಿದ್ದಾರೆ. ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ ಎಂದ ಸಿಎಂ, ಯಾವುದೇ ಕೇಸ್​ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.

ಈದ್ ಮಿಲಾದ್ ಮೆರವಣಿಗೆ ಕಲ್ಲು ತೂರಾಟ; 60 ಮಂದಿ ಸೆರೆ

ಶಿವಮೊಗ್ಗ: ಮಲೆನಾಡ ಸೆರಗು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಗಿ ಗುಡ್ಡ ಪ್ರದೇಶದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ವೇಳೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿತ್ತು. ಈ ಘಟನೆ ನಂತರ ಆ ಪ್ರದೇಶ ಉದ್ವಿಗ್ನಗೊಂಡಿತ್ತು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರು ರಾಗಿ ಗುಡ್ಡ ಘಟನೆಗೆ ಸಂಬಂಧಿಸಿದಂತೆ 24 ಎಫ್‌ಐಆರ್‌ ದಾಖಲಿಸಿದ್ದಾರೆ. ಹಿಂಸಾಚಾರ ಸಂಬಂಧ 60 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.