ದೆಹಲಿ: ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಇಂದು ಭೂಕಂಪನ ಉಂಟಾಗಿದೆ. ಹಿಮಾಲಯ ರಾಷ್ಟ್ರ ನೇಪಾಳದ ಹಲವು ಭಾಗಗಳು ಭೂಕಂಪನದ ಹೊಡೆತದಿಂದ ತತ್ತರಿಸಿದೆ. ಪಶ್ಚಿಮ ನೇಪಾಳದಲ್ಲಿ ಈ ಭೂಕಂಪನದ ಕೇಂದ್ರಬಿಂದು ಗೊತ್ತಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದೇ ವೇಳೆ, ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು ಹಲವು ಪ್ರದೇಶಗಳಲ್ಲಿ ಜನರು ಬಹುಮಹಡಿ ಕಟ್ಟಡಗಳಿಂದ ಹೊರಗಡೆ ತೆರಳಿ ಪ್ರಾಣಾಪಾಯದಿಂದ ಪಾರಾಗಲು ಪ್ರಯತ್ನಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ದೆಹಲಿ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.
Year: 2023
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
ಬೆಂಗಳೂರು: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ವರ್ಗಾಯಿಸಲು ತಕ್ಷಣವೇ ಆದೇಶಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್ ವಿಭಾಗೀಯ ಪೀಠವು, ಕಳೆದ ವಿಚಾರಣೆ ವೇಳೆ ತಾತ್ಕಾಲಿಕವಾಗಿ ಪರೀಕ್ಷೆ ಸಂಬಂಧವಾಗಿ ಮಾತ್ರ ರೂಪುರೇಷೆ ಸಿದ್ಧಪಡಿಸಲು ನಿರ್ದೇಶನ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ. GRMCಗೆ NMC ಅನುಮತಿ ವಿಳಂಬ ಹಿನ್ನೆಲೆ ಕಾಲೇಜು ಆಡಳಿತ ಮಂಡಳಿಯು ಸಲ್ಲಿಸಿರುವ ರಿಟ್ ಅರ್ಜಿ ಕುರಿತಂತೆ ನ್ಯಾಯಮೂರ್ತಿಗಳಾದ ಜಿ.ನರೇಂದ್ರ ಹಾಗೂ ವಿಜಯಕುಮಾರ್ ಪಾಟೀಲ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಇಂದು ವಿಚಾರಣೆಗೆ ಬಂತು. ಆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ತಮ್ಮನ್ನು ಬೇರೆ ಕಾಲೇಜಿಗೆ ಮರುಹಂಚಿಕೆ ಮಾಡಬೇಕೆಂದು ಕೋರಿರುವ ಅರ್ಜಿ ಕೂಡಾ ಈ ಪ್ರಕರಣದ ಜೊತೆಯಲ್ಲೇ ವಿಚಾರಣೆಗೆ ಬಂತು. ಕಳೆದ ವಿಚಾರಣೆ ವೇಳೆ ನ್ಯಾಯಪೀಠ ನೀಡಿದ್ದ ನಿರ್ದೇಶನದಂತೆ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗಳಿಗೆ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಮರುಹಂಚಿಕೆ ಮಾಡುವ KEA ಸಿದ್ಧಪಡಿಸಿರುವ ಪಟ್ಟಿಯನ್ನು ಅಡ್ವೊಕೇಟ್ ಜನರಲ್…
ಕರ್ಮಕಾಂಡಗಳ ರಕ್ಷಣೆಗೆ RTI ಕಾರ್ಯಕರ್ತರ ಪಟ್ಟಿ, ಬೆದರಿಕೆ: ಸಿದ್ದು ಸರ್ಕಾರದ ನಡೆಗೆ ಆಕ್ಷೇಪ
ಬೆಂಗಳೂರು: ಮಾಹಿತಿ ಹಕ್ಕಿನಡಿ (ಆರ್‍ಟಿಐ) ವಿವರ ಪಡೆಯುವ ಕಾರ್ಯಕರ್ತರ ಪಟ್ಟಿ ಮಾಡಲು ರಾಜ್ಯದ ಎಲ್ಲ ಇಲಾಖೆಗಳಿಗೆ ರಾಜ್ಯ ಸರಕಾರವು ಸ್ಪಷ್ಟ ಸೂಚನೆ ನೀಡಿದೆ. ಇದು ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾತ್ರವಲ್ಲ ಅಧಿಕಾರ ದುರ್ಬಳಕೆಯ ಕ್ರಮ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ|| ಸಿ.ಎನ್. ಅಶ್ವತ್ಥನಾರಾಯಣ್ ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, RTI ಕಾರ್ಯಕರ್ತರ ಮಾಹಿತಿ ಪಟ್ಟಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ತಾವು ಮಾಡುವ ಕರ್ಮಕಾಂಡ ರಕ್ಷಣೆಗಾಗಿ ಮತ್ತು ಆರ್‍ಟಿಐ ಕಾನೂನಿನ ಉದ್ದೇಶವನ್ನು ಸೋಲಿಸಲು ರಾಜ್ಯದ ಕಾಂಗ್ರೆಸ್ ಸರಕಾರ ಮುಂದಾಗಿದೆ ಎಂದು ಟೀಕಿಸಿದರು. ಮಾಹಿತಿ ಪಡೆಯುವ ಕಾರ್ಯಕರ್ತರನ್ನು ಬೆದರಿಸುವುದು, ಹೆಸರಿಸುವುದಲ್ಲದೆ ಅಧಿಕಾರದ ದುರ್ಬಳಕೆ ಮಾಡಿ ಕೇಸುಗಳನ್ನು ಹಾಕುತ್ತಿದ್ದಾರೆ. ಕಾರ್ಯಕರ್ತರ ಚಲನವಲನ ತಪಾಸಣೆ ಮಾಡಲು, ಬೆದರಿಸಲು ಸರಕಾರ ಮುಂದಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಬಾಯಿಮಾತಿನಲ್ಲಿ ಮಾತ್ರ ಪಾರದರ್ಶಕ ಸರಕಾರ…
ಸಾರಿಗೆ ಬಸ್ ಅವಾಂತರ; ವಿದ್ಯಾರ್ಥಿಗಳ ರೊಚ್ಚು, ಭಾರೀ ಪ್ರತಿಭಟನೆ
ಚಾಮರಾಜನಗರ :ಸಾರಿಗೆ ಸಂಸ್ಥೆ ಅಧಿಕಾರಿಗಳು ತಮ್ಮ ಭರವಸೆ ಈಡೇರದೆ ಮತ್ತದೇ ಚಾಳಿ ಮುಂದುವರೆಸಿದ್ದಾರೆ ಈಗಲೂ ಬಸ್ ನಿರ್ವಾಹಕರು ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿ ಗಳು ದಿಡೀರ್ ಪ್ರತಿಭಟನೆಗೆ ಮುಂದಾದ ಘಟನೆ ಹನೂರು ಪಟ್ಟಣದಲ್ಲಿ ನಡೆದಿದೆ. ಅಜ್ಜೀಪುರ, ರಾಮಪುರ , ಕೌದಳ್ಳಿ ಶಾಗ್ಯ ಭಾಗದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ ಇದರಿಂದ ನೂರಾರು ವಿದ್ಯಾರ್ಥಿಗಳು ದಿನನಿತ್ಯ ಕೊಳ್ಳೇಗಾಲ – ಮೈಸೂರು ಶಾಲಾ ಕಾಲೇಜುಗಳಿಗೆ ತೆರಳಿಗೂ ಆಗುತ್ತಿಲ್ಲ ಅಲ್ಲದೆ ಕಾಲೇಜಿಗೆ ಲೇಟಾಗಿ ಹೋದರೆ ಕಾಲೇಜಿನಲ್ಲಿ ಸಹ ಸೇರಿಸುತ್ತಿಲ್ಲ ಹೀಗೆ ಆದರೆ ನಿಮ್ಮ ಭವಿಷ್ಯ ಏನಾಗಬೇಕು ಎಂದು ತಮ್ಮ ಅಳಲನ್ನು ತೋಡಿಕೊಂಡರು. ಪ್ರತಿಭಟನೆ ನಡೆಸಲು ಮುಂದಾದಾಗ ಸ್ಥಳದಲ್ಲಿ ಇರಬೇಕಾದ ಟಿಸಿ ಅವರು ಸ್ಥಳದಲ್ಲಿ ಇರಲಿಲ್ಲ ಈ ಮಧ್ಯೆ ಪ್ರವೇಶ ಮಾಡಿದ ಪೊಲೀಸರು ಸಮಾಧಾನ ಮಾಡಿ ಪರಿಸ್ಥಿತಿ ತಿಳಿಗೊಳಿಸಿ ವಿದ್ಯಾರ್ಥಿಗಳನ್ನು ಮನಹೋಲಿಸುವ ಪ್ರಯತ್ನ ಮಾಡಿದರು. ಡಿಪೋ ವ್ಯವಸ್ಥಾಪಕರು ಬರೋವರೆಗೂ ಬಸ್ ಬಿಡುವುದಿಲ್ಲ ಎಂದು…
ರಾಜ್ಯದಲ್ಲಿ ಕುಗ್ಗಿದ BJP ಶಕ್ತಿ..! ಕಾಂಗ್ರೆಸ್ ಸ್ಥಿತಿ ಹೇಗಿರುತ್ತೆ? JDS ಚೇತರಿಸಿಕೊಳ್ಳುತ್ತಾ?
ಬೆಂಗಳೂರು: ಲೋಲಸಭಾ ಚುನಾವಣೆಗೆ ಇನ್ನೇನು 5-6 ತಿಂಗಳುಗಳಷ್ಟೇ ಇದ್ದು ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಅದರಲ್ಲೂ ಮೋದಿ ಆಧಿಕಾರ ಯುಗವನ್ನು ಅಂತ್ಯಗೊಳಿಸಲು ಪ್ರತಿಪಕ್ಷಗಳು ಚಕ್ರವ್ಯೂಹ ರೂಪಿಸುತ್ತಿವೆ. ಈ ಸಂಬಂಧ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿದ್ದು ಮುಂಬರುವ ಲೋಕಸಭಾ ಸಮರ ತೀವ್ರ ಕುತೂಹಲ ಕೆರಳಿಸಿದೆ. ಇತ್ತ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕಸರತ್ತು ಕೂಡಾ ಗಮನಸೆಳೆದಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಾಧ್ಯಮಗಳು ನಡೆಸುತ್ತಿರುವ ಚುನಾವಣಾ ಪೂರ್ವ ಸಮೀಕ್ಷೆ ತೀವ್ರ ಕುತೂಹಲ ಸೃಷ್ಟಿಸುತ್ತಿದೆ. ಈ ಪೈಕಿ ಟೈಮ್ಸ್ ನೌ – ಇಟಿಜಿ ರಿಸರ್ಚ್ ಸಮೀಕ್ಷೆ ಅನಾವರಣ ಮಾಡಿರುವ ಫಲಿತಾಂಶ ಅನೇಕಾನೇಕ ಲೆಕ್ಕಾಚಾರಗಳಿಗೆ ಮುನ್ನುಡಿ ಬರೆದಿದೆ. ಟೈಮ್ಸ್ ನೌ – ಇಟಿಜಿ ರಿಸರ್ಚ್ ಸಮೀಕ್ಷೆ ಪ್ರಕಾರ ಈಗಲೇ ಲೋಕಸಭಾ ಚುನಾವಣೆ ನಡೆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ NDA 307 ಸ್ಥಾನಗಳನ್ನು ಗೆದ್ದು ಅಧೀಕಾರದಲ್ಲಿ ಮುದುವರಿಯಲಿದೆ. ಪ್ರತಿಪಕ್ಷಗಳ ಒಕ್ಕೂಟವಾಗಿರುವ ‘ಇಂಡಿಯಾ’ ಮೈತ್ರಿಕೂಟ 175 ಸ್ಥಾನಗಳನ್ನು…
ಸಮೀಕ್ಷೆ: ಈಗಲೇ ಲೋಕಸಭಾ ಚುನಾವಣೆ ನಡೆದರೆ ಮೋದಿ ಮತ್ತೆ ಅಧಿಕಾರಕ್ಕೆ
ದೆಹಲಿ: ಲೋಲಸಭಾ ಚುನಾವಣೆಗೆ ಇನ್ನೇನು 5-6 ತಿಂಗಳುಗಳಷ್ಟೇ ಇದ್ದು ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಅದರಲ್ಲೂ ಮೋದಿ ಆಧಿಕಾರ ಯುಗವನ್ನು ಅಂತ್ಯಗೊಳಿಸಲು ಪ್ರತಿಪಕ್ಷಗಳು ಚಕ್ರವ್ಯೂಹ ರೂಪಿಸುತ್ತಿವೆ. ಈ ಸಂಬಂಧ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿದ್ದು ಮುಂಬರುವ ಲೋಕಸಭಾ ಸಮರ ತೀವ್ರ ಕುತೂಹಲ ಕೆರಳಿಸಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಾಧ್ಯಮಗಳು ನಡೆಸುತ್ತಿರುವ ಚುನಾವಣಾ ಪೂರ್ವ ಸಮೀಕ್ಷೆ ತೀವ್ರ ಕುತೂಹಲ ಸೃಷ್ಟಿಸುತ್ತಿದೆ. ಈ ಪೈಕಿ ಟೈಮ್ಸ್ ನೌ – ಇಟಿಜಿ ರಿಸರ್ಚ್ ಸಮೀಕ್ಷೆ ಅನಾವರಣ ಮಾಡಿರುವ ಫಲಿತಾಂಶ ಅನೇಕಾನೇಕ ಲೆಕ್ಕಾಚಾರಗಳಿಗೆ ಮುನ್ನುಡಿ ಬರೆದಿದೆ. ಟೈಮ್ಸ್ ನೌ – ಇಟಿಜಿ ರಿಸರ್ಚ್ ಸಮೀಕ್ಷೆ ಪ್ರಕಾರ ಈಗಲೇ ಲೋಕಸಭಾ ಚುನಾವಣೆ ನಡೆದರೆ ಮೋದಿ ಸರ್ಕಾರ ಮರುಸ್ಥಾಪನೆಯಾಗುವುದರಲ್ಲಿ ಸಂಶಯವಿಲ್ಲ. ಈ ಸಮೀಕ್ಷೆ ಪ್ರಕಾರ ಬಿಜೆಪಿ ನೇತೃತ್ವದ NDAಗೆ 307 ಸ್ಥಾನಗಳು ಸಿಗುವ ಸಾಧ್ಯತೆಗಳಿವೆ. ಪ್ರತಿಪಕ್ಷಗಳ ಒಕ್ಕೂಟವಾಗಿರುವ ‘ಇಂಡಿಯಾ’ ಮೈತ್ರಿಕೂಟ 175 ಸ್ಥಾನಗಳನ್ನು ಗೆಲ್ಲುವ ಅವಕಾಶ…
ಸರ್ಕಾರದ ವಿರುದ್ದ ಸಿಡಿದೆದ್ದ ಕುರುಬೂರು ಸೈನ್ಯ; ಜಲಾಶಯಗಳ ನೀರು ನಿಲ್ಲಿಸುವ ತನಕ ಚಳುವಳಿ ಘೋಷಣೆ
ಬೆಂಗಳೂರು: ಕಾವೇರಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ಜಲಸಂರಕ್ಷಣಾ ಸಮಿತಿ, ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವ ತನಕ ಚಳುವಳಿ ನಿಲ್ಲಿಸುವುದಿಲ್ಲ ಘೋಷಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗಾಂಧೀಜಯಂತಿ ದಿನ ಮೌನ ಧರಣಿ ಆರಂಭಿಸಿ ಮುಂದಿನ ಹೋರಾಟ ಘೋಷಣೆ ಮಾಡಿರುವ ಜಲಸಂರಕ್ಷಣಾ ಸಮತಿ ಪ್ರಮುಖರು, ಕಾವೇರಿ ನೀರಿನ ಅವೈಜ್ಞಾನಿಕ ತೀರ್ಪಿನ ವಿರುದ್ಧ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಮಾಡಿದ್ದು 29ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರವರನ್ನು ಭೇಟಿ ಮಾಡಿ ಚರ್ಚೆ ಮಾಡಿ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವಂತೆ ,ವಿಶೇಷ ವಿಧಾನ ಮಂಡಲದ ಅಧಿವೇಶನ ಕರೆದು ಸಂಕಷ್ಟ ಸೂತ್ರ ಜಾರಿ ಆಗುವ ತನಕ ನೀರು ಬಿಡುವುದಿಲ್ಲ ಎನ್ನುವ ನಿರ್ಣಯ ಕೈಗೊಳ್ಳಬೇಕೆಂದು ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಕುರುಡು ಆದೇಶ ಆವೈಜ್ಞಾನಿಕ ತೀರ್ಪುಗಳನ್ನ ನೀಡುತ್ತಿರುವ ಕಾರಣ ಈ ಮಂಡಳಿಯನ್ನು ರದ್ದು ಮಾಡಿ ಸ್ವತಂತ್ರ…
ಸಾಲದ ಬಾಧೆ; ಒಂದೇ ಕಟುಂಬದ ಮೂವರು ಸಾವಿಗೆ ಶರಣು
ತುಮಕೂರು : ಸಾಲ ಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಚ್ಚಿಬೀಳಿಸಿದೆ. ಮರಳೂರು ನಿವಾಸಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಈ ಕುಟುಂಬದ ಹಿರಿಯರಾದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಬೆಸ್ಕಾಂ ಇಲಾಖೆಯಿಂದ ಸೇವನಿವೃತ್ತಿ ಹೊಂದಿದ್ದರು ಎನ್ನಲಾಗಿದೆ. ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನ.25,26ರಂದು ಬೆಂಗಳೂರಿನಲ್ಲಿ ‘ಕಂಬಳೋತ್ಸವ’ ತಯಾರಿ ಹೇಗಿದೆ ಗೊತ್ತಾ?
ಮಂಗಳೂರು: ಕರಾವಳಿಯ ಸಾಂಪ್ರದಾಯಿಕ ಕಂಬಳೋತ್ಸವದ ರಂಗು ರಾಜಧಾನಿ ಬೆಂಗಳೂರಿಗೂ ಪಸರಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು “ಬೆಂಗಳೂರು ಕಂಬಳ-ನಮ್ಮ ಕಂಬಳ’ ಹೆಸರಲ್ಲಿ ಹೊಸ ಕಂಬಳ ಜಗತ್ತು ಅನಾವರಣಗೊಳ್ಳಲಿದೆ. ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ‘ಬೆಂಗಳೂರು ಕಂಬಳ-ನಮ್ಮ ಕಂಬಳ’ಕ್ಕೆ ಭರ್ಜರಿ ತಯಾರಿ ಸಾಗಿದ್ದು, ಈ ಸಂಬಂಧ ತುಳುನಾಡಿನಲ್ಲೂ ಕಾರ್ಯತಂತ್ರ ನಡೆಯುತ್ತಿದೆ. ಈ ಸಂಬಂಧ ಮಂಗಳೂರಿನಲ್ಲಿ ಬಾನುವಾರ ನಡೆದ ಸಭೆ ಕಂಬಳ ಕಸರತ್ತಿನ ಕೇಂದ್ರಬಿಂದುವಾಯಿತು. ಶಾಸಕ ಅಶೋಕ ರೈ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ , ಕಂಬಳ ಸಮಿತಿಯ ಪ್ರಮುಖರಾದ ಪಿ.ಆರ್. ಶೆಟ್ಟಿ, ಎರ್ಮಾಳ್ ರೋಹಿತ್ ಹೆಗ್ಡೆ, ಲೋಕೇಶ್, ವಿಜಯ ಕುಮಾರ್ ಕಂಗಿನಮನೆ, ಚಂದ್ರಹಾಸ್ ಸನಿಲ್, ಮುರಳೀಧರ್ ಸಹಿತ ಅನೇಕರು ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗಾರರಿಗೆ…
ಕರಾವಳಿಯ ಹೆಸರಾಂತ ಮಹೇಶ್ ಟ್ರಾವೆಲ್ಸ್ ಮಾಲೀಕ ಸಾವಿಗೆ ಶರಣು
ಮಂಗಳೂರು: ಕರಾವಳಿ ಜಿಲ್ಲೆಯ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಶೇಖ ಅವ್ರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ರಸ್ತೆಯ ಅಪಾರ್ಟ್ಮೆಂಟ್’ನಲ್ಲಿ ಪ್ರಕಾಶ್ ಶೇಖ ಅವರ ಮೃತ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕಾಶ್ ಅವರಿಗೆ 43 ವರ್ಷ ವಯಸ್ಸಾಗಿದೆ. ಖಾಸಗಿ ಸಾರಿಗೆ ಸಂಸ್ಥೆಯನ್ನು ಕಟ್ಟಿ ಅನೇಕರಿಗೆ ಉದ್ಯೋಗ ನೀಡಿದ್ದ ಪ್ರಕಾಶ್ ಶೇಖ ಅವರು ನೂರಕ್ಕೂ ಅಧಿಕ ಬಸ್ಗಳನ್ನು ಹೊಂದಿದ್ದರು. ಪ್ರಕಾಶ್ ಅವರ ಸಾವಿನ ಸುದ್ದಿ ತಿಳಿದ ಕದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
