ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪೂರೈಸದಿದ್ದರೆ ಪ್ರತಿಭಟನೆ; ಬಿಜೆಪಿ ಎಚ್ಚರಿಕೆ

ಬೆಂಗಳೂರು: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ರೈತರ ಮತ್ತು ಕೃಷಿಕರ ಪಂಪ್ ಸೆಟ್‍ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಎಚ್ಚರಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಯಂತೆ ಸರಿಯಾದ ಪ್ರಮಾಣದಲ್ಲಿ ಮಳೆ ಆಗಿಲ್ಲ. ರಾಜ್ಯದ ಎಲ್ಲ ಕಡೆಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಜಲಾಶಯಗಳಲ್ಲಿ ಸಹ ನೀರಿನ ಸಂಗ್ರಹ ಪ್ರಮಾಣ ತೃಪ್ತಿಕರವಾಗಿಲ್ಲ. ಬಿತ್ತನೆ ಪ್ರಮಾಣ ಸಹ ಕುಂಠಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಐಪಿ ಸೆಟ್‍ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ರಾಜ್ಯದಲ್ಲಿ ಆಹಾರ ಉತ್ಪನ್ನಗಳ ಮೇಲೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಅವರು ಆತಂಕ…

ಬಿಜೆಪಿ ಬಿಟ್ಟು ಯಾರೂ ಹೋಗಲ್ಲ; ಹಸ್ತಕ್ಕೆ ಆಪರೇಷನ್ ಮಾಡಲು ಗೊತ್ತಿದೆ: ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಅವರು ಎಚ್ಚರಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿತ್ತು. ಯಾರಿಗೂ ಬಹುಮತ ಇರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸೇರಿ ಸರಕಾರ ನಡೆಸಿದ್ದವು. 3 ತಿಂಗಳಿಗೇ ನಿಮ್ಮದು ಅಧ್ವಾನ ಆಗಿತ್ತು. ಒಬ್ಬರಿಗೆ ಒಬ್ಬರನ್ನು ಕಂಡರೆ ಆಗದ ಸ್ಥಿತಿ ಇತ್ತು ಎಂದು ವಿವರಿಸಿದರು. ಅದರ ಪರಿಣಾಮವಾಗಿ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಆದರೂ ಎರಡೂ ಪಕ್ಷಗಳು ಹೀನಾಯವಾಗಿ ಸೋತಿದ್ದವು ಎಂದು ಗಮನ ಸೆಳೆದರು. ಅನಿಶ್ಚಿತತೆ, ಅರಾಜಕೀಯ ಪರಿಸ್ಥಿತಿ ಬಂದಾಗ ಶಾಸಕರಿಗೆ ಬಿಜೆಪಿಯೇ ಪರ್ಯಾಯ ಎನಿಸಿತ್ತು. ಈಗ ಪೂರ್ಣ ಬಹುಮತ ಇದೆ.…

ಚಾಮರಾಜನಗರ: ಯಶಸ್ವೀ ಕಾರ್ಯಾಚರಣೆ; ನರಹಂತಕ ಕಾಡಾನೆ ಸೆರೆ

ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಭಾಗದ ಪೊನ್ನಾಚಿ ಅರಣ್ಯ ಪ್ರದೇಶದಲ್ಲಿ ತೊಂದರೆ ಕೊಡುತ್ತಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪೊನಾಚಿ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಾದ ಕೆಕ್ಕೆಹೊಲ, ಅಸ್ತೂರು, ಮರೂರು ಇನ್ನಿತರೆ ಗ್ರಾಮಗಳಿಗೆ ಪುಂಡಾನೆಯು ಕಳೆದ ನಾಲ್ಕು ಐದು ತಿಂಗಳಿಂದ ದಾಳಿ ಮಾಡಿ ರೈತರು ಬೆಳೆದಿದ್ದ ಫಸಲುಗಳನ್ನು ನಾಶಪಡಿಸುತ್ತಿತ್ತು .ಹಾಗೂ ಗ್ರಾಮದೊಳಗೆ ನುಗ್ಗಿ ಮನೆಯ ಗೇಟ್, ಬೈಕ್‌ಗಳಿಗೂ ಸಹ ಹಾನಿ ಮಾಡಿತ್ತು. ಆಗಸ್ಟ್ 7 ರಂದು ಪೊನ್ನಾಚಿ ಹಾಗೂ ತಾಳಬೆಟ್ಟ ಮಾರ್ಗ ಮಧ್ಯದಲ್ಲಿ ಪುಂಡಾನೆಯು ಕೆಎಸ್ಆರ್ ಟಿ ಸಿ ಬಸ್ಸಿಗೆ ಅಡ್ಡಲಾಗಿ ನಿಂತು ಬಸ್ಸನ್ನು ಅಟ್ಟಾಡಿಸಿ ಪ್ರಯಾಣಿಕರಲ್ಲಿ ಕೆಲಕಾಲ ಆತಂಕವನ್ನು ಸೃಷ್ಟಿಸಿತ್ತು. ಪುಂಡಾನೆಯಿಂದ ಭಯಭೀತಿಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪುಂಡಾನೆಯನ್ನು ಸೆರೆಹಿಡಿದು ಬೇರೆಡೆಗೆ ಸಾಗಿಸುವಂತೆ ಮನವಿಯನ್ನು ಮಾಡಿದರು ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪುಂಡಾನೆಯನ್ನು ಸೆರೆ ಹಿಡಿಯಲು…

ಮೀಸಲಾತಿ ಫೈಟ್; ಸಿದ್ದು ಸರ್ಕಾರಕ್ಕೆ ಶಾಕ್ ಕೊಟ್ಟ ಪಂಚಮಸಾಲಿ ಶ್ರೀ

ಬೆಳಗಾವಿ: ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರದಲ್ಲಿ ಹಠಕ್ಕೆ ಬಿದ್ದಿರುವ ಕೂಡಲಸಂಗಮದ ಪೀಠಾಧಿಪತಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಇದೀಗ ಸಿದ್ದರಾಮಯ್ಯ ಸರ್ಕಾರದ ವಿರುದ್ದವೂ ತೊಡೆ ತಟ್ಟಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಲಿಂಗಾಯತರು ಮತ್ತೆ ಧ್ವನಿ ಎತ್ತಿದ್ದು, ಆ ನಿಟ್ಟಿನಲ್ಲಿ ಈ ತಿಂಗಳ ಅಂತ್ಯದಲ್ಲೇ ಹೋರಾಟ ಆರಂಭವಾಗಲಿದೆ ಎಂದಿರುವ ಬಸವಜಯ ಮೃತ್ಯುಂಜಯ ಶ್ರೀ, ಸಧ್ಯವೇ ಹೋರಾಟ ಬಗ್ಗೆ ಘೋಷಣೆ ಮಾಡಲಾಗುವುದೆಂಬ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದ್ದಾರೆ. ಬೆಳಗಾವಿಯಲ್ಲಿ ಪಂಚಮಸಾಲಿ ಲಿಂಗಾಯತ ಜಿಲ್ಲಾಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ಮೀಸಲಾತಿ ವಿಚಾರ ಬಗ್ಗೆ ನಿರ್ಣಯ ಹೊರಬಿದ್ದಿದೆ. ಈ ಕುರಿತಂತೆ ಬೆಳಗಾವಿಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು. ಚುನಾವಣೆ ಪೂರ್ವದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಡಿ ಮೀಸಲಾತಿ ಘೋಷಿಸಲಾಗಿತ್ತು. ಚುನಾವಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹೋರಾಟಕ್ಕೆ ವಿರಾಮ ನೀಡಿದ್ದೆವು. ಆದರೆ ನೂತನ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲು ಹಿಂದೇಟು ಹಾಕಿದೆ ಎಂದು ಅಸಮಾಧಾನ…

ಲೋಕಸಭೆ ಚುನಾವಣೆಗೆ ಜೆಡಿಎಸ್ ರಣತಂತ್ರ; ಜಿಟಿಡಿ ಸಾರಥ್ಯದಲ್ಲಿ ನೂತನ ಕೋರ್ ಕಮಿಟಿ

ಬೆಂಗಳೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರ ನಿರ್ದೇಶನದ ಮೇರೆಗೆ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಚನೆ ಮಾಡಲಾಗಿದೆ. ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಪಕ್ಷದ ನೂತನ ಕಮಿಟಿ ರಚನೆ ಮಾಡಲಾಗಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಶುಕ್ರವಾರ ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು, ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರನ್ನು ನೇಮಕ ಮಾಡಲಾಗಿದೆ ಎಂದರು. ಆಗಸ್ಟ್ 7 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಕೋರ್ ಕಮಿಟಿಯ ಹೊಸ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು ಎಂದು ಅವರು ಹೇಳಿದರು. ಕೋರ್…

‘2,000 ಎಕರೆ ಭೂಮಿಯನ್ನು ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ..?’

ಬೆಂಗಳೂರು: ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ಇದ್ದರೆ ನಮ್ಮ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. ಜಾತ್ಯತೀತ ಜನತಾದಳ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ವಿರುದ್ಧ ಸಂಸದ ಡಿ.ಕೆ.ಸುರೇಶ್ ಮಾಡಿದ್ದ ಟೀಕೆಗಳಿಗೆ ತಿರುಗೇಟು ನೀಡಿದರು.  ನೈಸ್ ಯೋಜನೆಗಳ ಅಕ್ರಮಗಳಿಗೆ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಕಾರಣ. ಈ ವಿಷಯ ಇಡೀ ರಾಜ್ಯಕ್ಕೆ ಗೊತ್ತಿದೆ. ನೈಸ್ ಅಕ್ಕಪಕ್ಕ ಜಮೀನುಗಳನ್ನು ಯಾರು ಕೊಳ್ಳೆ ಹೊಡೆದಿದ್ದಾರೆ ಎನ್ನುವುದೂ ತಿಳಿದಿದೆ ಎಂದು ಅವರು ಆರೋಪ ಮಾಡಿದರು. ನೈಸ್ ಯೋಜನೆಗೆ ಸಹಿ ಹಾಕಿದ್ದು ಅಂದಿನ ಮುಖ್ಯಮಂತ್ರಿ ದೇವೇಗೌಡರು ಎಂದು ಡಿಕೆ ಸುರೇಶ್ ನೀಡಿದ್ದ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿಗಳು; ದೇವೇಗೌಡರು ಸಹಿ…

ಬಿಜೆಪಿ ಶಾಸಕರಿಗೆ ಕೇಂದ್ರ ಸಚಿವರಿಂದ ಬೆದರಿಕೆ ಪ್ರಕರಣ; ನ್ಯಾಯಾಂಗ ತನಿಖೆಯೇ ಸೂಕ್ತ ಎಂದ ಕಾಂಗ್ರೆಸ್

ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಔರಾದ್‌ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಮಾಡಿರುವ ಆರೋಪ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಈ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿದ ರಮೇಶ್‌ ಬಾಬು, ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಹಾಕಲಾಗಿದೆ, ನನ್ನ ಪ್ರಾಣಕ್ಕೆ ಆಪತ್ತಿದೆ ಎಂದು ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಗಂಬೀರವಾದ ಆರೋಪ ಮಾಡಿದ್ದಾರೆ. ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ. ಚುನಾವಣೆಗೂ ಮೊದಲು ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ, ಚುನಾವಣೆ ಸೋತ ನಂತರವೂ ಹಳೆಯ ಚಾಳಿ ಬಿಟ್ಟಿಲ್ಲ ಎಂದು ವ್ಯಂಗ್ಯವಾಡಿದರು. ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಕೇಂದ್ರ ಸಚಿವ ಭಗವಂತ ಖೂಬಾ…

ಚಾಮರಾಜನಗರ: ಮಾರ್ಟಳ್ಳಿ ಗ್ರಾಮ ಬಳಿ ಆನೆ ತುಳಿತಕ್ಕೆ ವೃದ್ದ ಬಲಿ

ಚಾಮರಾಜನಗರ: ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಬಳಿ ಕಾಡಾನೆ ದಾಳಿಗೆ ಚೆನ್ನ ಮಾದಯ್ಯ(60) ಮೃತಪಟ್ಟಿದ್ದಾರೆ‌. ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾರ್ಟಳ್ಳಿ ಗ್ರಾಮ ಪಂಚಾಯಿತಿ ತಾಂಡ ಮೇಡು ಬೋರೆ ಗ್ರಾಮದ ನಿವಾಸಿ ಬೇಡಗಂಪಣ ಜನಾಂಗದ ಸತ್ತಿಗೆ ಮಾದಯ್ಯರವರ ಪುತ್ರ ಚೆನ್ನ ಮಾದಯ್ಯ ಅನ್ಯ ಕಾರ್ಯ ನಿಮಿತ್ತ ತೋಕೆರೆ ಗ್ರಾಮಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ರಾಮಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹಾಗೂ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಾಪುರ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KSRTCಗೆ ಏಷ್ಯಾದ ‘ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023’ ಪ್ರದಾನ

ಸಿಂಗಾಪೂರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇದೀಗ ಏಷ್ಯಾದಲ್ಲೇ ಅತ್ತುತ್ತಮ ಸಾರಿಗೆ ಸಂಸ್ಥೆ. ಅತ್ಯುತ್ತಮ ಸೇವೆ, ನಿರ್ವಹಣೆಗೆ ಹೆಸರಾಗಿರುವ ಕರ್ನಾಟಕ ಸರ್ಕಾರಿ ಸ್ವಾಮ್ಯದ KSRTCಗೆ ಏಷ್ಯಾದ ‘ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023’ ಸಿಕ್ಕಿದೆ. ಸಿಂಗಾಪೂರದಲ್ಲಿ ಇಂದು (ಗುರುವಾರ) ನಡೆದ ಅನನ್ಯ ಸಮಾರಂಭ ಜಾಗತಿಕ ಗಮನಸೆಳೆಯಿತು. ಅದ್ಧೂರಿ ಸಮಾರಂಭದಲ್ಲಿ ಜಾಗತಿಕ ಉದ್ಯಮ ದಿಗ್ಗಜರ ಉಪಸ್ಥಿತಿಯಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. 17.08.2023ರಂದು ಸಿಂಗಾಪುರ್‌ನಲ್ಲಿ World Sustainability Congress ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್’ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಯನ್ನು ಘೋಷಿಸಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆ ಮಾಡಿರುವ ತೀರ್ಪುಗಾರರು ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ KSRTC ಬಗ್ಗೆ ಕೊಂಡಾಡಿದರು. ಹಲವು ಸುತ್ತುಗಳ ಪ್ರಕ್ರಿಯೆಯ ನಂತರ ಅತ್ಯುತ್ತಮ ಉದ್ಯೋಗದಾತ ಪ್ರಶಸ್ತಿಯನ್ನು ನೀಡಲಾಗಿದೆ…