ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ರಾಜ್ಯಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿಯಾಗಿ ನಡೆದುಕೊಂಡಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದ್ದಾರೆ. ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಡೆದ ತೀವ್ರ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಸೋನಿಯಾ ಗಾಂಧಿಯವರ ಕೈಚಳಕ ಮತ್ತು ಸೂಚನೆಯಿಂದ ಐಎನ್‍ಡಿಐಎ ನಾಯಕರನ್ನು ಖುಷಿಪಡಿಸುವ ಉದ್ದೇಶದಿಂದ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರಕಾರವು ರಾಜ್ಯದ ಹಿತವನ್ನು ಸಂಪೂರ್ಣ ಕಡೆಗಣಿಸಿದೆ. ತಮಿಳುನಾಡಿನ ಹಿತ ಕಾಪಾಡಲು ಮುಂದಾಗಿದೆ ಎಂದು ಆಕ್ಷೇಪಿಸಿದರು. ನಮಗೆ ಕುಡಿಯುವ ನೀರಿಗೂ ನೀರಿಲ್ಲ. ನಮ್ಮ ರೈತರ ಬೆಳೆಗಳಿಗೂ ನೀರಿಲ್ಲ. ಬೇಲಿಯೇ ಹೊಲವ ಮೇಯ್ದೊಡೆ ಎಂಬಂತೆ ಸರಕಾರವೇ ಹಫ್ತಾ ವಸೂಲಿಗೆ ಇಳಿದರೆ ದೂರು ಯಾರಿಗೆ ಕೊಡೋಣ ಎಂದು ಅವರು ಪ್ರಶ್ನಿಸಿದರು. ನಾಳೆ ನಡೆಯುವ ಹೋರಾಟಕ್ಕೆ ಬಿಜೆಪಿ…
Year: 2023
ಪಿಯುಸಿ ಮೌಲ್ಯಮಾಪಕರಿಗೆ ಸಿಗದ ಸಂಭಾವನೆ, ಭತ್ಯೆ.. ಅ.3ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ
ಪಿಯುಸಿ ಮೌಲ್ಯಮಾಪಕರಿಗೆ ಸಿಗದ ಸಂಭಾವನೆ, ಭತ್ಯೆ.. ವಿಳಂಬ ನೀತಿ ವಿರುದ್ಧ ರಂಗನಾಥ್ ಆಕ್ರೋಶ.. ಅಕ್ಟೊಬರ್ ೩ ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್’ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯ, ಜೂನ್’ನಲ್ಲಿ ನಡೆದ ಮೊದಲ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯ ಹಾಗೂ ಆಗಸ್ಟ್-ಸೆಪ್ಟೆಂಬರ್’ನಲ್ಲಿ ನಡೆದ 2ನೇ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ಭಾಗಿಯಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳನ್ನು ಈವರೆಗೂ ಸಂಪೂರ್ಣವಾಗಿ ಬಿಡುಗಡೆ ಮಾಡದಿರುವ ಬಗ್ಗೆ ಬೆಂಗಳೂರು ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರೂ ಆದ ಹಿರಿಯ ವಕೀಲ ಎ.ಪಿ.ರಂಗನಾಥ್ ಅಸಮಾಧಾನ ಹೊರಹಾಕಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಎ.ಪಿ.ರಂಗನಾಥ್, ಜರೂರಾಗಿ ಮೌಲ್ಯಮಾಪನ ಮಾಡಿಸಿ, ಶೀಘ್ರದಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆಂದು ಹೆಮ್ಮೆ ಪಡುವ ಮಂಡಲಿಯು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ…
ಕಾವೇರಿ ಹೋರಾಟ; ‘ಬೆಂಗಳೂರು ಬಂದ್’ಗೆ CSS ಬೆಂಬಲ
ಬೆಂಗಳೂರು: ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಆರೋಪಿಸಿ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ಕಳೆದ ವಾರಾಂತ್ಯದಲ್ಲಿ ಮಂಡ್ಯ ಬಂದ್ ಆಚರಿಸಿರುವ ರೈತ ಕನ್ನಡಪರ ಸಂಘಟನೆಗಳು, ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಕಾವೇರಿ ವಿಚಾರದಲ್ಲಿನ ಈ ಹೋರಾಟಕ್ಕೆ ಕ್ರಿಶ್ಚಿಯನ್ ಸೇವಾ ಸಂಘ ಕೂಡಾ ಬೆಂಬಲ ಘೋಷಿಸಿದೆ. ರೈತ ಸಂಘಟನೆಗಳ ಒಕ್ಕೂಟದ ಮುಂದಾಳುತ್ವದಲ್ಲಿ ರಚನೆಯಾಗಿರುವ ಜಲಸಂರಕ್ಷಣಾ ಸಮಿತಿ ನಾಳಿನ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಈ ಬಂದ್ ಕರೆಗೆ ಕ್ರಿಶ್ಚಿಯನ್ ಬೆಂಬಲ ಇದೆ ಎಂದು ಘೋಷಿಸಿರುವ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗಿಸ್, ಕಾವೇರಿ ವಿಚಾರದಲ್ಲಿ ನಡೆಯುವ ಹೋರಾಟಗಳಲ್ಲಿ ತಮ್ಮ ಸಂಘಟನೆ ಭಾಗಿಯಾಗಲಿದೆ ಎಂದು ಪ್ರಕಟಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಹಿರಿಯ ವಕೀಲರೂ ಆಗಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗಿಸ್ ತಮ್ಮ ಸಂಘವೂ ಭಾಗಿಯಾಗಿ ಕಾವೇರಿ ಹೋರಾಟಕ್ಕೆ ಶಕ್ತಿ…
ಕಾವೇರಿ ಅಖಾಡದಲ್ಲಿ ವಕೀಲರು; ಅತ್ತ ‘ಸುಪ್ರೀಂ’ ಸಮರದಲ್ಲೂ ಇಂಪ್ಲೀಡ್, ಇತ್ತ ಹೋರಾಟದಲ್ಲೂ ಸಾಥ್
ಬೆಂಗಳೂರು: ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಆರೋಪಿಸಿ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ಕಳೆದ ವಾರಾಂತ್ಯದಲ್ಲಿ ಮಂಡ್ಯ ಬಂದ್ ಆಚರಿಸಿರುವ ರೈತ, ಕನ್ನಡಪರ ಸಂಘಟನೆಗಳು, ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ರೈತ ಸಂಘಟನೆಗಳ ಒಕ್ಕೂಟದ ಮುಂದಾಳುತ್ವದಲ್ಲಿ ರಚನೆಯಾಗಿರುವ ಜಲಸಂರಕ್ಷಣಾ ಸಮಿತಿ ನಾಳಿನ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಈ ಬಂದ್ ಕರೆಗೆ ವಕೀಲರ ಸಂಘಟನೆಯೂ ಬೆಂಬಲ ಘೋಷಿಸಿದೆ. ನಾಳಿನ ಬಂದ್’ನಲ್ಲಿ ವಕೀಲರ ಸಂಘವೂ ಭಾಗಿಯಾಗಿ ಕಾವೇರಿ ಹೋರಾಟಕ್ಕೆ ಶಕ್ತಿ ನೀಡಲಿದೆ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಎಸ್ ರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಿವೇಕ್ ಎಸ್ ರೆಡ್ಡಿ, ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೇ ಅನ್ಯಾಯ ಆಗುತ್ತಲೇ ಇವೆ. ರಾಜ್ಯದ ಜನತೆಗೆ ನೀರಿಲ್ಲದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಹೇಗೆ ನೀರು ಹರಿಸಲಿ? ಎಂದು ಪ್ರಶ್ನೆ ಮಾಡಿದ್ದಾರೆ. ಕಾನೂನು ಹೋರಾಟ: ಕಾವೇರಿ…
ಕಾವೇರಿ ಕಿಚ್ಚು; ನಾಳಿನ ಬೆಂಗಳೂರು ಬಂದ್‌ಗೆ ವಿವಿಧ ಸಂಘಟನೆಗಳ ಸಾಥ್
ಬೆಂಗಳೂರು: ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಆರೋಪಿಸಿ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ಕಳೆದ ವಾರಾಂತ್ಯದಲ್ಲಿ ಮಂಡ್ಯ ಬಂದ್ ಆಚರಿಸಿರುವ ರೈತ ಕನ್ನಡಪರ ಸಂಘಟನೆಗಳು, ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ರೈತ ಸಂಘಟನೆಗಳ ಒಕ್ಕೂಟದ ಮುಂದಾಳುತ್ವದಲ್ಲಿ ರಚನೆಯಾಗಿರುವ ಜಲಸಂರಕ್ಷಣಾ ಸಮಿತಿ ನಾಳಿನ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಹಲವು ಸಂಘಟನೆಗಳು ಈ ಹೋರಾಟಕ್ಕೆ ಘೋಷಿಸಿವೆ ಎಂದು ರೈತ ನಾಯಕ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಬಂದ್‌ಗೆ ಬೆಂಬಲ ಘೋಷಿಸಿರುವ ಸಂಘ ಸಂಸ್ಥೆಗಳ ಪಟ್ಟಿ: ಬೆಂಗಳೂರು ಎಪಿಎಂಸಿ ವರ್ತಕರ ಸಂಘ ಸಮತಾ ಸೈನಿಕ ದಳ ಎಪ್ ಕೆ ಸಿ ಸಿ ಐ ಕಾಶಿಯ ಸಣ್ಣ ಕೈಗಾರಿಕೆಗಳ ಒಕ್ಕೂಟ ಕರ್ನಾಟಕ ಸಾಂಸ್ಕೃತಿಕ ವೇದಿಕೆ ಬಿಡಬ್ಲ್ಯೂಎಸ್‌ಎಸ್‌ಬಿ ನೌಕರರ ಸಂಘ ಬಿಡಿಎ ನೌಕರರ ಸಂಘ ಬಿಡಿಎ ವಾಹನ ಚಾಲಕರ ಸಂಘ ಕರ್ನಾಟಕ ರಾಜ್ಯ ರೈತ ಸಂಘ ಎಐಟಿಯುಸಿ ಕೆಎಸ್ಆರ್ಟಿಸಿ…
ಅಕ್ರಮ ಗೋಮಾಂಸ ಸಾಗಿಸುತ್ತಿದ್ದವರ ಮೇಲೆ ಹಿಂದೂ ಕಾರ್ಯಕರ್ತರ ದಾಳಿ: ಕಾರಿಗೆ ಬೆಂಕಿ
ಅಕ್ರಮ ಗೋಮಾಂಸ ಸಾಗಾಟದ ಮೇಲೆ ಹಿಂದೂ ಕಾರ್ಯಕರ್ತರ ದಾಳಿ: ಕಾರಿಗೆ ಬೆಂಕಿ ಇಟ್ಟ ಕಾರ್ಯಕರ್ತರು.. ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.. ಹಲವರ ಬಂಧನ.. ದೊಡ್ಡಬಳ್ಳಾಪುರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ದಾಳಿ ಮಾಡಿದ ಶ್ರೀರಾಮಸೇನೆ ಕಾರ್ಯಕರ್ತರು ಒಂದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಭಾನುವಾರ ಬೆಳಿಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಟಾಟಾ ಏಸ್ ಮತ್ತು ಬೊಲೇರೋ ಸೇರಿದಂತೆ ಐದು ವಾಹನಗಳಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ತಂಡದ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ದಿಗ್ಬಂಧನ ಹಾಕಿದ್ದಾರೆ. ಹಿಂದೂಪುರದಿಂದ ಬೆಂಗಳೂರಿನ ಶಿವಾಜಿ ನಗರಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ತಾಲ್ಲೂಕಿನ ಕಂಟನಕುಂಟೆ ಬಳಿ ತಡೆದ ಯುವಕರು, ದೊಡ್ಡಬಳ್ಳಾಪುರ ನಗರದ ಡಾ.ಬಿಆರ್.ಅಂಬೇಡ್ಕರ್ ವೃತ್ತದ ಬಳಿಗೆ ಕರೆದೊಯ್ದು ಥಳಿಸಿದ್ದಾರೆನ್ನಲಾಗಿದೆ. ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಮತ್ತೊಂದು ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ…
ಕಾವೇರಿ ಸಂಕಷ್ಟ: ಕೂಡಲೇ ಮೇಲ್ಮನವಿ ಸಲ್ಲಿಸಲು ಬಿಎಸ್‌ವೈ ಸಲಹೆ
ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ರಾಜ್ಯವು ತಮಿಳುನಾಡಿಗೆ ನೀರು ಹರಿಸುವ ಸಾಮರ್ಥ್ಯ ಹೊಂದಿಲ್ಲ, ಕೂಡಲೇ ಮೇಲ್ಮನವಿ ಸಲ್ಲಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. – ಶ್ರೀ @BSYBJP, ಮಾಜಿ ಮುಖ್ಯಮಂತ್ರಿಗಳು pic.twitter.com/6SU6cRsQgG — BJP Karnataka (@BJP4Karnataka) September 23, 2023
ಸಹೋದರಿ ರಾಜಕೀಯದಲ್ಲಿ ಮುನ್ನುಗ್ಗಬೇಕು; ತೇಜಸ್ವಿನಿ ಅನಂತ್ ಕುಮಾರ್‌ಗೆ ರಾಜಕೀಯ ಆಹ್ವಾನ ನೀಡಿದರೇ ಡಿಕೆಶಿ
ಬೆಂಗಳೂರು: ಸಹೋದರಿ ರಾಜಕೀಯದಲ್ಲಿ ಮುನ್ನುಗ್ಗಬೇಕು ಎಂದು ಕರೆ ನೀಡಿರುವ ಬಿಜೆಪಿ ನಾಯಕಿ ತೇಜಸ್ವಿನಿ ಅನಂತ್ ಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ ಅನಂತ ನಮನ -64 ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ನನ್ನ ಸಹೋದರಿ ತೇಜಸ್ವಿನಿ ಧೈರ್ಯ ಮಾಡಿ ರಾಜಕೀಯದಲ್ಲಿ ಮುನ್ನುಗ್ಗಬೇಕು. ಅನಂತಕುಮಾರ್ ಅವರ ಜೊತೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವಿದೆ, ನೀವು ರಾಜಕೀಯಕ್ಕೆ ಬರಬೇಕು ಎಂದರು. ಎಷ್ಟೋ ಹಸುಗಳು ಹುಟ್ಟುತ್ತವೆ, ಆದರೆ ಎಲ್ಲವೂ ಬಸವ ಆಗಲು ಸಾಧ್ಯವಿಲ್ಲ. ನೀವು ಇಲ್ಲೇ ಅಡುಗೆ ಮನೆಯಲ್ಲಿ ಅದಮ್ಯ ಚೇತನದ ಜೊತೆಯಲ್ಲೇ ಇರಬೇಕಾಗುತ್ತದೆ. ನಿಮ್ಮ ಹಿಂದೆ ದೊಡ್ಡ ಪಡೆ ಇದೆ, ಸಮಾಜವಿದೆ. ಮುನ್ನುಗ್ಗಿ, ನಿಮ್ಮನ್ನು ನಂಬಿಕೊಂಡಿರುವ ಹಿಂಬಾಲಕರನ್ನು ರಕ್ಷಣೆ ಮಾಡಿ ಎಂದ ಅವರು, ತೇಜಸ್ವಿನಿ ಅವರೇ ನೀವು ಮುನ್ನುಗ್ಗಬೇಕು. ಹೊಲವನ್ನ ಉಳುವೆ ಮಾಡದಿದ್ದರೆ ಮಟ್ಟ ಆಗುವುದಿಲ್ಲ, ಶಿಲೆ ಶಿಲ್ಪಿ ಕೈಗೆ ಸಿಗದಿದ್ದರೆ…
ಅನಂತಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ: ಡಿಕೆಶಿ
ಬೆಂಗಳೂರು: “ಅನಂತಕುಮಾರ್ ಅವರು ಇದ್ದಿದ್ದರೇ ಯಾವುದೇ ಕಾರಣಕ್ಕೂ ಕಾವೇರಿ ವಿವಾದ ಇಷ್ಟರಮಟ್ಟಿಗೆ ಹೋಗಲು ಬಿಡುತ್ತಿರಲಿಲ್ಲ. ಅವರು ಅಜಾತಶತ್ರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ನಡೆದ ಅನಂತ ನಮನ -64 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಅನಂತಕುಮಾರ್ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ನೀರಿನ ಬಗ್ಗೆ ರಾತ್ರೋರಾತ್ರಿ ಅಫೀಡವಿಟ್ ಬದಲಾಯಿಸಿ ಕರ್ನಾಟಕದ ಪರವಾಗಿ ನಿಂತಿದ್ದರು. ರಾಜ್ಯದ ಹಿತಾಸಕ್ತಿಗೆ ಯಾವುದೇ ತೊಂದರೆ ತೆಗೆದುಕೊಳ್ಳಲು ಅವರು ಸದಾ ತಯಾರಿರುತ್ತಿದ್ದರು. ಎಂದು ನೆನಪಿಸಿದರು. 1985 ರಲ್ಲಿ ನನಗೆ ಮೊದಲ ಬಾರಿಗೆ ವಿಧಾನಸಭೆ ಟಿಕೆಟ್ ಸಿಕ್ಕಿದಾಗ, ಅನಂತ್‌ಕುಮಾರ್ ರಹಸ್ಯವಾಗಿ 5 ಸಾವಿರ ಹಣ ನೀಡಿದ್ದರು. ರಾಜ್ಯದ ಪರವಾಗಿ ನಿಲ್ಲುತ್ತಿದ್ದ ಅವರನ್ನು ಸರ್ವಪಕ್ಷ ಸಭೆಯಲ್ಲಿ ಎಲ್ಲರೂ ನೆನಪಿಸಿಕೊಂಡರು. ರಾಜ್ಯದಲ್ಲಿ ಮೆಟ್ರೋ ಬರಲು ಎಸ್.ಎಂ. ಕೃಷ್ಣ ಮತ್ತು ಅನಂತಕುಮಾರ್ ಕಾರಣ; ನಾನು ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದೆ. ಕೇಂದ್ರದಲ್ಲಿ ಅನಂತಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದರು. ಹಿಂದಿನ ಜೆ.ಎಚ್.ಪಟೇಲ್…
ಸೆ.26ರಂದು ಬೆಂಗಳೂರು ಬಂದ್: ಕನ್ನಡ ಸಂಘಟನೆಗಳಿಂದ ಬೆಂಬಲ ಯಾಚನೆ
ಬೆಂಗಳೂರು: ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮಾಡಲು ವಿವಿಧ ಸಂಘಟನೆಗಳ ತೀರ್ಮಾನ ಬೆಂಬಲಿಸಲು ಕನ್ನಡ ಪರ ಸಂಘಟನೆಗಳು ಜನತೆಗೆ ಮನವಿ ಮಾಡಿವೆ. ಕಾವೇರಿ ನೀರು ತಮಿಳುನಾಡಿಗೆ ತಮಿಳುನಾಡಿಗೆ ಹರಿಸಿ ಕುಡಿಯುವ ನೀರಿಗು ಸಮಸ್ಯೆ ಉಂಟಾಗುತ್ತಿರುವ ಕಾರಣ ಇದೇ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಗೆ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಸಬೇಕು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಇಂದು ವಿವಿಧ ಕನ್ನಡಪರ ,ರೈತಪರ ಸಂಘಟನೆಗಳ ಮುಖಂಡರುಗಳ ಸಭೆಯಲ್ಲಿ ಚರ್ಚಿಸಿ ಸಭೆಯ ತೀರ್ಮಾನವನ್ನು ಪ್ರಕಟಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರರು ತಮಿಳುನಾಡಿಗೆ ನೀರು ಹರಿಸುವ ಸಂಬಂಧ ನೀಡಿರುವ ತೀರ್ಪಿಗೆ ಸಭೆಯಲ್ಲಿ ಎಲ್ಲಾ ಸಂಘಟನೆಗಳ ಮುಖಂಡರುಗಳು ಖಂಡನೆ ವ್ಯಕ್ತಪಡಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸರ್ಕಾರವೇ ಈಗಾಗಲೇ ಬರ ಘೋಷಣೆ ಮಾಡಿದೆ. ರೈತರು ಬೆಳೆದ ಬೆಳೆಗಳಿಗೆ ನೀರು ಇರಲಿ, ರಾಜ್ಯದ ಜನರು ಕುಡಿಯುವ…
