KSRTCಗೆ ಏಷ್ಯಾದ ‘ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023’ ಪ್ರದಾನ

ಸಿಂಗಾಪೂರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇದೀಗ ಏಷ್ಯಾದಲ್ಲೇ ಅತ್ತುತ್ತಮ ಸಾರಿಗೆ ಸಂಸ್ಥೆ. ಅತ್ಯುತ್ತಮ ಸೇವೆ, ನಿರ್ವಹಣೆಗೆ ಹೆಸರಾಗಿರುವ ಕರ್ನಾಟಕ ಸರ್ಕಾರಿ ಸ್ವಾಮ್ಯದ KSRTCಗೆ ಏಷ್ಯಾದ ‘ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023’ ಸಿಕ್ಕಿದೆ. ಸಿಂಗಾಪೂರದಲ್ಲಿ ಇಂದು (ಗುರುವಾರ) ನಡೆದ ಅನನ್ಯ ಸಮಾರಂಭ ಜಾಗತಿಕ ಗಮನಸೆಳೆಯಿತು. ಅದ್ಧೂರಿ ಸಮಾರಂಭದಲ್ಲಿ ಜಾಗತಿಕ ಉದ್ಯಮ ದಿಗ್ಗಜರ ಉಪಸ್ಥಿತಿಯಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. 17.08.2023ರಂದು ಸಿಂಗಾಪುರ್‌ನಲ್ಲಿ World Sustainability Congress ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್’ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಯನ್ನು ಘೋಷಿಸಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆ ಮಾಡಿರುವ ತೀರ್ಪುಗಾರರು ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ KSRTC ಬಗ್ಗೆ ಕೊಂಡಾಡಿದರು. ಹಲವು ಸುತ್ತುಗಳ ಪ್ರಕ್ರಿಯೆಯ ನಂತರ ಅತ್ಯುತ್ತಮ ಉದ್ಯೋಗದಾತ ಪ್ರಶಸ್ತಿಯನ್ನು ನೀಡಲಾಗಿದೆ…

ತಮಿಳುನಾಡಿಗೆ ಕಾವೇರಿ ನೀರು ನಿಲ್ಲಿಸಿ, ಸರ್ವಪಕ್ಷ ಸಭೆ ಕರೆಯಿರಿ; ಸರ್ಕಾರಕ್ಕೆ ಪ್ರತಿಪಕ್ಷಗಳ ಒತ್ತಡ

ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ. ಈ ಎಕ್ಸ್ ಸಾಮಾಜಿಕ ತಾಣದಲ್ಲಿ ತಮ್ಮ ಅಭಿಪ್ರಾಯ ಬರೆದಿರುವ ಅವರು; ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ರೀತಿಯಲ್ಲಿ ಹರಿಹಾಯ್ದಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು,ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಅವರು ಕಿಡಿ…

ರಿವರ್ಸ್ ಆಪರೇಷನ್? ಕಾಂಗ್ರೆಸ್’ಗೆ ಆಟ, ಬಿಜೆಪಿಗೆ ಪ್ರಾಣಸಂಕಟ..!

ಬೆಂಗಳೂರು: ಲೋಕಸಭಾ ಚುನಾವಣಾ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯ ಪಕ್ಷಗಳಲ್ಲೂ ವಿದ್ಯಮಾನಗಳು ಗರಿಗೆದರಿವೆ. ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಇದಕ್ಕೆ ಪೂರಕವಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎದುರಾಳಿ ಪಕ್ಷಗಳಿಗೆ ನೀಡಿರುವ ಆಹ್ವಾನ ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ವಲಸಿಗರ ಅವಾಂತರದಿಂದಾಗಿ ರಾಜ್ಯ ಬಿಜೆಪಿಯಲ್ಲಿ ಬಿನ್ನಾಭಿಪ್ರಾಯ ಸನ್ನಿವೇಶ ಕಂಡುಬರುತ್ತಿದೆ ಎಂಬ ಮಾತುಗಳೂ ಹರಿದಾಡುತ್ತಿವೆ. ಜೊತೆಗೆ ಪ್ರತಿಪಕ್ಷ ನಾಯಕರ ಸ್ಥಾನ, ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ನಾಯಕರು, ಅವರ ಬೆಂಬಲಿಗರು ಕಾಂಗ್ರೆಸ್ ನಾಯಕತ್ವವನ್ನು ಕೊಂಡಾಡುತ್ತಿರುವ ಅಚ್ಚರಿಯ ಸನ್ನಿವೇಶಗಳೂ ಕಮಲ ನಾಯಕನ್ನು ತಬ್ಬಿಬ್ಬು ಮಾಡಿದೆ. ರಿವರ್ಸ್ ಆಪರೇಷನ್..? ಈ ನಡುವೆ ಆಪರೇಷನ್ ಕಮಲ ಮೂಲಕ ಈ ಹಿಂದೆ ಬಿಜೆಪಿ ಸೇರಿದ್ದ ಕೆಲವು ನಾಯಕರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ ಎಂಬ ಮಾತುಗಳೂ ಪ್ರತಿಧ್ವನಿಸುತ್ತಿವೆ. ಸೋಮಣ್ಣ, ಗೋಪಾಲಯ್ಯ, ಎಸ್.ಟಿ.ಸೋಮಶೇಖರ್ ಸಹಿತ ಅನೇಕ ನಾಯಕರು ಆಪರೇಷನ್ ಕಮಲ…

ಧರ್ಮಸ್ಥಳ ಕೃಪೆ; ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಜನರ ಕನಸು ನನಸು

ಚಾಮರಾಜನಗರ: ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಹಾಲು ಉತ್ಪಾದಕರ ಕನಸು ನನಸಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ದಿ ವತಿಯಿಂದ ಬಂಡಳ್ಳಿ ವಲಯದ ಶಾಗ್ಯ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಕಟ್ಟಡ ನಿರ್ಮಾಣ ಮಾಡಲು ಎರಡು ಲಕ್ಷ ಸಹಾಯಧನ ಮಂಜೂರು ಪತ್ರ ನೀಡಲಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜೀರ್ಣೋದ್ಧಾರ ಯೋಜನೆ ಅಡಿಯಲ್ಲಿ ಶ್ರೀ ಫಲಹಾರ ಪ್ರಭು ಸ್ವಾಮಿ ಸಮುದಾಯ ಭವನಕ್ಕೆ ವೀರೇಂದ್ರ ಹೆಗಡೆ ಅವರಿಂದ 3 ಲಕ್ಷ ರೂ ಸಹಾಯಧನ ಮಂಜೂರು ಆಗಿದ್ದು ಮಂಜೂರಾತಿ ಪತ್ರವನ್ನು ಬುಧವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ನಿರ್ದೇಶಕರಾದ ಲತಾ ಬಂಗೇರೆ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾಲು ಉತ್ಪಾದಕರ ಒಳಿತಿಗಾಗಿ ಹಾಗೂ ಅಭಿವೃದ್ಧಿಗಾಗಿ ಧರ್ಮಸ್ಥಳ ಧರ್ಮಾಧಿಕಾರಿಗಳು 2,00,000 ರೂಪಾಯಿ ಸಹಾಯಧನ ನೀಡಿದ್ದು ಮುಂದಿನ ದಿನಗಳಲ್ಲಿ ಶಾಗ್ಯ ಹಾಲು ಉತ್ಪಾದಕರ ಸಹಕಾರ ಸಂಘವು ಮಾದರಿ…

ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್… ಭ್ರಷ್ಟರ ಬೆನ್ನತ್ತಿದ ಲೋಕಾ ಪೊಲೀಸ್

ಬೆಂಗಳೂರು: ಭ್ರಷ್ಟರ ಬೆನ್ನತ್ತಿರುವ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ ಕೈಗೊಂಡಿರುವ ಲೋಕಾ ಪೊಲೀಸರು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಕೊಡಗು, ಚಿತ್ರದುರ್ಗ, ಬೀದರ್ ಸಹಿತ ಹಲವು ನಗರಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬೆಂಗಳೂರುನಗರದ ಹತ್ತಕ್ಕೂ ಹೆಚ್ಚುಕಡೆ ದಾಳಿ ನಡೆಸಿರುವ ಲೋಕಾಯುಕ್ತ, ರಾಜ್ಯದ ಅಧಿಕಾರಿಗಳ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಮಹದೇವಪುರ ವಲಯದ ಕಂದಾಯ ಅಧಿಕಾರಿ ನಟರಾಜ್ ಮನೆ ಮೇಲೆ ದಾಳಿ ನಡೆದರೆ, ಲೋಕಾಯುಕ್ತದ ಮತ್ತೊಂದು ತಂಡ, ರಾಮನಗರ ಜಿಲ್ಲೆ ಕನಕಪುರ ಸಮೀಪ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆ ಮೇಲೆ ಲಗ್ಗೆ ಹಾಕಿ ಪರಿಶೀಲನೆ ನಡೆಸಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಆರ್.ಎಫ್.ಒ ಸತೀಶ್ ಮನೆ ಮೇಲೆ ಮತ್ತೊಂದು ತಂಡ ಕಾರ್ಯಾಚರಣೆ ನಡೆಸಿದೆ. ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ‌…

Uncategorized

ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲೇಟು; ಸವಾಲಾದ ಪುಂಡರ ಕಾಟ

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಯುವಕರ ಗುಂಪು ಪುಂಡಾಟ ಪ್ರದರ್ಶಿಸಿದೆ. ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಬುಧವಾರ ಕಿಡಿಗೇಡಿಗಳು ಕೆಲ್ಲೆಸೆದು ಕಿಟಕಿಯೊಂದಕ್ಕೆ ಹಾನಿ ಮಾಡಿದ್ದಾರೆ. ಮಂಗಳೂರು-ಚೆನ್ನೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ನೇತ್ರಾವತಿ ಎಕ್ಸ್‌ಪ್ರೆಸ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಬುಧವಾರ ಮತ್ತೊಂದು ದಾಳಿ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಣ್ಣೂರು ಸಮೀಪ ಎರಡು ರೈಲುಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ವಟಕರ ಎಂಬಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಪುಂಡರು ಈ ಕಲ್ಲು ತೂರಾಟ ನಡೆಸಿದ್ದು ಕಿಟಕಿಗೆ ಹಾನಿಯಾಗಿದೆ. ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ರೈತರ ಹಿತಶಕ್ತಿ ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುವುದು ರೈತದ್ರೋಹಿ ಕಾರ್ಯ

ಬೆಂಗಳೂರು: ರಾಜ್ಯದ ರೈತರ ಹಿತಶಕ್ತಿ ಬಲಿಕೊಟ್ಟು ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದು ರೈತದ್ರೋಹಿ ಕಾರ್ಯ ಎಂದು ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಕಾವೇರಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಬೆಳೆ ಬೆಳೆಯಲು ಸಂಪೂರ್ಣವಾಗಿ ನೀರುಹರಿಸಬೇಕೆಂದು ಒತ್ತಾಯಿಸಿದಾಗ ಮೈಸೂರಿನಲ್ಲಿ 14ನೇ ತಾರೀಕು ಪ್ರತಿಭಟನೆ ಮಾಡಿ ಅದೇ ದಿನ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಕರೆದಿದ್ದರು. ಸಭೆಯಲ್ಲಿ ನಾವು ತಮಿಳುನಾಡಿಗೆ ಬಿಡುವ ಬದಲು ರಾಜ್ಯದ ರೈತರ ಹಿತಾಸಕ್ತಿ ಕಾಪಾಡಿ ಎಂದು ವಿರೋಧ ವ್ಯಕ್ತಪಡಿಸಿದ್ದೇವೆ ಎಂದವರು ಹೇಳಿದ್ದಾರೆ. ನಮ್ಮ ರೈತರ ಬಲಿಕೊಟ್ಟು ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ. ಕೂಡಲೇ ಕಾವೇರಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಬೆಳೆ ಬೆಳೆಯಲು ನೀರು ಹರಿಸಬೇಕು. ಸರ್ಕಾರ ನಾಟಕೀಯವಾಗಿ ವರ್ತಿಸದೆ ರಾಜ್ಯದ ರೈತರ ಹಿತ ಕಾಪಾಡಬೇಕು. ಮಳೆ ಪ್ರಮಾಣ ಕಡಿಮೆಯಾಗಿರುವ ಬಗ್ಗೆ ಕಾವೇರಿ ಪ್ರಾಧಿಕಾರಕ್ಕೆ ಮನವಿ ಮಾಡಿ ರಾಜ್ಯದ ರೈತರ ಹಿತಶಕ್ತಿ ಕಾಪಾಡಬೇಕು…

ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಸ್ಥಗಿತಗೊಳ್ಳುತ್ತಾ? KSRTC ಸ್ಪಷ್ಟನೆ ಹೀಗಿದೆ..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಸದ್ಯವೇ ಕೊನೆಗೊಳ್ಳುತ್ತಾ? ಮಹಿಳೆಯರಿಗಾಗಿ ಜಾರಿಗೆ ಬಂದಿರುವ ಉಚಿತ ಬಸ್ ಪ್ರಯಾಣದ ಸೌಲಭ್ಯ ಅಂತ್ಯಗೊಳ್ಳುತ್ತಾ? ಈ ಬಗ್ಗೆ ಅಂತೆಕಂತೆಗಳ ಸುದ್ದಿ ಹರಿದಾಡುತ್ತಿದ್ದು, ಜನ ಗೊಂದಲಕ್ಕೀಡಾಗಿದ್ದಾರೆ. ಆದರೆ ಇದು ಸುಳ್ಳು ವದಂತಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದೆ. ಕೆಎಸ್ಸಾರ್ಟಿಸಿ ಹೇಳುತ್ತಿರುವುದೇನು? ಸಾಮಾಜಿಕ‌ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಶಕ್ತಿ’ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು ಎಂದು ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿ ಪ್ರಕಟಣೆ ತಿಳಿಸಿದೆ.  ಈ ಬಗ್ಗೆ ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುವುದಾಗಿ ತಿಳಿಸಿರುವ…

ಹನೂರಿನಲ್ಲಿ ಅದ್ಧೂರಿ ಸ್ವಾತಂತ್ರ್ಯೋತ್ಸವ.. ವಿದ್ಯಾರ್ಥಿಗಳ ಅನನ್ಯ ಸಡಗರ…

ಹನೂರು: ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ದ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ವೈ ಕೆ ಗುರುಪ್ರಸಾದ್, ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಮಹನೀಯರ ಕೊಡುಗೆ ಇದೆ. ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ವೀರ ಯೋಧರು ಮತ್ತು ಹೋರಾಟಗಾರರನ್ನು ಸ್ಮರಣೆ ಮಾಡುವ ಸುದಿನ. ಅವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವ ಮೂಲಕ ದೇಶ ಪ್ರೇಮವನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕು. ಹನೂರು ಶೈಕ್ಷಣಿಕವಾಗಿ ಜಿಲ್ಲೆಯಲ್ಲೇ ಉನ್ನತ ಮಟ್ಟದ ಸಾಧನೆ ಮಾಡುತ್ತಿದೆ. ಈ ಮಹಾನ್ ಕಾರ್ಯದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರ ಪಾತ್ರ ಮಹತ್ತರವಾಗಿದೆ ಅವರಿಗೆ ಅಭಿನಂದನೆಗಳು ಎಂದರು. ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಸ್ವಾತಂತ್ರಗಳಿಸಲು ಅನೇಕ ಮಹನೀಯರು ತಮ್ಮ ಪ್ರಾಣ ಮತ್ತು ಬಲಿದಾನವನ್ನು…

ಮೋದಿ ಮಣಿಸಲು ‘INDIA’ ವ್ಯೂಹ; ಮುಂಬೈ ಸಭೆಯ ಬಗ್ಗೆ ‘ಕೈ’ ನಾಯಕರಿಗೆ ಭಾರೀ ನಿರೀಕ್ಷೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿಯನ್ನು ಮಣಿಸಲು ರಣವ್ಯೂಹ ರಚಿಸುತ್ತಿರುವ ಕಾಂಗ್ರೆಸ್, ‘INDIA’ ಒಕ್ಕೂಟದ ಮುಂಬೈ ಸಭೆಯ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ‘INDIA’ ಸಭೆ ನಡೆಯಲಿದ್ದು ಅದಕ್ಕಾಗಿ ಭರ್ಜರಿ ತಯಾರಿ ನಡೆದಿದೆ. ‘INDIA’ ಮೈತ್ರಿಕೂಟದ ಮುಂಬರುವ ಮೂರನೇ ಸಭೆಯ ಸಿದ್ಧತೆ ಪರಿಶೀಲನೆಗಾಗಿ ಕಾಂಗ್ರೆಸ್ ಹಿರಿಯ ನಾಯಕರು ಸಾಧ್ಯವೇ ಮುಂಬೈಗೆ ಭೇಟಿ ನೀಡಲಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕತ್ವದೊಂದಿಗೆ ಚರ್ಚೆ ನಡೆಸಲಿದ್ದಾರೆ. ಮಹಾರಾಷ್ಟ್ರವನ್ನು ತನ್ನ ತೆಕ್ಕೆಗೆ ಪಡೆದಲ್ಲಿ ಬಿಜೆಪಿಯನ್ನು ಕಟ್ಟಿಹಾಕುವ ಕಾರ್ಯದಲ್ಲಿ ಬಹುಪಾಲು ಯಶಸ್ವಿಯಾದಂತೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ನಾಯಕರದ್ದು. ಹಾಗಾಗಿ ‘INDIA’ ಮಹಾ ವಿಕಾಸ್ ಅಘಾಡಿ ನಾಯಕರನ್ನು ಹೆಚ್ಚಾಗಿ ಅವಲಂಭಿಸಿದೆ. ‘INDIA’ ಮೈತ್ರಿಕೂಟದ ಈ ಮಹತ್ವದ ಸಭೆಯು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮುಂಬರುವ…