ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಗರಡಿಯಲ್ಲಿ ಪಳಗಿರುವ ಮತ್ತೊಬ್ಬ ನಾಯಕ ಇದೀಗ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹೈಕಮಾಂಡ್ ಬಗ್ಗೆ ಮುಗಿಸಿಕೊಂಡು ಬಿಜೆಪಿಗೆ ಗುಡ್‌ಬೈ ಹೇಳಿ ಕೆಲ ಸಮಯದ ಹಿಂದಷ್ಟೇ ಜೆಡಿಎಸ್ ಸೇರಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರ ಜೊತೆಗೆ ಶಿಕಾರಿಪುರದ ನಾಗರಾಜ್ ಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಈ ನಾಯಕರನ್ನು ಕಾಂಗ್ರೆಸ್‌ಗೆ ಬರಾಡಿಕೊಂಡರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು, ಮಾಜಿ ಸಂಸದರಾದ ಆಯನೂರು ಮಂಜುನಾಥ್ ಹಾಗೂ ಶಿಕಾರಿಪುರದ ನಾಗರಾಜ್ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @BNChandrappa1, ಸಚಿವರಾದ…
Year: 2023
ಜಿಂಕೆ ಕೊಂಬು ಅಕ್ರಮ ಸಾಗಾಟ; ಚಾಮರಾಜನಗರ ಬಳಿ ಇಬ್ಬರ ಬಂಧನ
ಚಾಮರಾಜನಗರ: ಹನೂರು ಸಮೀಪ ಅಕ್ರಮವಾಗಿ ಶೇಖರಣೆ ಮಾಡಿದ್ದ ಜಿಂಕೆ ಕೊಂಬುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲೂಕಿನ ಹುಣಸೆಪಾಳ್ಯ ಗ್ರಾಮದ ನಿವಾಸಿಗಳಾದ ಈರಣ್ಣ (49) ಆರ್ಯ (22) ಬಂಧಿತ ಆರೋಪಿಗಳಾಗಿದ್ದಾರೆ. ಹುಣಸೆಪಾಳ್ಯ ಗ್ರಾಮದ ಇಬ್ಬರು ವ್ಯಕ್ತಿಗಳು ಒಡೆಯರಪಾಳ್ಯ ಕಡೆಯಿಂದ ಕೊಳ್ಳೇಗಾಲ ಮಾರ್ಗವಾಗಿ ಹೋಂಡಾ ಶೈನ್ ಮೋಟಾರ್ ಬೈಕ್‌ನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಜಿಂಕೆ ಕೊಂಬುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರದಳದ ಸಬ್ಇನ್ಸ್ಪೆಕ್ಟರ್ ವಿಜಯ್ ರಾಜ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 12 ಒಣಗಿದ ಜಿಂಕೆ ಕೊಂಬು, ಕೃತಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ಕೆಎ-10 U 4034 ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಕೊಳ್ಳೆಗಾಲ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ…
‘ಚಂದ್ರಯಾನ-3’: ಚಂದ್ರನ ಚಿತ್ರಗಳನ್ನು ಬಿಡುಗಡೆ ಮಾಡಿದ ‘ಇಸ್ರೋ’
ದೆಹಲಿ: ಭಾರತದ ಹೆಮ್ಮೆಯ ‘ಚಂದ್ರಯಾನ-3’ ಯಶಸ್ವಿಯಾಗಿದೆ. ಈ ಮೂಲಕ ಇಸ್ರೋ ಸಾಧನೆಯ ಕಿರೀಟಕ್ಕೆ ಕಿರೀಟ ಸಿಕ್ಕಿದೆ. ವಿಕ್ರಮ್ ಲ್ಯಾಂಡರ್ ಬುಧವಾರ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಕೆಲವೇ ನಿಮಿಷಗಳ ಮುನ್ನ ತೆಗೆದ ಚಿತ್ರಗಳನ್ನು ಬುಧವಾರ ಬಿಡುಗಡೆ ಮಾಡಿದೆ. ಚಂದ್ರಯಾನ-3 ರ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಲ್ಯಾಂಡಿಂಗ್ ವೇಳೆ ತೆಗೆದ ಚಂದ್ರನ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಇದೇ ವೇಳೆ, CH-3 ಲ್ಯಾಂಡರ್ ಮತ್ತು ಬೆಂಗಳೂರಿನ MOX-ISTRAC ನಡುವೆ ಸಂವಹನ ಸಂಪರ್ಕ ಸಾಧಿಸಲಾಗಿದೆ ಎಂದು ಇಸ್ರೋ ತಿಳಿಸಿದೆ. Chandrayaan-3 Mission:Updates: The communication link is established between the Ch-3 Lander and MOX-ISTRAC, Bengaluru. Here are the images from the Lander Horizontal Velocity Camera taken during the…
ರಾಜ್ಯ ಆಡಳಿತ ಯಂತ್ರಕ್ಕೆ ಮತ್ತೆ ಮೇಜರ್ ಸರ್ಜರಿ; 31 KAS ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರ ತನ್ನ ಆಡಳಿತ ಯಂತ್ರಕ್ಕೆ ಮತ್ತೆ ಮೇಜರ್ ಸರ್ಜರಿ ಮಾಡಿದೆ. ನಾಲ್ವರು ಆಯ್ಕೆ ಶ್ರೇಣಿ, 16 ಹಿರಿಯ ಶ್ರೇಣಿ ಹಾಗೂ 11 ಕಿರಿಯ ಶ್ರೇಣಿ ಸೇರಿ ಒಟ್ಟು 31 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಅಧಿಕಾರಿಗಳ ವರ್ಗಾವಣೆ ಪಟ್ಟಿ ಹೀಗಿದೆ: ಪ್ರಕಾಶ್ ಗೋಪು ರಜಪೂತ್- ಕಲಬುರಗಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತ (ಭೂನಿರ್ವಹಣೆ, ಯೋಜನೆ), ಸಂಗಪ್ಪ- ಮಹಾರಾಣಿ ಕ್ಲಸ್ಟರ್ ವಿವಿ ಕುಲಸಚಿವ (ಆಡಳಿತ), ಕವಿತಾ ರಾಜಾರಾಮ್- ಮೈಸೂರು ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ (ಆಡಳಿತ ಮತ್ತು ಅಭಿವೃದ್ಧಿ), ಪಿ. ಶಿವರಾಜು- ಮೈಸೂರು ಹೆಚ್ಚುವರಿ ದಂಡಾಧಿಕಾರಿ. ಸಿದ್ರಾಮೇಶ್ವರ- ಕೊಪ್ಪಳ ಹೆಚ್ಚುವರಿ ಜಿಲ್ಲಾಧಿಕಾರಿ, ರವಿಚಂದ್ರ ನಾಯಕ್- ಕೆಎಸ್‌ಬಿಸಿಎಲ್ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ), ಎಲಿಷಾ ಆಂಡ್ರೋಸ್- ರಿಮ್ಸ್ ಮುಖ್ಯ ಆಡಳಿತಾಧಿಕಾರಿ, ಸಿ.ಮಂಜುನಾಥ- ರಾಜೀವಗಾಂಧಿ ವಸತಿ ನಿಗಮದ ಕಂದಾಯ ಕೋಶ ಮುಖ್ಯಸ್ಥ, ರೇಷ್ಮಾ ಹಾನಗಲ್- ಹೊನ್ನಾಳಿ…
ಮೇಕೆದಾಟು ಜಾರಿಗೆ ಕಾನೂನು ತೊಡಕು ನಿವಾರಿಸಿ: ಸರ್ಕಾರಕ್ಕೆ ಡಿವಿಎಸ್ ಸಲಹೆ
ಬೆಂಗಳೂರು: ಮೇಕೆದಾಟು ಕಾನೂನು ತೊಡಕು ನಿವಾರಿಸಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ವಿ. ಸದಾನಂದಗೌಡ, ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ ಕರೆದಿರುವುದು ಸರಿಯಲ್ಲ. ಮೇಕೆದಾಟು ಯೋಜನೆ ಬಗ್ಗೆ ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ಮುಂದೆ ಸಾಗಬೇಕಿದೆ ತಮಿಳುನಾಡಿನಲ್ಲಿ ಇರುವ ಡ್ಯಾಮ್‍ಗಳ ನೀರಿನ ವಿವರ, ಅಲ್ಲಿನ ರೈತರ ಬೆಳೆ ಪದ್ಧತಿ, ಮೂರು ಬೆಳೆಯನ್ನ ಬೆಳೆಯುತ್ತಿರುವುದರ ಬಗ್ಗೆ ಅವರು ತಿಳಿಸಿದರು. ನಮ್ಮ ರೈತರು ಕೇವಲ ಎರಡು ಬೆಳೆ ಮಾತ್ರ ಬೆಳೆಯುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟಿಗೆ ಮನದಟ್ಟು ಮಾಡಿಕೊಟ್ಟು ಮೇಕೆದಾಟು ಯೋಜನೆ ಬಗ್ಗೆ ಅನುಮತಿ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.
ಚಂದ್ರಯಾನ-3; ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ, ನೂರಾ ಇಪ್ಪತ್ತೈದು ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. ಇಸ್ರೋ ನಮ್ಮ ಹೆಮ್ಮೆ. ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇಸ್ರೋ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ನಮ್ಮ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅಮೆರಿಕ, ರಷ್ಯಾ, ಚೀನಾ ನಂತರ ಚಂದ್ರನ…
ಟ್ವಿಟರ್ ಕ್ರಾಂತಿ: ಗರಿಷ್ಠ ಗ್ರೂಪ್ ಗಾತ್ರವನ್ನು 15ರಿಂದ 200ಕ್ಕೆ ಹೆಚ್ಚಿಸಿದ ‘X’
ಟ್ವಿಟ್ಟರ್ ತನ್ನ ಪ್ಲಾಟ್ ಫಾರ್ಮ್ ‘ಎಕ್ಸ್’ ನಲ್ಲಿ ನೇರ ಸಂದೇಶಗಳಿಗೆ (DMs) ಗರಿಷ್ಠ ಗುಂಪಿನ ಗಾತ್ರವನ್ನು 150 ರಿಂದ 200 ಕ್ಕೆ ಹೆಚ್ಚಿಸಿದೆ. ಎಕ್ಸ್‌ನಲ್ಲಿ ಮೀಸಲಾದ ಉತ್ಪನ್ನ ಇಂಜಿನಿಯರ್ ಆಗಿರುವ ಎನ್ರಿಕ್ ಮಂಗಳವಾರ ಸುದ್ದಿಯನ್ನು ಹಂಚಿಕೊಂಡಿದ್ದಾರೆ, ಈ ಬದಲಾವಣೆ ಬಗ್ಗೆ ‘ಎಕ್ಸ್’ನ ಮಾಲೀಕ ಎಲನ್ ಮಸ್ಕ್, “ನಮಗೆ ಮಿತಿಯ ಅಗತ್ಯವಿದೆಯೇ?” ಎಂಬ ಕುತೂಹಲಕಾರಿ ಪ್ರಶ್ನೆಯನ್ನು ಎತ್ತಿದ್ದಾರೆ. ಹಲವಾರು ಬಳಕೆದಾರರು ಹೊಸ ವೈಶಿಷ್ಟ್ಯದ ಕುರಿತು ತಮ್ಮ ದೃಷ್ಟಿಕೋನಗಳೊಂದಿಗೆ ಚಿಮ್ ಮಾಡಿದ್ದಾರೆ. ಒಬ್ಬ ಬಳಕೆದಾರನು “ಇಷ್ಟು ಜನರೊಂದಿಗೆ ಗುಂಪು ಚಾಟ್‌ಗಳನ್ನು ಯಾರು ನಿರ್ವಹಿಸುತ್ತಾರೆ ಎಂದು ನನಗೆ ಕುತೂಹಲವಿದೆ” ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ, ಆದರೆ ಇನ್ನೊಬ್ಬರು ತಮಾಷೆಯಾಗಿ, “ಸೌಂಡ್ಸ್ ಕೂಲ್, ಆದರೆ ನಾನು ಅದನ್ನು ಪರೀಕ್ಷಿಸಲು ಮೊದಲು ಸಾಕಷ್ಟು ಸ್ನೇಹಿತರನ್ನು ಮಾಡಿಕೊಳ್ಳಬೇಕು’ ಎಂದಿದ್ದಾರೆ.
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಸಂಪೂರ್ಣ ಕಡೆಗಣನೆ: BJP ಆಕ್ರೋಶ
ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಇದೀಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಆಕ್ಷೇಪಿಸಿದ್ದಾರೆ. “ಊರು ಕೊಳ್ಳೆ ಹೋದ ಮೇಲೆ ಡಿಡ್ಡಿ ಬಾಗಿಲು ಹಾಕಿದಂತೆ” ಎಂಬಂತೆ ರಾಜ್ಯ ಸರ್ಕಾರದ ವರ್ತನೆ ಇದೆ ಎಂದು ಅವರು ಟೀಕಿಸಿದ್ದಾರೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಮುಖಂಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಮತ್ತಿತರ ಪ್ರಮುಖರು ಭಾಗವಹಿಸಿ ಪಕ್ಷದ ನಿಲುವನ್ನು ಸಮರ್ಥವಾಗಿ ಮಂಡಿಸಿದ್ದಾರೆ ಎಂದು ಅವರು ವಿವರ ನೀಡಿದ್ದಾರೆ. ಸರ್ವಪಕ್ಷ ಸಭೆಗೆ ವಿಳಂಬ -BSY ಆಕ್ಷೇಪ: ಬಿ.ಎಸ್. ಯಡಿಯೂರಪ್ಪ ಮಾತನಾಡಿ, ತಮಿಳುನಾಡಿಗೆ ನೀರನ್ನು ಬಿಟ್ಟು ಇದೀಗ ಸರ್ವ ಪಕ್ಷ ಸಭೆ ಕರೆದಿರುವುದು ಸರಿಯಲ್ಲ. 26ನೇ ತಾರೀಕು ಸುಪ್ರೀಂ ಕೋರ್ಟ್‍ನಲ್ಲಿ ಸಮರ್ಥವಾಗಿ ರಾಜ್ಯದ ಪರವಾಗಿ…
ತಾವರೆ ಹೂ ಕೀಳಲು ಹೋಗಿ ನೀರುಪಾಲಾದ ತಂದೆ, ಮಗ ಸಾವು
ದೊಡ್ಡಬಳ್ಳಾಪುರ:: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರಾಟಕ್ಕೆಂದು ತಾವರೆ ಹೂ ಕೀಳಲು ಕೆರೆಗಿಳಿದ ತಂದೆ-ಮಗ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಕೆರೆಯಲ್ಲಿ ಸಂಭವಿಸಿದೆ. ಮೃತರನ್ನು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಪುಟ್ಟರಾಜು (55 ವರ್ಷ), ಕೇಶವ (18 ವರ್ಷ) ಎಂದು ಗುರುತಿಸಲಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಮಾರಾಟ ಮಾಡಲು ತಾವರೆ ಹೂ ಕೀಳಲು ತಂದೆ ಮತ್ತು ಮಗ ಕೆರೆ ಬಳಿ ತೆರಳಿದ್ದರು ಎನ್ನಲಾಗಿದೆ. ಬಟ್ಟೆ, ಮೊಬೈಲ್ ಮತ್ತು ಚಪ್ಪಲಿಗಳನ್ನು ದಡದಲ್ಲಿ ಇಟ್ಟು, ತಾವರೆ ಹೂ ಕೀಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಮತ್ತೋರ್ವ ವ್ಯಕ್ತಿ ಮೊಬೈಲ್ ರಿಂಗ್ ಆಗುತ್ತಿರುವುದನ್ನು ಕಂಡು ರಿಸೀವ್ ಮಾಡಿದಾಗ, ಮೃತನ ತಾಯಿ ತಾವರೆ ಹೂ ಕೀಳಲು ತಂದೆ ಮಗ ಬಂದಿದ್ದರು ಎಂದು ತಿಳಿಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ…
‘ಚಂದ್ರಯಾನ-3’; ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡಿಂಗ್
ದೆಹಲಿ: ಭಾರತದ ಹೆಮ್ಮೆಯ ‘ಚಂದ್ರಯಾನ-3’ ಯಶಸ್ವಿಯಾಗಿದೆ. ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಾಧನೆಯ ಕಿರೀಟಕ್ಕೆ ಕಿರೀಟ ಸಿಕ್ಕಿದೆ. ವಿಕ್ರಮ್ ಲ್ಯಾಂಡರ್ ಬುಧವಾರ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಜುಲೈ 14ರಂದು ‘ಚಂದ್ರಯಾನ 3’ ಉಡ್ಡಯನವಾಗಿದೆ. ಸುದೀರ್ಘ ಪ್ರಯಾಣದ ಬಳಿಕ ಬುಧವಾರ ಸಂಜೆ 6.04 ಸುಮಾರಿಗೆ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಈ ಮೂಲಕ ಚಂದ್ರನ ಅಂಗಳದಲ್ಲಿ ನೌಕೆಯನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಗುರುತಾಗಿದೆ.
