ಏಷ್ಯನ್ ಗೇಮ್ಸ್’ನಲ್ಲಿ ಭಾರತದ ಮುಂದುವರಿದ ಸ್ವರ್ಣ ಬೇಟೆ

ಬೀಜಿಂಗ್: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್’ನಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಭಾನುವಾರ ಪುರುಷರ ಷಾಟ್ ಪಟ್ ವಿಭಾಗದಲ್ಲಿ ಭಾರತದ ತಜಿಂದರ್ ಪಾಲ್ ಸಿಂಗ್ ತೂರ್ ಸ್ವರ್ಣ ಗೆದ್ದಿದ್ದಾರೆ. Thrilling to the last throw, Tajinderpal Singh Toor wins shotput Gold that puts him in the history books 🇮🇳 pic.twitter.com/6Sy6yTczm6 — Shiv Aroor (@ShivAroor) October 1, 2023 ಅಂತಿಮ ಪಂದ್ಯದಲ್ಲಿ 20.36 ಮೀಟರ್ ದೂರ ಎಸೆಯುವ ಮೂಲಕ ತಜೇಂದರ್ ಪಾಲ್ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಇದೇ ವೇಳೆ, ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ.

ಕಾವೇರಿ ಕದನ: ಕರ್ನಾಟಕ ಜಲ ಸಂರಕ್ಷಣಾ ಸಮಿತಿಯಿಂದ ಮೌನ ಧರಣಿ

ಬೆಂಗಳೂರು: ಕಾವೇರಿ ನೀರಿನ ಅವೈಜ್ಞಾನಿಕ ತೀರ್ಪಿನ ವಿರುದ್ಧ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಮಾಡಿದ್ದು 29ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರವರನ್ನು ಭೇಟಿ ಮಾಡಿ ಚರ್ಚೆ ಮಾಡಿ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವಂತೆ ,ವಿಶೇಷ ವಿಧಾನ ಮಂಡಲದ ಅಧಿವೇಶನ ಕರೆದು ಸಂಕಷ್ಟ ಸೂತ್ರ ಜಾರಿ ಆಗುವ ತನಕ ನೀರು ಬಿಡುವುದಿಲ್ಲ ಎನ್ನುವ ನಿರ್ಣಯ ಕೈಗೊಳ್ಳಬೇಕೆಂದು ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಕುರುಡು ಆದೇಶ ಆವೈಜ್ಞಾನಿಕ ತೀರ್ಪುಗಳನ್ನ ನೀಡುತ್ತಿರುವ ಕಾರಣ ಈ ಮಂಡಳಿಯನ್ನು ರದ್ದು ಮಾಡಿ ಸ್ವತಂತ್ರ ಕಾರ್ಯನಿರ್ವಹಣೆ ಮಾಡುವ ಚುನಾವಣಾ ಆಯೋಗದ ರೀತಿ ಕಾರ್ಯನಿರ್ವಹಿಸುವ ನೀರು ನಿರ್ವಾಹಣ ಪ್ರಾಧಿಕಾರ ರಚಿಸುವಂತೆ ಸರ್ವೋಚ್ಚ ನ್ಯಾಯಾಲಯವನ್ನು ಕೋರಿಕೊಳ್ಳಲು ಒತ್ತಾಯಿಸಲಾಗುವುದು ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಮಳೆ ಹೆಚ್ಚು ಬಂದಾಗ ನೀರು ಸಂಗ್ರಹಿಸಿಕೊಳ್ಳಲು ಮೇಕೆದಾಟು ನಿರ್ಮಾಣ ತಕ್ಷಣ ಕಾರ್ಯಾ ಆರಂಭ ಮಾಡಲು…

ಕಾವೇರಿ ಕಿಚ್ಚು; ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

ಬೆಂಗಳೂರು: ಕಾವೇರಿ ವಿಚಾರದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಾ ರಕ್ತ ಕೊಟ್ಟೆವು ನೀರು ಬಿಡೆವು ಎಂದು ಘೋಷಣೆ ಮೊಳಗಿಸುತ್ತಿದ್ದರೆ, ಇನ್ನೊಂದೆಡೆ ‘ನೆನಪಿರಲಿ’ ಸಿನಿಮಾ ಖ್ಯಾತಿಯ ನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕರ್ನಾಟಕಕ್ಕೆ ದಯವಿಟ್ಟು ನ್ಯಾಯ ಕೊಡಿ ಎಂದು ರಕ್ತದಲ್ಲಿ ಬರೆದ ಪತ್ರದಲ್ಲಿ ಹಸ್ತದ ಅಚ್ಚನ್ನು ನಮೂದಿಸಿದ್ದಾರೆ. ಈ ಪತ್ರವನ್ನು ನಟ ಪ್ರೇಮ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಆಪರೇಷನ್ ಹಸ್ತ: ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಶಾಸಕ

ಗದಗ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಪರೇಷನ್ ಹಸ್ತಕ್ಕೆ ರಹಸ್ಯ ತಂತ್ರಗಾರಿಕೆ ನಡೆದಿದ್ದು ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಅವರು ತಿಳಿಸಿದ್ದಾರೆ. ಗದಗ್ ಜಿಲ್ಲೆ ಕುಂದ್ರಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಣ್ಣ ಲಮಾಣಿ, ತಾವು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದುಪ್ರಕಟಿಸಿದರು. ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಆದರೆ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಲಿಲ್ಲ. ನಾಯಕರ ನಡೆಯಿಂದ ಬೇಸರಗೊಂಡು ತಾವು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾಗಿ ಅವರು ತಿಳಿಸಿದರು.

ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ಸರ್ಕಾರದ ಕ್ರಮ: ವೈದ್ಯ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ

ಬೆಂಗಳೂರು: ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಮರುಹಂಚಿಕೆ ಮಾಡಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿ ವಿವಾದವನ್ನು ಮೆತ್ತಿಕೊಂಡಿದೆ. ಈ ಪ್ರಕ್ರಿಯೆ ವಿರುದ್ಧ ಸಿಡಿದೆದ್ದಿರುವ ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ-ಪಂಗಡ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಡಿಎಂಎ ನಿರ್ದೇಶಕರಿಗೆ ಬರೆದಿರುವ ಪತ್ರದಿಂದಾಗಿ ಇಡೀ ವಿವಾದ ಬಯಲಿಗೆ ಬಂದಿದೆ. ಕಾಲೇಜೊಂದರ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಇದ್ದರೆ ರೂಪುರೇಷೆ ಸಿದ್ದಪಡಿಸಿ ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಲು ವಿಭಾಗೀಯ ಪೀಠ ಸೆಪ್ಟೆಂಬರ್ 26ರಂದು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದು ಪರೀಕ್ಷೆ ಸಂಬಂಧ ತಾತ್ಕಾಲಿಕ ಕ್ರಮವಾಗಿರಬೇಕೆಂದೂ, ಶಾಶ್ವತ ಸ್ಥಳಾಂತರ ಬಗ್ಗೆ ಮೂಲ ಅರ್ಜಿ ಇತ್ಯರ್ಥದವರೆಗೂ ಆದೇಶವನ್ನು ನೀಡುವುದಿಲ್ಲ ಎಂದು ನ್ಯಾಯಪೀಠ ಹೇಳಿತ್ತು. ಆದರೆ ವೈದ್ಯಕೀಯ ಶಿಕ್ಷಣ ಇಲಾಖೆಯು ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ…

2,000 ರೂ ಮುಖಬೆಲೆಯ ನೋಟು ವಿನಿಮಯ ಅವಧಿ ವಿಸ್ತರಣೆ

ದೆಹಲಿ: ದೇಶದಲ್ಲಿ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲಾಗಿದ್ದು ಆ ನೋಟುಗಳ ವಿನಿಮಯ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಅಕ್ಟೋಬರ್​ 7ವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ರಿವರ್ಸ್​ ಬ್ಯಾಂಕ್, 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್​ 7ವರೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ. 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕ್​​​ ಠೇವಣಿ ಅಥವಾ ವಿನಿಮಯ ಮಾಡಿಕೊಳ್ಳಲು ಅವಕಾಶ ಇದೆ ಎಂದು ರಿವರ್ಸ್​ ಬ್ಯಾಂಕ್ ಹೇಳಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಕಾಮಗಾರಿ ಚುರುಕುಗೊಳಿಸಿ: ಭೋಸರಾಜು ಸೂಚನೆ

ಬೆಂಗಳೂರು: ಕೆ.ಸಿ ವ್ಯಾಲಿ, ಹೆಚ್. ಎನ್ ವ್ಯಾಲಿಯಲ್ಲಿ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ಹರಿಸಲಾಗುತ್ತಿದೆ. ಈ ನೀರಿನ ಮೂರನೇ ಹಂತದ ಸಂಸ್ಕರಣೆ ಆ ಭಾಗದ ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಉಸ್ತುವಾರಿ ಸಚಿವರಾದ ಸಚಿವರೊಂದಿಗೆ ಸಮಾಲೋಚನೆ ನಡೆಸುವಂತೆ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಲಹೆಯ ಹಿನ್ನಲೆಯಲ್ಲಿ, ಸಭೆಯನ್ನು ಆಯೋಜಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಭರವಸೆ ನೀಡಿದರು. ವಿಧಾನಸೌಧದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಪ್ರಗತಿ ಕುರಿತ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹೆಚ್. ಎನ್ ವ್ಯಾಲಿ ಏತ ನೀರಾವರಿ ಯೋಜನೆಯ ಅಡಿಯಲ್ಲಿ ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 65 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಿಗೆ…

ಸಿದ್ದರಾಮಯ್ಯ ಅಡ್ಜಸ್ಟ್’ಮೆಂಟ್ ರಾಜಕಾರಣಿ; ಹೆಚ್ಡಿಕೆ ಟೀಕೆ

ಬೆಂಗಳೂರು: ಜೆಡಿಎಸ್ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಲಘುವಾಗಿ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಿದ್ದರಾಮಯ್ಯ ಅವರು ಜಾತ್ಯತೀತ, ಕೋಮುವಾದ ಎಂದು ಹೇಳಿಕೊಂಡೇ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ. ಅವರು ಜಾತ್ಯತೀತ ತತ್ವಗಳನ್ನು ಆಚರಣೆ ಮಾಡುವುದಿಲ್ಲ ಎಂದು ಕುಟುಕಿದ್ದಾರೆ. ಅಲ್ಲದೆ, ಅವರನ್ನು ಛದ್ಮವೇಷಧಾರಿ, ಡೋಂಗಿ ಸಮಾಜವಾದಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ. ‘ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ? ಎಂದು ಕುಮಾರಸ್ವಾಮಿ  ಪ್ರಶ್ನಿಸಿದ್ದಾರೆ. ಕೋಮುವಾದಿ ಎಂದು ಬಿಜೆಪಿಯನ್ನು…

ಈದ್ ಮಿಲಾದ್ ಸಂದರ್ಭ ‘ಕತ್ತಿ’ ಅವಾಂತರ, 2 ಪ್ರಕರಣ, 6 ಮಂದಿ ಮೇಲೆ ಕೇಸ್

ಕೋಲಾರ: ಪವಿತ್ರ ಹಬ್ಬ ಈದ್ ಮಿಲಾದ್ ದಿನದಂದು ಕೋಲಾರದಲ್ಲಿ ಕತ್ತಿ ಪ್ರದರ್ಶಿಸಿದ್ದ ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ‌. ಹಬ್ಬದ ಆಚರಣೆ ವೇಳೆ ಕತ್ತಿಯಿಂದ ಸ್ವಾಗತ ಕಮಾನು ಮಾಡಿದ್ದ ಪ್ರಜರಣದಲ್ಲಿ ಐವರ ವಿರುದ್ದ ದೂರು ದಾಖಲಾಗಿದೆ. ಅಸ್ಲಾಂ ಪಾಷಾ, ಚಾಂದ್ ಪಾಷಾ, ಮನ್ಸೂರ್ ಆಲಿ, ಮೊಹಮದ್ ಬಿಲಾಲ್, ಸಾಧಿಕ್ ಪಾಷಾ ಎಂಬವರ ಮೇಲೆ‌ ಕೋಲಾರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದರೆ, ಈದ್ ಮಿಲಾದ್ ಮೆರವಣಿಗೆ ವೇಳೆ ಕುದುರೆ ಮೇಲೆ ಕುಳಿತು ಕತ್ತಿ ಪ್ರದರ್ಶಿಸಿದ್ದ ಸಗೀರ್ ಎಂಬ ವ್ಯಕ್ತಿ ವಿರುದ್ದ ಮತ್ತೊಂದು ಪ್ರಜರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಮಚಂದ್ರ ರಾವ್ ಅವರಿಗೆ ಭಡ್ತಿ

ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇಬ್ಬರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದು, ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಡಿಜಿಪಿ ಹುದ್ದೆಗೆ ಭಡ್ತಿ ನೀಡಿ ಪೊಲೀಸ್ ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.