ಬೆಂಗಳೂರು: ತಮಿಳುನಾಡಿಗೆ ಮುಂಚಿತವಾಗಿಯೇ ನೀರು ಬಿಡಲು ನಿಮಗೇನಾದರೂ ಬೆದರಿಕೆ ಇತ್ತೇ? ಪಾರ್ಟಿಯಿಂದ ಒತ್ತಡ ಇತ್ತೇ? ಬೇಡಿಕೆ ಇಡುವ ಮೊದಲೇ ನೀರು ಬಿಟ್ಟಿದ್ದೇಕೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಂಡಿಯ ಮೈತ್ರಿಕೂಟದ ಭಾಗವಾಗಲು ನೀರು ಬಿಡಿ ಎಂದು ಡಿಎಂಕೆ ಬೆದರಿಕೆ ಹಾಕಿರಬಹುದು. ಇಲ್ಲವೇ ಕಾಂಗ್ರೆಸ್ ಹೈಕಮಾಂಡ್ ಒತ್ತಡ ಹಾಕಿರಬಹುದು ಎಂದು ಸಂಶಯ ವ್ಯಕ್ತಪಡಿಸಿದರು. ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ, ಸಂಸದರ ಸಭೆ ನಡೆಸಿದ್ದನ್ನೂ ಅವರು ಟೀಕಿಸಿದರು. ಬಳಿಕ ಅಹವಾಲು ಮಂಡನೆಯನ್ನು ಆಕ್ಷೇಪಿಸಿದರು. ರಾಜ್ಯದ ರೈತರ ಸಂಕಷ್ಟ ದೂರ ಮಾಡುವುದರ ಬದಲು ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಲಾಭ ಪಡೆಯುವ ಪ್ರಯತ್ನ ಇದ್ದಂತಿದೆ. ಇದಕ್ಕೆ ಕರ್ನಾಟಕ ಬಲಿಪಶು ಆಗಿದೆ ಎಂದು ಸಿ.ಟಿ.ರವಿ ಅಭಿಪ್ರಾಯಪಟ್ಟರು. ಕಾಂಗ್ರೆಸ್ ಸರಕಾರವು ಕಾವೇರಿ…
Year: 2023
ಬಾಲಿವುಡ್ ನಟ ಅಖಿಲ್ ಮಿಶ್ರಾ ವಿಧಿವಶ
ಮುಂಬಯಿ: ಬಾಲಿವುಡ್ ನಟ ಅಖಿಲ್ ಮಿಶ್ರಾ ವಿಧಿವಶರಾಗಿದ್ದಾರೆ. ಜಾರಿ ಬಿದ್ದು ಗಾಯಗೊಂಡಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 58 ವರ್ಷ ಹರೆಯದ ಅಖಿಲ್ ಮಿಶ್ರಾ ಅವರು, ಆಮಿರ್ ಖಾನ್ ಅಭಿನಯದ ʼಥ್ರೀ ಈಡಿಯಟ್ಸ್ʼ ಸಹಿತ ಅನೇಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಟ ತನ್ನ ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ಮುಂದಿನ 15 ದಿನ ತಮಿಳುನಾಡಿಗೆ ನೀರು ಹರಿಸಿ; ಕರ್ನಾಟಕಕ್ಕೆ ಸುಪ್ರೀಂ ಆದೇಶ
ದೆಹಲಿ: ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ತಮಿಳುನಾಡಿಗೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಿತು. ರಾಜ್ಯದ ಪರವಾಗಿ ಇಂದು ಆದೇಶ ಬರಬಹುದು ಎಂಬ ನಿರೀಕ್ಷೆ ಇತ್ತಾದರೂ ಕರ್ನಾಟಕದ ವಾದ ಫಲ ಕೊಟ್ಟಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಜಾರಿಗೆ ತರಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಕರ್ನಾಟಕಕ್ಕೆ ನಿರ್ದೇಶಿಸಿದೆ.
ರಾಷ್ಟ್ರಪಕ್ಷಿ ನವಿಲು ಬೇಟೆ; ಪೊಲೀಸ್ ಕಾರ್ಯಾಚರಣೆಯಲ್ಲಿ ಇಬ್ಬರ ಸೆರೆ
ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ಕೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ, ಆರೋಪಿಗಳಿಂದ ಬೇಟೆಯಾಡಿದ ಮೂರು ನವಿಲುಗಳು, ನಾಡ ಬಂದೂಕು ಮತ್ತು ಟಿವಿಎಸ್ ಮೊಪೇಡ್ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನವಿಲು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಮುನಿಕೃಷ್ಣ ನೇತೃತ್ವದಲ್ಲಿ ಬಂಧಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಪುಟ್ಟಪರ್ತಿ ಟೌನ್ ನಿವಾಸಿಗಳಾದ ಶ್ರೀನಿವಾಸ, ಬಾಲಾಜಿ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀನಿವಾಸ ಎಂಬಾತ ಜಾಲಿಗೆ ಶಿವಣ್ಣ ಎಂಬುವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬ ಆರೋಪಿ ಬಾಲಾಜಿ, ಅರಳುಮಲ್ಲಿಗೆಯ ವೆಂಕಟೇಶ್ ಎಂಬುವರ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾರಂಟಿ ಕೂಪನ್ ಅವಾಂತರ; ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹ
ಚನ್ನಪಟ್ಟಣ/ರಾಮನಗರ: ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.. ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಸರ್ಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್ ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ ಮಾಡಿದ್ದಾರೆ. ಈ ಕೂಪನ್ ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ ಆ ಪಕ್ಷದ 135 ಶಾಸಕರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದರು. ಕಳೆದ ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾಗಳ ಮೇಲೆಯೇ. ಈ ಚುನಾವಣೆ ನಡೆಸಿದ್ದೇ ಕುಕ್ಕರ್, ಇಸ್ತ್ರಿಪೆಟ್ಟಿಗೆ, ತವಾ ಹಂಚಿಕೊಂಡು. ಅವುಗಳಿಂದಲೇ…
ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ? HDK ಪ್ರಶ್ನೆ
ಚನ್ನಪಟ್ಟಣ/ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು. ಅದಕ್ಕೆ ನಾವು ಮಾಡಿದ್ದೇವೆ? ಆ ಬಗ್ಗೆ ಸರಕಾರ ಚಿಂತನೆ ಮಾಡಬೇಕು, ಅಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ಜಲ ನಿರ್ವಹಣಾ ಸಮಿತಿ ಹಾಗೂ ನಿಯಂತ್ರಣ ಸಮಿತಿಯವರು ದೇವಲೋಕದಿಂದ ಇಳಿದು ಬಂದಿದ್ದಾರೆಯೇ? ಅವರು ನಾವು ನೇಮಕ ಮಾಡಿಕೊಂಡ ಸದಸ್ಯರೆಲ್ಲವೇ? ಈಗ ನೋಡಿದರೆ ನಮ್ಮ ರಾಜ್ಯದ ಜನರ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂದರು.. ನಮ್ಮ…
ಟಿಕೆಟ್ ಡೀಲ್ ಪ್ರಕರಣ; ಬಂಧಿತ ಆರೋಪಿ ಹಾಲಶ್ರೀ ಸ್ವಾಮಿ 10 ದಿನ ಸಿಸಿಬಿ ವಶಕ್ಕೆ
ಬೆಂಗಳೂರು: ಟಿಕೆಟ್ ಡೀಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಾಲಶ್ರೀ ಸ್ವಾಮೀಜಿಯನ್ನು ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ನಂಬಿಸಿ, ಉದ್ಯಮಿಗೆ 5 ಕೋಟಿ ವಂಚನೆ ಆರೋಪ ಬಗ್ಗೆ ಹಿಂದೂ ಸಂಘಟನೆಯ ನಾಯಕಿ ಎಂದು ಬಿಂಬಿಸಿಕೊಳ್ಳುತ್ತಿರುವ ಚೈತ್ರಾ ಕುಂದಾಪುರ ಹಾಗೂ ಪ್ರಧಾನಿ ಸಹಿತ ಹಲವು ರಾಷ್ಟ್ರೀಯ ಮುಖಂಡರ ಒಡನಾಟವಿದೆ ಎಂದು ಹೇಳಿಕೊಂಡಿದ್ದಾರೆನ್ನಲಾದ ಹಾಲಶ್ರೀ ಸ್ವಾಮೀಜಿ ಸಹಿತ ಹಲವರ ವಿರುದ್ದ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದಿ ಗಂಭೀರ ಪ್ರಕರಣವಾಗಿರುವುದರಿಂದ ಪೊಲೀಸ್ ಆಯುಕ್ತರು ತನಿಖೆಯನ್ನು ಸಿಸಿಬಿಗೆ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ, ಬಿಜೆಪಿ ನಾಯಕ ಗಗನ್ ಕಡೂರು ಸಹಿತ ಹಲವರನ್ನು ಸಿಸಿಬಿ ತಂಡ ಬಂಧಿಸುತ್ತಿದ್ದಂತೆಯೇ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದರು. ಬಂಧನ ಭೀತಿಯಿಂದ ಒಡಿಶಾಗೆ ಪಲಾಯನವಾಗಿದ್ದ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ತಂಡ ಬಂಧಿಸಿ ಮಂಗಳವಾರ ಬೆಂಗಳೂರಿಗೆ ಕರೆತಂದಿತ್ತು. ಇಂದು ಬೆಳಿಗ್ಗೆ…
ಕಾವೇರಿ ಸಂಕಷ್ಟ: ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳಲು ಪ್ರಧಾನಿಗೆ ಮನವಿ
ಬೆಂಗಳೂರು: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಸರ್ವ ಪಕ್ಷ ಸಂಸದರ ಸಭೆ ನಡೆಯಿತು. ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರು ಭಾಗವಿಸಿದ್ದ ಈ ಸಭೆಯಲ್ಲಿ ಕಾವೇರಿ ಸಮಸ್ಯೆ ಬಗ್ಗೆ ಗಹನ ಚರ್ಚೆ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ ಎಂದರು. ಕಾವೇರಿ ವಿಚಾರದಲ್ಲಿ ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ತಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದವರು ತಿಳಿಸಿದರು.…
ಅಂತರಗಂಗೆ ಬೆಟ್ಟದಲ್ಲಿ ವಿವಾದಾತ್ಮಕ ಬರಹ ಆರೋಪ; ಓರ್ವನ ಬಂಧನ
ಕೋಲಾರ: ಚಿನ್ನದ ನಾಡಿನ ಅಂತರಗಂಗೆ ಬೆಟ್ಟದ ಬಂಡೆ ಮೇಲೆ ವಿವಾದಾತ್ಮಕ ಬರಹ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಅರಣ್ಯ ಇಲಾಖೆಯವರು ಕೋಲಾರ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕೋಲಾರದ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಅಂತರಗಂಗೆ ಬೆಟ್ಟದ ಬಂಡೆ ಕಲ್ಲುಗಳ ಮೇಲೆ ಹಸಿರು ಬಣ್ಣ ಬಳಿದು ವಿವಾದಾತ್ಮಕ ಬರಹ ಬರೆಯಲಾಗಿತ್ತು. ಈ ಘಟನೆ ವಿವಾದದ ತಿರುವು ಪಡೆಯುತ್ತಿದ್ದಂತೆಯೇ ಎಚ್ಛೆತ್ತುಕೊಂಡ ಕೋಲಾರ ಗ್ರಾಮಾಂತರ ಪೊಲೀಸರು ಈ ವಿವಾದಾತ್ಮಕ ಬರಹದ ಮೇಲೆ ಬಿಳಿ ಬಣ್ಣ ಬಳಿದು ಅಳಿಸಿ ಹಾಕಿದ್ದರು. ಇದೇ ವೇಳೆ ಆರೋಪಿಗಳ ಬಂಧನಕ್ಕೆ ಬಲೇ ಬೀಸಿದ ಪೊಲೀಸರು, ಪಾಪರಾಜನಹಳ್ಳಿಯ ಅನ್ವರ್ ಅಲಿಯಾಸ್ ಪ್ಯಾರೇಜಾನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕಾವೇರಿ ಸಂಕಷ್ಟ; ದೆಹಲಿಯಲ್ಲಿ ಸಂಸದರೊಂದಿಗೆ ಸಿಎಂ ಕಾರ್ಯತಂತ್ರ
ದೆಹಲಿ: ಕಾವೇರಿ ನದಿ ನೀರು ವಿವಾದ ಕುರಿತಂತೆ ಕರ್ನಾಟಕ ಸಂಸದರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚರ್ಚೆ ನಡಿಸಿದ್ದಾರೆ. ತಮಿಳುನಾಡಿಗೆ ನೀರು ಹರಿಸಬೇಕೆಂಬ ಪ್ರಾಧಿಕಾರದ ಆದೇಶದಿಂದ ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ಕರ್ನಾಟಕ ಸರ್ಕಾರ, ಪರಿಸ್ಥಿತಿ ನಿಭಾಯಿಸಲು ಹಾಗೂ ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆರುವ ಸಂಬಂಧ ಈ ಸಭೆ ನಡೆಸಿದೆ. ಸಂಸದರ ಸಭೆಗೆ ಮುನ್ನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕದ ಸಂಕಷ್ಟ ಕುರಿತು ಸಮಾಲೋಚನೆ ನಡೆಸಿದರು. ದೆಹಲಿಯಲ್ಲಿನ ಕರ್ನಾಟಕ ಪ್ರತಿನಿಧಿ ಟಿ ಬಿ ಜಯಚಂದ್ರ, ಸಂಸದ ಡಿ.ಕೆ.ಸುರೇಶ್, ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್, ಜಲ ಸಂಪನ್ಮೂಲ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಭವನ ರೆಸಿಡೆಂಟ್ ಕಮಿಷನರ್ ಇಂಕೊಂಗ್ಲಾ ಜಮೀರ್ ಸೇರಿದಂತೆ ಪ್ರಮುಖರು…
