ಹಿಂದುತ್ವದ ಅವಹೇಳನ: ರಾಹುಲ್ ಗಾಂಧಿ ಕ್ಷಮೆ ಯಾಚಿಸಲಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಎಂದು ನಾಯಕರಿಗೆ ಮಾರ್ಗದರ್ಶನ ಮಾಡಿದರು. ಅನೇಕ ಜ್ವಲಂತ ಸಮಸ್ಯೆಗಳು ಇದ್ದರೂ ಅದಕ್ಕೆ ಸಮರ್ಪಕವಾಗಿ ಸ್ಪಂದಿಸದೆ, ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ. – ಶ್ರೀ @BSYBJP, ಮಾಜಿ ಮುಖ್ಯಮಂತ್ರಿಗಳು pic.twitter.com/RGckwM6erc — BJP Karnataka (@BJP4Karnataka) September 12, 2023 ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ…

‘ಕೈ’ ಕಲಹದಿಂದ ಸಿದ್ದರಾಮಯ್ಯನವರಿಗೆ ಭ್ರಮನಿರಸನ: ಡಿವಿಎಸ್ 

ಬೆಂಗಳೂರು: ಪಕ್ಷದೊಳಗಿನ ಆಂತರಿಕ ಕಲಹದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಡಿ.ವಿ.ಸದಾನಂದ ಗೌಡ, ನಾನು 30 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಆಡಳಿತಕ್ಕೆ ಬಂದು 3 ತಿಂಗಳಲ್ಲಿ ಇಷ್ಟು ಜನವಿರೋಧಿ ಸರಕಾರವನ್ನು ಕರ್ನಾಟಕ ಮಾತ್ರವಲ್ಲದೆ ದೇಶದ ಯಾವುದೇ ರಾಜ್ಯದಲ್ಲಿ ನಾನು ಕಂಡಿಲ್ಲ ಎಂದರು. ‘ಅಂತೂ ಇಂತೂ ಕರ್ನಾಟಕದಲ್ಲಿ ಅತಿ ಶೀಘ್ರವಾಗಿ ಅವರ ಆಂತರಿಕ ಗೊಂದಲಗಳಿಂದಲೇ ಆಡಳಿತÀಕ್ಕೆ ಇತಿಶ್ರೀ ಆಗಲಿದೆ ಎಂಬ ಬಲವಾದ ನಂಬಿಕೆ ನನ್ನದು’ ಎಂದು ನುಡಿದರು. ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿ ಅನುಭವ ಇರುವವರು. ಆದರೆ, ಅವರ ಆಡಳಿತಾನುಭವ ಎಲ್ಲಿ ಹೋಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ತಿಳಿಸಿದರು. ಪ್ರಾಯಶಃ ಹರಿಪ್ರಸಾದ್, ಡಿ.ಕೆ.ಶಿವಕುಮಾರ್, ರಾಯರೆಡ್ಡಿ, ಇನ್ನೂ…

ಬೆಂಗಳೂರು ಸುತ್ತಮುತ್ತ ಸಾವಿರಕ್ಕೂ ಹೆಚ್ಚು ರೆಸಾರ್ಟ್’ಗಳಿಂದ ಅಕ್ರಮ ಭೂ ಒತ್ತುವರಿ; ಲ್ಯಾಂಡ್ ಆಡಿಟಿಂಗ್’ಗೆ ರಮೇಶ್ ಬಾಬು ಆಗ್ರಹ

ಬೆಂಗಳೂರು: ರಾಜಧಾನಿ ಬೆಂಗಳೂರು ಸುತ್ತ ಮತ್ತಲ ಒಂದು ನೂರು ಕಿಮೀ ವ್ಯಾಪ್ತಿಯ ಒಳಗಿನ ರೆಸಾರ್ಟ್ ಮತ್ತು ಅತಿಥಿ ತಂಗುದಾಣಗಳ ಭೂಮಿ ಒತ್ತುವರಿ ಕುರಿತು ಲ್ಯಾಂಡ್ ಆಡಿಟಿಂಗ್ ನಡೆಸಬೇಕೆಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ರಮೇಶ್ ಬಾಬು, ಇತ್ತೀಚಿನ ದಿನಗಳಲ್ಲಿ ಕಂದಾಯ ಭೂಮಿಯ ಬೆಲೆ ಏರಿಕೆಯನ್ನು ನಾವು ಮನಗಂಡಿರುತ್ತೇವೆ. ವಿಶೇಷವಾಗಿ ಬೆಂಗಳೂರು ಮತ್ತು ಸುತ್ತ ಮುತ್ತಲಿನ ಭೂಮಿಯ ಬೆಲೆಯು ಬಹಳಷ್ಟು ಏರಿಕೆಯಾಗಿದ್ದು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಮತ್ತು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸರ್ಕಾರಿ ಭೂಮಿಗಳನ್ನು ಒತ್ತುವರಿ ಮಾಡುತ್ತಿರುವುದನ್ನು ಮತ್ತು ಅಕ್ರಮ ದಾಖಲೆಗಳನ್ನು ನಿರ್ಮಿಸಿ ಸ್ವಾಧೀನದಲ್ಲಿರುವುದು ಅಂಕಿ ಅಂಶಗಳ ಮೂಲಕ ಬಹಿರಂಗವಾಗಿರುತ್ತದೆ. ಶ್ರೀ ಎ.ಟಿ.ರಾಮಸ್ವಾಮಿರವರ ಸದನ ಸಮಿತಿ, ಶ್ರೀ ವಿ.ಬಾಲಸುಬ್ರಮಣ್ಯನ್‌ರವರ ಸಮಿತಿ ನೀಡಿರುವ ವರದಿಗಳಲ್ಲಿ ದಾಖಲೆಯ ಸಮೇತ ಇಂತಹ ಭೂ ಕಬಳಿಕೆ ಪ್ರಕರಣಗಳನ್ನು ಬಹಿರಂಗಪಡಿಸಲಾಗಿದೆ ಎಂದು…

ಚಾಮರಾಜನಗರ: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಚಾಮರಾಜನಗರ: ಸೈನಿಕರು , ಪೊಲೀಸರಂತೆ ಅರಣ್ಯ ಇಲಾಖೆ ಸಿಬ್ಬಂದಿಯೂ ಸಹ ಹಗಲಿರುಳಿನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ , ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಎಫ್ ಒ ಡಾ. ಸಂತೋಷ್ ಕುಮಾರ್ ಹೇಳಿದ್ದಾರೆ. ಹನೂರು ತಾಲೂಕಿನ ಕಾವೇರಿ ವನ್ಯಜೀವಿ ವಿಭಾಗ ವ್ಯಾಪ್ತಿಯ ಗೋಪಿನಾಥಂ ವಲಯದ ಯರಕೆ ಹಳ್ಳ ಸಮೀಪದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅರಣ್ಯ ಮತ್ತು ವನ್ಯಪ್ರಾಣಿ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಗೆ ಸಂಬಂಧಪಟ್ಟಿದಲ್ಲ ದೇಶದ ಪ್ರತಿಯೊಬ್ಬರ ಆಸ್ತಿ, ಇದನ್ನು ಪ್ರತಿಯೊಬ್ಬರು ಕಾಪಾಡುವುದು ತಮ್ಮ ಕರ್ತವ್ಯ. ನಮ್ಮ ದೇಶ ಹುಲಿಗಳ ಸಂಖ್ಯೆಯಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ. ಕರ್ನಾಟಕ ರಾಜ್ಯ ಎರಡನೇ ಸ್ಥಾನ ಪಡೆದಿದೆ. ಆನೆ ಗಣತಿಯಲ್ಲಿಯೂ ನಮ್ಮ ಜಿಲ್ಲೆಯ ಮುಂದಿದೆ. ನಂಬರ್ ಒನ್ ಸ್ಥಾನ ಕೇವಲ ಇಲಾಖೆಗೆ ಮಾತ್ರವಲ್ಲ ದೇಶದ…

ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ : ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅಮಾನತು

ದೊಡ್ಡಬಳ್ಳಾಪುರ: ಭ್ರಷ್ಟಾಚಾರದ ಆರೋಪದಡಿ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ. ಲೋಕಾಯುಕ್ತ ಪೊಲೀಸರು ಆಗಸ್ಟ್ 17ರಂದು ಶಿವರಾಜ್, ಅವರ ಆಪ್ತರು ಸೇರಿದಂತೆ, ಸಂಬಂಧಿಗಳ ಮನೆಗಳಲ್ಲಿ ಏಕಕಾಲಕ್ಕೆ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಅಡಿಯಲ್ಲಿ ಆಗಸ್ಟ್ 30ರಂದು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿಕೊಂಡಿದ್ದರು. ತಹಶೀಲ್ದಾರ್ ಹುದ್ದೆಯಲ್ಲಿ ಶಿವರಾಜ್ ಮುಂದುವರೆದರೆ ಪ್ರಕರಣದ ತನಿಖೆಗೆ ಅಡ್ಡಿಯಾಗುವ ಮತ್ತು ಸಾಕ್ಷ್ಯಗಳ ನಾಶ ಸಾಧ್ಯತೆ ಕಾರಣ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಇದಕ್ಕೂ ಮೊದಲು ದೇವನಹಳ್ಳಿಯ ತಹಶೀಲ್ದಾರ್ ಹುದ್ದೆಯಿಂದ ಶಿವರಾಜ್…

ಆಗಸ್ಟ್​ 15 ರಂದು ಪುಷ್ಪ 2: ದಿ ರೂಲ್’ ಆರಂಭ; ಅಂದೇ ‘ಸಿಂಗಮ್ ಅಗೈನ್’​

ಅಲ್ಲು ಅರ್ಜುನ್ ಅಭಿನಯದ ತೆಲುಗು ಭಾಷೆಯ ಆಕ್ಷನ್-ಡ್ರಾಮಾ ಜಾನರ್​, 2021 ರಲ್ಲಿ ಬಿಡುಗಡೆಯಾದ ‘ಪುಷ್ಪ: ದಿ ರೈಸ್’ ಚಿತ್ರದ ಮುಂದುವರಿದ ಭಾಗವಾದ ‘ಪುಷ್ಪ 2: ದಿ ರೂಲ್’ ಸಿನಿಮಾ ಆಗಸ್ಟ್​ 15, 2024 ರಂದು ಜಾಗತಿಕವಾಗಿ ಬಿಡುಗಡೆಗೊಳ್ಳಲು ಸಜ್ಜಾಗಿದೆ. ಈ ಬಗ್ಗೆ ಇತ್ತೀಚೆಗಷ್ಟೇ ಚಿತ್ರತಂಡ ಪೋಸ್ಟರ್​ ಜತೆಗೆ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ. ಬಾಲಿವುಡ್​ ನಟ ಅಜಯ್​ ದೇವಗನ್​ ಅಭಿನಯದ ‘ಸಿಂಗಮ್ ಅಗೈನ್’​ ಚಿತ್ರವೂ ಅದೇ ದಿನ ಬಿಡುಗಡೆಗೊಳ್ಳಲಿದೆಯಂತೆ. ಇದಕ್ಕಾಗಿ ಚಿತ್ರತಂಡ ಭರ್ಜರಿ ತಯಾರಿಯಲ್ಲಿ ತೊಡಗಿದೆ.

ಜನರಿಗೆ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ಬಿಸಿ; ಸಾರಿಗೆ ಮುಷ್ಕರ

ಬೆಂಗಳೂರು: ಖಾಸಗಿ ಸಾರಿಗೆಯನ್ನೆ ನಂಬಿ ಜೀವನ ನಡೆಸುತ್ತಿರುವವರ ನೆರವಿಗೆ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ. ಬದುಕಿಗೆ ಗ್ಯಾರಂಟಿ ಕೊಡಿ ಎಂದು ಅವರು ಆಗ್ರಹಪಡಿಸಿದ್ದಾರೆ. ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಈ…

ಚಿತ್ರದುರ್ಗ ಬಳಿ ಭೀಕರ ಅಪಘಾತ; ನಾಲ್ವರು ದುರ್ಮರಣ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಚಳ್ಳಕೆರೆ-ಹಿರಿಯೂರು ನಡುವೆ ಬೀದರ್ -ಶ್ರೀರಂಗಪಟ್ಟಣ ರಸ್ತೆಯ ಗೊಲ್ಲಹಳ್ಳಿ ಬಳಿ KSRTC ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಲಾರಿ ಚಾಲಕ ವಾಹನಗಳನ್ನು ಓವರ್‌ಟೇಕ್ ಮಾಡುವ ಆತುರದಲ್ಲಿ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ ಎನ್ಬಲಾಗಿದೆ. ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಆರೋಗ್ಯ ಸೂತ್ರ: ಈ ಬೇಳೆಯಿಂದ ಕೊಲೆಸ್ಟ್ರಾಲ್ ನಿಯಂತ್ರಣ ಸಾಧ್ಯ

“ಮೂಂಗ್ ದಾಲ್: ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಹಿತಕರ ಆಹಾರ” ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಹೆಚ್ಚಿನ ಆಶ್ರಯವಾಗಿ ಮೂಂಗ್ ದಾಲ್ ಅಥವ ಬೇಳೆ ಅನ್ನು ತಿಂದಾಗ ಆರೋಗ್ಯ ತಕ್ಕ ಹೆಸರನ್ನು ಗಳಿಸಬಹುದು. ಇದು ಮಿತಿಯಾಗಿರಲಿ ಮತ್ತು ನಿಯಮಿತವಾಗಿರಲಿ. ಈ ಮೂಂಗ್ ದಾಲ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಮತ್ತು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ದೇಹವನ್ನು ದೀರ್ಘಕಾಲದ ಕಾಯಿಲೆಗಳಿಂದ ರಕ್ಷಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಹೃದಯವನ್ನೂ ಆರೋಗ್ಯವಾಗಿರಿಸುತ್ತದೆ. ಇದಲ್ಲದೆ, ದೇಹವು ಅನೇಕ ಪ್ರಯೋಜನಗಳನ್ನು ಪಡೆಯುತ್ತದೆ. ಈ ಮೂಂಗ್ ದಾಲ್‌ನಲ್ಲಿರುವ ಪೊಟ್ಯಾಸಿಯಮ್, ಕಬ್ಬಿಣ, ಮೆಗ್ನೀಸಿಯಮ್, ತಾಮ್ರ, ಫೈಬರ್, ವಿಟಮಿನ್ ಬಿ 6, ವಿಟಮಿನ್ ಸಿ ಮತ್ತು ಫೈಬರ್ ಪೋಷಕಾಂಶಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಏರ್ ಇಂಡಿಯಾ ವಿಮಾನದಲ್ಲಿ ಹೊಗೆ: ವಿಮಾನ ನಿಲ್ದಾಣದಲ್ಲಿ ಆತಂಕ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ.. ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ.. ಕೆಐಎ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರಲ್ಲಿ ಆತಂಕ..  ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಹೊಗೆ ಹೊರಹೊಮ್ಮುತ್ತಿರುವ ಆಘಾತಕಾರಿ ಘಟನೆಯಿಂದ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಯಿತು. ವಿಮಾನದ ಹಿಂಭಾಗದಿಂದ ಹೊಗೆ ಹೊರಹೊಮ್ಮುತ್ತಿತ್ತು. ವಿಮಾನದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಹೈ ಅಲರ್ಟ್ ಘೋಷಿಸಿದರು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ T2 ನಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆದ ನಂತರ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಘಟನೆ ಸುಮಾರು ರಾತ್ರಿ 8.40ಕ್ಕೆ ಬೆಳಕಿಗೆ ಬಂದಿದೆ. ಏರ್ ಇಂಡಿಯಾದ ಏರ್‌ಬಸ್ A320 ವಿಮಾನವನ್ನು ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ರ ಗೇಟ್ 10…