‘ಕಾವೇರಿ ಸಂಕಷ್ಟಕ್ಕೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದು ಪರಿಹಾರ ಸೂತ್ರ ಕಂಡುಕೊಳ್ಳಿ’; ಸರ್ಕಾರಕ್ಕೆ ಜಲ ಸಂರಕ್ಷಣಾ ಸಮಿತಿ ಆಗ್ರಹ

ಬೆಂಗಳೂರು: ಬೆಂಗಳೂರು ಜನತೆಯ ಹೋರಾಟದ ಗಂಭೀರತೆಯನ್ನು ಅರಿತು ಕಾವೇರಿ ನೀರು ನಿರ್ವಹಣಾ ಮಂಡಳಿ ಮಂಗಳವಾರದ ಸಭೆಯಲ್ಲಿ ತಮಿಳುನಾಡಿನ 12500 ಕಿಸೆಸ್ ನೀರು ಬಿಡಬೇಕೆಂಬ ಅರ್ಜಿಯನ್ನು ವಜಾ ಮಾಡಿ 5000 ಕೂಸಸ್ ಬಿಡುತ್ತಿದ್ದ ನೀರನ್ನು 3,000 ಕೆ ಇಳಿಸಿದೆ. ಇದು ಜನತೆಯ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಬೆಂಗಳೂರು ಬಂದ್‌ಗೆ ಕರೆ ನೀಡಿದ್ದ ಹಾಗೂ ಬಂದ್ ಬೆಂಬಲಿಸಿದ್ದ ವಿವಿಧ ಸಂಘಟನೆಗಳ ಮುಖಂಡರಾದ ಮುಖ್ಯಮಂತ್ರಿ ಚಂದ್ರು, ಕನ್ನಡ ಚಳುವಳಿ ಮುಖಂಡ ಗುರುದೇವ ನಾರಾಯಣ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕೃಷ್ಣೇಗೌಡ, ಕರ್ನಾಟಕ ಚಾಲಕರ ಒಕ್ಕೂಟ ನಾರಾಯಣಸ್ವಾಮಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪೋಷಕರ ಒಕ್ಕೂಟದ ಯೋಗಾನಂದ, ಪಿಸ್ ಆಟೋ ಒಕ್ಕೂಟದ ಅಧ್ಯಕ್ಷ ರಘು, ಜಯಕರ್ನಾಟಕ ರಕ್ಷಣಾ ಸೇನೆ ಅಧ್ಯಕ್ಷ ರಾಜಪ್ಪ ಹತ್ತಳ್ಳಿ ದೇವರಾಜ್ ಮೊದಲಾದ ಪ್ರಮುಖರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ…

ಡಿಎಂಕೆ ಏಜೆಂಟರಂತೆ ಕಾಂಗ್ರೆಸ್ ಸರ್ಕಾರದ ವರ್ತನೆ: ಬಿ.ಎಸ್.ಯಡಿಯೂರಪ್ಪ ಟೀಕೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ. ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರದ ಸಂಪೂರ್ಣ ವೈಫಲ್ಯವನ್ನು ಖಂಡಿಸಿ ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿಯಿಂದ ನಡೆದ ಧರಣಿ ಸತ್ಯಾಗ್ರಹದ ಸಂದರ್ಭದಲ್ಲಿ ಮಾತನಾಡಿದ ಅವರು, ಡಿಎಂಕೆ ಜೊತೆ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಈ ಸತ್ಯಾಗ್ರಹದಲ್ಲಿ ಜೆಡಿಎಸ್ ಮುಖಂಡರೂ ಭಾಗವಹಿಸಿದ್ದರು. ರಾಜ್ಯದ ಜನರು ಬೀದಿಗಿಳಿದು ಹೋರಾಡುತ್ತಿದ್ದು, ಬಿಜೆಪಿ- ಜೆಡಿಎಸ್ ಇದಕ್ಕೆ ಎಲ್ಲ ರೀತಿಯ ಬೆಂಬಲ ಕೊಡುತ್ತದೆ ಎಂದು ಪ್ರಕಟಿಸಿದರು. ಈಗಲಾದರೂ ಇದನ್ನು ಸರಿಪಡಿಸಿ ಎಂದು ಆಗ್ರಹಿಸಿದರು. ಇಲ್ಲವಾದರೆ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಅದಕ್ಕೆ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದರು. ಜನಹಿತ ಮರೆತ ಸರಕಾರ-…

ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಬಂದ್ ನಡೆಸುವ ಬದಲು ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, “ಮೇಕೆದಾಟು ಯೋಜನೆ ಬೇಕು ಎಂದು ವಿರೋಧ ಪಕ್ಷದವರು ಅಧಿಕಾರಿಗಳಿಗೆ ಅರ್ಜಿ ಕೊಟ್ಟಿದ್ದಾರೆ. ಇಲ್ಲಿ ಕೊಟ್ಟರೆ ಏನು ಪ್ರಯೋಜನ, ಮಾಜಿ ಪ್ರಧಾನಿ ದೇವೆಗೌಡರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನೀವು ದೆಹಲಿಯಲ್ಲಿ ಹೋರಾಟ ಮಾಡಿ, ಇಲ್ಲಿ ಮಾಡಿದರೆ ಏನು ಪ್ರಯೋಜನ?” ಎಂದರು “ಸುಪ್ರೀಂಕೋರ್ಟ್ ಕೂಡ ಮೌಖಿಕವಾಗಿ ಮೇಕೆದಾಟು ಯೋಜನೆಗೆ ಪೂರಕವಾಗಿ ಮಾತನಾಡಿದೆ. 26 ಜನ ಸಂಸದರು ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಪರವಾಗಿ ಮಾತನಾಡಿದರು. ಅದರಂತೆ ಈಗ ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ” ಎಂದು ಆಗ್ರಹಿಸಿದರು. ತಮಿಳುನಾಡಿನ ಜೊತೆ ಡಿ.ಕೆ.ಶಿವಕುಮಾರ್ ಅವರು ಮಾತುಕತೆ ನಡೆಸುತ್ತಿಲ್ಲ ಎಂದು ಕುಮಾರಸ್ವಾಮಿ ಅವರ ಆರೋಪಕ್ಕೆ “ರಾಜ್ಯದ ಹಿತಕ್ಕೆ ಎರಡು ಪಕ್ಷಗಳು ಒಂದಾಗಿದ್ದಾರೆ, ಈಗಲೂ ರಾಜ್ಯದ…

ಕರ್ನಾಟಕ ಬಂದ್ ನಿರ್ಧಾರ ಕೈಬಿಡಿ’: ಕನ್ನಡ ಸಂಘಟನೆಗಳಿಗೆ ಡಿಕೆಶಿ ಮನವಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕರೆ ನೀಡಿರುವ ಕ’ರ್ನಾಟಕ ಬಂದ್ ಕೈಬಿಡುವಂತೆ ಕನ್ನಡ ಸಂಘಟನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಕಾವೇರಿ ಹೋರಾಟಗಾರರ ಬಗ್ಗೆ ನಮಗೆ ತಕರಾರು ಇಲ್ಲ, ಅವರ ಜೊತೆ ನಾವಿರುತ್ತೇವೆ ಎಂದ ಅವರು, ಕರ್ನಾಟಕ ಬಂದ್ ಕರೆಯನ್ನು ವಾಪಸ್ ಪಡೆಯುವಂತೆ ಕನ್ನಡಪರ ಸಂಘಟನೆಗಳ ಮುಂಂಡರಿಗೆ ಮನವಿ ಮಾಡಿದರು.. ಸೆ.29 ರಂದು ಮತ್ತೊಮ್ಮೆ ಬಂದ್ ಎಂದು ಹೇಳಲಾಗುತ್ತಿದೆ, ಇದರಿಂದ ಸಾವಿರಾರು ಕೋಟಿ ವಹಿವಾಟು ಹಾಳಾಗುತ್ತದೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ ಬಂದ್ ಬೇಡ ಎಂದು ಮನವಿ ಮಾಡಿದರು.

KRSನಿಂದ ಒಂದು ಹನಿ ನೀರು ಬಿಡುವುದಿಲ್ಲ: ಸರ್ಕಾರದ ಸ್ಪಷ್ಟನೆ

ಬೆಂಗಳೂರು:”3,000 ಸಾವಿರ ಕ್ಯೂಸೆಕ್ಸ್ ನೀರಿನಲ್ಲಿ ಕೆಆರ್‌ಎಸ್‌ ನಿಂದ ಒಂದು ಹನಿ ನೀರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ರಾಜಿಯಾಗುವುದಿಲ್ಲ. ಮಂಡ್ಯ ಭಾಗದ ರೈತರ ಹಿತ ಮುಖ್ಯ” ಎಂದರು. 12,500 ಕ್ಯೂಸೆಕ್ಸ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು, ನಿಮ್ಮ ಹೋರಾಟದಿಂದ ಸಮಿತಿ 3,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದೆ. ಮತ್ತೊಮ್ಮೆ ಹೋರಾಟ ಏತಕ್ಕೆ ಎಂದರು. ಹೋರಾಟಗಾರರ ಬಗ್ಗೆ ನಮಗೆ ತಕರಾರು ಇಲ್ಲ, ಅವರ ಜೊತೆ ನಾವಿರುತ್ತೇವೆ. ಸೆ.29 ರಂದು ಮತ್ತೊಮ್ಮೆ ಬಂದ್ ಎಂದು ಹೇಳಲಾಗುತ್ತಿದೆ, ಇದರಿಂದ ಸಾವಿರಾರು ಕೋಟಿ ವಹಿವಾಟು ಹಾಳಾಗುತ್ತದೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ ಬಂದ್ ಬೇಡ…

‘ಕಾವೇರಿ ನಮ್ಮದು, ಇಡೀ ಕರ್ನಾಟಕದ ಆಸ್ತಿ’ ಎಂದ ರಶ್ಮಿಕಾ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳ ಹೋರಾಟವನ್ನು ಬೆಂಬಲಿಸಿರುವ ಬಹುಬಾಷಾ ತಾರೆ ರಶ್ಮಿಕಾ ಮಂದಣ್ಣ, ಕಾವೇರಿ ನಮ್ಮದು, ಕಾವೇರಿ ಇಡೀ ಕರ್ನಾಟಕದ ಆಸ್ತಿ ಎಂದು ಹೇಳಿದ್ದಾರೆ. ಶುಕ್ರವಾರದ ಕರ್ನಾಟಕ ಬಂದ್ ಬೆಂಬಲಿಸಿ ಟ್ವೀಟ್ ಮಾಡಿರುವ ನಟಿ ರಶ್ಮಿಕಾ ಮಂದಣ್ಣ, ಕಾವೇರಿ ಎಂದೂ ನಮ್ಮದು. ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಕನ್ನಡಿಗರದು ಎಂದಿದ್ದಾರೆ‌. https://twitter.com/iamrashmikha/status/1706603637911515456?t=HGYdOT5Hf5XVhXQp540e6g&s=19

ಕಾವೇರಿ ಸಮರ: ಕರ್ನಾಟಕ ಬಂದ್‌’ಗೆ ಸ್ಯಾಂಡಲ್‌ವುಡ್ ಬೆಂಬಲ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ರೋಶಗೊಂಡಿವೆ. ಪ್ರಾಧಿಕಾರದ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳು ಕರೆನೀಡಿವೆ. ಶುಕ್ರವಾರದ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇದೇ ವೇಳೆ, ಸ್ಯಾಂಡಲ್‌ವುಡ್ ಕೂಡಾ ಬೆಂಬಲ ವ್ಯಕ್ತಪಡಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿಂದು ಫಿಲಂ ಛೇಂಬರ್ ಪ್ರಮುಖರು ಸಭೆ ನಡೆಸಿ ಕರ್ನಾಟಕ ಬಂಧ್‌ನಲ್ಲಿ ಭಾಗಿಯಾಗುವ ಬಗ್ಗೆ ಚರ್ಚಿಸಿದರು. ಕನ್ನಡ ಚಿತ್ರೋದ್ಯಮದ ಅನೇಕ ಗಣ್ಯರು ಸಭೆಯಲ್ಲಿ ಭಾಗವಹಿಸಿ ಬಂದ್‌ಗೆ ಬೆಂಬಲ ಸೂಚಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ. ಸುರೇಶ್ ಹಾಗೂ ಮಾಜಿ ಅಧ್ಯಕ್ಷ ಸಾ‌ರ.ಗೋವಿಂದ್, ಕರ್ನಾಟಕ ಬಂದ್ ದಿನದಂದು ಚಿತ್ರೋದ್ಯಮ ಬಂದ್ ಮಾಡಿ ಹೋರಾಟದಲ್ಲಿ ನಟ ನಟಿಯರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ…

‘ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ’ ರೈತರ ಬಗ್ಗೆ ಸಿಎಂ ಅನುಮಾನದ ಮಾತು

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ.. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ.. ಮಲೈ ಮಹದೇಶ್ವರ ಬೆಟ್ಟ ಶ್ರಮಿಕ ಶೂದ್ರ ವರ್ಗದ ದೊಡ್ಡ ಅಧ್ಯಾತ್ಮಿಕ ಕ್ಷೇತ್ರ.. ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದ ಸಿಎಂ.. ಚಾಮರಾಜನಗರ: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು. ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.…

ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ KSRTC ಬಸ್-ಕಾರ್ ಡಿಕ್ಕಿ: ನಾಲ್ವರ ದುರ್ಮರಣ.

ಬೆಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ KSRTC ಬಸ್ ಹಾಗೂ ಕಾರ್ ಡಿಕ್ಕಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಬಳಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಅಪಘಾತ‌ ಸಂಭವಿಸಿದೆ. ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗ ರಸ್ತೆ ಬದಿ ನಿಂತಿದ್ದ KSRTC ಬಸ್‌ಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು‌ ಹಾನಿಗೋಡಾಗಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ‌ ನೀಡಿದ ಬೆಳ್ಳೂರು ಠಾಣೆಯ ಪೊಲೀಸರು, ಪರಿಶೀಲನೆ. ನಡೆಸಿದ್ದಾರೆ.

ಪೊಲೀಸರಿಗೆ ‘ಇಲಿ ಬಿರಿಯಾನಿ’? ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ದ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಇಲಾಖೆ ಇದೆಯೇ ಎಂಬ ಪ್ರಶ್ನೆ ಎದುರಾಗಿದೆ. ಬೆಂಗಳೂರು ಸೇರಿದಂತೆ ಅನೇಕ‌ ನಗರಗಳಲ್ಲಿ ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಹೊಟೇಲ್ ಹಾಗೂ ಆಹಾರ ಮಳಿಗೆಗಳು ಕಳಪೆ ಆಹಾರ ಮಾರಾಟ ಮಾಡುತ್ತಿರುವ ಬಗ್ಗೆ ಸಾಮಾಜಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಲೇ ಇದೆ. ಬಹುತೇಕ ಹೊಟೇಲ್‌ಗಳಲ್ಲಿ ಕ್ಯಾನ್ಸರ್‌ಕಾರಕ ಚೈನಾ ಸಾಲ್ಟ್ ಬಳಕೆ ಮಾಡುತ್ತಿರುವುದನ್ನು ತಡೆಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.ಈ ಟೇಸ್ಟಿಂಗ್ ಪೌಡರ್ ಅವಾಂತರಗಳು ಒಂದೆಡೆಯಾದರೆ ಇತ್ತ ‘ಇಲಿ ಬಿರಿಯಾನಿ’ ಕಥೆ ಪೊಲೀಸರನ್ನೇ ಗಲಿಬಿಲಿಗೊಳಿಸಿದೆ. ಇದು ನಿರ್ಲಕ್ಷ್ಯದ ಪರಿಣಾಮವೋ ಗೊತ್ತಿಲ್ಲ, ಮಂಗಳವಾರ ಬೆಂಗಳೂರು ಬಂದ್ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರಿಗೆ ಪೂರೈಕೆಯಾದ ಊಟದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಸುದ್ದಿಯು ತಲ್ಲಣದ ತರಂಗ ಎಬ್ಬಿಸಿದೆ. ಈ ಕುರಿತ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್ ವ್ಯಕ್ತವಾಗುತ್ತಿದೆ. ಈ ಕುರಿತಂತೆ ಪ್ರತಿಪಕ್ಷ ಬಿಜೆಪಿ ಕೂಡಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಟ್ವೀಟ್ ಮಾಡಿರುವ ಬಿಜೆಪಿ,…