ಕ್ರೈಸ್ಟ್‌ಚರ್ಚ್: ನ್ಯೂಜಿಲೆಂಡ್ 6.2 ತೀವ್ರತೆಯ ಭೂಕಂಪದಿಂದ ನಡುಗಿತು, ಕ್ರೈಸ್ಟ್‌ಚರ್ಚ್ ಮತ್ತು ವಿವಿಧ ದಕ್ಷಿಣ ದ್ವೀಪ ಪ್ರದೇಶಗಳಲ್ಲಿನ ನಿವಾಸಿಗಳು ಕಂಪನವನ್ನು ಅನುಭವಿಸಿದರು. ಕ್ಸಿನ್ಹುವಾ ಸುದ್ದಿ ಸಂಸ್ಥೆಯ ಪ್ರಕಾರ, ಭೂಕಂಪವು 10 ಕಿ.ಮೀ ಆಳವನ್ನು ಹೊಂದಿತ್ತು ಎಂದು ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Year: 2023
ರಕ್ತದೊತ್ತಡ..? ದಾಸವಾಳ ಹೂವಿನಲ್ಲಿ ಅಡಗಿದೆ ಮದ್ದು
ದಾಸವಾಳ ಹೂವು ತನ್ನ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ಹೆಚ್ಚು ಪ್ರಸಿದ್ಧಿಯಾಗುತ್ತಿದೆ. ಅನೇಕರಿಗೆ ಈ ಹೂವಿನ ಔಷಧೀಯ ಗುಣಗಳು ಅರಿವಿಲ್ಲದೇ ಇರಬಹುದು. ದಾಸವಾಳ ಹೂವು ಅತ್ಯಂತ ಆರೋಗ್ಯದಾಯಕ ಗುಣಗಳನ್ನು ಹೊಂದಿದೆ ಮತ್ತು ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ರಕ್ಷಣೆ ನೀಡುವ ಆಹಾರವಾಗಿ ಪ್ರಶಂಸಿಸಲ್ಪಡುತ್ತಿದೆ. ದಾಸವಾಳದ ಚಹಾವನ್ನು ಕುಡಿಯುವುದರಿಂದ ಸಿಸ್ಟೋಲಿಕ್ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂಬ ಅಧ್ಯಯನವು ಸಾರ್ವಜನಿಕರ ಗಮನವನ್ನು ಸೆಳೆಯುತ್ತದೆ. ಅದಲ್ಲದೆ, ಡಯಾಸ್ಟೋಲಿಕ್ ರಕ್ತದೊತ್ತಡವನ್ನೂ ದಾಸವಾಳ ಚಹಾವು ಕಡಿಮೆ ಮಾಡಬಹುದು ಎಂಬ ಸೂಚನೆಯೂ ಇದೆ. ದಾಸವಾಳ ಚಹಾ ಸೇವಿಸುವುದು ಕೊಲೆಸ್ಟ್ರಾಲ್ ಮಟ್ಟವನ್ನು ಶೇ.22 ರಷ್ಟು ಕಡಿಮೆ ಮಾಡಬಹುದು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು ಎಂಬುದು ವೈದ್ಯರ ಸೂಚನೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಅಪಾಯ ಕಡಿಮೆಯಾಗುವುದು. ದಾಸವಾಳ ಹೂವು ರೋಗಗಳ ಜೀವಕೋಶಗಳನ್ನು ನಾಶಪಡಿಸಲು ಸಹಾಯ ಮಾಡಬಲ್ಲದು ಮತ್ತು ಇತ್ತೀಚಿನ ದಿನಗಳಲ್ಲಿ ಹೃದಯ ಸಮಸ್ಯೆಗಳು ಹೆಚ್ಚಿದ್ದರೂ, ದಾಸವಾಳ ಹೂವನ್ನು ಸೇವಿಸಿ ಉತ್ತಮ…
ಹಿಸಾಚಾರದಿಂದ ನಲುಗಿದ ಸುಡಾನ್‌ನಲ್ಲಿ: ಘರ್ಷಣೆಯಲ್ಲಿ 10 ಮಂದಿ ಸಾವು
ಗ್ರೇಟರ್ ಪಿಬೋರ್ : ದಕ್ಷಿಣ ಸುಡಾನ್ ಮತ್ತೊಮ್ಮೆ ಹಿಂಸಾಚಾರದಿಂದ ನಾಳಿಗಿದೆ. ಸೇನೆ ಮತ್ತು ನಾಗರಿಕರ ನಡುವೆ ಘರ್ಷಣೆಗಳು ಭುಗಿಲೆದ್ದಿದ್ದರಿಂದ 10 ಮಂದಿ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜಾನುವಾರು ಕಳ್ಳತನ, ಪ್ರತೀಕಾರದ ಹತ್ಯೆಗಳು ಮತ್ತು ಮಹಿಳೆಯರು ಮತ್ತು ಮಕ್ಕಳ ಅಪಹರಣ ಸಹಿತ ಹಲವು ಕಾರಣಗಳಿಂದ ಆಗಾಗ್ಗೆ ಹಿಂಸಾಚಾರ ಭುಗಿಲೇಳುತ್ತಲೇ ಇರುತ್ತವೆ. ಇದೀಗ ನಡೆದಿರುವ ಘರ್ಷಣೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರೇಟರ್ ಪಿಬೋರ್ ಆಡಳಿತ ಪ್ರದೇಶ (GPAA) ದಲ್ಲಿ ಭಾನುವಾರ ಕ್ಷುಲ್ಲಕ ಕಾರಣದಿಂದ ಪ್ರಾರಂಭವಾದ ಘರ್ಷಣೆ ಮೂರು-ನಾಲ್ಕು ದಿನ ಮುಂದುವರಿದಿದ್ದು ಪರಿಸ್ಥಿತಿ ನಿಯಂತ್ರಿಸಲು ಸೇನೆ ಕಾರ್ಯಾಚರಣೆಗಿಳಿದಿದೆ. ಆರೋಪಿಗಳನ್ನು ಸೇನೆ ಬಂಧಿಸಲು ಮುಂದಾದಾಗ ಈ ಘರ್ಷಣೆ ಭುಗಿಲೆದ್ದಿದೆ ಎಂದು ದಕ್ಷಿಣ ಸುಡಾನ್ ಸೇನೆಯ ವಕ್ತಾರರಾದ ಲುಲ್ ರುವಾಯ್ ಕೊಯಾಂಗ್ ತಿಳಿಸಿದ್ದಾರೆ. ಘರ್ಷಣೆಗಳು ಭಾನುವಾರ ಸಂಜೆಯಿಂದ ತೆರೆದುಕೊಂಡವು ಮತ್ತು ಸೋಮವಾರದವರೆಗೂ ಮುಂದುವರೆಯಿತು, ಸೈನಿಕರು ತಪ್ಪಿಸಿಕೊಂಡ ತಮ್ಮ ಸಹೋದ್ಯೋಗಿಯನ್ನು ಪುನಃ…
ಹೆಜ್ಜೇನು ದಾಳಿ; ಇಬ್ಬರು ಮಕ್ಕಳು ಬಲಿ
ಲಕ್ನೋ : ಉತ್ತರ ಪ್ರದೇಶದಲ್ಲಿ ಹೆಜ್ಜೇನು ದಾಳಿಯಲ್ಲಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಯುಗ್ (6) ಮತ್ತು ಯೋಗೇಶ್ ಶುಕ್ಲಾ (4) ಎಂಬ ಇಬ್ಬರು ಜೇನುನೊಣಗಳ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅಜ್ಜಿ ಜೊತೆ ಈ ಮಕ್ಕಳು ಮದ್ನಾಪುರ ಗ್ರಾಮದ ಸರ್ಕಾರಿ ಪಡಿತರ ಅಂಗಡಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಹೆಜ್ಜೇನು ದಾಳಿ ನಡೆಯಲು ಕಾರಣ ಏನೆಂದು ಗೊತ್ತಾಗಿಲ್ಲ. ಮಕ್ಕಳು ಹಾಗೂ ಅಜ್ಜಿಯ ರೋಧನ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹೋಗೆ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಾಯಾಳು ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರನ್ನು ಬದುಕುಳಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಕ್ಕಳ ಜೊತೆಗಿದ್ದ ಅಜ್ಜಿ ತೀವ್ರ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
‘ನಾರಿ ಶಕ್ತಿ ವಂದನ್ ಅಧಿನಿಯಂ’; ಪ್ರಧಾನಿ ಮೋದಿ ನಡೆಗೆ ಶ್ಲಾಘನೆ
ನವದೆಹಲಿ: ಭಾರತದ ಇತಿಹಾಸದಲ್ಲೇ ಮೋದಿ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಮಹಿಳಾ ಮೀಸಲಾತಿ ಮಸೂದೆ ಮಂಡಿಸಿರುವ ಕೇಂದ್ರ ಸರ್ಕಾರದ ನಡೆ ಬಗ್ಗೆ ಶ್ಲಾಘನೆ ವ್ಯಕ್ತವವಾಗಿದೆ. ಈ ವಿಚಾರದಲ್ಲಿ ಕಾಂಗ್ರ್ರೆಸ್ ಕೂಡಾ ತನ್ನದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದು, ಈ ಮಸೂದೆ ಕಾಂಗ್ರೆಸ್ ಪಕ್ಷದ ಚಿಂತನೆಯಾಗಿದ್ದು, ರಾಜೀವ್ ಗಾಂಧೀ ಸರ್ಕಾರದ ಕಾಲದಿಂದಲೇ ಇದಕ್ಕೆ ಪ್ರಯತ್ನ ನಡೆದಿದೆ ಎಂದು ಕೈ ನಾಯಕರು ಹೇಳಿದ್ದಾರೆ. ಈ ನಡುವೆ, ಮಂಗಳವಾರ ನೂತನ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದನದ ಮೊದಲ ದಿನದಂದು ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಲಾಗಿದ್ದು. ಇದರ ಜಾರಿಗಾಗಿಯೇ ಭಗವಂತ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಪ್ರಸ್ತುತ ಮಹಿಳಾ ಮೀಸಲಾತಿ ಮಸೂದೆಯನ್ನು ‘ನಾರಿ ಶಕ್ತಿ ವಂದನ್ ಅಧಿನಿಯಂ’ ಎಂದು ಕರೆಯಲಾಗುತ್ತದೆ ಎಂದಿರುವ ಪ್ರಧಾನಿ ಮೋದಿ, ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲೇ ಮಹಿಳಾ…
ಕಾವೇರಿ ವಿವಾದ; ತಮಿಳುನಾಡಿಗೆ ನೀರು ಬೀಡಬಾರದಿತ್ತು; ಸರ್ಕಾರದ ನಡೆಗೆ ಹೆಚ್ಡಿಕೆ ಆಕ್ಷೇಪ
ರಾಮನಗರ: ಪ್ರಾಧಿಕಾರ ನೀರು ಬಿಡಿ ಎಂದು ಸೂಚನೆ ನೀಡಿದಾಕ್ಷಣ ರಾಜ್ಯ ಸರಕಾರವು ತಡಮಾಡದೆ ಸುಪ್ರೀಂ ಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಬೇಕಿತ್ತು. ಅದು ಬಿಟ್ಟು ತಮಿಳುನಾಡಿಗೆ ನೀರು ಬಿಡುವ ಆತುರ ತೂರಿದ್ದೇಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಒಕ್ಕೂಟ ವ್ಯವಸ್ಥೆಯ ಬಗ್ಗೆಯೇ ಕನ್ನಡಿಗರಿಗೆ ಭ್ರಮನಿರಸನ ಆಗುತ್ತಿದೆ ಎಂದು ನಾವು ಅತ್ಯಂತ ಆಕ್ರೋಶದಿಂದಲೇ ಹೇಳಲೇಬೇಕು. ತಮಿಳುನಾಡು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾನೆ. ಬಿಡದಿಯ ತಮ್ಮ ತೋಟದ ಮನೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಲ್ಲಿ ನಾವು ಅಣೆಕಟ್ಟು ಕಟ್ಟಿದ್ದೇವೆ. ನಮ್ಮ ಜನರ ಹಣದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದ್ದೇವೆ. ಕೇಂದ್ರ ಸರಕಾರವೇನೂ ನಮಗೇನೂ ಇದಕ್ಕೆ ಹಣ ಕೊಟ್ಟಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅಣೆಕಟ್ಟು ಇರುವುದು ನಮ್ಮಲ್ಲಿ, ಅದನ್ನು ಕಟ್ಟಿದ್ದು ನಾವು. 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ.…
ಕಾವೇರಿ ಬಿಕ್ಕಟ್ಟು: ದೆಹಲಿಯಲ್ಲಿ ನಾಳೆ ಮಹತ್ವದ ಸಭೆ
ದೆಹಲಿ : ಕಾವೇರಿ ನದಿನೀರು ಹಂಚಿಕೆ ವಿವಾದ ,ಕೇಂದ್ರ ಸರ್ಕಾರದ ಮುಂದೆ ಬಾಕಿಯಿರುವ ರಾಜ್ಯದ ಯೋಜನೆಗಳು ಹಾಗೂ ಬರಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ ನಲ್ಲಿ ನಾಳೆ ಬೆಳಗ್ಗೆ ಮಹತ್ವದ ಸಭೆ ಆಯೋಜಿಸಲಾಗಿದೆ . ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು ,ಲೋಕಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರುಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ . ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ. ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು ನಾಳೆ ನಡೆಯಲಿರುವ ಮಹತ್ವದ ಸಭೆಗೆ ಕರ್ನಾಟಕ ಭವನದಲ್ಲಿ ಪೂರ್ವಭಾವಿ ಚರ್ಚೆ ನಡೆಸಿದ್ದಾರೆ. .
ಟಿಕೆಟ್‌ಗಾಗಿ ಕೋಟಿ ಡೀಲ್; ಸಿಸಿಬಿ ಯಶಸ್ವಿ ಕಾರ್ಯಾಚರಣೆ; ಹಾಲಶ್ರೀ ಸ್ವಾಮಿ ಕೊನೆಗೂ ಸೆರೆ.
ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸಲು ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಪ್ರಕರಣದಲ್ಲಿ ಸಿಲುಕಿರುವ ಉತ್ತರಕರ್ನಾಟಕದ ಪ್ರಮುಖ ಮಠದ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಗೋವಿಂದ್ ಪೂಜಾರಿ ಅವರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆನ್ನಲಾದ ಪ್ರಕರಣದಲ್ಲಿ ಹಿಂದೂ ಸಂಘಟನೆಯ ನಾಯಕಿ ಎನ್ನಲಾದ ಚೈತ್ರ ಕುಂದಾಪುರ ಸಹಿತ ಹಲವರ ವಿರುದ್ದ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೈ ಪ್ರೊಫೈಲ್ ಕೇಸ್ ಇದಾಗಿದ್ದುದರಿಂದ ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದರು. ಚೈತ್ರಾ ಕುಂದಾಪುರ, ಗಗನ್ ಕಡೂರು ಸಹಿತ ಹಲವರು ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರ ಬಂಧನಕ್ಕೆ ಬಲೆ ಬೀಸಿದ್ದ ಸಿಸಿಬಿ ಪೊಲೀಸರು ಸ್ವಾಮೀಜಿ ಒಡಿಶಾಗೆ ತೆರಳಿದ್ದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಅಲ್ಲಿಗೆ ತೆರಳಿದ ಸಿಸಿಬಿ ತಂಡ ಸ್ವಾಮೀಜಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದೆ. ಸ್ವಾಮೀಜಿ ರೈಲಿನಲ್ಲಿ ಪ್ರಯಾಣ ಬೆಳೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ…
ಎಲ್‍ಐಸಿ ಏಜೆಂಟರು, ನೌಕರರಿಗೆ ಪ್ರಯೋಜನ: ನಳಿನ್‍ಕುಮಾರ್ ಕಟೀಲ್ ಧನ್ಯವಾದ
ಬೆಂಗಳೂರು: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ಭಾರತೀಯ ಜೀವವಿಮಾ ನಿಗಮದ (ಎಲ್‍ಐಸಿ) ಏಜೆಂಟರು ಮತ್ತು ಉದ್ಯೋಗಿಗಳಿಗೆ ವಿವಿಧ ಸೌಲಭ್ಯಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ಸರಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸಂತಸ ಸೂಚಿಸಿದ್ದು, ಪ್ರಧಾನಿಯವರು ಮತ್ತು ಸಚಿವ ಸಂಪುಟಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ. ಕೌಟುಂಬಿಕ ಪಿಂಚಣಿ ಹೆಚ್ಚಳ, ಏಜೆಂಟರ ಗ್ರಾಚ್ಯುಟಿ ಮಿತಿ ಏರಿಕೆ, ಮರುನೇಮಕಗೊಂಡ ಏಜೆಂಟರ ರಿನೀವಲ್ ಕಮಿಷನ್ ನೀಡುವ ನಿರ್ಧಾರ ಮಾಡಲಾಗಿದೆ. ಇದು ಎಲ್‍ಐಸಿಯಲ್ಲಿ ಕೆಲಸ ಮಾಡುವ 1 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಮತ್ತು 13 ಲಕ್ಷಕ್ಕೂ ಹೆಚ್ಚು ಏಜೆಂಟರಿಗೆ ಪ್ರಯೋಜನ ಕೊಡಲಿದೆ ಎಂದು ಅವರು ತಿಳಿಸಿದ್ದಾರೆ. ಏಜೆಂಟರ ಗ್ರಾಚ್ಯುಟಿ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿದ್ದಾರೆ. ಇದರಿಂದ 13 ಲಕ್ಷಕ್ಕೂ ಹೆಚ್ಚು ಏಜೆಂಟರಿಗೆ ಪ್ರಯೋಜನ ಸಿಗÀಲಿದೆ. ಮರುನೇಮಕಗೊಂಡ ಏಜೆಂಟರಿಗೆ…
ಹಿಂದೂತ್ವವೇ ವಂಚನೆಗೆ ‘ಚೈತ್ರಾ’ಸ್ತ್ರ..! ಹಣ ವಾಪಸ್ ಕೇಳಿದರೆ ಅತ್ಯಾಚಾರ ಕೇಸ್ ಬೆದರಿಕೆ..?
ಬೆಂಗಳೂರು: ಹಿಂದೂ ಸಂಘಟನಗಳ ಕಾರಗಯಕರ್ತೆ ಎಂದು ಹೇಳಿಕೊಂಡು ಪ್ರಚೋದನಕಾರಿ ಭಾಷಣ ಮಾಡುತ್ತಾ ಹಿಂದೂ ಕಾರ್ಯಕರ್ತರ ಗಮನಸೆಳೆಯುತ್ತಿದ್ದ ಚೈತ್ರಾ ಕುಂದಾಪುರ ಇದೀಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಚೈತ್ರಾ ಅವರ ಸಾಲು ಸಾಲು ವಂಚನೆ ಪುರಾಣ ಬಯಲಾಗುತ್ತಿದ್ದು, ಅವರು ಬಂಧನದಲ್ಲಿದ್ದಾಗಲೇ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತನಿಗೆ ವಂಚಿಸಿದ್ದಾರೆನ್ನಲಾದ ಚೈತ್ರಾ ಕುಂದಾಪುರ, ವಂಚನೆಗೊಳಗಾದವರು ಹಣ ವಾಪಸ್ ಕೇಳಿದರೆ ಅತ್ಯಾಚಾರ ಕೇಸ್ ದಾಖಲಿಸುವುದಾಗಿ ಬೆದರಿಕೆಯೊಡ್ಡಿದ್ದಾರಂತೆ. ಇದೇ ಅಂಶಗಳನ್ನು ಉಲ್ಲೇಖಿಸಿ ಉಡುಪಿ ಜಿಲ್ಲೆ ಕೋಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ರಹ್ಮಾವರ ಸಮೀಪದ ಸುದೀನ ಎಂಬವರು ಕೋಟಾ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಈ ಎಫ್‌ಐಆರ್ ದಾಖಲಾಗಿದೆ. ಏನಿದು ವಂಚನೆ ಪುರಾಣ? ಹಿಂದೂ ಕಾರ್ಯಕರ್ತರನ್ನೇ ಚೈತ್ರಾ ವಂಚಿಸುತ್ತಿದ್ದರಾ? ಚೈತ್ರಾ ಕುಂದಾಪುರ ಅವರಿಗೆ ಹಿಂದೂ ಕಾರ್ಯಕರ್ತರೇ ಟಾರ್ಗೆಟ್? ಎಂಬ ಪ್ರಶ್ನೆ ಉದ್ಭವವಾಗಿದೆ. ಅದಕ್ಕೆ ಪುಷ್ಟಿ ನೀಡಿರುವ ಕೋಟಾ ಕೇಸ್ ಕೂಡಾ ಬೆಂಗಳೂರಿನಲ್ಲಿ ದಾಖಲಾಗಿರುವ…
