ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಇಂದು ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು. ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ…
Year: 2023
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ, 25 ಸಂಸದರು ರಾಜ್ಯದ ಜೊತೆಗಿದ್ದಾರೆ: ಬಿಜೆಪಿ ನಾಯಕರಿಂದ ಅಭಯ
ಬೆಂಗಳೂರು: ಕಾಂಗ್ರೆಸ್ಸಿನವರು 25 ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಿಂದೆಯೂ, ಇವತ್ತು ಮತ್ತು ಮುಂದೆಯೂ ಕರ್ನಾಟಕದ ಜೊತೆಗಿದೆ. ರಾಜ್ಯದ 25 ಸಂಸದರೂ ರಾಜ್ಯದ ನೆಲ, ಜಲದ ಪರವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟಿನಲ್ಲಿ ಕಾವೇರಿ ನೀರಿನ ಆದೇಶದ ಸಂಬಂಧ ಅದನ್ನು ಪರಿವರ್ತಿಸಲು 2018ರಲ್ಲಿ ಕೋರಲಾಗಿತ್ತು. ಅದಕ್ಕಾಗಿ ಅಫಿಡವಿಟ್ ಸಲ್ಲಿಸಲಾಗಿತ್ತು. ಹೆಚ್ಚು ನೀರು ಕೊಡಲು ಕೇಳಲಾಗಿತ್ತು. ಪರಿಣಾಮವಾಗಿ ಸುಪ್ರೀಂ ಕೋರ್ಟ್ ಆದೇಶ ಮಾರ್ಪಾಡು ಮಾಡಿ 14.75 ಟಿಎಂಸಿ ಹೆಚ್ಚು ನೀರನ್ನು ಕೊಟ್ಟಿತ್ತು. ಅದರಲ್ಲಿ ಹಿಂದಿನ ಸಚಿವ ಅನಂತಕುಮಾರರ ಪಾತ್ರ ಪ್ರಮುಖವಾಗಿತ್ತು ಎಂದು ವಿವರಿಸಿದರು. ನೀರಿನಲ್ಲಿ ರಾಜಕೀಯ ನಮ್ಮದಲ್ಲ. ಕರ್ನಾಟಕಕ್ಕೆ ನಮ್ಮ ಬದ್ಧತೆ ಇದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 24,…
ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ
ದೊಡ್ಡಬಳ್ಳಾಪುರ: ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು. ದೊಡ್ಡಬಳ್ಳಾಪುರ ನಗರದಾದ್ಯಂತ ಮೆಡಿಕಲ್, ನಂದಿನಿ ಪಾರ್ಲರ್ ಹೊರತುಪಡಿಸಿ ಎಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಜನರಿಲ್ಲದೆ ಬಣಗುಡುತ್ತಿರುವ ಎಪಿಎಎಂಸಿ, ಕೆಆರ್ ಮಾರುಕಟ್ಟೆ, ಬಸ್ ನಿಲ್ದಾಣ, ಡಿ.ಕ್ರಾಸ್, ಅಂಬೇಡ್ಕರ್ ಸರ್ಕಲ್, ಜಿ.ರಾಮೇಗೌಡ ಸರ್ಕಲ್, ತಾಲ್ಲೂಕು ಆಫೀಸ್ ಸರ್ಕಲ್ ಸೇರಿದಂತೆ ನಗರ ಸಂಪೂರ್ಣ ಸ್ತಬ್ಧವಾಗಿದೆ. ಚಿತ್ರಮಂದಿರಗಳಿಂದಳಿಂದಲೂ ಬಂದ್ ಗೆ ಬೆಂಬಲ, ಸೌಂದರ್ಯಮಹಲ್, ವೈಭವ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ರದ್ದು ಮಾಡಲಾಗಿದೆ. ಉಪನೋಂದಾಣಾಧಿಕಾರಿಗಳ ಕಚೇರಿ ಹೊರತುಪಡಿಸಿ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಸೇರಿದಂತೆ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಸಹ ಬಂದ್ ಆಗಿವೆ.
ಕರ್ನಾಟಕ ಬಂದ್ ಕರೆ ಹಿನ್ನೆಲೆ; ಬೆಂಗಳೂರಿನಲ್ಲಿ ನಿಷೇಧಾಜ್ಞೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕೆಂಬ ಆದೇಶದ ನಂತರ ಭಾರೀ ಪ್ರತಿಭಟನೆ ನಡೆಸುತ್ತಿರುವ ಕನ್ನಡಪರ ಸಂಘಟನೆಗಳು ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬಂದ್ ಕರೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸಹಿತ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇದೇ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಈ ಕುರಿತು ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದಿರುವ ಆಯುಕ್ತರು, ಕೋರ್ಟ್ ಆದೇಶದ ಪ್ರಕಾರ ಬಂದ್‌ಗೆ ಅವಕಾಶ ಇಲ್ಲ. ಹೀಗಾಗಿ ಶುಕ್ರವಾರವೂ ಪ್ರತಿಭಟನೆ ರ್ಯಾಲಿ ಮತ್ರ ನಡೆಸಬಹುದು ಎಂದಿದ್ದಾರೆ. ಬಂದ್ ಹೆಸರಲ್ಲಿ ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುವವರ ವಿರುದ್ದ ಹಾಗೂ ಸಾರ್ವಜನಿಕ ಜೀವನಕ್ಕೆ ಸಮಸ್ಯೆ ಉಂಟು ಮಾಡುವವರ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದವರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಬಂದ್.. ವಕೀಲರಿಗೆ ಬಾರ್ ಅಸೋಸಿಯೇಷನ್ ನೀಡಿದ ಸಂದೇಶ ಹೀಗಿದೆ
ಬೆಂಗಳೂರು: ಕಾವೇರಿ ಕಿಚ್ಚು ಕನ್ನಡಪರ ಸಂಘಟನೆಗಳನ್ನು ರೊಚ್ಚಿಗೆಬ್ಬಿಸಿದೆ. ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕೆಲವು ದಿನಗಳಿಂದ ನಡೆಯುತ್ತಿರುವ ಹೋರಾಟ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮವನ್ನು ಪ್ರತಿಭಟಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ‘ಅಖಂಡ ಕರ್ನಾಟಕ ಬಂದ್’ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ ವಕೀಲರ ಸಂಘವೂ ಬಂದ್ ಬೆಂಬಲಿಸಿದೆ. ನಾಡು-ನುಡಿ ವಿಚಾರದಲ್ಲಿನ ಹೋರಾಟಗಳಲ್ಲಿ ಸಹಭಾಗಿಯಾಗುತ್ತಿರುವ ಬೆಂಗಳೂರು ವಕೀಲರ ಸಂಘ ಈ ಬಾರಿಯೂ ಕನ್ನಡ ಸಂಘಟನೆಗಳ ಜೊತೆಗೆ ನಿಂತಿದೆ. ಇದೇ ವೇಳೆ, ವಕೀಲರ ಸಮೂಹಕ್ಕೆ ಬೆಂಗಳೂರು ವಕೀಲರ ಸಂಘ ಕರೆ ನೀಡಿದ್ದು, ಹೋರಾಟದಲ್ಲಿ ಭಾಗಿಯಾಗಬೇಕೆಂದು ಸಹೋದ್ಯೋಗಿಗಳಿಗೆ ಮನವಿ ಮಾಡಿದೆ. ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಮುಕ್ತರಾಗಿದ್ದಾರೆ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬ ರೆಡ್ಡಿ ತಿಳಿಸಿದ್ದಾರೆ. ವಕೀಲರ ಸಂಘದ ಸಂದೇಶ ಹೀಗಿದೆ: ಬೆಂಗಳೂರು ವಕೀಲರ…
BJP-JDS ಮೈತ್ರಿಯ ಪ್ರತಿಧ್ವನಿ; ಸಿ.ಎಂ.ಇಬ್ರಾಹಿಂಗೆ ಆಹ್ವಾನ ನೀಡಿದ ಕಾಂಗ್ರೆಸ್
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ತುಳಿಯುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದು ಕೆಪಿಸಿಸಿ ವಕ್ತಾರರೂ ಆದ ಮಾಜಿ ಶಾಸಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು ಬಳಸಿಕೊಳ್ಳಲಾಗುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಹಳೇ ಮೈಸೂರು ಭಾಗದಲ್ಲಿ ಕುಮಾರಸ್ವಾಮಿ ಅವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಅವರನ್ನು ಬೈಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ರಮೇಶ್ ಬಾಬು, ಕೇರಳದ ಜೆಡಿಎಸ್ ಶಾಸಕರು ದೇವೆಗೌಡರ ವಿರುದ್ದ ದನಿ ಎತ್ತಿ, ನಾವು ಪ್ರತ್ಯೇಕವಾಗಿ ಉಳಿಯುತ್ತೇವೆ ಎಂದು ಹೇಳಿದ್ದಾರೆ. ಜೆಡಿಎಸ್ ಪ್ರಾದೇಶಿಕ ಪಕ್ಷವಲ್ಲ, ಅದರ ರಾಷ್ಟ್ರೀಯ ಅಧ್ಯಕ್ಷರು ದೇವೇಗೌಡರು. ದೇವೇಗೌಡರು ಸಮಾಜವಾದಿ ಜನತಾ ಪಕ್ಷ. ಎನ್ನುವ ಪ್ರಾದೇಶಿಕ ಪಕ್ಷ ಕಟ್ಟಿದ್ದರು. ಗುದ್ದಲಿ ಹಿಡಿದ ರೈತನ ಪಕ್ಷ ಆದರೆ ಅದು ಸಫಲವಾಗಲಿಲ್ಲ ಎಂದು ಬೊಟ್ಟು ಮಾಡಿದರು. ದೇವೇಗೌಡರು…
ದೊಡ್ಡಬಳ್ಳಾಪುರ ಬಳಿ ಸನ್ನಿವೇಶದ ಅಚ್ಚರಿ; ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು;
ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ನಗರದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ ಕೇಂದ್ರಕ್ಕೆ ಮುಗಿಬಿದ್ದಾರೆ. ಕಳೆದ ನಾಲ್ಕು ದಿನದಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಬೆಳೆಗಳಿಗೆ ಜೀವಕಳೆ ಬಂದಿದೆ. ಉತ್ತಮ ಫಸಲು ನಿರಿಕ್ಷೆಯಲ್ಲಿರುವ ರೈತರು ಯೂರಿಯಾ ರಸಗೊಬ್ಬರ ಕೊಳ್ಳಲು ಮುಗಿಬಿದ್ದರು. ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ 29 ಟನ್ ದಾಸ್ತಾನು ಇದ್ದು, ಬೆಳಗ್ಗೆಯಿಂದಲೇ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ. ಯೂರಿಯಾ ರಸಗೊಬ್ಬರ ದಾಸ್ತಾನು ಕೊರತೆ ಇರುವ ಹಿನ್ನೆಲೆ ಒಬ್ಬ ರೈತರಿಗೆ ತಲಾ ಒಂದು ಚೀಲ ಮಾತ್ರ ನೀಡಲಾಗುತ್ತಿದೆ. 29 ಟನ್ ಯೂರಿಯಾ ಗೊಬ್ಬರ ಸಂಪೂರ್ಣ ಮಾರಟವಾಗಿದೆ. ಮುಂದಿನ ನಾಲ್ಕು ದಿನಗಳ ಒಳಗೆ 150 ಟನ್ ಯೂರಿಯಾ ಬರಲಿದೆ ಎಂದು ಕೃಷಿ…
ಹಸಿರು ಕ್ರಾಂತಿಯ ಪಿತಾಮಹ ಸ್ವಾಮಿನಾಥನ್ ವಿಧಿವಶ, ಪ್ರಧಾನಿ ಸಹಿತ ಗಣ್ಯರ ಕಂಬನಿ
ಚೆನ್ನೈ: ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಗುರುತಾಗಿರುವ ಖ್ಯಾತ ಕೃಷಿ ವಿಜ್ಞಾನಿ ಡಾ. ಮೊಂಕೊಂಬ ಸಾಂಬಶಿವನ್ ಸ್ವಾಮಿನಾಥನ್ ವಿಧಿವಶರಾಗಿದಗದಾರೆ. 98 ವರ್ಷ ಹರೆಯದ ಅವರು, ವಯೋಸಹಜ ಕಾಯಿಲೆಯಿಂದಿದ್ದರೆನ್ನಲಾಗಿದ್ದು ಬುಧವಾರ ಚೆನ್ನೈನಲ್ಲಿ ನಿಧರಾಗಿದ್ದಾರೆ. ಸ್ವಾಮಿನಾಥನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. Deeply saddened by the demise of Dr. MS Swaminathan Ji. At a very critical period in our nation’s history, his groundbreaking work in agriculture transformed the lives of millions and ensured food security for our nation. pic.twitter.com/BjLxHtAjC4 — Narendra Modi (@narendramodi) September 28, 2023
KSRTC ಮಡಿಲಿಗೆ 300ನೇ ಪ್ರಶಸ್ತಿ; ಇದೀಗ ಮತ್ತೆ 3 ಸ್ಕಾಚ್ ಅರ್ಡರ್ ಅಫ್ ಮೆರಿಟ್, 1 ಸ್ಕಾಚ್ ಗವರ್ನೆಸ್ ಪ್ರಶಸ್ತಿ-2023
ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಷ್ಠಿತ ಸಾರಿಗೆ ನಿಗಮ KSRTC ಮಡಿಲಿಗೆ ಈವರೆಗೂ 300 ಪ್ರಶಸ್ತಿಗಳು ಸಿಕ್ಕಿವೆ. ಇದೀಗ ಸ್ಕಾಚ್ ಅರ್ಡರ್ ಅಫ್ ಮೆರಿಟ್ 3 ಪ್ರಶಸ್ತಿ, 1 ಸ್ಕಾಚ್ ಗವರ್ನೆಸ್ ಪ್ರಶಸ್ತಿ-2023 ಕೆಎಸ್ಸಾರ್ಟಿಸಿ ಪಾಲಿಗೆ ಒಲಿದಿದೆ. ದೆಹಲಿ ಮೂಲದ ‘ಸ್ಕ್ವಾಚ್..’ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ KSRTC ನಿಗಮವು ಅನುಷ್ಠಾನ ಮಾಡಿರುವ ಕಾರ್ಮಿಕ ಕಲ್ಯಾಣ ಹಾಗೂ ಸಾಮಾಜಿಕ ಉಪಯುಕ್ತತೆಯ 3 ಉಪಕ್ರಮಗಳಿಗೆ SKOCH ORDER OF MERIT ಪ್ರಶಸ್ತಿಯು…
ನೈಸ್ ಕರ್ಮಕಾಂಡ: ರೈತರ ಭೂಮಿ ವಾಪಸ್ ಕೊಡಿಸದಿದ್ದರೆ ಸಿಂಗೂರು ಮಾದರಿ ಹೋರಾಟ; ಹೆಚ್ಡಿಕೆ ರಣಕಹಳೆ
ಬೆಂಗಳೂರು: ನೈಸ್ ಯೋಜನೆ ಹೆಸರಿನಲ್ಲಿ ಅಕ್ರಮವಾಗಿ ಕಬಳಿಸಿರುವ 11,000 ಸಾವಿರ ಎಕರೆ ಭೂಮಿಯನ್ನು ರಾಜ್ಯ ಸರಕಾರ ವಾಪಸ್ ಪಡೆದು ರೈತರಿಗೆ ಕೊಡಬೇಕು. ಇಲ್ಲವಾದರೆ ಪಶ್ಚಿಮ ಬಂಗಾಳದಲ್ಲಿ ನಡೆದ ಸಿಂಗೂರು ಮಾದರಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಶಾಸಕರ ಭವನದಲ್ಲಿ ನೈಸ್ ಸಂತ್ರಸ್ತ ರೈತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ್ಯ ರೈತರ ಸಂಘ ಹಮ್ಮಿಕೊಂಡಿದ್ದ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ನೈಸ್ ಭೂಮಿ ಕಳೆದುಕೊಂಡಿರುವ ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈ ಹೋರಾಟ ಪಕ್ಷಾತೀತ, ರಾಜಕೀಯಕ್ಕೆ ಅತೀತವಾಗಿ ನಡೆಯಬೇಕು. ಸರ್ಕಾರ ಭೂಮಿಯನ್ನು ವಾಪಸ್ ಕೊಡದಿದ್ದರೆ ಸಿಂಗೂರು ಮಾದರಿ ಹೋರಾಟ ಆರಂಭ ಮಾಡೋಣ. ಯೋಜನೆಯನ್ನು ಕೈಗೆತ್ತಿಕೊಳ್ಳದಿದ್ದರೆ ಭೂಮಿಯನ್ನು ರೈತರಿಗೆ ವಾಪಸ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಸರ್ಕಾರ 5000 ಎಕರೆ…
