‘ಗೃಹಲಕ್ಷ್ಮಿ’: 1 ಕೋಟಿ 17 ಲಕ್ಷ ಯಜಮಾನಿಯರಿಂದ ನೋಂದಣಿ

ಬೆಂಗಳೂರು: ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ಒದಗಿಸಿರುವ ಅವರು, ಗೃಹಲಕ್ಷ್ಮಿ ಯೋಜನೆಗಾಗಿ ಹೆಸರು ನೋಂದಾಯಿಸಿರುವವರ ಪೈಕಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂಪಾಯಿ ಜಮಾ ಆಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್…

ತಾಯಿ ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ…

ಸಿಎಂ ಜನಸ್ಪಂದನ; ಯೋಜನೆಗಳ ಪರಿಪೂರ್ಣ ಲಾಭ ಫಲಾನುಭವಿಗಳಿಗೆ ಸಲ್ಲಬೇಕು

ಬೆಂಗಳೂರು : ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಮಹತ್ವದ ಹೆಜ್ಜೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಿಡ್ಡುಗಟ್ಟಿತ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುರುಕು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ತತ್ತರಿಸಿ ಹೋಗಿದ್ದರು. ಅವರ ಸಮಸ್ಯೆಗಳಿಗೆ ಪರಿಹಾರ ಸಿಗದೆ ಹೈರಾಣ ಆಗಿದ್ದರು. ಇದೀಗ ಆ ಪರಿಸ್ಥಿತಿ ಬದಲಾಗಿದೆ. ಅದರ ಮುಂದಿನ ಹೆಜ್ಜೆಯಾಗಿ ಜನ ಸ್ಪಂದನ ಕಾರ್ಯಕ್ರಮವು ಆಡಳಿತದಲ್ಲಿ ಬಹು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ ಎಂದಿದ್ದಾರೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಸಮಸ್ಯೆಯನ್ನು ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ. ಉಳಿದ ಸಮಸ್ಯೆಗಳನ್ನು ಆಯಾ…

ಮೇಲ್ಮನೆ ಅಖಾಡ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ನೈಜ ಶಿಕ್ಷಕ ಮತದಾರರನ್ನು ಪರಿಷ್ಕೃತ ಕರಡುಪಟ್ಟಿಗೆ ಸೇರ್ಪಡೆಗೊಳಿಸಲು ಆಗ್ರಹ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ ಕೈಬಿಟ್ಟುಹೋಗಿರುವ ನೈಜ ಶಿಕ್ಷಕರ ಮತದಾರರ ಹೆಸರುಗಳನ್ನು ಪರಿಷ್ಕೃತ ಕರಡುಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕೆಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ ಒತ್ತಾಯಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಮನವಿ ಸಲ್ಲಿಸಿರುವ ಎ.ಪಿ.ರಂಗನಾಥ್, ಈಗಾಗಲೇ ಬಿಡುಗಡೆ ಮಾಡಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಪ್ರೌಢಶಾಲೆಯ 9 BEO (8000) ಮತ್ತು ಬೆಂಗಳೂರು ದಕ್ಷಿಣ ಮತ್ತು ಉತ್ತರದ ಪಿಯು ಉಪನಿರ್ದೇಶಕರು (4000) ಪರಿಶೀಲಿಸಿ ಕಳುಹಿಸಿದ್ದ ಅರ್ಜಿಗಳ ಜೊತೆಗೆ ಉನ್ನತ ಶಿಕ್ಷಣ ಇಲಾಖೆಯ ವಿವಿಧ ಪ್ರಾಂಶುಪಾಲರುಗಳು ಸಲ್ಲಿಸಲಾಗಿದ್ದ (3000) ಒಟ್ಟು 15000 ಅರ್ಜಿಗಳು (ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ) ಜಿಲ್ಲೆಯನ್ನು ಹೊರತುಪಡಿಸಿ ನವೆಂಬರ್…

ದೀರ್ಘಕಾಲದ ನಿದ್ದೆಯಿಂದ ಎದ್ದ ಮುಖ್ಯಮಂತ್ರಿಯಿಂದ ಬೋಗಸ್ ದರ್ಶನ; ಅಶೋಕ್ ಲೇವಡಿ

ಬೆಂಗಳೂರು: ದೀರ್ಘ ಕಾಲದ ನಿದ್ದೆಯಿಂದ ಎದ್ದ ಮುಖ್ಯಮಂತ್ರಿಯಿಂದ ಬೋಗಸ್ ದರ್ಶನ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯವನ್ನು ಬೋಗಸ್ ದರ್ಶನ ಎಂದು ಲೇವಡಿ ಮಾಡಿದ ಅಶೋಕ್ ಅವರು, ನೆಟ್ಟಗೆ ಕೆಲಸ ಮಾಡದ ಮಂತ್ರಿಗಳನ್ನು ಕರೆಯಿಸಿ ಮೊದಲು ಅವರ ದರ್ಶನ ಮಾಡಬೇಕಿತ್ತು. ಯಾರ್ಯಾರು ಏನು ಕೆಲಸ ಮಾಡಿದ್ದಾರೆ ಎಂದು ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಖುರ್ಚಿ, ಮೇಜು ಹಾಕಿಸಿ ಮನವಿ ಪತ್ರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಸಿಎಂ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡಿದಿದ್ದರೆ ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಅದನ್ನು ಬಿಟ್ಟು ಸಿಎಂ ಅವರು ಸೀಮಿತ ಸಂಖ್ಯೆ ಜನರ ಅಹವಾಲು ಕೇಳಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ದಿಢೀರ್ ಎಂದು ಸಿಎಂ ಅವರು…

ರಾಜ್ಯದ ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತಪತ್ರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು : ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರಕಾರ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹರಿಹಾಯ್ದರು. ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದರು. ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು.…

ಸಿಎಂ ಜನತಾ ದರ್ಶನದಲ್ಲಿ ಖಾಕಿ ಅಮಾನವೀಯ ನಡೆ; ಬಿಜೆಪಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಸರ್ಕಾರ ನಿರುದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. 545 ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳ ಮರು ಪರೀಕ್ಷೆಗೆ ಅತ್ಯಂತ ಕಡಿಮೆ ಕಾಲಾವಕಾಶವನ್ನು ನಿಗದಿಪಡಿಸಿರುವ ಸರ್ಕಾರದ ಅವೈಜ್ಞಾನಿಕ ನಿರ್ಧಾರವನ್ನು ಪ್ರತಿಭಟಿಸಿ, ಪರೀಕ್ಷಾ ದಿನಾಂಕವನ್ನು ಮುಂದೂಡಿ ಸಮಯ ವಿಸ್ತರಿಸುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಲು ಮುಖ್ಯಮಂತ್ರಿಗಳ ಬಳಿಗೆ ತೆರಳಿದ್ದ ಪರೀಕ್ಷಾರ್ಥಿ ನಿರುದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡು ಪೊಲೀಸ್ ಬಂಧನಕ್ಕೆ ಒಳಪಡಿಸಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದವರು ಹೇಳಿದ್ದಾರೆ. ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿದ್ದ ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು, ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ ಎಂದು ವಿಜಯೇಂದ್ರ ಅವರು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಪಿಎಸ್ಐ…

ಡಿಸೆಂಬರ್ 4 ರಿಂದ 22ರವೆರೆಗೆ ಸಂಸತ್ ಅಧಿವೇಶನ

ದೆಹಲಿ: ಪಂಚ ರಾಜ್ಯಗಳ ಚುನಾವಣೆ ಬೆನ್ನಲ್ಲೇ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಿದ್ದತೆ ನಡೆದಿದೆ. ಡಿಸೆಂಬರ್ 4 ರಿಂದ 22 ರವೆರೆಗೆ ಅಧಿವೇಶನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 3 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಮರುದಿನವೇ ಅಧಿವೇಶನ ಪ್ರಾರಂಭವಾಗಲಿವೆ. ಇದಕ್ಕೆ ಪೂರ್ವಭಾವಿಯಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಈ ನಡುವೆ, ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಹಲವು ಮಸೂದೆಗಳು ಮಂಡನೆಯಾಗುವ ಸಾಧ್ಯತೆಗಳಿವೆ.

ಕುತೂಹಲ ಹೆಚ್ಚಿಸಿದ ‘ಕಾಂತಾರ ಚಾಪ್ಟರ್-1″; ಒಂದೆಡೆ ಮೂಹೂರ್ತ, ಇನ್ನೊಂದೆಡೆ ಟೀಸರ್ ಬಿಡುಗಡೆ.‌

ಬೆಂಗಳೂರು: ಸಿನಿಮಾ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿರುವ ‘ಕಾಂತಾರ’ ಸಿನಿಮಾದ ಎರಡನೇ ಆವೃತ್ತಿ ಸ್ಯದಲ್ಲೇ ಬರಲಿದೆ. ನಿರೀಕ್ಷೆಯಂತೆಯೇ ಮುಂದೆ ಬರುತ್ತಿರುವುದು ‘ಕಾಂತಾರ ಚಾಪ್ಟರ್ 1″. ಈ ಕುರಿತಂತೆ ಹೊಂಬಾಳೆ ಫಿಲಮ್ಸ್ ಮಾಹಿತಿ ಹಂಚಿಕೊಂಡಿದೆ. ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್‌ ಅಂದರೆ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ನೆರವೇರಿದೆ. ಇದೇ ವೇಳೆ ಸಿನಿಮಾದ ಫಸ್ಟ್‌ ಲುಕ್‌ ಹಾಗೂ ಟೀಸರ್ ಬಿಡುಗಡೆಯಾಗಿದೆ. ಕಾಂತಾರದ ವಿಸ್ಮಯಗಳ ಪ್ರಪಂಚಕ್ಕೆ ಮತ್ತೊಮ್ಮೆ ಸ್ವಾಗತ, ಮೊದಲ ಅಧ್ಯಾಯದ ಫಸ್ಟ್ ಲುಕ್ ಇಲ್ಲಿದೆ. ಈ ಹೊಸ ಪಯಣಕ್ಕೆ ನಿಮ್ಮ ಹಾರೈಕೆಗಳಿರಲಿ.https://t.co/QqpFVkmRTR@hombalefilms @KantaraFilm @VKiragandur @AJANEESHB pic.twitter.com/RHkQTevhWP — Rishab Shetty (@shetty_rishab) November 27, 2023 ಕನ್ನಡ, ಇಂಗ್ಲಿಷ್,…