ಮೈಸೂರು: ಕಾವೇರಿ, ಮಹದಾಯಿ ಸಮರ ಇದೀಗ ಜನಪ್ರತಿನಿಧಿಗಳಿಗೂ ಸವಾಲೆಂಬಂತಾಗಿದೆ. ಸೆಪ್ಟೆಂಬರ್ 4ರಂದು ರಾಜ್ಯಾದ್ಯಂತ ಸಂಸದರ ಕಚೇರಿ ಬಳಿ ರೈತರ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ರೈತ ಮುಖಂಡರಾದ ವೀರನಗೌಡ ಪಾಟೀಲ್, ಸುರೇಶ್ ಮ ಪಾಟೀಲ್, ರಮೇಶ್ ಉಗಾರ್, ಜಿ.ವಿ.ಲಕ್ಷ್ಮಿದೇವಿ, ಎಂ.ಬಿ.ಚೇತನ್ ಸೋಮಶೇಖರ ಹತ್ತಳ್ಳಿ, ದೇವರಾಜ್ ಬರಡನಫುರ ನಾಗರಾಜ ಸಹಿತ ಹೋರಾಟಗಾರರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕುರುಬೂರು ಶಾಂತಕುಮಾರ್, ರಾಜ್ಯಾದ್ಯಂತ ಸೆಪ್ಟಂಬರ್ 4ರಂದು ಸೋಮವಾರ ರಾಜ್ಯದ ಲೋಕಸಭಾ ಸದಸ್ಯರುಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ಕಾವೇರಿ, ಮಹದಾಯಿ ನದಿ ನೀರಿನ ವಿವಾದ ಕುರಿತು ಯಾವುದೇ ಮಾತನಾಡದೆ ಮೂಕರಂತೆ ಇರುವ ಲೋಕಸಭಾ ಸದಸ್ಯರ ಕಚೇರಿಗಳ ಮುಂದೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ಪ್ರತಿಭಟನೆ ನಡೆಸಿ, ಹಕ್ಕೊತ್ತಾಯ ಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು…
Year: 2023
ನಿವೃತ್ತ ಪಿಡಿಓ ನಾರಾಯಣಸ್ವಾಮಿಗೆ ಬಿಳ್ಕೋಡುಗೆ; ಬೆಳ್ಳಿಗದೆ ನೀಡಿ ಸನ್ಮಾನ
ದೊಡ್ಡಬಳ್ಳಾಪುರ: ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸತತ ಆರು ವರ್ಷಗಳಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ನಾರಾಯಣಸ್ವಾಮಿ ಅವರಿಗೆ ಗ್ರಾಮ ಪಂಚಾಯತಿ ಸಿಬ್ಬಂದಿ ಮತ್ತು ಅಧ್ಯಕ್ಷ, ಉಪಾಧ್ಯಕ್ಷ ಸದಸ್ಯರಿಂದ ಅದ್ಧೂರಿಯಾಗಿ ಬಿಳ್ಕೋಡಿಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಪಂ ಅಧ್ಯಕ್ಷ ದೊಡ್ಡ ನಂಜುಂಡಪ್ಪ, ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ, ನಿವೃತ್ತಿ ಸಾಮಾನ್ಯ ಪ್ರಕ್ರಿಯೆ. ಆದರೆ ನಿಷ್ಠೆ, ಪ್ರಾಮಾಣಿಕತೆಯಿಂದ ಸರ್ಕಾರದ ಯೋಜನೆಗಳು ಜನರಿತೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. ಪಿಡಿಓ ನಾರಾಯಣಸ್ವಾಮಿ ಕೂಡ ಅತ್ಯಂತ ಶ್ರದ್ದೆಯಿಂದ ಸತತ ಆರು ವರ್ಷಗಳಿಂದ ದರ್ಗಾಜೋಗಿಹಳ್ಳಿ ಗ್ರಾಪಂ ಅಭಿವೃದ್ಧಿ ಶ್ರಮಿಸಿದ್ದಾರೆ. ಜಲಜೀವನ್ ಮಿಷನ್ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ಕೆಲಸ ಮಾಡಿದ್ದಾರೆ ಎಂದರು. ನಿವೃತ್ತ ಪಿಡಿಓ ನಾರಾಯಣಸ್ವಾಮಿ ಮಾತನಾಡಿ ನನ್ನ ಅಧಿಕಾರವಧಿಯಲ್ಲಿ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ಪ್ರತಿಯೊಬ್ಬರು ಸಹಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ…
ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ; ಗುಜರಿ ವ್ಯಾಪಾರಿಯ ಗೂಡ್ಸ್ ವಾಹನ ಹೊತ್ತೊಯ್ದ ಖದೀಮರು
ಬೆಂಗಳೂರು: ದೊಡ್ಡಬಳ್ಳಾಪುರ ನಗರದಲ್ಲಿ ಗುಜರಿ ವ್ಯಾಪಾರಿಯ ಗೂಡ್ಸ್ ವಾಹನವನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಬಳಿಯ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಎಂಬುವರು ಕಳೆದ ಗುರುವಾರ ರಾತ್ರಿ ಎಂದಿನಂತೆ ಗುಜರಿ ಅಂಗಡಿ ಮುಂಭಾಗ ನಿಲ್ಲಿಸಿದ್ದ ಗೂಡ್ಸ್ ವಾಹನ ಅಶೋಕ್ ಲೇಲ್ಯಾಂಡ್ ದೋಸ್ತ್ ಮಾಡೆಲ್ ಗಾಡಿಯನ್ನು ಪಾರ್ಕ್ ಮಾಡಿ ಹೋಗಿದ್ದಾರೆ. ಬೆಳಗ್ಗೆ ಬರುವಷ್ಟರಲ್ಲಿ ವಾಹನ ನಾಪತ್ತೆಯಾಗಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಪತ್ನಿ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದು, ಜೊತೆಗೆ ಒಂದಷ್ಟು ಹಣ ಜೋಡಿಸಿ, 9 ಲಕ್ಷ್ಮ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಖರೀದಿಸಿದ್ದರು. ತಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ…
KSRTC ಇಡೀ ದೇಶಕ್ಕೆ ಮಾದರಿ ಮಾತ್ರವಲ್ಲ, ಮಾರ್ಗದರ್ಶಿ.. ಇತರ ರಾಜ್ಯಗಳ ಸಾರಿಗೆ ಅಧಿಕಾರಿಗಳು ದೌಡು
ಬೆಂಗಳೂರು: ಉತ್ಕೃಷ್ಟ ಸಾರಿಗೆ ಸೇವೆ ಸಂಬಂಧ ಸಾಲು ಸಾಲು ಪ್ರಶಸ್ತಿಗಳನ್ನು ಬಾಚುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ ದೇಶದ ಕುತೂಹಲದ ಕೇಂದ್ರಬಿಂದುವಾಗಿದೆ. KSRTCಯ ಕಾರ್ಯವೈಖರಿ ಬಗ್ಗೆ ಕೂಡಾ ಇತರ ರಾಜ್ಯಗಳಿಗೆ ಕುತೂಹಲ ಉಂಟಾಗಿದೆ. ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಕೆಎಸ್ಸಾರ್ಟಿಸಿ ಕಚೇರಿಗೆ ಭೇಟಿ ನೀಡಿದ ಬೆಳವಣಿಗೆ ಗಮನಸೆಳೆದಿದೆ. . ದಿನಾಂಕ 31.08.2023 ಮತ್ತು 01.09.2023 ರಂದು ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಮ್ಯದ KSRTC ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4, ಪ್ರಾದೇಶಿಕ ಕಾರ್ಯಾಗಾರ, ಕೆಂಗೇರಿ, ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದ ನಿಯಂತ್ರಣ ಕೊಠಡಿಗಳಿಗೆ ಈ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು; ಹೈಕೋರ್ಟ್ ತೀರ್ಪು
ಬೆಂಗಳೂರು: ಹೈಕೋರ್ಟ್ ತೀರ್ಪೊಂದು ಜಾತ್ಯತೀತ ಜನತಾ ದಳಕ್ಕೆ ಆಘಾತ ತಂದಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿಸಿದೆ. ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರು ನೀಡಿರುವ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ದೇವರಾಜೇಗೌಡ ಹಾಗೂ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಕೋರ್ಟ್ ಮೆಟ್ಟಿಲೇರಿದ್ದರು. ತಪ್ಪು ಮಾಹಿತಿ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಅರ್ಜಿದಾರರು ಕೋರಿದ್ದರು. ಈ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಪೀಠ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿದೆ.
ಸೆ.10ರಂದು ಪಂಚಮಸಾಲಿ ರಣಕಹಳೆ; ಜಗದ್ಗುರುಗಳು ಸಮುದಾಯಕ್ಕೆ ರವಾನಿಸಿದ ಸಂದೇಶ ಹೀಗಿದೆ..
ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸಂಬಂಧ ರಣಕಹಳೆ ಮೊಳಗಿಸಿರುವ ಕೂಡಲಸಂಗಮದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು, ಸೆಪ್ಟಂಬರ್ 10 ಭಾನುವಾರದಂದು ನಿಪ್ಪಾಣಿಯಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ತಮ್ಮ ಹೋರಾಟ ಕುರಿತಂತೆ ಸಮುದಾಯದವರಿಗೆ ಸಂದೇಶ ರವಾನಿಸಿರುವ ಶ್ರೀಗಳು, ಸೆಪ್ಟೆಂಬರ 3ರ ಬದಲು ಸೆಪ್ಟಂಬರ್ 10 ಭಾನುವಾರದಂದು ನಿಪ್ಪಾಣಿಯಲ್ಲಿ ಈ ಹೋರಾಟ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಬೆಳಗಾವಿ ಹಾಗೂ ಶೈಕ್ಷಣಿಕ ಜಿಲ್ಲಾ ಮಟ್ಟದ ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಹೋರಾಟಕ್ಕೆ ಚಾಲನೆ ನೀಡಲಾತ್ತದೆ. ಈ ಅಂಗವಾಗಿ ಆಗಸ್ಟ್ 30ರಂದು ಅಥಣಿ ತಾಲ್ಲೂಕಿನಲ್ಲಿ ಬಡೆದ ಪೂರ್ವಭಾವಿ ಶ್ರಾವಣ ಸಂದೇಶ ಸಭೆ ಯಶಸ್ವೀಯಾಗಿ ನಡೆದಿದೆ ಎಂದು ತಿಳಿಸಿದರು. ಇದೇ ವೇಳೆ, ಬೆಳಗಾವಿ ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಮಾಜ ಬಾಂಧವರು ಸಹಸ್ರ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಜಗದ್ಗುರುಗಳು ಕರೆ ನೀಡಿದರು. ಸಮುದಾಯದ ಪ್ರಮುಖರಾದ ರಮೇಶ್ ಪಾಟೀಲ್, ಬಿಎಲ್ ಪಾಟೀಲ್,…
ಜನಪ್ರಿಯ ನಟಿ ಸಾವಿಗೆ ಶರಣು; ಚಿತ್ರರಂಗದಲ್ಲಿ ಮಡುಗಟ್ಟಿದ ಶೋಕ
ಹಲವಾರು ಚಿತ್ರಗಳಲ್ಲಿ ನಟಿಸಿರುವ, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿರುವ ಜನಪ್ರಿಯ ನಟಿ ಅಪರ್ಣಾ ಪಿ.ನಾಯರ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 31 ವರ್ಷ ವಯಸ್ಸಿನ ನಟಿಯ ಸಾವಿನ ಸುದ್ದಿಯಿಂದಾಗಿ ಸಿನಿಮಾ ರಂಗದಲ್ಲಿ ದುಃಖ ಆವರಿಸಿದೆ. ಮಲಯಾಳಂ ಸಿನಿಮಾ ರಂಗದಲ್ಲಿ ಜನಪ್ರಿಯತೆ ಪಡೆದಿರುವ ಅಪರ್ಣಾ ಪಿ.ನಾಯರ್, ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದ ಕೊನೆಯುಸಿರೆಳೆದಿದ್ದಾರೆ.
ಕಾವೇರಿ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ. ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ ಎಂದು ಪ್ರಶ್ನಿಸಿದ್ದಾರೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಅದು…
‘ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳೆದು ಸಾಬೀತುಪಡಿಸಿವೆ
‘ಮೈಸೂರು: ವಿರೋಧಪಕ್ಷದ ಎಲ್ಲಾ ಆರೋಪಗಳನ್ನೂ ನಮ್ಮ ಗ್ಯಾರಂಟಿ ಯೋಜನೆಗಳು ಸುಳ್ಳು ಎಂದು ಸಾಬೀತು ಮಾಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪಗಳನ್ನು ಮಾಡಿದರು. ಸುಳ್ಳುಗಳ ಸುರಿಮಳೆ ಸುರಿಸಿದರು. ಸ್ವತಃ ಪ್ರಧಾನಿ ಮೋದಿಯವರೇ ರಾಜ್ಯ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದರು. ಆದರೆ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ ಎಂದರು. ಪ್ರತಿದಿನ ಕೋಟಿಗೂ ಅಧಿಕ ಮಂದಿ ಪ್ರತಿ ದಿನ, ಪ್ರತಿ ತಿಂಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮಾತುಗಳು ಸುಳ್ಳಾಗಿವೆ ಎಂದು ವಿವರಿಸಿದರು. Congress President Shri @kharge and Shri @RahulGandhi, along…
ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಿಢೀರ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ನಸುಕಿನ ವೇಳೆ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಿದ್ದು, ಸದ್ಯಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸುಸ್ತು-ಆಯಾಸ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಅಪೋಲೊ ಆಸ್ಪತ್ರೆಯು ಹೆಲ್ ಬುಲೆಟಿನ್ ಬಿಡುಗಡೆ ಮಾಡಿದೆ. Health bulletin on HD Kumaraswamy | "Currently, he is hemodynamically stable, comfortable and coherent and has been kept under close observation," Apollo Specialty Hospital, Jayanagar pic.twitter.com/qMDI9wlyqz — ANI (@ANI) August…
