ಬೆಂಗಳೂರು: ಐತಿಹಾಸಿಕ ಭಾರತ್ ಐಕ್ಯತಾ ಯಾತ್ರೆ ಪ್ರಾರಂಭವಾಗಿ ಒಂದು ವರ್ಷ ಪೂರೈಸುತ್ತಿದೆ.. ಸೆಪ್ಟೆಂಬರ್ 7ನೇ ತಾರೀಖಿನಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಜೆ 5ರಿಂದ 6 ಗಂಟೆಯವರೆಗೆ ಒಂದು ಗಂಟೆಗಳ ಕಾಲ ಪಾದಯಾತ್ರೆ ಮಾಡುವ ಮೂಲಕ ಈ ಅಭೂತಪೂರ್ವ ಯಾತ್ರೆಯನ್ನು ನೆನಪಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಒಂದು ಗಂಟೆಗಳ ಕಾಲ ಪಾದಯಾತ್ರೆ ಮಾಡುವ ಮೂಲಕ ವಿಭಜನಕಾರಿ ಶಕ್ತಿಗಳಿಂದ ಭಾರತವನ್ನು ರಕ್ಷಿಸಿ, ದೇಶದ ಮನಸುಗಳನ್ನು ಜೋಡಿಸುವ ಕೆಲಸವನ್ನು ಮುಂದುವರೆಸಲು ಪಣ ತೊಡೋಣ ಎಂದವರು ಕಾರ್ಯಕರ್ತರಿಗೆ ಕರೆನೀಡಿದ್ದಾರೆ. ಈಕುರಿತಂತೆ ಅವರು ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. ಐತಿಹಾಸಿಕ ಭಾರತ್ ಐಕ್ಯತಾ ಯಾತ್ರೆ ಪ್ರಾರಂಭವಾಗಿ ಒಂದು ವರ್ಷ ಪೂರೈಸುತ್ತಿದೆ.ಸೆಪ್ಟೆಂಬರ್ 7ನೇ ತಾರೀಖಿನಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಜೆ 5ರಿಂದ 6 ಗಂಟೆಯವರೆಗೆ ಒಂದು ಗಂಟೆಗಳ ಕಾಲ ಪಾದಯಾತ್ರೆ ಮಾಡುವ ಮೂಲಕ ಈ ಅಭೂತಪೂರ್ವ ಯಾತ್ರೆಯನ್ನು ನೆನಪಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ @DKShivakumar…
Year: 2023
ಭಾರತ್ ಐಕ್ಯತಾ ಯಾತ್ರೆಗೆ ಒಂದು ವರ್ಷ; ನೆನಪಿನಂಗಳದಲ್ಲಿ ಕಾಂಗ್ರೆಸ್ ನಾಯಕರು
ಟ್ರಾಕ್ಟರ್ ಡಿಕ್ಕಿ: ಮೊಮ್ಮಗ ಸಾವು, ಅಜ್ಜಿಗೆ ಗಾಯ
ಬೆಂಗಳೂರು: ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ್ದಾನೆ. ದರ್ಜಿಪೇಟೆ ನಿವಾಸಿ ಹರೀಶ್ ಸಿಂಗ್, ದೀಪಿಕಾಬಾಯಿ ಪುತ್ರ ದರ್ಶನ್ (03) ಮೃತ ಬಾಲಕ. ಬುಧವಾರ ಬೆಳಿಗ್ಗೆ ತನ್ನ ಅಜ್ಜಿ ಕಮಲೇಶ್ ದೇವಿ ಜತೆಗೆ ರಸ್ತೆ ದಾಟಲು ನಿಂತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಈ ವೇಳೆ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ. ವೃದ್ಧೆ ಕಮಲೇಶ್ ದೇವಿಗೂ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಭಾರತ’ವನ್ನು ವಿರೋಧಿಸುವುದು ಊಳಿಗಮಾನ್ಯ ಮನಸ್ಥಿತಿ: ಸಿ.ಟಿ.ರವಿ
ಬೆಂಗಳೂರು: ಭಾರತವನ್ನು ವಿರೋಧಿಸುವ ಮನಸ್ಥಿತಿಯು ಊಳಿಗಮಾನ್ಯ ಮನಸ್ಥಿತಿ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭಾರತ ಹೆಸರನ್ನು ಟೀಕಿಸುವವರು ವಸಾಹತುಶಾಹಿ ಮನಸ್ಥಿತಿಯಿಂದ ಹೊರಕ್ಕೆ ಬಂದಿಲ್ಲ ಎಂಬುದನ್ನು ಅದು ತೋರಿಸುತ್ತದೆ. ಮಹಾತ್ಮ ಗಾಂಧಿಯವರು ಬಹುಶಃ ಇದೇ ಕಾರಣಕ್ಕೆ ಕಾಂಗ್ರೆಸ್ಸನ್ನು ವಿಸರ್ಜಿಸಿ ಎಂದು ಕರೆಕೊಟ್ಟಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂದೆ ಅಧ್ವಾನ ಮಾಡಬಹುದು; ಆಗ ಕಾಂಗ್ರೆಸ್ಸಿಗೇ ಕೆಟ್ಟ ಹೆಸರು ಬರಬಹುದು. ಕಾಂಗ್ರೆಸ್ ನೇತೃತ್ವ ವಹಿಸಿದ್ದ ತಮ್ಮ ವ್ಯಕ್ತಿತ್ವಕ್ಕೂ ಅಪಮೌಲ್ಯ ಆಗಬಹುದೆಂಬ ಕಾರಣಕ್ಕೆ ಅವರು ಕಾಂಗ್ರೆಸ್ ವಿಸರ್ಜನೆಗೆ ಕರೆಕೊಟ್ಟಿದ್ದರು ಎಂದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಹೆಮ್ಮೆಯಿಂದ ಭಾರತ್ ಮಾತಾ ಕೀ ಜೈ ಎಂದು ಕೂಗಿ ಲಾಠಿಯಿಂದ ಏಟು ತಿಂದಿದ್ದನ್ನು ಇಂದಿನ ಕಾಂಗ್ರೆಸ್ಸಿಗರು ನೆನಪಿಸಿಕೊಳ್ಳಬೇಕು. ಅದನ್ನೂ ಮರೆತಿರುವುದು ಇವತ್ತಿನ ಕಾಂಗ್ರೆಸ್ಸಿನ…
ಲೋಕ ಚುನಾವಣೆಗೆ ಜೆಡಿಎಸ್ ತಯಾರಿ; ಸೆ.10ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ
ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಭೆ ನಡೆಸಿದರು. ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು. ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಪಕ್ಷದ ಮೊದಲ ಸಭೆಯಲ್ಲಿ ಪಾಲ್ಗೊಂಡರು ಮಾಜಿ ಮುಖ್ಯಮಂತ್ರಿಗಳು. ಹಾಗೆಯೇ, ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿಗಳವರು ಕುಮಾರಸ್ವಾಮಿ ಅವರ ಜೆಪಿ ನಗರ ನಿವಾಸಕ್ಕೆ ಆಗಮಿಸಿದರು. ಪಕ್ಷದ ಸುದೀರ್ಘ ಸಭೆಯಲ್ಲಿ ಪಾಲ್ಗೊಂಡ ಕುಮಾರಸ್ವಾಮಿ ಅವರು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿ, ಮುಖಂಡರಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪೂರ, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ಹಾಲಿ ಶಾಸಕರು, ಮಾಜಿ ಶಾಸಕರು,…
ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಸಚಿವ ಬಿ.ಜಮೀರ್ ಅಹ್ಮದ್ ಭರವಸೆ
ಮಂಗಳೂರು : ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಯಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಬಿ.ಜಮೀರ್ ಅಹ್ಮದ್ ತಿಳಿಸಿದ್ದಾರೆ. ಬುಧವಾರ ಮಂಗಳೂರು ಪ್ರೆಸ್ ಕ್ಲಬ್‌ಗೆ ಭೇಟಿ ನೀಡಿ ಪತ್ರಕರ್ತರ ಜತೆ ಮಾತನಾಡಿದ ಅವರು ‘ ಪತ್ರಕರ್ತರ ಬೇಡಿಕೆಗಳಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಿದೆ ಎಂದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಜಮೀರ್ ಅಹ್ಮದ್ ಅವರು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ನಿವೇಶನ ಒದಗಿಸಲು ಎಲ್ಲ ರೀತಿಯ ಪ್ರಯಯತ್ನ ನಡೆಸುವುದಾಗಿ ಭರವಸೆ ನೀಡಿದರು. ಎಂಎಲ್‌ಸಿ ಹರೀಶ್ ಕುಮಾರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ,…
ಶಿಕ್ಷಕರ ದಿನಾಚರಣೆ; ಹನೂರಿನಲ್ಲಿ ಅನನ್ಯ ಆಚರಣೆ;
ಚಾಮರಾಜನಗರ : ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ವಿಶೇಷ ಸಮಾರಂಭ ನೆರವೇರಿತು. ಶಾಸಕ ಎಂ ಆರ್ ಮಂಜುನಾಥ್ ಅವರು ಜ್ಯೋತಿ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂಜುನಾಥ್, ಹನೂರು ಭಾಗದ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭೌಗೋಳಿಕವಾಗಿ ಗುಡ್ಡಗಾಡಿನಿಂದ ಕೂಡಿರುವ ಪ್ರದೇಶಗಳಲ್ಲಿ ಶಿಕ್ಷಕ ವೃತ್ತಿಯನ್ನು ನಿಷ್ಠೆಯಿಂದ ಮಾಡುತ್ತಿದ್ದೀರಿ. ಶೈಕ್ಷಣಿಕವಾಗಿ ಹಿಂದಿನ ಬಾರಿಯಂತೆ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಉತ್ತಮ ಸ್ಥಾನ ಪಡೆಯುವ ಶಿಕ್ಷಕರ ಮುಂದಾಗಬೇಕು. 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಇನ್ನು ಹೆಚ್ಚಿನ ಒತ್ತನ್ನು ನೀಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಮಕ್ಕಳು ಕೂಡ ಪೈಪೋಟಿ ನಡೆಸುವುದು ಅನಿವಾರ್ಯವಾಗಿದೆ. ಶಿಕ್ಷಣಕ್ಕೆ ಬೇಕಾದ ಅಗತ್ಯ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಸರ್ಕಾರದ ಆದೇಶದಂತೆ ಭಾರತದ…
“ಗೇಮ್ ಚೇಂಜರ್ಸ್” Vs “ನೇಮ್ ಚೇಂಜರ್ಸ್”; ಕೈ ಟ್ವೀಟಾಸ್ತ್ರ
ಬೆಂಗಳೂರು: ದೇಶದ ಹೆಸರನ ‘ಇಂಡಿಯಾ’ ದಿಂದ ‘ಭಾರತ್’ಗೆ ಬದಲಾಯಿಸುವ ಮೋದಿ ಸರ್ಕಾರದ ನಿಲುವಿನ ಬಗ್ಗೆ ಕಾಂಗ್ರೆಸ್ ಸಿಡಿಮಿಡಿಗೊಂಡಿದೆ. ಈ ಬಗ್ಗೆ ಆಕ್ರೋಶ ಹೊರಹಾಕಿರಿರುವ ಸಚಿವ ಪ್ರಿಯಾಂಕ್ ಖರ್ಗೆ, “ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, 2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದಿರುವ ಪ್ರಿಯಾಂಕ್ ಖರ್ಗೆ, ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ…
‘ಭಾರತ್’ ಮರುನಾಮಕರಣ; ಮೋದಿ ಸರ್ಕಾರದ ನಡೆಗೆ ಕಾಂಗ್ರೆಸ್ ಆಕ್ಷೇಪ
ಹೊಸದಿಲ್ಲಿ: ಅಧಿಕೃತ ಆಮಂತ್ರಣ ಮತ್ತು ದಾಖಲೆಗಳಲ್ಲಿ ‘ಭಾರತ’ ಬದಲಿಗೆ ‘ಭಾರತ್’ ಎಂಬ ಪದವನ್ನು ಬಳಸುವ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಟೀಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸವನ್ನು ತಿರುಚಲು ಮತ್ತು ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಕ್ಷ ಆರೋಪಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ, ಸೆಪ್ಟೆಂಬರ್ 9ರ G20 ಔತಣಕೂಟಕ್ಕೆ ರಾಷ್ಟ್ರಪತಿ ಭವನದ ಆಹ್ವಾನದಲ್ಲಿನ ಬದಲಾವಣೆಯನ್ನು ಬೊಟ್ಟು ಮಾಡಿದ್ದಾರೆ. ಇದು ಈಗ ಸಾಮಾನ್ಯ ‘ಭಾರತದ ರಾಷ್ಟ್ರಪತಿ’ ಬದಲಿಗೆ ‘ಭಾರತದ ಅಧ್ಯಕ್ಷ’ ಎಂದು ಉಲ್ಲೇಖಿಸುತ್ತದೆ. ‘ ಸಂವಿಧಾನದ 1ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ‘ರಾಜ್ಯಗಳ ಒಕ್ಕೂಟ’ ಪರಿಕಲ್ಪನೆಯೂ ಈಗ ಅಪಾಯದಲ್ಲಿದೆ ಎಂದು ರಮೇಶ್ ಕಳವಳ ವ್ಯಕ್ತಪಡಿಸಿದ್ದಾರೆ. “ಮೋದಿ ಅವರು ಇತಿಹಾಸವನ್ನು ತಿರುಚುವುದನ್ನು ಮುಂದುವರೆಸಬಹುದು ಮತ್ತು ಭಾರತವನ್ನು ವಿಭಜಿಸಬಹುದು, ಅದು ಭಾರತ, ಅದು ರಾಜ್ಯಗಳ ಒಕ್ಕೂಟವಾಗಿದೆ. ಆದರೆ…
ದೇಶದ ಹೆಸರು ‘ಇಂಡಿಯಾ’ ಬದಲಿಗೆ ‘ಭಾರತ’ ಆಗಲಿದೆಯೇ? ಈ ವಿಚಾರದಲ್ಲಿ ಮೋದಿ ಪ್ರಯತ್ನ ಹೀಗಿದೆ..
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಲು ಪ್ರತಿಪಕ್ಷಗಳು ‘INDIA’ ಹೆಸರಿನಲ್ಲಿ ಒಕ್ಕೂಟ ರಚಿಸಿರುವಂತೆಯೇ, ಇನ್ನೊಂದೆಡೆ ದೇಶದ ಹೆಸರನ್ನು ‘ಭಾರತ’ ಎಂದು ಸ್ಪಷ್ಟ ನಾಮಕರಣ ಮಾಡಲು ಮೋದಿ ತಯಾರಿ ನಡೆಸಿದ್ದಾರೆ. ಪ್ರಸ್ತುತ ನಮ್ಮ ದೇಶ ಜಾಗತಿಕ ಮಟ್ಟದಲ್ಲಿ ‘ಇಂಡಿಯಾ’ ಹೆಸರಲ್ಲೇ ಗುರುತಾಗಿದೆ. ಆದರೆ ದೇಶೀ ಭಾಷೆಗಳಲ್ಲಿ ‘ಭಾರತ’ ಎಂದು ಕರೆಯಲಾಗುತ್ತಿದೆ. ಬ್ರಿಟೀಷರ ಕಾಲದಲ್ಲಿ ಇದ್ದ ಬಹುತೇಕ ನಗರಗಳ ಹೆಸರುಗಳು ಸ್ವದೇಶೀ ಮೂಲ ಹೆಸರಿಗೆ ಮರುನಾಮಕರಣ ಆಗಿರುವಂತೆಯೇ ಇದೀಗ ದೇಶದ ಹೆಸರನ್ನೂ ಇಂಡಿಯಾ ಬದಲಿಗೆ ಭಾರತ ಎಂದು ಮರುನಾಮಕರಣ ಮಾಡಲು ಮೋದಿ ಸರ್ಕಾರ ಮುಂದಾಗಿದೆ. ‘ಭಾರತ’ ಎಂದು ಮರುನಾಮಕರಣ ಮಾಡುವ ಸಂಬಂಧ ಸಂಸತ್ತಿನಲ್ಲಿ ನಿರ್ಣಯ ಮಂಡಿಸುವ ತಯಾರಿ ನಡೆದಿದ್ದು, ಸೆಪ್ಟೆಂಬರ್ 18 ರಿಂದ ನಡೆಯುವ ಐದು ದಿನಗಳ ವಿಶೇಷ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
