ಬೆಂಗಳೂರು; ರಾಜಕೀಯ ಟೀಕೆಗಳಿಗೆ ಅಂಜದೆ, ವದಂತಿಗಳಿಗೆ ಸೊಪ್ಪೂ ಹಾಕದೆ ತನ್ನ ನಡೆ ಸ್ಪಷ್ಟವಾಗಿದೆ ಎನ್ನುತ್ತಿರುವ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ತಮ್ಮನ್ನು ಗೆಲ್ಲಿಸಿರುವ ಯಶವಂತಪುರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಿ ಇಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆಯ ಚರ್ಚೆ ನಡೆದಿರುವಾಗಲೇ ಶಾಸಕ ಎಸ್.ಟಿ.ಸೋಮಶೇಖರ್ ಅವರು ಭಾನುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದ್ದಿಗಳಿಗೆ ಗುದ್ದು ಕೊಟ್ಟಿದ್ದಾರೆ. ಅವರ ಈ ಭೇಟಿ ಪಕ್ಷಾಂತರ ವಿಚಾರಕ್ಕೆ ಸಂಬಂಧಪಟ್ಟಿರಬಹುದೆಂಬ ಕುತೂಹಲ ಎಲ್ಲರನ್ನು ಕಾಡಿತ್ತಾದರೂ ಅವರ ಈ ಭೇಟಿ ರಾಜಕಾರಣದ ಬದಲಾಗಿ ಕ್ಷೇತ್ರದ ಅಭಿವೃದ್ಧಿಗೆ ಸೀಮಿತವಾಗಿತ್ತು. ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ನಿವಾಸದಲ್ಲಿಂದು (ಭಾನುವಾರ) ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕುತೂಹಲದ ಕೇಂದ್ರಬಿಂದುವಾದರು. ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ತುರ್ತಾಗಿ ಆಗಬೇಕಿರುವ ಕಾಮಗಾರಿಗಳ ಕುರಿತು ಮನವಿ ಸಲ್ಲಿಸಿದರು.…
Year: 2023
ವರ್ಗಾವಣೆ ದಂಧೆ, ಕಮೀಷನ್ ವ್ಯವಹಾರ ಮರೆಮಾಚಲು ‘ಘರ್ ವಾಪ್ಸಿ’ ನಾಟಕ?
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ. ಅವರಿಗೆ ಘರ್ ವಾಪ್ಸಿಯದ್ದೇ ಚಿಂತೆಯಾಗಿದೆ. ಈ ಚಿಂತೆಯಲ್ಲಿರುವ ಅವರು ನಮ್ಮನ್ನು ಸರ್ವಪಕ್ಷ ಸಭೆಗೆ ಕರೀತಾರೋ ಇಲ್ವೋ ಗೊತ್ತಿಲ್ಲ. ಅವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ಕುಟುಕಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು. ರಾಜ್ಯ ಕಾಂಗ್ರೆಸ್ ಸರಕಾರ ವರ್ಗಾವಣೆ ದಂಧೆ, ಕಮೀಷನ್ ವ್ಯವಹಾರ, ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಹಾದಿ ಬೀದಿಯಲ್ಲಿ ಜನರು ಛೀ, ಥೂ ಎನ್ನುತ್ತಿದ್ದಾರೆ. ಇದನ್ನು ಮರೆ ಮಾಚಲು ಘರ್ ವಾಪ್ಸಿ ನಾಟಕ ಆಡುತ್ತಿದೆ ಎಂದು ಟೀಕಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಅರ್ಧಕ್ಕರ್ಧ ಮುಗಿದು ಹೋಗುತ್ತದೆ, ಜೆಡಿಎಸ್ ಮುಗಿದೇ ಹೋಗುತ್ತದೆ ಅಂತಿದ್ದಾರೆ. ನಿನ್ನೆ ಮೊನ್ನೆ ಆಯ್ಕೆ ಆದವರು ಕೂಡ 10-20ಕ್ಕೂ ಹೆಚ್ಚು ಎಂಎಲ್ ಎಗಳು ಬರುತ್ತಾರೆ ಎಂದು ಹೇಳುತ್ತಿದ್ದಾರೆ. ಆದರೆ, ಆ…
ಡಿಕೆ ಬ್ರದರ್ಸ್’ಗೆ ಸವಾಲಾದ ಹೆಚ್ಡಿಕೆ; ನಾಳೆ ಅಥವಾ ನಾಡಿದ್ದು ನೈಸ್ ಅಕ್ರಮಗಳ ದಾಖಲೆ ಬಹಿರಂಗ
ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ನೈಸ್ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಹೆಚ್ಡಿಕೆ ಪ್ರಶ್ನೆ ರಾಮನಗರ: ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, 2004ರಲ್ಲಿ ಡಿ.ಕೆ.ಶಿವಕುಮಾರ್ ಅವರು ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್ ಕಂಪನಿಯನ್ನು ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಡಿಕೆ ಸಹೋದರರ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಾಳೆ ಅಥವಾ ನಾಡಿದ್ದು ನೈಸ್ ಅಕ್ರಮಗಳು, ಡಿಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್ ಭೂಮಿಯ ದಾಖಲೆಗಳನ್ನು ಬಹಿರಂಗ…
ನಮ್ಮ ನೀರು ನಮ್ಮ ನೀರು ಎಂದವರು ನೆರೆರಾಜ್ಯಕ್ಕೆ ನೀರು ಬಿಟ್ಟಿದ್ದು ಯಾಕೆ? HDK ಪ್ರಶ್ನೆ
ರಾಮನಗರ: ನೀರು ಬೇಕು ಎಂದು ತಮಿಳುನಾಡು ಸುಪ್ರೀಂ ಕೋರ್ಟ್ʼಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರ್ಕಾರ ಬೆದರಿ ಕಾವೇರಿ ನೀರನ್ನು ನೆರೆರಾಜ್ಯಕ್ಕೆ ಹರಿಸಿದ್ದೇಕೆ? ನ್ಯಾಯಾಲಯಕ್ಕೆ ತನ್ನ ಆಕ್ಷೇಪವನ್ನು ಏಕೆ ಸಲ್ಲಿಕೆ ಮಾಡಲಿಲ್ಲ. ನಮ್ಮ ರಾಜ್ಯದಲ್ಲಿರುವ ಜಲ ಸಂಕಷ್ಟದ ಬಗ್ಗೆ ಏಕೆ ಮನವರಿಕೆ ಮಾಡಿಕೊಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೀರು ಬಿಟ್ಟ ವಿಷಯ ಗೊತ್ತಾದ ಕೂಡಲೇ ವಿರೋಧ ಮಾಡಿ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯ ಮಾಡಿದೆ. ಈಗ ಸರ್ವಪಕ್ಷ ಸಭೆ ಕರೆಯುತ್ತೇವೆ, ಸುಪ್ರೀಂ ಕೋರ್ಟ್ʼಗೆ ಅರ್ಜಿ ಹಾಕುತ್ತೇವೆ ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಅದನ್ನೇ ನೀರು ಬಿಡುವುದಕ್ಕೆ ಮೊದಲೇ ಮಾಡಬಹುದಿತ್ತು ಅಲ್ಲವೆ? ಎಂದು ಪ್ರಶ್ನಿಸಿದರು. ʼನಮ್ಮ ನೀರು ನಮ್ಮ ಹಕ್ಕುʼ ಎಂದು ಜಾಗಟೆ ಹೊಡೆದುಕೊಂಡು ಊರೂರು ತಿರುಗಾಡಿದರು, ರಾಮನಗರದಲ್ಲಿ ಗೋಡೆಗಳ ಮೇಲೆ ಸ್ಲೋಗನ್ ಬರೆದುಕೊಂಡಿದ್ದರು. ನೀರಿನ…
ಕಾವೇರಿ ವಿವಾದ; ನಾಳೆ ಸುಪ್ರೀಂಗೆ ಮನವಿ ಸಲ್ಲಿಸಲಿರುವ ಕರ್ನಾಟಕ
ಬೆಂಗಳೂರು: ಕಾನೂನು ಹೋರಾಟ ಹೇಗೆ ಮಾಡಬೇಕೆಂಬುದರ ಬಗ್ಗೆ ಅಡ್ವೋಕೇಟ್ ಜನರಲ್ ಅವರಿಗೆ ಬಿಟ್ಟಿದ್ದೇವೆ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರವಾಗಿ ಮನವಿ ಸಲ್ಲಿಸುತ್ತಿದ್ದೇವೆ. ಈಗಾಗಲೇ ನೀರು ಹರಿಸುವ ನಿರ್ಧಾರ ಮರು ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದೇವೆ. ನಾವು ರೈತರ ಹಿತವನ್ನು ಕಾಯಬೇಕು. ಕೋರ್ಟ್ ನಿರ್ಧಾರಕ್ಕೂ ಆದ್ಯತೆ ನೀಡಬೇಕು ಎಂದರು. ಬಿಜೆಪಿ ಹಾಗೂ ದಳದ ಸ್ನೇಹಿತರು ಈ ವಿಚಾರದಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅವರಿಗೆ ತಮ್ಮ ಕಾಲದಲ್ಲಿ ಏನಾಗಿತ್ತು ಎಂಬ ಅರಿವಿಲ್ಲವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದೇ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದವರು ತಿಳಿಸಿದರು.”ಕಾವೇರಿ, ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದ, ರಾಜ್ಯದ ಅಣೆಕಟ್ಟೆಗಳಲ್ಲಿ ನೀರು ಪರಿಸ್ಥಿತಿ, ಕುರಿತು ಚರ್ಚಿಸಲು ಬುಧವಾರ ಸರ್ವಪಕ್ಷಗಳ ಸಭೆ…
ಕಾವೇರಿ, ಮಹದಾಯಿ ಕಾರ್ಯತಂತ್ರ; ಬುಧವಾರ ಸರ್ವಪಕ್ಷ ಸಭೆ
ಬೆಂಗಳೂರು: ಮಹದಾಯಿ, ಕಾವೇರಿ ನದಿ ನೀರು ಹಂಚಿಕೆ ಕುರಿತು ಬುಧವಾರ ಸರ್ವಪಕ್ಷಗಳ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಗಸ್ಟ್ 23ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ತಿಳಿಸಿದರು. ಈ ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಈ ಸಭೆಗೆ ಎಲ್ಲ ಸಂಸದರನ್ನು ಆಹ್ವಾನಿಸಲಾಗಿದೆ ಎಂದು ತಿಳಸಿದರು.
ರಾಜ್ಯದಲ್ಲಿ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರಗಳು ಪುನಾರಂಭ: ಡಿಸಿಎಂ ಡಿಕೆಶಿ ಘೋಷಣೆ
ಬೆಂಗಳೂರು: “ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರವನ್ನು ಪ್ರತಿ ಪಂಚಾಯಿತಿಯಲ್ಲಿ ಸ್ಥಾಪನೆ ಮಾಡಿಸಿದ್ದೆ. ಬೇರೆ ಸರ್ಕಾರಗಳು ರಾಜೀವ್ ಗಾಂಧಿ ಅವರ ಹೆಸರು ಇದೆ ಎಂದು ಈ ಯೋಜನೆ ಮುಂದುವರೆಸಲಿಲ್ಲ. ಈಗ ಈ ಕೇಂದ್ರಗಳನ್ನು ಪುನಾರಂಭಿಸಿ ಯುವಶಕ್ತಿಯನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಮತ್ತು ದೇವರರಾಜ ಅರಸು ಜಯಂತ್ಯೋತ್ಸವದಲ್ಲಿ ಮಾತನಾಡಿದ ಶಿವಕುಮಾರ್, “ರಾಜೀವ್ ಗಾಂಧಿ ಎನ್ನುವುದು ಕೇವಲ ಹೆಸರಲ್ಲ. ದೇಶದ ಯುವ ಆಲೋಚನೆಯ ಶಕ್ತಿ. ಜೊತೆಗೆ ಈ ಕರ್ನಾಟಕದ ಶಕ್ತಿಯಾಗಿದ್ದ ದೇವರಾಜ್ ಅರಸು ಅವರು ಹುಟ್ಟಿದ ದಿನ ಇಂದು. ಎರಡು ಮಹಾನ್ ಶಕ್ತಿಗಳ ಆಡಳಿತ ನಮಗೆಲ್ಲ ಮಾದರಿ ಎಂದರು. ಪಂಚಾಯಿತಿಯಿಂದ ಪಾರ್ಲಿಮೆಂಟಿನ ತನಕ ನಾಯಕರು ಬೇಕು ಎಂಬ ಆಲೋಚನೆ ಅವರದು. ನಾಯಕರುಗಳನ್ನು ಗುರುತಿಸಲು ಅನುವಾಗುವಂತೆ ಸಂವಿಧಾನದ 73 ಮತ್ತು 74…
“ಶಾಲಾ ವಾಸ್ತವ್ಯ”: ಹನೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ನಡೆ ಬಗ್ಗೆ ವಿದ್ಯಾರ್ಥಿ ಪೋಷಕರರಿಂದ ಸಕತ್ ಲೈಕ್ಸ್
ಚಾಮರಾಜನಗರ: ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಅವರು ಶಾಲಾ ವಾಸ್ತವ್ಯ ಕಾರ್ಯಕ್ರಮ ಆಯೋಜಿಸಿ ಗಮನಸೆಳೆದಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್‍ರವರು ಮೀಣ್ಯಂ, ನಕ್ಕುಂದಿ, ಗಾಜನೂರು, ಕೊಪ್ಪ ಮುಂತಾದ ಗ್ರಾಮಗಳಲ್ಲಿ ವಾಸವಿರುವ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಮಕ್ಕಳ ಕಲಿಕಾ ಪ್ರಗತಿಯನ್ನು ಪರಿಶೀಲಿಸಿದರು, ವಿದ್ಯಾರ್ಥಿಗಳ ಸಾಧನೆಗೆ ಪೋಷಕರು ಯಾವ ರೀತಿ ಮಕ್ಕಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂಬ ಬಗ್ಗೆ ಮಾಹಿತಿಯನ್ನು ತಿಳಿಸಿದರು. ಶಾಲೆಗೆ ಗೈರು ಹಾಜರಾಗಿರುವ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಬರುವಂತೆ ಮನೆ ಮನೆಗೆ ತೆರಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳ ಮನವೊಲಿಸಿದರು. ಹಾಗೂ ಎಸ್ಎ ಟಿಎಸ್ ನಲ್ಲಿ ಪೆಂಡಿಂಗ್ ಇರುವ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಕಂದವೇಲು ಕೂಡ್ಲೂರು ಸಿಆರ್‌ಪಿ ಷಣ್ಮುಗಂ,, ಪ್ರೌಢಶಾಲಾ ಸಹ ಶಿಕ್ಷಕ ರ…
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
ಮೈಸೂರು: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಕುರಿತಂತೆ ತೀವ್ರ ಚರ್ಚೆ ಆರಂಭವಾಗಿದೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದ ಬಾಂಬೆ ಟೀಮ್ ಖ್ಯಾತಿಯ ನಾಯಕರು ಇದೀಗ ಬದಲಾದ ಪರಿಸ್ಥಿತಿಯಲ್ಲಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆಗಳಿವೆ ಎಂಬ ಮಾತುಗಳು ಹರಿದಾಡುತ್ತಿವೆ. ಹಿಂದೆ ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿರುವ ಅನೇಕರು ಇದೀಗ ಬಿಜೆಪಿ ನಾಯಕತ್ವ ಬಗ್ಗೆ ಅಸಮಾಧಾನ ಹೊರಹಾಕುತ್ತಿರುವ ವೈಖರಿಯು ಈ ಚರ್ಚೆಗಳಿಗೆ ತುಪ್ಪ ಸುರಿದಂತಿದೆ. ಈ ನಡುವೆ, ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. 10 ರಿಂದ 15 ಮಂದಿ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿರುವ ನಾಯಕರೊಂದಿಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ…
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಇಲ್ಲ; ಗೋಪಾಲಯ್ಯ ಸ್ಪಷ್ಟನೆ
ಬೆಂಗಳೂರು: ತಾವು ಕಾಂಗ್ರೆಸ್ ಸೇರುವ ಸಾಧ್ಯತೆ ಕುರಿತ ಸುದ್ದಿಯನ್ನು ಮಾಜಿ ಸಚಿವ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ತಳ್ಳಿಹಾಕಿದ್ದಾರೆ. ಬಿಜೆಪಿ ಸಿದ್ಧಾಂತ, ನಾಯಕರನ್ನು ನಂಬಿಯೇ ಪಕ್ಷ ಸೇರ್ಪಡೆಯಾಗಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ತಾವು ಬಿಜೆಪಿ ತ್ಯಜಿಸುವ ಸೂಡಿ ಕುರಿತು ಪ್ರತಿಕ್ರಿಯಿಸುವ ಗೋಪಾಲಯ್ಯ ಅವರು ನಾನು ಕನಸಿನಲ್ಲೂ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಯೋಚನೆಯಾಗಿಲ್ಲ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಂತಹ ಹುಸಿ ಸುದ್ದಿ ಏಕೆ ಬರುತ್ತವೆಯೋ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಮತದಾರರು ನನಗೆ ಹೆಚ್ಚಿನ ಬಹುಮತ ನೀಡಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ನನಗೆ ಬಂದಿಲ್ಲ ಎಂದಿರುವ ಅವರು, ಈಗ ಕೇಳಿ ಬರುತ್ತಿರುವ ಸುದ್ದಿಗಳು ಕೇವಲ ವದಂತಿ…
