ಬೆಂಗಳೂರು: ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ. ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಭಾನುವಾರ ಬೆಳಗ್ಗೆ 10.30 ಗಂಟೆಯಿಂದ ಸಭೆ ಆರಂಭವಾಗಲಿದೆ ಎಂದಿರುವ ಮಾಜಿ ಮುಖ್ಯಮಂತ್ರಿಗಳು, ಎಲ್ಲರೂ ತಪ್ಪದೇ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ನಡುವೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸಂದೇಶ ನೀಡಿರುವ ಮಾಜಿ ಮುಖ್ಯಮಂತ್ರಿಗಳು; ನಿಮ್ಮೆಲ್ಲರ…
Year: 2023
ರಾಮನಗರ ಬಂದ್’ಗೆ ನಿಖಿಲ್ ಕುಮಾರಸ್ವಾಮಿ ಬೆಂಬಲ; ಡಿಕೆಶಿ ಒತ್ತಡದಿಂದಲೇ ಮೆಡಿಕಲ್ ಕಾಲೇಜ್ ಸ್ಥಳಾಂತರ ಆರೋಪ
ಬೆಂಗಳೂರು: ರಾಮನಗರದ ಮೆಡಿಕಲ್ ಕಾಲೇಜ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡಿರುವ ಬಗ್ಗೆ ಜೆಡಿಎಸ್ ಯುವಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ ಎಂದು ಹೇಳಿದ್ದಾರೆ. 2006-07ರಲ್ಲೇ ₹310 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು. ಮತ್ತೆ…
ಮಂಗಳೂರು ಮೇಯರ್ ಆಗಿ ಸುಧೀರ್ ಶೆಟ್ಟಿ, ಉಪ ಮೇಯರ್ ಆಗಿ ಸುನಿತಾ ಆಯ್ಕೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಸುನಿತಾ ಚುನಾಯಿತರಾಗಿದ್ದಾರೆ. ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಿತು. 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಉಪಮೇಯರ್ ಆಗಿ ಸುನೀತಾ ತಣ್ಣೀರುಬಾವಿ ಆಯ್ಕೆಯಾಗಿದ್ದು ನೂತನ ಮೇಯರ್‌ರನ್ನು ನಾಯಕರು ಅಭಿನಂದಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆವರೆಗಿನ ಮಳೆಯಾಗುವ ಸಾಧ್ಯತೆಗಳಿವೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಒಳನಾಡಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ ಎಂದು ಮುನ್ಸೂಚನೆ ವ್ಯಕ್ತವಾಗಿದೆ. ಮುಂಗಾರು ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗಿದ್ದು ಸೆಪ್ಟೆಂಬರ್ 12ರ ನಂತರ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ
ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಸಿನೆಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ ಅಸ್ಮಿತಾಯ್ ಚಲನಚಿತ್ರವನ್ನು ನಿರ್ಮಿಸಿದ್ದು ಈ ಸಿನೆಮಾವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ. ಕೊಂಕಣಿ ಜನರ ಅಸ್ಮಿತೆಯ ಹುಡುಕಾಟದ ಎಳೆಯೊಂದಿಗೆ ಸಾಗುವ ಕತೆಯು ಗೋವಾದಿಂದ ವಲಸೆ, ಕೊಂಕಣಿಯ ಶ್ರೀಮಂತ ಜನಪದ ಪರಂಪರೆಯ ದೃಶ್ಯ ವೈಭವವನ್ನು ನವಿರಾದ ಪ್ರೇಮಕತೆಯೊಂದಿಗೆ ತೋರಿಸುತ್ತದೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆ ರಚಿಸಿದ್ದು ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ ನಿರ್ದೇಶನ ನೀಡಿದ್ದಾರೆ. ಬಾಲರಾಜ ಗೌಡ ಸುಂದರವಾಗಿ ಸೆರೆ ಹಿಡಿದ ಕರಾವಳಿ, ಮಲೆನಾಡು ಮತ್ತು ಗೋವಾದ ದೃಶ್ಯಗಳನ್ನು ಮೇವಿನ್ ಜೊಯೆಲ್ ಪಿಂಟೊ ಉತ್ತಮವಾಗಿ ಸಂಕಲನ ಮಾಡಿದ್ದಾರೆ. ಆರು ಹಾಡುಗಳಿಗೆ ಆಲ್ವಿನ್ ಫೆರ್ನಾಂಡಿಸ್, ಕ್ಯಾಜಿಟನ್ ಡಾಯಸ್, ಜೊಯೆಲ್ ಪಿರೇರಾ…
ಸಿದ್ದು ಸರ್ಕಾರದ ವಿರುದ್ದ ಬಿಜೆಪಿ ರಣಕಹಳೆ; ಸೆ.8ರಂದು ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ (ಸೆ. 8ರಂದು) ಬೆಂಗಳೂರು ಮಾತ್ರವಲ್ಲದೆ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ರಾಜ್ಯದಾದ್ಯಂತ ಮಳೆ ಇಲ್ಲದೆ ಬರ ಆವರಿಸಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸರಕಾರ ಸ್ಪಂದಿಸುತ್ತಿಲ್ಲ. 198ಕ್ಕಿಂತ ಹೆಚ್ಚು ತಾಲ್ಲೂಕುಗಳಲ್ಲಿ ಬರದ ದುಸ್ಥಿತಿ ಇದೆ. ಆದರೆ, ಬರಪೀಡಿತ ತಾಲ್ಲೂಕುಗಳನ್ನು ರಾಜ್ಯ ಸರಕಾರ ಇನ್ನೂ ಘೋಷಿಸಿಲ್ಲ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಅವರು ಟೀಕಿಸಿದ್ದಾರೆ. ದರ ಕರುಗಳಿಗೆ ಕುಡಿಯುವ ನೀರಿಲ್ಲ; ಮೇವೂ ಇಲ್ಲದ ಪರಿಸ್ಥಿತಿ ಇದೆ. ವಿದ್ಯುತ್ ಬಿಲ್ ದುಬಾರಿಯಾಗಿದ್ದರಿಂದ ಮಧ್ಯಮ ವರ್ಗದವರು ಪರಿತಪಿಸುತ್ತಿದ್ದಾರೆ. ಹಾಲಿನ ದರವನ್ನೂ ಹೆಚ್ಚಿಸಿದ್ದಾರೆ. ರಾಜ್ಯ ಸರಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.…
ಬಸವೇಶ್ವರ, ಅಂಬೇಡ್ಕರ್ ಗೌರವ ಕೈಂಕರ್ಯ; ಲಂಡನ್ ಸಮಾರಂಭಕ್ಕೆ ಸಿಎಂಗೆ ಆಹ್ವಾನ
ಬೆಂಗಳೂರು: ಸಾಮಾಜಿಕ ಹರಿಕಾರ ಜಗಜ್ಯೋತಿ ಬಸವಣ್ಣರ ತತ್ವಗಳನ್ನು ಜಗತ್ತಿನ ಉದ್ದಗಲಕ್ಕೆ ಸಾರುತ್ತಿರುವ ಯುನೈಟೆಡ್ ಕಿಂಗ್‌ಡಂನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಬಾರಿ ವಿಭಿನ್ನ ರೀತಿಯ ಕಾರ್ಯಕ್ರಮದ ತಯಾರಿಯಲ್ಲಿದೆ. ಲಂಡನ್ ನಗರಿಯ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ವತಿಯಿಂದ ಪ್ರತೀ ವರ್ಷ ಸಾಮಾಜಿಕ ಕೈಂಕರ್ಯಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಲಂಡನ್ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಮುಂದಾಳುತ್ವದಲ್ಲಿ 2016ರಲ್ಲಿ ಲಂಡನ್‌ನ ಸಂಸತ್ ಭವನ ಬಳಿ, ಥೇಮ್ಸ್ ನದಿ ತೀರದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪಿಸಲಾಗಿತ್ತು. ಈ ಮೂರ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಅಂದಿನಿಂದ ಈ ಸ್ಥಳ ಅತ್ಯಂತ ಶ್ರದ್ಧಾಸ್ಥಳವಾಗಿ ಜಾಗತಿಕ ಗಮನಸೆಳೆಯುತ್ತಿದೆ. ಈ ಸ್ಥಳದಲ್ಲೇ ಸಾಮಾಜಿಕ ಹರಿಕಾರರಾದ ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಕಾರ್ಯಕ್ರಮ ಆಯೋಜಿಸಲು ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸಿದ್ದತೆ ಕೈಗೊಂಡಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಲಂಡನ್ ಮಾಜಿ ಮೇಯರ್…
ಕನ್ನಡಿಗರ ಮನಗೆದ್ದ ಕಮೀಷನರ್ ದಯಾನಂದ್; ಕನ್ನಡದಲ್ಲಿ ಗೌರವ ವಂದನೆಗೆ ಮುನ್ನುಡಿ ಬರೆದ ಐಪಿಎಸ್ ಅಧಿಕಾರಿಗೆ ಅಭಿನಂದನೆಗಳ ಸುರಿಮಳೆ
ಬೆಂಗಳೂರು: ಕ್ರಿಯಾಶೀಲ ಕ್ರಮಗಳ ಮೂಲಕ ಆಗಾಗ್ಗೆ ಸುದ್ದಿಯಾಗುತ್ತಿರುವ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್ ಇದೀಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕನ್ನಡಿಗರ ಮನ ಗೆದ್ದಿದ್ದಾರೆ. ಪೊಲೀಸ್ ಇಲಾಖೆಯ ‘ಶಿಸ್ತಿನ ಮಂತ್ರ’ವನ್ನು ಕನ್ನಡದಲ್ಲಿ ಪ್ರಯೋಗಿಸುವ ಮೂಲಕ ಬೆಂಗಳೂರು ಕಮೀಷನರೇಟ್ ರಾಜ್ಯದ ಗಮನೆಳೆದಿದೆ. ಈ ವಿಚಾರದಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರು ಬದಲಾವಣೆಯ ಪರ್ವಕ್ಕೆ ಮುನ್ನುಡಿ ಬರೆದಿದ್ದಾರೆ. ಇವರ ಈ ಕ್ರಮಕ್ಕೆ ಕನ್ನಡಾಭಿಮಾನಿಗಳಿಂದ ಅಭಿನಂದನೆಯ ಮಹಾಮಳೆಯಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ, ಇಲಾಖೆಯ ಕಾರ್ಯವೈಖರಿಗೆ ಚುರುಕು ನೀಡಿರುವ ಬಿ.ದಯಾನಂದ್ ಅವರು, ಪಿಎಸ್ಐ ವರ್ಗಾವಣೆ ವಿಚಾದಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ಸಿಗದ ರೀತಿ ನಿಯಮ ಜಾರಿಗೆ ತಂದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಇದೀಗ ರಾಜಧಾನಿ ಪೊಲೀಸರ ಶಕ್ತಿಸ್ಥಳ ಆಗಿರುವ ಆಯುಕ್ತರ ಕಚೇರಿಯಲ್ಲಿ ಕನ್ನಡ ಮಂತ್ರ ಪಠಿಸಲಾಗುತ್ತದೆ. ಆಯುಕ್ತರ ಕಚೇರಿಯಲ್ಲಿ ಕನ್ನಡದಲ್ಲಿ ಗೌರವ ವಂದನೆ ನೀಡಲಾಗುತ್ತಿದೆ. ಈ…
90 ದಿನಗಳ ಒಳಗೆ ಆರೋಪ ಪಟ್ಟಿ ಸಲ್ಲಿಸದಿದ್ದರೆ ಆರೋಪಿಗಳಿಗೆ ಜಾಮೀನು ಸಿಗತ್ತೆ; ನಂತರ ಅವರಿಗೆ ಕಾನೂನಿನ ಭಯ ಇರತ್ತಾ? ಸಿಎಂ ತರಾಟೆ
ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು. ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್ ಶೀಟ್ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್ ಶೀಟ್…
ರಕ್ತ ಕೊಟ್ಟೆವು ಕಾವೇರಿ ಬಿಡೆವು.. ದೊಡ್ಡಬಳ್ಳಾಪುರ ದಲ್ಲಿ ಕನ್ನಡಪರ ಸಂಘಟನೆಗಳ ಹೋರಾಟ
ದೊಡ್ಡಬಳ್ಳಾಪುರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿ ಕುಡಿಯುವ ನೀರಿಲ್ಲದೇ ತತ್ತರಿಸುತ್ತಿದೆ, ರಕ್ತ ಕೊಟ್ಟರೂ ಕಾವೇರಿ ನೀರು ಬಿಡುವುದಿಲ್ಲ ಎಂದು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ಬಿ.ಎನ್.ಮಂಜುನಾಥ್ ಹೇಳಿದ್ದಾರೆ. ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ವೃತ್ತದ ಬಳಿ ಕರಾರವೇ ವತಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ನಡೆದ ರಸ್ತೆ ತಡೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅನ್ಯಾಯ ಮಾಡುತ್ತಿದೆ. ನಿಮಗೆ ಕುಡಿಯಲು ನೀರು ಇಲ್ಲದಿದ್ದರೂ ನಮಗೆ ನೀರು ಕೊಡಿ ಎಂದು ತಮಿಳುನಾಡು ಸರ್ಕಾರವು ಉದ್ಧಟತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯದ ರಾಜಕಾರಣಿಗಳು ಸಹ ವೋಟ್ ಬ್ಯಾಂಕ್ ಗಾಗಿ ತಮಿಳುನಾಡಿಗೆ ಕಾವೇರಿ ನೀರನ್ನ ಬಿಡಲಾಗುತ್ತಿದೆ. ಇದರಿಂದ ಮಂಡ್ಯ, ಮೈಸೂರು ಭಾಗದ ರೈತರ ವ್ಯವಸಾಯಕ್ಕೆ ಹಾಗೂ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ…
