ಬಾಗ್ದಾದ್‌ನಲ್ಲಿ ಭೀಕರ ಅವಘಡ; ಮದುವೆ ಮನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಸಜೀವ ದಹನ

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ಬಳಿ ಮದುವೆ ಸಭಾಂಗಣದಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿ 100ಕ್ಕೂ ಹೆಛಚು ಮಂದಿ ಸಜೀವ ದಹನಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್‌ನಲ್ಲಿ ಅಗ್ನಿ ಸ್ಪರ್ಶವಾಗಿ ಬೆಂಕಿ ಸಭಾಂಗಣವನ್ನು ಆವರಿಸಿ ಈ ಭೀಕರ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಎಂಬಲ್ಲಿ, ಕ್ರಿಶ್ಚಿಯನ್ ಸಮುದಾಯದ ಪ್ರಾಬಲ್ಯ ಇರುವ ಪ್ರದೇಶದಲ್ಲಿರುವ ಮದುವೆ ಸಭಾಂಗಣದಲ್ಲಿ ಮಂಗಳವಾರ ಈ ಅನಾಹುತ ಘಟಿಸಿದ್ದು, 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. 110 dead including the bride and groom in the fire incident at a wedding hall in Hamdaniyah,Iraq 550 injured Video is from AVA Media#Iraq #Hamdaniyah pic.twitter.com/I4dSQbQi1s — North X (@__NorthX) September 26, 2023

ಬೆಂಗಳೂರು ಬಂದ್ ಯಶಸ್ವಿ; ಕಾವೇರಿ ಹೋರಾಟಕ್ಕೆ ಸಹಕರಿಸಿದವರಿಗೆ ಕುರುಬೂರು ಕೃತಜ್ಞತೆ

ಬೆಂಗಳೂರು: ಕಾವೇರಿ ನೀರಿನ ಹೋರಾಟ ಸಂಬಂಧ ಬೆಂಗಳೂರು ಬಂದ್ ಯಶಸ್ವಿಯಾಗಿದೆ ಎಂದು ಹೋರಾಟದ ರೂವಾರಿಯಾಗಿರುವ ಜಲ ಸಂರಕ್ಷಣಾ ಸಮಿತಿ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಬೆಂಗಳೂರು ಬಂದ್‌ಗೆ ಸಹಕರಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಬೆಂಗಳೂರು ನಗರದ ನಾಗರೀಕರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ ಬೆಂಗಳೂರು ಬಂದ್ ಸಂಪೂರ್ಣ ಶಾಂತಿಯುತ ಬಂದ್ ಯಶಸ್ವಿಯಾಗಿದೆ. ಇದು ಜನರ ಆಕ್ರೋಸದ ಎಚ್ಚರಿಕೆಯಾಗಿದೆ ಯಾವುದೇ ಬಲತ್ಕಾರವಿಲ್ಲದೆ ಜನರೇ ಪ್ರೀತಿಯಿಂದ ಬಂದ್ ಮಾಡಿ ಸಹಕಾರ ನೀಡಿದ್ದಾರೆ ಇದು ಜನತಂತ್ರದ ಜಯ ಎಂದಿರುವ ಕುರುಬೂರು ಶಾಂತಕುಮಾರ್. ಶಾಂತಿಯುತ ಬಂದ ನಡೆಯಲು ಸಹಕರಿಸಿದ 200 ಹೆಚ್ಚು ಸಂಘಟನೆಗಳ ಮುಖಂಡರಿಗೆ ಬೆಂಗಳೂರು ನಗರದ ಜನತೆಗೆ ಬಂದ್ ಬೆಂಬಲಿಸಿದ ಬಿಜೆಪಿ ,ಜನತಾದಳ, ಅಮ್ ಆದ್ಮಿ , ಪಕ್ಷಗಳಿಗೆ ಹಾಗೂ ಮಾಧ್ಯಮಗಳಿಗೆ ಕರ್ನಾಟಕ ಜಲ ಸಂರಕ್ಷಣ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ASRTU ಸ್ಥಾಯಿ ಸಮಿತಿ ಸಭೆ; ಸಾರಿಗೆ ಕ್ಷೇತ್ರದ ಸುಧಾರಣೆಗೆ ದಿಗ್ಗಜರ ಕಾರ್ಯತಂತ್ರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ASRTU ಸ್ಥಾಯಿ ಸಮಿತಿಯ (S&C) 265ನೇ ಸಭೆ ಗಮನಸೆಳೆಯಿತು. ASRTU ದೇಶದ ಎಲ್ಲಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಅಪೆಕ್ಸ್ ಸಮನ್ವಯ ಸಂಸ್ಥೆಯಾಗಿದ್ದು, ಇದು ರಸ್ತೆ ಸಾರಿಗೆ ಸಚಿವಾಲಯ,ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ, 72 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು (SRTU) ಸದಸ್ಯರಾಗಿದ್ದು, ಒಟ್ಟಾರೆಯಾಗಿ ಸುಮಾರು 1,47,000 ಬಸ್ ಗಳನ್ನು ಕಾರ್ಯಾಚರಣೆ‌ ಮಾಡುತ್ತದೆ. ASRTU ಒಂದು ಉನ್ನತ ಸಂಸ್ಥೆಯಾಗಿ ತನ್ನ ಸದಸ್ಯ SRTU ಗಳನ್ನು ಸಾಮಾನ್ಯ ಸಂಗ್ರಹಣೆ ವೇದಿಕೆಯ ಮೂಲಕ ಸುಗಮಗೊಳಿಸುತ್ತದೆ ಮತ್ತು ಆಟೋಮೊಬೈಲ್ ಬಿಡಿಭಾಗಗಳು, ತೈಲಗಳು ಮತ್ತು ಲೂಬ್ರಿಕೆಂಟ್ ಗಳು ಮತ್ತು ಟೈರ್ ಸಾಮಗ್ರಿಗಳ ಪೂರೈಕೆಗಾಗಿ ಎಲ್ಲಾ ಹೆಸರಾಂತ ತಯಾರಕರೊಂದಿಗೆ ದರ ಒಪ್ಪಂದಗಳನ್ನು ಸ್ಥಾಪಿಸುತ್ತದೆ. ಸ್ಥಾಯಿ ಸಮಿತಿಯ (S&C) ಮುಖ್ಯ ಚಟುವಟಿಕೆಯೆಂದರೆ, ಸದಸ್ಯ SRTUಗಳಿಂದ ಬಿಡಿಭಾಗಗಳ ಸಂಗ್ರಹಣೆಗೆ ಅನುಕೂಲವಾಗುವಂತೆ ದರಗಳು, ನಿಯಮಗಳು ಮತ್ತು ಷರತ್ತುಗಳನ್ನು ನಿರ್ದಿಷ್ಟಪಡಿಸುವ ದರ…

ಜಲ್ಲಿಕಟ್ಟು ಆದಾಗ ಸಹಕಾರ; ಕಾವೇರಿ ಹೋರಾಟಕ್ಕೆ ಅಸಹಕಾರ; ಕುರುಬೂರು ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರಗತಿಪರ ಸಂಘಟನೆಗಳು ಹೋರಾಟದ ಅಖಾಡಕ್ಕೆ ಇಳಿದಿವೆ. ಸರ್ಕಾರಗಳ ನಡೆ ವಿರೋಧಿಸಿ ವಿರೋಧಿಸಿ ಕನ್ನಡ ಸಂಘಟನೆಗಳು, ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬಂದ್ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿರುವ ಪೊಲೀಸರು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ನಡುವೆಯೂ ಪ್ರತಿಭಟನೆಗೆ ಮುಂದಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸಹಿತ 20ಕ್ಕೂ ಹೆಚ್ಚು ಮಂದಿಯನ್ನು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಹೋರಾಟಗಾರರನ್ನು ಫೀಡಮ್ ಪಾರ್ಕ್ ಬಳಿ ಕಾರೋಡಿದು ಬಿಟ್ಟಿದ್ದಾರೆ. ಪ್ರತಿಭಟನೆ, ಹೋರಾಟಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಸೀಮಿತಗೊಳಿಸುವಂತೆ ಪೊಲೀಸರು ಮನವಿ ಮಾಡಿದರು. ಆದರೆ ಪೊಲೀಸರ ಈ ಕ್ರಮಕ್ಕೆ ರೈತ…

ತುಮಕೂರು ಬಳಿ ಭೀಕರ ಅಪಘಾತ: ಮೂವರು ಸಾವು, ಕಾರು ನಜ್ಜುಗುಜ್ಜು

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪಿಇದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನುಹೇಮಂತ್ (28), ಆಕಾಶ್ (20), ಶಿವಕುಮಾರ್ ಎಂದು ಗುರುತಿಸಲಾಗಿದೆ. ಪ್ರಯಾಣಿಕರಿದ್ದ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕಾವೇರಿ ಹೋರಾಟ, ಮಂಡ್ಯ ಜಿಲ್ಲೆ ಮಳವಳ್ಳಿ ಬಂದ್​

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು, ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬೆಂಗಳೂರು ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜಧಾನಿ ನಗರ ಸ್ತಬ್ಧವಾಗಿದೆ. ಅತ್ತ ಮಂಡ್ಯ ಜಿಲ್ಲೆಯಲ್ಲೂ ರೈತರ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಬಂಧ್ ಸಂದರ್ನ್ಹದಲ್ಲೇ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲೂ ಬಂದ್ ಆಚರಿಸಲಾಗುತ್ತಿದೆ. ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಮಳವಳ್ಳಿ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ವ್ಯಾಪಾರ ವಹಿವಾಟು ಸ್ಥಗಿತವಾಗಿದೆ.

ಬೆಂಗಳೂರು ಬಂದ್; ಬೆಳ್ಳಂಬೆಳಿಗ್ಗೆಯೇ ಕುರುಬೂರು ಸೈನ್ಯವನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬೆಂಗಳೂರು ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜಧಾನಿ ನಗರ ಸ್ತಬ್ಧವಾಗಿದೆ. ಇದೇ ವೇಳೆ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಜಲ ಸಂರಕ್ಷಣಾ ವೇದಿಕೆ ಕಾರ್ಯಕರ್ತರು ಭಾರೀ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಆದರೆ ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರು ಬಂದ್ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ನೀಡದಿರಲು ಕ್ರಮವಹಿಸಿದ್ದಾರೆ. ಈ ನಡುವೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾಯಿಸಿದ್ದ ಕಾವೇರಿ ಹೋರಾಟಗಾರರನ್ನು ಬೆಳ್ಳಂಬೆಳಿಗ್ಗೆಯೇ ಪೊಲೀಸರು ವಶಕ್ಕೆ ಪಡೆದುಕೊಂಡರು. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸುಮಾರು 20 ಕ್ಕೂ ಹೆಚ್ಚು ರೈತರು ಪ್ರತಿಭಟನೆಗೆ…

ಕಾವೇರಿ ಬಂದ್; ರಾಜಧಾನಿ ಬೆಂಗಳೂರು ಸ್ತಬ್ಧ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಮಿಳುನಾಡಿಗೆ ನೀರು ವೈಹಾರಿಸುತ್ತಿರುವಾದ್ನ್ನು ಖಂಡಿಸಿ ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬೆಂಗಳೂರು ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜಧಾನಿ ನಗರ ಸ್ತಬ್ಧವಾಗಿದೆ. ಸಾರಿಗೆ ಬಸ್ ಗಳಿಲ್ಲದೆ, ಆಟೋ ಟ್ಯಾಕ್ಸಿ ಸೇವೆ ವಿರಳವಾಗಿದ್ದು ಬೆಳ್ಳಂಬೆಳಿಗ್ಗೆಯೇ ಸಾರ್ವಜನಿಕರು ಪರ್ದಾದಾಡುವಂತಾಗಿದೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಯಾವುದೇ ಪ್ರತಿಭಟನೆ, ರಾಲಿಗಳನ್ನು ಮಾಡಿಸಲು ಅವಕಾಶ ಇಲ್ಲ ಎಂದಿರುವ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಕಾವೇರಿ ಹೋರಾಟ; ಬಂದ್ ಹಿನ್ನೆಲೆ ಕಾನೂನು ಕಾಲೇಜ್‌ಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕಾವೇರಿ ಹೋರಾಟ ಹಾಗೂ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ನಡೆಯಬೇಕಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (Karnataka State Law University) (KSLU’s LAW SCHOOL) ಕುಲಪತಿ ಪ್ರೊ.ಡಿ.ಸಿ. ಬಸವರಾಜು ಅವರು, ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆಗಬಹುದಾದ ಅನಾನುಕೂಲತೆಗಳನ್ನು ಮನಗಂಡು ಸೆಪ್ಟೆಂಬರ್ 26ರ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಕಾನೂನು ವಿಶ್ವವಿದ್ಯಾಲಯ ನಡೆಸುತ್ತಿರುವ, ಮಂಗಳವಾರ ನಡೆಯಬೇಕಿರುವ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಅವರು, ಮಂಗಳವಾರದ ಪರೀಕ್ಷೆಯನ್ನು ಅಕ್ಟೋಬರ್ 8ಕ್ಜೆ ನಿಗದಿಪಡಿಸಲಾಗಿದೆ ಎಂದಿದ್ದಾರೆ. ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶಗೊಂಡಿರುವ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿಯು ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ವಿವಿಧ ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಿವೆ. ಈ…

ಕಾವೇರಿ ಬಿಕ್ಕಟ್ಟು; ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಮಾಜಿ ಪ್ರಧಾನಿ.ದೇವೇಗೌಡ ಒತ್ತಾಯ

ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಹಾಗೂ ಎರಡೂ ರಾಜ್ಯಗಳ ವಾಸ್ತವ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸುಪ್ರೀಂ ಕೋರ್ಟಿಗೆ ಪರಿಶೀಲನಾ ಅರ್ಜಿ ಸಲ್ಲಿಸಲು ಜಲಶಕ್ತಿ ಸಚಿವಾಲಯಕ್ಕೆ ಆದೇಶ ಮಾಡಬೇಕು ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ. ,ಈ ಸಂಬಂಧ ಮಾಜಿ ಪ್ರಧಾನಿಗಳು, ಪ್ರಧಾನಿ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದು, ಆ ಪತ್ರವನ್ನು ಇಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಎರಡು ರಾಜ್ಯಗಳಿಗೆ ಸಂಬಂಧವಿಲ್ಲದ, ತಟಸ್ಥವಾದ ಒಂದು ಸಮಿತಿಯನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳಿಸಿ ವಸ್ತುನಿಷ್ಠ ಮಾಹಿತಿ ಪಡೆದುಕೊಳ್ಳಬೇಕು ಎಂದು ಪ್ರಧಾನಿಗಳನ್ನು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ. ಕಾವೇರಿ ಜಲಸಂಕಷ್ಟದ ಈಗಿನ ವಾಸ್ತವಾಂಶ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ತಾವು ಅರ್ಜಿ ಹಾಕಬೇಕು. ಮಳೆ ಇಲ್ಲದೆ ಕಂಗಾಲಾಗಿರುವ ರಾಜ್ಯದ ರೈತರ…