ಕ್ಯಾರೆಟ್ ತಿನ್ನುವುದು ಕಣ್ಣಿಗೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಇದು ಕಣ್ಣಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಇವುಗಳ ಅನುಕೂಲವೆಂದರೆ ಅಡುಗೆ ಮಾಡದೆ ನೇರವಾಗಿ ತಿನ್ನಬಹುದು. ಕ್ಯಾರೆಟ್ ಅನ್ನು ಹೀಗೆ ತಿಂದರೆ ತುಂಬಾ ರುಚಿಯಾಗಿರುತ್ತದೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಕ್ಯಾರೆಟ್ ನಲ್ಲಿ ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶ ಹೆಚ್ಚಾಗಿರುತ್ತದೆ. ಇದಲ್ಲದೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ 8, ವಿಟಮಿನ್ ಕೆ, ಫೈಬರ್, ಕಬ್ಬಿಣ, ಕ್ಯಾಲ್ಸಿಯಂ, ರಂಜಕ ಮತ್ತು ಪೊಟ್ಯಾಸಿಯಮ್ ಅಂಶವೂ ಅಧಿಕವಾಗಿದೆ. ಕ್ಯಾರೆಟ್ ನಲ್ಲಿ ವಿಟಮಿನ್ ಎ ಅಧಿಕವಾಗಿದೆ. ಈ ಕ್ಯಾರೆಟ್‌ನಲ್ಲಿ ಬೀಟಾ-ಕ್ಯಾರೋಟಿನ್, ಶಕ್ತಿಯುತವಾದ ಉತ್ಕರ್ಷಣ ನಿರೋಧಕವೂ ಹೇರಳವಾಗಿದೆ. ಹಾಗಾಗಿ ದೈನಂದಿನ ಆಹಾರದಲ್ಲಿ ಕ್ಯಾರೆಟ್ ಸೇರಿಸುವುದು ತುಂಬಾ ಒಳ್ಳೆಯದು. ಇದರ ಜ್ಯೂಸ್ ಕುಡಿಯುವುದರಿಂದ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುವುದಲ್ಲದೆ ಕಣ್ಣಿನ ಆರೋಗ್ಯವೂ ಸುಧಾರಿಸುತ್ತದೆ. ಮುಖ್ಯವಾಗಿ ಕಣ್ಣಿನ ಪೊರೆ ಮತ್ತು ರಿಕೆಟ್‌ಗಳಂತಹ ಸಮಸ್ಯೆಗಳು…
Year: 2023
ಜಿ20 ಶೃಂಗಸಭೆ: ವಿಶ್ವದ ದಿಗ್ಗಜರಿಂದ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಜಗತ್ತಿನ ವಿವಿಧ ರಾಷ್ಟ್ರಗಳ ದಿಗ್ಗಜ ನಾಯಕರ ಸಮಾಗಮಕ್ಕೆ ಸಾಕ್ಷಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರವಾದ ಇಂದೂ ಕೂಡ ವಿಶ್ವ ನಾಯಕರ ನಡುವೆ ಚಿಂತನ-ಮಂಥನ ನಡೆದಿದ್ದು ಅದಕ್ಕೂ ಮುನ್ನ ಬೆಳಗ್ಗೆ ವಿವಿಧ ದೇಶಗಳ ಪ್ರತಿನಿಧಿಗಳು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. PM @narendramodi along with Heads of states and Heads of international organizations pay homage to #MahatmaGandhi at #Rajghat, Delhi.@g20org #G20Summit #G20India…
ಮೊರಾಕೊ ಭೂಕಂಪ: 2000 ದಾಟಿದ ಸಾವಿನ ಸಂಖ್ಯೆ
ವಿನಾಶಕಾರಿ ಭೂಕಂಪದಿಂದಾಗಿ ಮೊರಾಕೊ ಸ್ಮಶಾನ ಸದೃಶವಾಗಿದೆ. ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 2,000 ದಾಟಿದ್ದು ಇಡೀ ಮೊರಾಕೊ ದೇಶ ಶೋಕದಲ್ಲಿದೆ. ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದ್ದು, ಎಲ್ಲಾ ಸಾರ್ವಜನಿಕ ಸೌಲಭ್ಯಗಳಲ್ಲಿ ಧ್ವಜಗಳನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಮೊರಾಕೊದ ಹಲವು ನಗರಗಳಲ್ಲಿ ಶುಕ್ರವಾರ ರಾತ್ರಿ 11:11 ಕ್ಕೆ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಅಲ್ ಹೌಜ್ ಪ್ರಾಂತ್ಯದ ಇಘಿಲ್ ಪಟ್ಟಣ ಈ ಕಂಪನದ ಕೇಂದ್ರಬಿಂದುವಿದೆ. ಮಾರಾಕೇಶ್‌ನಿಂದ ಸುಮಾರು 70 ಕಿಮೀ ನೈಋತ್ಯಕ್ಕೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪವು 18.5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೊರಾಕೊದ ಗೃಹ ಸಚಿವಾಲಯದ ಶನಿವಾರ ಪ್ರಕಟಿಸಿದ ಮಾಹಿತಿ ಪ್ರಕಾರ, ಭೂಕಂಪವು 2,012 ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು 2,059 ಮಂದಿ ಗಾಯಗೊಂಡಿದ್ದಾರೆ ಮತ್ತು 1,404 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.
ಯುಎಸ್ ಓಪನ್: ಮಿಶ್ರ ಡಬಲ್ಸ್ ಪ್ರಶಸ್ತಿ ಗೆದ್ದ ಅನ್ನಾ ಡ್ಯಾನಿಲಿನಾ ಮತ್ತು ಹ್ಯಾರಿ ಹೆಲಿಯೊವಾರಾ
ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲ ಮಿಶ್ರ ಡಬಲ್ಸ್ ಪ್ರಶಸ್ತಿ ಗೆದ್ದ ಅನ್ನಾ ಡ್ಯಾನಿಲಿನಾ ಮತ್ತು ಹ್ಯಾರಿ ಹೆಲಿಯೊವಾರಾ ಅವರು ಹೊಸ ಇತಿಹಾಸ ಬರೆದಿದ್ದಾರೆ. ಅನ್ನಾ ಡ್ಯಾನಿಲಿನಾ ಮತ್ತು ಹ್ಯಾರಿ ಹೆಲಿಯೊವಾರಾ ಅವರು US ಓಪನ್‌ನಲ್ಲಿ ಮಿಶ್ರ ಡಬಲ್ಸ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಮೊದಲ ಗ್ರ್ಯಾಂಡ್‌ಸ್ಲಾಮ್ ವಿಜಯ ಸಾಧಿಸಿದ್ದಾರೆ. ಆರ್ಥರ್ ಆಶ್ ಸ್ಟೇಡಿಯಂನ ಎಲೆಕ್ಟ್ರಿಕ್ ವಾತಾವರಣದ ನಡುವೆ ಡೈನಾಮಿಕ್ ಜೋಡಿ 6-3, 6-4 ಅಂಕಗಳೊಂದಿಗೆ ತಮ್ಮ ವಿಜಯವನ್ನು ಮುದ್ರೆಯೊತ್ತಿದರು. ಹ್ಯಾರಿ ಹೆಲಿಯೊವಾರಾ ಅವರು ಯುಎಸ್ ಓಪನ್‌ನಲ್ಲಿ ಮಿಶ್ರ ಡಬಲ್ಸ್ ಪ್ರಶಸ್ತಿಯನ್ನು ಪಡೆದ ಓಪನ್ ಎರಾದಲ್ಲಿ ಮೊದಲ ಫಿನ್ನಿಷ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು, ಇದು ಫಿನ್ನಿಷ್ ಟೆನಿಸ್‌ಗೆ ಮಹತ್ವದ ಮೈಲಿಗಲ್ಲನ್ನು ಗುರುತಿಸಿತು. ಮತ್ತೊಂದೆಡೆ, ಯಾವುದೇ ಪ್ರಮುಖ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಜಯಗಳಿಸಿದ ಮೊದಲ ಕಝಕ್ ಆಟಗಾರ್ತಿಯಾಗಿ ಅನ್ನಾ ಡ್ಯಾನಿಲಿನಾ ಅದ್ಭುತ ಸಾಧನೆ ಮಾಡಿದರು.
ಜೆಡಿಎಸ್ – ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿ; ಹೆಚ್ಡಿಕೆ
ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದ್ದು, ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ, ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿಗೆ ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದ್ದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ…
ಲೋಕಸಭಾ ಚುನಾವಣೆಯಲ್ಲಿ ಬೊಮ್ಮಾಯಿ ಸ್ಪರ್ಧಿಸ್ತಾರ? ಮಾಜಿ ಸಿಎಂ ಹೇಳಿದ್ದು ಹೀಗೆ
ಹಾವೇರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಲವಾರು ಸಂಸದರಿಗೆ ಬಿಜೆಪಿ ಟಿಕೆಟ್ ಸಿಗಲ್ಲ ಎಂಬ ಮಾತುಗಳು ಹರಿದಾಡುತ್ತಿವೆ. ಇದೇ ವೇಳೆ, ಹಾವೇರಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆ ಸಾಗಿವೆ. ಇದೇ ವೇಳೆ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾವೇರಿ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಹಾವೇರಿ ಗದಗ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿದ್ದೆವೆ. ಪಕ್ಷದ ಅಧ್ಯಕ್ಷರು ಪದಾದಿಕಾರಿಗಳು ಸೇರಿ ತಂಡ ಮಾಡಿ ಕೋರ್ ಸಮಿತಿ ಮಾಡಬೇಕು ಎಂಬ ನಿರ್ಣಯ ಆಗಿತ್ತು.…
ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮಗೆ ಆಸಕ್ತಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಾವು ಪ್ರಧಾನಮಂತ್ರಿಯಾಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು. ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ : ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ…
ಸರ್ವ ಪಕ್ಷದ ನಿಯೋಗ ಭೇಟಿ ಬಗ್ಗೆ ಕೇಂದ್ರದಿಂದ ಬಾರದ ಉತ್ತರ
ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು. ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ : ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ…
ಬಿಜೆಪಿ ‘ಶಂಖನಾದ ಅಭಿಯಾನ’ದ ರಾಜ್ಯಮಟ್ಟದ ಸಭೆ
ಬೆಂಗಳೂರು: ಬಿಜೆಪಿ ‘ಶಂಖನಾದ ಅಭಿಯಾನ’ದ ಸಂಬಂಧ ರಾಜ್ಯಮಟ್ಟದ ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಇಂದು ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಉದ್ಘಾಟಿಸಿದರು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಕಾಸ್ ಪುತ್ತೂರು, ಗೋವಾ ರಾಜ್ಯ ವಕ್ತಾರ ಗಿರಿರಾಜ್ ಪೈ, ಶಂಖನಾದ ಅಭಿಯಾನದ ಪ್ರಭಾರಿ ವಿಕಾಸ್ ಪಾಂಡೆ, ಅಭಿಯಾನದ ರಾಜ್ಯ ಸಂಚಾಲಕ ರಾಘವೇಂದ್ರ ನಾಗೂರ, ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ನರೇಂದ್ರಮೂರ್ತಿ, ಐಟಿ ರಾಜ್ಯ ಸಂಚಾಲಕ ನಿತಿನ್ ರಾಜ್ ನಾಯ್ಕ್, ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ಸದಸ್ಯ ಪ್ರಶಾಂತ್ ಜಾಧವ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಲಾರಿಗೆ ಬೈಕ್ ಡಿಕ್ಕಿ; ನಾಯಿಯನ್ನು ಬದುಕಿಸಲು ಪ್ರಾಣ ಬಿಟ್ಟ ಮಹಿಳೆ;
ದೊಡ್ಡಬಳ್ಳಾಪುರ: ಅಡ್ಡ ಬಂದ ನಾಯಿ ಬಚಾವ್ ಮಾಡಲು ಹೋಗಿ ದ್ವಿಚಕ್ರ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಂಗಾಡಿಯಪ್ಪ ಕಾಲೇಜು ಬಳಿ ಇಂದು ನಡೆದಿದೆ. ಕರೇನಹಳ್ಳಿ ವಾಸಿ ನಂದಿ ನಿ(28) ಮೃತರು. ಮಗುವಿನ ಸಮೇತ ಆಕ್ಟೀವಾ ಹೊಂಡದಲ್ಲಿ ತೆರಳುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ನಾಯಿಯನ್ನು ಬಚಾವ್ ಮಾಡಲು ಹೋಗಿ ಅದೇ ಹಾದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಲಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಕೂಡಲೇ ಆಟೊದಲ್ಲಿ ಅಸ್ಪತ್ರೆಗೆ ಕರೆತರಲಾಯಿತು. ಆದರೆ, ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಮೃತ ಮಹಿಳೆಯ ತಾಯಿ ಹಾಗೂ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿತ್ತು. ಡಿಕ್ಕಿಯ ರಭಸಕ್ಕೆ ಮಹಿಳೆಯ ತಲೆಗೆ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ. ಹಿಂಬದಿ ಸವಾರರಾಗಿದ್ದ ಮತ್ತೊಬ್ಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
