ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ರೈಲಿಗೆ ಅಗ್ನಿ ಸ್ಪರ್ಶವಾಗಿ ಸಂಭವಿಸಿದ ದುರಂತದಲ್ಲಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ. ಮದುರೈ ಜಂಕ್ಷನ್‌ನಲ್ಲಿ ನಿಂತಿದ್ದ ಸ್ಟೇಷನರಿ ಕೋಚ್‌ನಲ್ಲಿ ಶನಿವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಯಾರ್ಡ್‌ನಲ್ಲಿ ನಿಂತಿದ್ದ ಟೂರಿಸ್ಟ್ ಕೋಚ್‌ನಲ್ಲಿ ಈ ಅವಘಡ ಸಂಭವಿಸಿದ್ದು 10 ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಸ್ಥಬೆಂಕಿ ನಂದಿಸಲು ಹರಸಾಹಸ ಪಟ್ಟರು. https://twitter.com/rohitmehta0/status/1695287034964070405
Year: 2023
ಚಂದ್ರ ಅಂಗಳಕ್ಕೆ ಕಾಲಿಟ್ಟ ದಿನ (ಆಗಸ್ಟ್ 23) ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಕೇಂದ್ರದ ವಿಜ್ಞಾನಿಗಳ ಸಾಧನೆಗೆ ಜಗತ್ತಿನಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ‘ಚಂದ್ರಯಾನ-3’ ಯಶಸ್ವಿಯಾಗಿದ್ದು ಇದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಕೂಡಾ ಹೇಳಿದ್ದಾರೆ. ಇದೇ ವೇಳೆ, ಚಂದ್ರನ ನೆಲವನ್ನು ಭಾರ ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಆಚರಿಸಲಾಗುವುದು ಎಂದು ಮೋದಿ ಘೋಷಿಸಿದ್ದಾರೆ. Interacting with our @isro scientists in Bengaluru. The success of Chandrayaan-3 mission is an extraordinary moment in the history of India's space programme. https://t.co/PHUY3DQuzb — Narendra Modi (@narendramodi) August 26, 2023 ಇಸ್ರೋ ಕಮಾಂಡ್ ಸೆಂಟರ್ನಲ್ಲಿ ‘ಚಂದ್ರಯಾನ’ ಸಾಧಕರನ್ನು ಅಭಿನಂಧಿಸಿ ಮಾತನಾಡಿದ ಪ್ರಧಾನಿ, ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ ಎಂದು ಸಂತಸ ಹಂಚಿಕೊಂಡಿರುವ ಪ್ರಧಾನಿ,…
ಕಾಯಕ ಯೋಗಿಯ ಮತ್ತೊಂದು ನಡೆ.. ಶಾಸಕ ರಾಜೇಶ್ ನಾಯ್ಕರ ‘ಒಡ್ಡೂರು ಎನರ್ಜಿ’ ಬಗ್ಗೆ ಕೇಂದ್ರ ಮಂತ್ರಿ ಶ್ಲಾಘನೆ
ಮಂಗಳೂರು: ಕಾಯಕ ಯೋಗಿ ಶಾಸಕ ರಾಜೇಶ್ ನಾಯ್ಕ್ ಇದೀಗ ‘ಇಂಧನ’ ಕ್ಷೇತ್ರಕ್ಕೆ ಶಕ್ತಿ ತುಂಬಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ‘ಒಡ್ಡೂರು ಫಾರ್ಮ್ಸ್’ನಲ್ಲಿ ಬಯೋವಸಿ ಎನ್.ಜಿ. ಉತ್ಪಾದನೆ ಮಾಡುವ ಒಡ್ಡೂರು ಎನರ್ಜಿ ಘಟಕವನ್ನು ಆರಂಭಿಸಿ ಗಮನಸೆಳೆದಿದ್ದಾರೆ. ಈ ಘಟಕ ಇದೀಗ ಲೋಕಾರ್ಪಣೆಗೊಂಡಿದೆ. ‘ಒಡ್ಡೂರು ಫಾರ್ಮ್ಸ್’ನಲ್ಲಿ ನಿರ್ಮಾಣಗೊಂಡಿರುವ ‘ಬಯೋವಸಿ ಎನ್.ಜಿ. ಉತ್ಪಾದನೆ ಮಾಡುವ ‘ಒಡ್ಡೂರು ಎನರ್ಜಿ’ಯನ್ನು ಕೇಂದ್ರ ಸಚಿವ ಭಗವಂತ ಖೂಬಾ ಅವರು ಶುಕ್ರವಾರ ಉದ್ಘಾಟಿಸಿದರು. ಬಯೋ ಗ್ಯಾಸ್ ಉತ್ಪಾದನೆ, ಗೊಬ್ಬರ ಉತ್ಪಾದನೆಗೆ ಸಬ್ಸಿಡಿ, ಸವಲತ್ತು ನೀಡಲಾಗುವುದು, ಅವುಗಳನ್ನು ಬ್ರಾಂಡಿಂಗ್ ಮಾಡುವ ಕಾರ್ಯಕ್ಕೆ ಕೇಂದ್ರ ಪ್ರೋತ್ಸಾಹ ನೀಡುತ್ತದೆ ಎಂದರು ದೇಶದಲ್ಲಿ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನವನ್ನು 2030ರೊಳಗೆ ಉತ್ಪಾದನೆ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಸವಾಲುಗಳನ್ನು ಸ್ವೀಕರಿಸುವ ಮೂಲಕ ಶಾಸಕ ರಾಜೇಶ್ ನಾಯ್ಕ್ ಅವರು ಬಯೋ ಸಿ.ಎನ್.ಜಿ.…
NW’KSRTC ಕ್ರಾಂತಿ.. ಬರೋಬ್ಬರಿ 450 ಹೊಸ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆ.. ಗ್ರಾಮೀಣ ಜನರಿಗೆ ಬಂಪರ್
ಬೆಂಗಳೂರು: ಸಾರಿಗೆ ವ್ಯವಸ್ಥೆಯಲ್ಲಿ ದೇಶದಲ್ಲೇ ಜನಪ್ರಿಯತೆ ಪಡೆದಿರುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇದೀಗ ಎಲೆಕ್ಟ್ರಿಕ್ ಬಸ್ಸುಗಳ ಮೂಲಕ ಮತ್ತೊಂದು ಕ್ರಾಂತಿಗೆ ಮುನ್ನುಡಿ ಬರೆದಿದೆ. ಉತ್ತರ ಕರ್ನಾಟಕದಲ್ಲಿ ಇನ್ನು ಮುಂದೆ ಎಲೆಕ್ಟ್ರಿಕ್ ಬಸ್ಸುಗಳ ಹವಾ ಸೃಷ್ಟಿಸಲು ಪ್ರಕ್ರಿಯೆ ಆರಂಭಿಸಿರುವ NWKSRTC ಬರೋಬ್ಬರಿ 450 ಎಲೆಕ್ಟ್ರಿಕ್ ಬಸ್ಸುಗಳ GCC ಮಾದರಿಯಲ್ಲಿ ಕಾರ್ಯಾಚರಣೆಗೆ ಅನುಮತಿ ಪಡೆದಿದೆ. NW’KSRTC’ಗೂ ಶಕ್ತಿ ತಂದ ‘ಶಕ್ತಿ’ ಶಕ್ತಿ ಯೋಜನೆ ಜಾರಿಯ ನಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತಷ್ಟು ಜನಪ್ರಯವಾಗಿದೆ. NW’KSRTC’ ವ್ಯಾಪಿಯಿಯಲ್ಲಿನ ಉತ್ತರ ಕರ್ನಾಟಕ ಭಾಗದಲ್ಲೇ ಸರಾಸರಿ 25 ಲಕ್ಷಕ್ಕೂ ಹೆಚ್ಚು ಜನರ ಜೀವನಾಡಿಯಾಗಿ ಸಾರಿಗೆ ಸಂಸ್ಥೆ ಗುರುತಾಗಿದೆ. ಇದೇ ಸಂದರ್ಭದಲ್ಲಿ NW’KSRTC’ಗೆ ಬರೋಬ್ಬರಿ 450 ಎಲೆಕ್ಟ್ರಿಕ್ ಬಸ್ಸುಗಳ GCC ಮಾದರಿಯಲ್ಲಿ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಚಿವ ರಾಮಲಿಂಗರೆಡ್ಡಿ, ‘ಶಕ್ತಿ’…
ಅಡೂರು ಕನ್ನಡ ಶಾಲೆ ಬಗ್ಗೆ ಕೇರಳ ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಗಡಿನಾಡು ಕಾಸರಗೋಡು ಜಿಲ್ಲೆಯ ಅಡೂರು ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿರುವುದು ಅತ್ಯಂತ ಸಂತೋಷ ತಂದಿದೆ, ಇದರ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನಸಾಮಾನ್ಯರ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕಾಸರಗೋಡಿನ ಅಡೂರು ಶಾಲೆಗೆ ಮಲೆಯಾಳ ಶಿಕ್ಷಕಿ ನೇಮಕದಿಂದಾಗಿ ಕಳೆದ ವರ್ಷ ಉದುಮ ಮತ್ತು ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೆ ಮಲಯಾಳ ಭಾಷೆ ಮಾತ್ರ ತಿಳಿದಿರುವ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ಉದುಮ ಪ್ರೌಢಶಾಲೆಗೆ ಕೂಡ ಇದೇ ರೀತಿ ಶಿಕ್ಷಕಿ ನೇಮಕಗೊಂಡಿದ್ದರು. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸೇರಿದಂತೆ ಗಡಿನಾಡಿನ ಕನ್ನಡ ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸಿದ್ದರು.…
ಪ್ರಧಾನಿ ನರೇಂದ್ರ ಮೋದಿಗೆ ಗ್ರೀಸ್ ದೇಶದ ಎರಡನೇ ಅತ್ಯುನ್ನತ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್’ ಪ್ರಶಸ್ತಿ
ಅಥೆನ್ಸ್: ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರೀಸ್ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಲಭಿಸಿದೆ. ಗ್ರೀಸ್ ಅಧ್ಯಕ್ಷೆ ಕಟರೀನಾ ಸಕೆಲ್ಲರೊಪೌಲೌ ಅವರು ಅಥೆನ್ಸ್‌ನಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್’ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು. ಈ ಕುರಿತಂತೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ ತಮಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವ ಗ್ರೀಸ್ ದೇಶಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ. ಅಧ್ಯಕ್ಷೆ ಕಟರೀನಾ ಅವರಿಗೆ ಧನ್ಯವಾದ ತಿಳಿಸಿರುವ ನರೇಂದ್ರ ಮೋದಿ, ಈ ಪ್ರಶಸ್ತಿಯು ಭಾರತದ ಬಗೆಗೆ ಗ್ರೀಸ್ ಜನತೆಗೆ ಇರುವ ಗೌರವವನ್ನು ತೋರಿಸುತ್ತದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. I thank President Katerina Sakellaropoulou, the Government and people of Greece for conferring upon me The Grand Cross of the Order of…
ಬಂಟ್ವಾಳದ ಯುವತಿಯನ್ನು ಕತ್ತು ಸೀಳಿ ಕೊಲೆ ; ಪುತ್ತೂರು ಪೊಲೀಸ್ ಠಾಣೆ ಬಳಿಯೇ ಅಟ್ಟಹಾಸ
ಮಂಗಳೂರು: ಕರಾವಳಿಯಲ್ಲಿ ಎದೆ ಝಲ್ಲೆನಿಸುವ ಘಟನೆ ನಡೆದಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿಯೇ ಯುವತಿಯೊಬ್ಬಳನ್ನು ಕಟ್ಟು ಸೀಳಿ ಕೊಲೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು ಮೃತಾಳನ್ನು ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನಿವಾಸಿ ಸುಮಾರು 18 ವರ್ಷದ ಗೌರಿ ಎಂದು ಗುರುತಿಸಲಾಗಿದೆ. ಪರಿಚಿತ ವ್ಯಕ್ತಿಯೇ ಈ ಕೃತ್ಯ ನಡೆಸಿರುವುದಾಗಿ ಬೆಳಕಿಗೆ ಬಂದಿದೆ. ಅರ್ತ್ ಮೂವರ್ ಚಾಲಕನಾಗಿ ಕೆಲಸ ಮಾಡುತ್ತಿರುವ ಪದ್ಮರಾಜ್ (23) ಎಂಬಾತ ಫ್ಯಾನ್ಸಿ ಸ್ಟೋರ್‌ನಲ್ಲಿ ಉದ್ಯೋಗದಲ್ಲಿದ್ದ ಗೌರಿಯನ್ನು ಮಾತನಾಡಿಸುವ ಸಲುವಾಗಿ ಕರೆಸಿಕೊಂಡಿದ್ದಾನೆ. ಆ ಸಂದರ್ಭದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬಳಿಕ ಇಬ್ಬರೂ ಸ್ಥಳದಿಂದ ತೆರಳಿದ್ದು, ಸ್ವಲ್ಪ ಹೊತ್ತಿನ ನಂತರ ಬಂದ ಆರೋಪಿ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗೌರಿಯನ್ನು ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಈ ನಡುವೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ…
ಚುನಾವಣಾ ವಂಚನೆ ಆರೋಪ: ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಬಂಧನ
ವಾಷಿಂಗ್ಟನ್: ವಿಶ್ವದ ದೈತ್ಯ ರಾಷ್ಟ್ರ ಅಮೆರಿಕವನ್ನು ಮುನ್ನಡೆಸಿದ್ದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರೀಗ ಕಂಬಿಯ ಹಿಂದೆ ಸೇರಿದ್ದಾರೆ. 2020ರ ಜಾರ್ಜಿಯಾ ಚುನಾವಣಾ ಫಲಿತಾಂಶಗಳನ್ನು ತಿರುಚಲು ಯತ್ನಿಸಿದ ಆರೋಪದಲ್ಲಿ ಡೋನಾಲ್ಡ್ ಟ್ರಂಪ್ ಅವರು ಬಂಧನಕ್ಕೊಳಗಾಗಿದ್ದಾರೆ. 2020ರಲ್ಲಿ ದಕ್ಷಿಣ ರಾಜ್ಯಗಳಲ್ಲಿ ನಡೆದ ಚುನಾವಣಾ ಫಲಿತಾಂಶವನ್ನು ತಿರುಚಲು ಪ್ರಯತ್ನಿಸಿದ್ದ ಆರೋಪ ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮೇಲಿದೆ. ಚುನಾವಣಾ ವಂಚನೆ ಮತ್ತು ಪಿತೂರಿ ಸಹಿತ ಇವರ ಮೇಲೆ 12 ಪ್ರಕರಣಗಳನ್ನು ದಾಖಲಿಸಲಾಗಿದೆ. ಜಾರ್ಜಿಯಾ ಜೈಲಿನಲ್ಲಿ ಶರಣಾದ ಡೋನಾಲ್ಡ್ ಟ್ರಂಪ್ ಅವರು ತನಿಖಾ ಪ್ರಕ್ರಿಯೆಯ ನಂತರ ಬಿಡುಗಡೆಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಪ್ರಕಟ; ‘ಚಾರ್ಲಿ 777’ ಅತ್ಯುತ್ತಮ ಪ್ರಾದೇಶಿಕ ಸಿನಿಮಾ
ನವದೆಹಲಿ: ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡ ಸಿನಿಮಾ ‘ಚಾರ್ಲಿ 777’ ಅತ್ಯುತ್ತಮ ಪ್ರಾದೇಶಿಕ ಪ್ರಶಸ್ತಿ ಪಡೆದುಕೊಂಡಿದೆ. 2021ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಲ್ಲಿ ಅತ್ಯುತ್ತಮವಾದ ಸಿನಿಮಾ, ನಟ-ನಟಿ ಹಾಗೂ ತಂತ್ರಜ್ಞರನ್ನು ಗುರುತಿಸಿ 69ನೇ ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಗುರುವಾರ ಪ್ರಕಟವಾಗಿದ್ದು, ಪುಷ್ಪ ಚಿತ್ರದಲ್ಲಿನ ನಟನೆಗಾಗಿ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಆರ್. ಮಾಧವನ್ ಅಭಿನಯದ ರಾಕೆಟ್ರಿ ದಿ ನಂಬಿ ಎಫೆಕ್ಟ್ ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಒಲಿದಿದೆ. ಗಂಗೂಬಾಯಿ ಸಿನಿಮಾದಲ್ಲಿನ ನಟನೆಗಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಮಿಮಿ ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿ ಕೃತಿ ಸನಾನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ರಕ್ಷಿತ್ ಶೆಟ್ಟಿ ಅಭಿನಯದ ಹಾಗೂ ಕಿರಣ್ ರಾಜ್ ನಿರ್ದೇಶನದ ‘ಚಾರ್ಲಿ 777’ ಕನ್ನಡ ಚಿತ್ರ ಅತ್ಯುತ್ತಮ ಪ್ರಾದೇಶಿಕ ಪ್ರಶಸ್ತಿ ಪಡೆದುಕೊಂಡಿದೆ.…
ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ‘ಬಸ್’ ಅಲ್ಲ: ನಾಯಕರಿಗೆ ಸಂದೇಶ ಕೊಟ್ಟ ಡಿಕೆಶಿ
ಬೆಂಗಳೂರು:”ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ,. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ನಾಯಕ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ, ಜವಾಬ್ದಾರಿ ಮತ್ತು ಗೌರವ ಬರುತ್ತದೆ. ಬರುವುದು, ಹೋಗುವುದು ಮಾಡಿದರೆ ನಾಯಕತ್ವಕ್ಕೂ ಧಕ್ಕೆಯಾಗುತ್ತದೆ. ಈ ಮಾತನ್ನು ಕೇವಲ ಇಂದು ಪಕ್ಷ ಸೇರ್ಪಡೆಯಾದ ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಹೇಳುತ್ತಿಲ್ಲ, ರಾಜ್ಯದ ಸಮಸ್ತ ಕಾರ್ಯಕರ್ತರು, ಮುಖಂಡರಿಗೆ ಕಿವಿ ಮಾತು ಹೇಳುತ್ತಿದ್ದೇನೆ” ಎಂದು ತಿಳಿಸಿದರು. “ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆಯುವುದೇ ಒಂದು ಸೌಭಾಗ್ಯ, ಕಾಂಗ್ರೆಸ್ ಶಕ್ತಿ…
