ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ ‘KSRTC’ ಪಾಲಿಗೆ ಮತ್ತಷ್ಟು ಪ್ರಶಸ್ತಿಗಳು ಹರಿದು ಸೇರುತ್ತಿವೆ. KSRTC ನಿಗಮದ ಉತ್ಕೃಷ್ಟ ಸೇವೆಗಾಗಿ ಮತ್ತೆ 4 ಪ್ರಶಸ್ತಿಗಳು ಸಿಕ್ಕಿವೆ. ‘ವೀ ಕನೆಕ್ಟ್ ಇಂಡಿಯಾ ಮೀಡಿಯಾ ಅಂಡ್ ರಿಸರ್ಚ್’ ಸ್ಥಾಪಿಸಿರುವ ASIA’s BEST QUALITY’ ಪ್ರಶಸ್ತಿಯು KSRTCಗೆ ಲಭಿಸಿದೆ. ಬರೋಬ್ಬರಿ ನಾಲ್ಕು ವರ್ಗದಲ್ಲಿ ಕೆಎಸ್ಸಾರ್ಟಿಸಿ ಪಾಲಿಗೆ ಪುರಸ್ಕಾರ ಸಿಕ್ಕಿರುವುದು ಗಮನಾರ್ಹ. ನಾಲ್ಕು ವಿಭಾಗಗಳಲ್ಲಿ KSRTCಗೆ ಒಲಿದ ಪ್ರಶಸ್ತಿ: ಬ್ಯ್ರಾಡಿಂಗ್ ಮತ್ತು ಮಾರ್ಕೆಟಿಂಗ್, ಸಾರಿಗೆ ಸುರಕ್ಷತೆ, ಕಾರ್ಮಿಕ ಸ್ನೇಹಿ, ಉಪಕ್ರಮಗಳು ಹಾಗೂ ಮಾಹಿತಿ ತಂತ್ರಜ್ಞಾನ ಸೆಪ್ಟೆಂಬರ್ 29ರಂದು ದೆಹಲಿಯ ವಿಮಾನ ನಿಲ್ದಾಣ ಬಳಿಯ ರಾಡಿಸನ್ ಬ್ಲೂ ಪ್ಲಾಜಾದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅತಾವಳೆ ಸಹಿತ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ…
Year: 2023
ಕೋವಿಡ್ ಹಗರಣ ಬಗ್ಗೆ ತನಿಖೆ; ಡಾ.ಸುಧಾಕರ್ ಗಲಿಬಿಲಿ..!
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಬಗ್ಗೆ ಸರ್ಕಾರ ತನಿಖೆ ನಡೆಸಲು ಕೊನೆಗೂ ಮುಂದಾಗಿದೆ. ಆದರೆ ಅಷ್ಟರಲ್ಲೇ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಸುಧಾಕರ್ ಗಲಿಬಿಲಿಗೊಂಡಂತಿದೆ. ಈ ಬಗ್ಗೆ ಟೀಕಾಸ್ತ್ರ ಪ್ರಯೋಗಿಸಿರುವ ಕಾಂಗ್ರೆಸ್, ರಾಜ್ಯ ಸರ್ಕಾರದ ತನಿಖೆಯ ನಿರ್ಧಾರ ಧ್ವೇಷದ ಕ್ರಮ ಹೇಗಾಗುತ್ತದೆ ಎಂದು ಪ್ರಶ್ನಿಸಿದೆ. ಕೋವಿಡ್ ಹಗರಣವನ್ನು ತನಿಖೆಗೆ ವಹಿಸಿದರೆ ಸುಧಾಕರ್ ಅವರು ಮೈಮೇಲೆ ಚೇಳು ಬಿದ್ದಂತೆ ಹೌಹಾರುತ್ತಿರುವುದೇಕೆ? ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದರೆ ಕುಂಬಳಕಾಯಿಯ ಕಳ್ಳರು ಇವರೇ ಎಂದರ್ಥವಲ್ಲವೇ ಎಂದು ಕಾಂಗ್ರೆಸ್ ಪಕ್ಷ ಟ್ವಿಟರ್ ಮೂಲಕ ಕೆಣಕಿದೆ. ಹಗರಣವೊಂದನ್ನು ತನಿಖೆಗೆ ವಹಿಸುವುದು ದ್ವೇಷ ರಾಜಕಾರಣ ಹೇಗಾಗುತ್ತದೆ ಸುಧಾಕರ್ ಅವರೇ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಹಗರಣದ ಕಡೆ ನಾವು ಬೆರಳು ತೋರಿಸಿದಾಗ ಸಾಕ್ಷಿ ಎಲ್ಲಿದೆ, ತನಿಖೆಯಾಗಲಿ ಎನ್ನುವ ಬಿಜೆಪಿಗರು ತನಿಖೆಗೆ ವಹಿಸಿದಾಕ್ಷಣ ದ್ವೇಷ ರಾಜಕಾರಣ ಎಂದು ಚೀರಾಡುತ್ತಾರೆ. ಬಿಜೆಪಿಗರು ಸತ್ಯ ಹರೀಶ್ಚಂದ್ರನ ಮರಿ…
ನೆಲ ಜಲ ಭಾಷೆ ರಕ್ಷಣೆಗಾಗಿ ‘ಜಲ ಸಂರಕ್ಷಣಾ ಸಮಿತಿ’ ಅಸ್ಥಿತ್ವಕ್ಕೆ; ಕುರುಬೂರು ಸೈನ್ಯದಿಂದ ಕಾವೇರಿ ರಣಕಹಳೆ
ಬೆಂಗಳೂರು: ರಾಜ್ಯದ ನೆಲ ಜಲ ಭಾಷೆ ರಕ್ಷಣೆಗಾಗಿ ಕರ್ನಾಟಕ ‘ಜಲ ಸಂರಕ್ಷಣಾ ಸಮಿತಿ’ ಅಸ್ಥಿತ್ವಕ್ಕೆ ಬಂದಿದೆ. ರಾಜಕೀಯೇತರ ಸಂಘಟನೆಯಾಗಿರುವ ಈ ಸಮಿತಿಯು ಕಾವೇರಿ, ಕೃಷ್ಣ, ಮಹಾದಾಯಿ ನದಿ ,ನೀರಿನ ರಕ್ಷಣೆಗಾಗಿ ಹೋರಾಟ ಮಾಡಲು ತೀರ್ಮಾನಿಸಿದೆ. ಈಗ ಕಾವೇರಿ ನೀರಿನ ಬಗ್ಗೆ ಸರ್ಕಾರ ನಾಟಕೀಯ ಧೋರಣೆ ಅನುಸರಿಸುತ್ತಿರುವುದರ ವಿರುದ್ದ ರಣಕಹಳೆ ಮೊಳಗಿಸಲಿದೆ ಎಂದು ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಕುರುಬೂರು ಶಾಂತಕುಮಾರ್, ಮುಖ್ಯಮಂತ್ರಿ ಚಂದ್ರು ಸಹಿತ ಕನ್ನಡಪರ ಸಂಘಟನೆಗಳ ಮುಖಂಡರು ಸಭೆ ನಡೆಸಿ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ನೋವು ವ್ಯಕ್ತಪಡಿಸಿದರು. ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ 28 ಸಂಘಟನೆಗಳ ಮುಖಂಡರು ಪದಾಧಿಕಾರಿಗಳು ಭಾಗವಹಿಸಿದ್ದರು ರಾಜ್ಯದ ನೆಲ ಜಲ ಭಾಷೆ ರಕ್ಷಣೆಗಾಗಿ ಕರ್ನಾಟಕ ‘ಜಲ ಸಂರಕ್ಷಣಾ ಸಮಿತಿ’ ಅಸ್ಥಿತ್ವಕ್ಕ ತಂದಿದ್ದಾಗಿ ಹೇಳಿದ ಮುಖಂಡರು, ಕಾವೇರಿಗಾಗಿ ಹೋರಾಟ…
ಹಳೇ ಕಂಡೆಕ್ಟರ್ ಇದೀಗ ಸೂಪರ್ ಸ್ಟಾರ್.. ಬಿಎಂಟಿಸಿ ನೌಕರರ ಮಧ್ಯೆ ‘ರಜನಿಕಾಂತ್’ ಪ್ರತ್ಯಕ್ಷ
ಒಂದೊಮ್ಮೆ ಕಂಡೆಕ್ಟರ್.. ಇದೀಗ ಸೂಪರ್ ಸ್ಟಾರ್.. ‘ಜೈಲರ್’ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಸಕತ್ ಖುಷಿಯಲ್ಲಿರುವ ರಜನೀಕಾಂತ್ ಅವರು ಬೆಂಗಳೂರಿನಲ್ಲಿ ಮಂಗಳವಾರ ಬಿಎಂಟಿಸಿ ಕಚೇರಿಗೆ ಭೇಟಿ ನೀಡಿ ಕುತೂಹಲದ ಕೇಂದ್ರಬಿಂದುವಾದರು. ಜೈಲರ್ ಸಕ್ಸಸ್ ಖುಷಿಯಲ್ಲಿರುವ ರಜನಿಕಾಂತ್ ಬೆಂಗಳೂರಲ್ಲಿ ರೌಂಡ್ಸ್ ಹಾಕಿದ್ದು, ಅದರ ನಡುವೆ, ಜಯನಗರದಲ್ಲಿರುವ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದರು. ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ತಮ್ಮ ಗೆಳೆಯ ರಾಜ್ ಬಹದ್ದೂರ್ ಜೊತೆ ಭೇಟಿ ನೀಡಿದ ರಜನಿಕಾಂತ್ ಕೆಲ ಕಾಲ ನೌಕರರ ಜೊತೆ ಸಮಯ ಕಳೆದರು. ಬಿಎಂಟಿಸಿ ನೌಕರರು ರಜನಿಕಾಂತ್ ಜೊತೆ ಸೆಲ್ಪಿ ತೆಗೆದುಕೊಂಡು ಸಂಭ್ರಮಿಸಿದರು. ಈ ಹಿಂದೆ ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ರಜನಿಕಾಂತ್ ಬಳಿಕ ಸಿನಿಮಾ ರಂಗ ಪ್ರವೇಶಿಸಿ ಇದೀಗ ಸೂಪರ್ ಸ್ಟಾರ್ ಆಗಿದ್ದಾರೆ. ಇಂದು ಅವರು ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ ವೇಳೆ ತಮ್ಮ ಹಳೇಯ ವೃತ್ತಿ ಬದುಕಿನ ಬಗ್ಗೆ ಮೆಲುಕುಹಾಕಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆ ಸಾವು
ಚಾಮರಾಜನಗರ: ಹನೂರು ಮಲೆ ಮಹದೇಶ್ವರ ಬೆಟ್ಟದಿಂದ ದೇವರ ದರ್ಶನವನ್ನು ಮಾಡಿಕೊಂಡು ಸ್ವಗ್ರಾಮಕ್ಕೆ ತೆರಳುವ ವೇಳೆ ಕೆಎಸ್ಆರ್ ಟಿ ಸಿ ಬಸ್ಸಿನ ಹಿಂಬದಿಯ ಬಾಗಿಲಿನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಳಬೆಟ್ಟ ಸಮೀಪದ ತಿರುವಿನಲ್ಲಿ ನಡೆದಿದೆ. ಮೃತ ಮಹಿಳೆಯ ಕುಟುಂಬಕ್ಕೆ ಸಾಂತ್ವನ ಹೇಳಿರುವ ಕೆಎಸ್ಸಾರ್ಟಿಸಿ ಅಧಿಕಾರಿಗಳು ತಕ್ಷಣವೇ ಪರಿಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ. ಮದ್ದೂರು ತಾಲೂಕಿನ ಕರಡಗೆರೆ ಗ್ರಾಮದ ವಿನೋದ (45) ಎಂಬುವರು ಮಲೆ ಮಹದೇಶ್ವರ ಬೆಟ್ಟದಿಂದ ಹನೂರಿನ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಬಾಗಿಲು ಸಮೀಪದ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ತಾಳಬೆಟ್ಟದ ಮೂರನೇ ತಿರುವಿನಲ್ಲಿ ಬಸ್ ತಿರುಗಿದ ಸಂದರ್ಭದಲ್ಲಿ ಇವರು ಬಾಗಿಲಿನಿಂದ ರಸ್ತೆಗೆ ಉರುಳಿದ್ದು ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಮೃತಪಟ್ಟಿರುತ್ತಾರೆ. KSRTC ಚಾಮರಾಜನಗರ ವಿಭಾಗದ ಸೆಕ್ಯೂರಿಟಿ ಆಫೀಸರ್ ಶಿವರಾಜು ಗೌಡ ಅವರು ಸ್ಥಳಕ್ಕಾಗಮಿಸಿ ಮೃತ ಕುಟುಂಬಕ್ಕೆ 25,000ಗಳನ್ನು ನೀಡಿ ಉಳಿದ 2,75,000 ರೂಪಾಯಿಗಳನ್ನು ದಾಖಲಾತಿ ಒದಗಿಸಿ ಪಡೆದುಕೊಳ್ಳುವಂತೆ…
ಸರ್ಕಾರದ ತಪ್ಪುಗಳ ಬಗ್ಗೆ ಚಾರ್ಜ್ ಶೀಟ್; ಬಿಜೆಪಿಗೆ ಯಾವ ನೈತಿಕ ಹಕ್ಕಿದೆ ಎಂದ ಸಿಎಂ
ಮೈಸೂರು; ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದುಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆ ಆರಂಭವಾಗುತ್ತಿವೆ. ತನಿಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದರು. ತನಿಖೆಗೆ ಹಿಂದೆಯೇ ಒತ್ತಾಯ ಮಾಡಿದ್ದೆವು ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು. ಪಿ.ಎಸ್.ಐ ಹಗರಣವನ್ನು ನಿವೃತ್ತ ನ್ಯಾ. ಬಿ.ವೀರಪ್ಪ ಅವರು, 40% ಹಗರಣವನ್ನು…
ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ; ಸಿಎಂ ಸಿದ್ದರಾಮಯ್ಯ
ಮೈಸೂರು: ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ನಾವು ಯಶಸ್ವಿಯಾಗಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಇದಲ್ಲದೆ ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಜಾರಿ ಮಾಡುತ್ತೇವೆ ಎಂದರು. ಮೇ 9 ರಂದು ಚುನಾವಣೆಯ ಹಿಂದಿನ ದಿನ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡುಗಳನ್ನು ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪೂಜೆ ಮಾಡಿ ವಿತರಿಸಿದ್ದೆವು. ನಾಳೆ ಐದು ಗ್ಯಾರಂಟಿ ಗಳಲ್ಲಿ ಪ್ರಮುಖ ವಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯುತ್ತಿದೆ. ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ…
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ
ಮೈಸೂರು, ಆಗಸ್ಟ್ 29: ಈ ಬಾರಿಯ ದಸರಾ ಮಹೋತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.
ಹನೂರು ತೋಮಿಯರ್ ಪಾಳ್ಯದ ಶಾಲೆಯಲ್ಲಿ ಅನನ್ಯ ಪ್ರತಿಭಾ ಕಾರಂಜಿ.. ಕಲೋತ್ಸವದಲ್ಲಿ ಮಕ್ಕಳ ಕಮಾಲ್..
ಚಾಮರಾಜನಗರ: ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಸಂತ ತೋಮಸ್ ಆರ್ ಸಿ ಅನುದಾನಿತ ಶಾಲೆಯಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಗಮನಸೆಳೆಯಿತು. ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಮಲ್ ದಾಸ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರು ಶಿವಮಲ್ಲು ಹಾಗೂ ಸಂತ ತೋಮಸ್ ಶಾಲೆಯ ವ್ಯವಸ್ಥಾಪಕರಾದ ಪಾಧರ್ ಸೂಸೈ ರವರು ಉದ್ಘಾಟನೆ ನೆರವೇರಿಸಿದರು. . ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಮಲ್ ದಾಸ್ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಸ್ಪರ್ಧೆಯಲ್ಲಿ ಸೋತೆ ಎಂದು ಕುಗ್ಗಬಾರದು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಮುಖ್ಯವಾಗಿದೆ,ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಗಳನ್ನು ಹೊರ ತೆಗೆಯಲು ಪ್ರತಿಭಾಕಾರಂಜಿ ಕಾರ್ಯಕ್ರಮವು ಅನುಕೂಲವಾಗಿದೆ ಎಂದರು. ಶಾಗ್ಯ ಕ್ಲಸ್ಟರ್ ನ ಸಿ ಆರ್ ಪಿ ಮುನಿರಾಜುರವರು ಮಾತನಾಡಿ ಶಾಗ್ಯ ಕ್ಲಸ್ಟರ್ ವತಿಯಿಂದ 18 ಶಾಲೆಯ ಮಕ್ಕಳು ಭಾಗವಹಿಸಿದ್ದು, ಮಕ್ಕಳು ಬಹಳ…
ಸೆಪ್ಟೆಂಬರ್‌ನಿಂದ ರಾಜ್ಯದಲ್ಲಿ ‘KSRTC ಲಾರಿ’ಗಳ ಕಾರುಬಾರು..!
ಬೆಂಗಳೂರು: ಜನಹಿತ ಸಾರಿಗೆ ಸೇವೆ ಮೂಲಕ ದೇಶದಲ್ಲೇ ಖ್ಯಾತ ಸಂಸ್ಥೆ ಎನಿಸಿರುವ KSRTC ಇದೀಗ ತನ್ನ ಸೇವೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು ಸಜ್ಜಾಗಿದೆ. ಈ ವರೆಗೂ ಪ್ರಯಾಣಿಕರ ಸೇವೆ ಒದಗಿಸುತ್ತಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ KSRTC ಇನ್ನು ಮುಂದೆ ಕಾರ್ಗೋ ಸೇವೆಯನ್ನು ಒದಗಿಸಲಿದೆ. ಕೆಎಸ್ಸಾರ್ಟಿಸಿ ನೌಕರರ ಪಾಳಯದಲ್ಲೂ ಸಂತಸ: ‘ಶಕ್ತಿ’ ಯೋಜನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆದಾಯವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿದೆ. ಇದೀಗ ಮತ್ತೊಂದು ಯೋಜನೆ ಮೂಲಕ ನಿಗಮಕ್ಕೆ ಮತ್ತಷ್ಟು ಬಲ ಸಿಗುವ ವಿಶ್ವಾಸ ನಿಗಮದ ನೌಕರರದ್ದು. ಲಾರಿಗಳನ್ನು ಹೊಂದುವ ಮೂಲಕ ಸರಕು ಸಾಗಣೆ ಸೇವೆ ಒದಗಿಸಿ ಆ ಮೂಲಕ ನಿಗಮದ ಆದಾಯವನ್ನು ದುಪ್ಪಟ್ಟು ಮಾಡುವ ಪ್ರಯತ್ನ ಸರ್ಕಾರದ ವತಿಯಿಂದ ನಡೆದಿದೆ. ಪ್ರಸಕ್ತ ಸಾರಿಗೆ ಸಚಿವರ ನೇತೃತ್ವದಲ್ಲಿ ನಡೆದಿರುವ ಈ ಕಸರತ್ತು ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ನಡುವೆ, ಕಾರ್ಗೋ ಸೇವೆ…
