ಮೇಕೆದಾಟು ಪಾದಯಾತ್ರೆ ಮಾಡಿದವರು ಏನು ಮಾಡುತ್ತಾರೋ ನೋಡೋಣ; ಜೆಡಿಎಸ್ ಕಾದುನೋಡುವ ತಂತ್ರ

ಬಿಜೆಪಿಗೆ ನಾನೇನು ಅಡಿಯಾಳಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ವಿರುದ್ದದ ಕಾನ್ಫ್ರೆಸ್ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿರುವ ಅವರು, ಬಿಜೆಪಿ ಪರ ವಕ್ತಾರಿಕೆ ಮಾಡುವುದಕ್ಕೆ ಅಥವಾ ಅವರ ಪರವಾಗಿ ಮಾತನಾಡುವುದಕ್ಕೆ ನಾನೇನು ಅವರ ಅಡಿಯಾಳಲ್ಲ ಎಂದರು. ವಿರೋಧ ಪಕ್ಷದ ಸಾಮಾನ್ಯ ಶಾಸಕನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ ಅಷ್ಟೇ. ಕುಮಾರಸ್ವಾಮಿಗೆ ಹೊಟ್ಟೆ ಉರಿ ಅಂತಾ ಹೇಳುತ್ತಿದಾರೆ. ನನಗೆ ಏನಾಗಿದೆಯೋ ಅದಕ್ಕೆ ಔಷಧಿ ತಗೊಳ್ತೀನಿ. ವಾಸ್ತವ ಮಾತನಾಡಿ, ಜನರಿಗೆ ಆಗುತ್ತಿರುವ ಸಂಕಟಕ್ಕೆ ನಿಮ್ಮಲ್ಲಿ ಪರಿಹಾರ ಏನಿದೆ ಎಂದು ಪ್ರಶ್ನಿಸಿದರು. ಕಾವೇರಿ ಬಗ್ಗೆ ಕಾದು ನೋಡೋಣ: ಕಾವೇರಿ ತಗಾದೆ ಬಗ್ಗೆ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ ಎಂದು ಕೇಳಿದ್ದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕೋರ್ಟ್ ಏನು ಹೇಳುತ್ತದೆ ಎನ್ನುವುದನ್ನು ಕಾದು ನೋಡೋಣ. ಮೇಕೆದಾಟಿನಿಂದ ಪಾದಯಾತ್ರೆ ಮಾಡಿದ್ರಲ್ಲಾ ಇವರು,…

ನನ್ನ ಪೆನ್‌ ಡೈವ್‌ ಖಾಲಿ ಇಲ್ಲ; ಕ್ರಮ ಕೈಗೊಳ್ಳುವ ಎದೆಗಾರಿಕೆ ಸಿಎಂಗೆ ಇದೆಯಾ?: ಮಾಜಿ ಸಿಎಂ ಸವಾಲು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಲಂಚಾವತಾರದ ನಾಟಕಗಳ ಒಂದೊಂದೇ ಅಂಕ ತೆರೆದುಕೊಳ್ಳುತ್ತಿದೆ. ಸೀಸನ್‌ 1, ಸೀಸನ್‌ 2 ಎನ್ನುವ ರೀತಿಯಲ್ಲಿ ಎಲ್ಲವೂ ಬಯಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಕನ್ನಡದಲ್ಲಿ ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚೆಚ್ಚು ಬರುತ್ತಿವೆ. ಚಾಪ್ಟರ್ 1, ಚಾಪ್ಟರ್ 2 ಎಂದೆಲ್ಲಾ ಬರುತ್ತಿವೆ. ಅದೇ ರೀತಿ ಈ ಸರಕಾರದ ಭ್ರಷ್ಟಾಚಾರದ ಹಗರಣಗಳು ಕೂಡ ಅದೇ ರೀತಿ ಹೊರಗೆ ಬರುತ್ತಿವೆ. ಸಿನಿಮಾ ಎಂದ ಮೇಲೆ ಕೊನೆ ಎಂಬುದು ಇರಲೇಬೇಕು, ನಾಟಕ ಎಂದರೆ ಅದಕ್ಕೆ ಅಂತಿಮ ತೆರೆ ಎಳೆಯಲೇಬೇಕು. ಈ ಸರಕಾರದ ಲಂಚಾವತಾರಕ್ಕೂ ಅಂತಿಮ ತೆರೆ ಬೀಳುವ ದಿನ ದೂರವಿಲ್ಲ ಎಂದು ಅವರು ಹೇಳಿದರು. ನನಗೆ ಬುದ್ಧಿಭ್ರಮಣೆ ಆಗಿದೆ ಎಂದು…

ಕನ್ನಡಮ್ಮನ ಕಂಗಳ ಮೂಲಕ ಭಾರತಾಂಬೆಯನ್ನು ಕಣ್ತುಂಬಿಕೊಳ್ಳೋಣ

ಬೆಂಗಳೂರು: ಕರ್ನಾಟಕದ ಮೂಲಕ ಭಾರತವನ್ನು ನೋಡೋಣ ಎಂದು ನಾಡಿನ ಜನರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕರೆ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಂದೇಶದ ಭಾರತ ಹಾಗೂ ಕರ್ನಾಟಕದ ಹಿರಿಮೆಯ ಬಗ್ಗೆ ಹೇಳಿರುವ ಅವರು, ಪಂಚಭೂತಗಳ ಸಮತತ್ತ್ವ ಎಷ್ಟು ಆದರ್ಶಪ್ರಾಯವೋ ಭಾರತೀಯ ಸ್ವಾತಂತ್ರ್ಯದ ಪರಿಕಲ್ಪನೆ ಅಷ್ಟೇ ಶ್ರೇಷ್ಠ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು, ಮತ್ತಿತರೆ ಅನೇಕ ಮಹಾಪುರುಷರ ತ್ಯಾಗ, ಬಲಿದಾನದ ಮಹಾಫಲವನ್ನು ಜತನದಿಂದ ಕಾಪಾಡಿಕೊಳ್ಳೋಣ ಎಂದು ತಿಳಿಸಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರ “ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ” ಎನ್ನುವ ಮಹಾನ್ ಆಶಯದಂತೆ ಕನ್ನಡಮ್ಮನ ಕಂಗಳ ಮೂಲಕ ಭಾರತಾಂಬೆಯನ್ನು ಕಣ್ತುಂಬಿಕೊಂಡು ಆರಾಧಿಸೋಣ. ಆರಾಧನೆ, ಸಾಧನೆ ಒಟ್ಟೊಟ್ಟಿಗೆ ನಡೆದಾಗಲೇ ಗಳಿಸಿದ ಸ್ವಾತಂತ್ರ್ಯಕ್ಕೆ ಅರ್ಥ, ಪರಮಾರ್ಥ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಅವರು ಜೆಡಿಎಸ್ ಕಚೇರಿಯಲ್ಲಿನ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡರು. ಪಕ್ಷದ ರಾಜ್ಯಾಧ್ಯಕ್ಷ…

ವಿಶ್ವದ ಅತಿದೊಡ್ಡ ರಸಪ್ರಶ್ನೆಗಳಲ್ಲಿ ಒಂದಾದ, 17 ಭಾಷೆಗಳಲ್ಲಿ 10 ಲಕ್ಷಕ್ಕೂ ಅತಿ ಹೆಚ್ಚು ಬಾರಿ ಆಡಿದ ಜಿಗ್ಯಾಸ ವಿಜೇತರಿಗೆ ಪ್ರಧಾನಿ ಅಭಿನಂದನೆ

ನವದೆಹಲಿ: ಭಾರತದ ಪ್ರಾಚೀನ ನಾಗರಿಕತೆ ಮೌಲ್ಯಗಳು, ಸಾಂಸ್ಕತಿಕ ವಿಕಸನ, ಶ್ರೀಮಂತವಾದ ಭೂತ ಕಾಲ ಮತ್ತು ವೈಭವದ ಸಮಾಗಮ ನೀತಿಗಳ ಕುರಿತು 17 ಭಾಷೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಬಾರಿ ಆಡಿದ ಜಿಗ್ಯಾಸ ರಸಪ್ರಶ್ನೆ ವಿಜೇತರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಶ್ರೀ ಹರ್ದೀಪ್‌ ಸಿಂಗ್‌ ಪುರಿ ಅವರ ಟ್ವೀಟ್‌ ಅನ್ನು ಹಂಚಿಕೊಂಡು ಪ್ರಧಾನಮಂತ್ರಿ ಅವರು ಟ್ವೀಟ್‌ ಮಾಡಿದ್ದಾರೆ.   “ಜಿಗ್ಯಾಸದಲ್ಲಿ ಗೆದ್ದ ಎಲ್ಲರಿಗೂ ಅಭಿನಂದನೆಗಳು. ಯುವ ಸಮೂಹದಲ್ಲಿ ನಮ್ಮ ಇತಿಹಾಸ ಮತ್ತು ಸಂಸ್ಕೃತಿ ಕುರಿತು ಜ್ಞಾನ ವೃದ್ಧಿಸಲು ನಡೆಸಿದ ವ್ಯಾಪಕ ಪ್ರಯತ್ನ ಇದಾಗಿದೆ. ಈ ರಸ ಪ್ರಶ್ನೆಗೆ ಇಂತಹ ಅದ್ಭುತ ಪ್ರತಿಕ್ರಿಯೆ ನೋಡಿ ಸಂತಸವಾಗುತ್ತಿದೆ” ಎಂದು ಹೇಳಿದ್ದಾರೆ. Yesterday meets today & tomorrow.Jigyasa- When young minds come together to explore, inquire, discover & rediscover, it is not…

ವಸುಧಾ ವಂದನ ಕಾರ್ಯಕ್ರಮದಡಿ ಪ್ರತೀ ಗ್ರಾ.ಪಂ.ಗೆ 75 ವಿವಿಧ ಜಾತಿಯ ಸಸಿ ವಿತರಣೆ

ದೊಡ್ಡಬಳ್ಳಾಪುರ: 77ನೇ‌ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ವಸುಧಾ ವಂದನ ಕಾರ್ಯಕ್ರಮದಡಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಸಿಗಳನ್ನು ನೆಡಲಾಗುತ್ತಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ತಿಳಿಸಿದ್ದಾರೆ. ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ರಾಷ್ಟ್ರಧ್ವಜ ವಿತರಣೆ, ಪಂಚಪ್ರಾಣ ಪ್ರತಿಜ್ಞಾವಿಧಿ ಬೋಧನೆ, ಪ್ರತೀ ಗ್ರಾಮ ಪಂಚಾಯಿತಿಯಿಂದ ಮಣ್ಣು ಸಂಗ್ರಹಣೆ, ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ, ಅಮೃತ ಸರೋವರ ಅಂಗಳದಲ್ಲಿ ಧ್ವಜಾರೋಹಣ ಹಾಗೂ ವೀರ ಯೋಧರಿಗೆ ಗೌರವ ಸಲ್ಲಿಸುವುದಕ್ಕಾಗಿ ಶಿಲಾಫಲಕ ಅನಾವರಣ ಹೀಗೆ ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸೋಮವಾರ ತಾಲ್ಲೂಕಿನ ವಿವಿಧ ಗ್ರಾಮಪಂಚಾಯಿತಿಗಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಲಾಯಿತು. ಸಾಮಾಜಿಕ ಅರಣ್ಯ ಇಲಾಖೆಯಿಂದ ಪ್ರತೀ…

ಜಾತಿ ನಿಂದನೆ ಆರೋಪ; ಉಪೇಂದ್ರ ವಿರುದ್ಧದ FIR​ಗೆ ಹೈಕೋರ್ಟ್ ತಡೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಡೆದ ಯಡವಟ್ಟು ನಟ ಉಪೇಂದ್ರ ಅವರನ್ನು ಹೈಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದು ಕಹಿ ಸತ್ಯ. ಈ ಪ್ರಕರಣದಲ್ಲಿ ಉಪೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆ ಹಾಗೂ ಹಲಸೂರು ಗೆಟ್ ಪೊಲೀಸ್ ಠಾಣೆಗಳಲ್ಲಿ ಜಾತಿ ನಿಂದನೆಯ ಕೇಸ್ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಂತೆಯೇ ಹೈಕೋರ್ಟ್ ಮೊರೆ ಹೋದ ಉಪೇಂದ್ರ ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್​ಗೆ ತಡೆಯಾಜ್ಞೆ ತಂದಿದ್ದಾರೆ. ತಮ್ಮ ವಿರುದ್ಧದ ಎಫ್​ಐಆರ್​ಗೆ ತಡೆ ನೀಡಬೇಕು ಎಂದು ಕೋರಿ ಉಪೇಂದ್ರ ಅವರು ಹೈಕೋರ್ಟ್​ ಮೊರೆ ಹೋಗಿದ್ದರು. ಉಪೇಂದ್ರ ಪರ ವಾದಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ತಮ್ಮ ಕಕ್ಷಿದಾರರು ‘ಗಾದೆ ಮಾತು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆಯೇ ಹೊರತು ಯಾರ ವಿರುದ್ದವೂ ದುರುದ್ದೇಶದಿಂದ ಯಾವುದೇ ಪದ ಬಳಸಿಲ್ಲ. ಹಾಗಾಗಿ ಪರಿಶಿಷ್ಟ ಜಾತಿ,…

“ಭಾರತ ವಿಭಜನೆಯ ದುರಂತ ಕಥೆ” ಪ್ರದರ್ಶಿನಿಗೆ ಬಿಜೆಪಿ ಚಾಲನೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ಪಕ್ಷ ನೇರ ಕಾರಣ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ “ಭಾರತ ವಿಭಜನೆಯ ದುರಂತ ಕಥೆಗೆ ಸಂಬಂಧಿಸಿದ ಪ್ರದರ್ಶಿನಿ”ಯ ಉದ್ಘಾಟನೆ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ 76ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, 14ರ ದೇಶ ಇಬ್ಭಾಗದ ಘಟನೆ ಮೂಲಕ ಸ್ವಾತಂತ್ರ್ಯ ಯೋಧರಿಗೆ ಅಪಮಾನ ಆಗಿದೆ ಎಂದರು. ನೆಹರೂರವರ ನೇತೃತ್ವದ ಕಾಂಗ್ರೆಸ್ ಹುನ್ನಾರದ ಪರಿಣಾಮವಾಗಿ ಜಿನ್ನಾ ಅವರ ಮೂಲಕ ಈ ಆಟ ಮಾಡಲಾಯಿತು. ಕಾಂಗ್ರೆಸ್ ಸಂಸ್ಕøತಿಯೇ ಇದು. ಕಾಶ್ಮೀರವು ನಮ್ಮದೇ ಎನ್ನುವ ಎದೆಗಾರಿಕೆ ಅವರಿಗೆ ಇರಲಿಲ್ಲ. 370ನೇ…

‘ಕೈ’ ಸರ್ಕಾರದ ಆಡಳಿತ ವಿರುದ್ಧ ಸಿಡಿದೆದ್ದ ಕರಾವಳಿ ಶಾಸಕರು; ಮಂಗಳೂರಿನಲ್ಲಿ ಧರಣಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಸಿಡಿದೆದ್ದಿದ್ದಾರೆ. ಜಿಲ್ಲಾಡಳಿತದ ನಡೆಯನ್ನು ಖಂಡಿಸಿ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಮೂಡಬಿದಿರೆ ಕ್ಷೇತ್ರದ ಇರುವೈಲು ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್ ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಚಾರ ನೆಪದಲ್ಲಿ ರದ್ದುಪಡಿಸಿ ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಬಿಜೆಪಿ ಶಾಸಕರು ಆರೋಪಿಸಿದ್ದಾರೆ. ಈ ಕ್ರಮವನ್ನು ಖಂಡಿಸಿ ಹಾಗೂ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯುವಂತೆ ಶಾಸಕರು ಆಗ್ರಹಿಸಿದ್ದಾರೆ. ಶಾಸಕರ ಹಕ್ಕಿನ ರಕ್ಷಣೆಗೆ ಒತ್ತಾಯಿಸಿ ಬೆಳಿಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಧರಣಿ ಕೈಗೊಂಡು ಗಮನಸೆಳೆದರು. ಶಾಸಕರಾದ ರಾಜೇಶ್ ನಾಯ್ಕ್, ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಿದ್ದರು.

ಶಿಮ್ಲಾದಲ್ಲಿ ಪ್ರಳಯಕಾರಿ ಮಳೆ; ಭೂಕುಸಿತಕ್ಕೆ 9 ಮಂದಿ ಬಲಿ

ಶಿಮ್ಲಾ: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇನ್ನೊಂದೆಡೆ ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರವೂ ಪ್ರಳಯಕಾರಿ ಸನ್ನಿವೇಶಕ್ಕೆ ಸಾಕ್ಷಿಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಇದೀಗ ಸಂಭವಿಸಿದ ಮತ್ತೊಂದು ಮೇಘಸ್ಪೋಟದಲ್ಲಿ ಭಾರೀ ಸಾವು ನೋವು ಉಂಟಾಗಿದೆ. ಸೋಲನ್‌ ಜಿಲ್ಲೆಯ ಕಂದಘಾಟ್ ಬಳಿ ಜಾಡೋನ್ ಗ್ರಾಮ ಭೀಕರ ಪ್ರವಾಹಕ್ಕೆ ತುತ್ತಾಗಿದೆ. ಹಲವೆಡೆ ಭೂಕುಸಿತ ಸಂಭವಿಸಿ ಮನೆಗಳು, ರಸ್ತೆಗಳು, ಕಟ್ಟಡಗಳು ಹಾನಿಗೊಳಗಾಗಿವೆ, ಪ್ರವಾಹದಲ್ಲಿ ಹತ್ತಾರು ವಾಹನಗಳು ಕೊಚ್ಚಿಹೋಗಿವೆ. ಸರಣಿ ಅವಘಡಗಳಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Visual of Pandoh Himachal Pradesh right now pic.twitter.com/KQ2Tn9sz9B — Go Himachal (@GoHimachal_) August 14, 2023

ಅವರ ಪಾಪದ ದುಡ್ಡಿನಲ್ಲಿ ವಿದೇಶಕ್ಕೆ ಹೋಗಲಾ? ಚೆಲುವ ಹೇಳಿಕೆಗೆ ಹೆಚ್ಡಿಕೆ ಕಿಡಿ 

ಬೆಂಗಳೂರು: ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದ್ದಾರೆ. ಕಳೆದ ತಡರಾತ್ರಿ ವಿದೇಶಿ ಪ್ರವಾಸದಿಂದ ಬೆಂಗಳೂರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಮ್ಮನ್ನು ಎದುರುಗೊಂಡ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು. ಸಚಿವರ ಹೇಳಿಕೆಯ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು; ‘ಇಲ್ಲಿ ಲೂಟಿ ಹೊಡೆಯೋಕೆ ನಮ್ಮನ್ನ ಬಿಟ್ಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಸಲಹೆ ಕೊಟ್ಟ ಹಾಗಿದೆ. ಏಕೆಂದರೆ, ಮಾನ ಮಾರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಆಗ್ತೀನಿ ಅಲ್ಲವೇ? ಎಂದರು. ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ…

Uncategorized