ವಿವಾದದ ಸುಳಿಯಲ್ಲ ಉಪೇಂದ್ರ; ಪೊಲೀಸರಿಂದ ನಟನಿಗೆ ನೋಟಿಸ್

ಬೆಂಗಳೂರು: ಚಿತ್ರನಟ ಉಪೇಂದ್ರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಕೇಳಿಬಂದಿದ್ದು, ಇದೀಗ ಪ್ರಕರಣಗಳು ದಾಖಲಾಗಿವೆ. ಉಪೇಂದ್ರ ಅವರು ಫೇಸ್ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಹೋರಾಟಕ್ಕಿಳಿದಿವೆ. ಇದೇ ಸಂದರ್ಭದಲ್ಲಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ನಡುವೆ ತಮ್ಮ ಮಾತಿನ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಒಟ್ಟಾರೆ ಬೆಳವಣಿಗೆ ಬಗ್ಗೆ ನಟ ಉಪೇಂದ್ರ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಉಪೇಂದ್ರ ಕ್ಷಮೆ ಯಾಚಿಸಿದ್ದಾರೆ. ಆದರೂ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರಕರಣಗಳೂ ದಾಖಲಾಗಿವೆ.

ಮುಂದುವರಿದ ಯುವಜನರ ಸಾವಿನ ಸರಣಿ; ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಮೃತ್ಯು

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಬಳಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪಿದ ಘಟನೆ ಇಂದು ವರದಿಯಾಗಿದೆ. ಬೆಳ್ತಂಗಡಿ ಸಮೀಪದ ನೆರಿಯಾ ಗ್ರಾಮದ ನಿವಾಸಿ ಎನ್ನಲಾದ 19 ವರ್ಷದ ಸುಮಾ ಎಂಬ ನರ್ಸಿಂಗ್ ವಿದ್ಯಾರ್ಥಿನಿ ಲೋ ಬಿಪಿಯಿಂದಾಗಿ ಅಸ್ವಸ್ಥಳಾಗಿದ್ದಾಳೆ. ಆಗಸ್ಟ್ 13ರಂದು ಈಕೆ ಅಸ್ವಸ್ಥಳಾಗಿದ್ದು ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹದಿಹರೆಯದವರಲ್ಲೇ ಹೆಚ್ಚು ಸಮಸ್ಯೆ ಯಾಕೆ? ಇತ್ತೀಚಿನ ದಿನಗಳಲ್ಲಿ ಯುವಜನರೇ ಸಾವಿನ ದವಡೆಗೆ ತಳ್ಳಲ್ಪಡುತ್ತಿರುವುದು ವಿಷಾದನೀಯ ಸಂಗತಿ. ಹದಿ ಹರೆಯದ ಮಂದಿಯೇ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಅದರಲ್ಲೂ ರಕ್ತದೊತ್ತಡ, ಹಾಗೂ ರಕ್ತ ಹೆಪ್ಪುಗಟ್ಟುವಿಕೆಯ ಕಾರಣದಿಂದಾಗಿ ಹೃದಯಾಘಾತಕ್ಕೊಳಗಾಗುತ್ತಿದ್ದಾರೆ. ಈ ಬೆಳವಣಿಗೆ ವೈದ್ಯಕೀಯ ಕ್ಷೇತ್ರಕ್ಕೂ ಸವಾಲೆಂಬಂತಿದೆ. ಪ್ರಸ್ತುತ ಆಹಾರ ಪದ್ಧತಿ, ಖಾದ್ಯತೈಲಗಳ ಬಳಕೆ, ಮುಂತಾದ ಕಾರಣಗಳು ಈ ರೀತಿಯ ಪ್ರಕರಣಗಳಿಗೆ ಕಾರಣವೂ ಹೌದು ಎನ್ನುತ್ತಾರೆ ವೈದ್ಯರು. ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಿದ್ದರೆ ಆಗಬಹುದಾದ ಅನಾಹುತವನ್ನು ತಡೆಯಬಹುದಾಗಿದೆ, ಆದರೆ ಇತ್ತೀಚಿನ…

ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಬೇಧಿಸಿದ ಸಿಸಿಬಿ; ಮೂವರ ಸೆರೆ

ಮಂಗಳೂರು: ಬಂದರು ನಗರಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗೆ ಇಳಿದು ಡ್ರಗ್ ವಹಿವಾಟನ್ನು ಬೇಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಇಂದು MDMA ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಬಂಧಿಸಿದ್ದಾರೆ. ಎಂಡಿಎಂಎ ಮಾದಕ ವಸ್ತುವನ್ನು ತಂದು ವಿತರಿಸುದ್ದಿದ್ದ ತಂಡದ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಯುವಕರ ತಂಡವನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ. ಅವರ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆಯನ್ನು ಬಿರುಸುಗೊಳಿಸಿದ ಪೊಲೀಸರು, MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಬಲೆಗೆ ಕೆಡವಿದ್ದಾರೆ. ಬಂಧಿತರನ್ನು ಇಮ್ರಾನ್, ಅಬ್ದುಲ್ ಬಶೀರ್ ಅಬ್ಬಾಸ್,​ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ ಡ್ರಗ್ಸ್ ಹಾಗೂ ದಂಧೆಗೆ ಬಳಸಿದ್ದಾರೆನ್ನಲಾದ ಕಾರು, 6 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಸಿದ್ದು ಸರ್ಕಾರಕ್ಕೂ ಪರ್ಸೆಂಟೇಜ್ ಕಳಂಕ; ಅಜ್ಜಯ್ಯ ಮುಂದೆ ಪ್ರಮಾಣ ಮಾಡ್ತಾರಾ ಡಿಕೆಶಿ?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಪರ್ಸೆಂಟೇಜ್ ಆರೋಪದ ಹೊಡೆತ ತಟ್ಟಿದೆ. ಹಿಂದಿನ ಬೊಮ್ಮಾಯಿ ಸರ್ಕಾರದ ವಿರುದ್ಧ ಪರ್ಸೆಂಟೇಜ್ ಆರೋಪ ಮಾಡುತ್ತಲೇ ಅಧಿಕಾರ ಗಿಟ್ಟಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಇದೀಗ ಅದೇ ಆರೋಪದ ಹೊಡೆತ ಮೂಲಕ ಕಟ್ಟಿಹಾಕಲು ಪ್ರಯತ್ನಿಸುತ್ತಿದೆ. ಗುತ್ತಿಗೆದಾರರ ಹಣ ಬಿಡುಗಡೆಗೆ ಕಮೀಷನ್ ಕೇಳಲಾಗಿದೆ ಎಂದು ಗುತ್ತಿಗೆದಾರರು ಆರೋಪಿಸಿದ್ದು ಈ ಬೆಳವಣಿಗೆಯನ್ನು ಮುಂದಿಟ್ಟು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ಕಮೀಷನ್ ಕೇಳಿಲ್ಲ ಎಂದಾದರೆ ತಾವು ಪೂಜಿಸುವ ಅಜ್ಜಯ್ಯ ಮೇಲೆ ಆನೆ-ಪ್ರಮಾಣ ಮಾಡುವಂತೆ ಗುತ್ತಿಗೆದಾದರೂ ಸವಾಲು ಹಾಕಿದ್ದಾರೆ. ಇದಕ್ಕೆ ಧ್ವನಿಗೂಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ತಾವು ಹಾಗೂ ತಮ್ಮ ಸರ್ಕಾರ ಪ್ರಮಾಣಿಕ ಎಂದು ಡಿ.ಕೆ.ಶಿವಕುಮಾರ್ ಭಾವಿಸುವುದಾದರೆ ಬಿಬಿಎಂಪಿ ಗುತ್ತಿಗೆದಾರರ ಸಂಘದ ಒತ್ತಾಯದಂತೆ ಅಜ್ಜಯ್ಯನವರ ಮಠದಲ್ಲಿ ಪ್ರಮಾಣ ಮಾಡಲಿ ಎಂದು ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಈ ಆರೋಪಗಳನ್ನು ಬಿಬಿಎಂಪಿ ಗುತ್ತಿಗೆದಾರರ…

KSRTC-BMTC ನೌಕರರಿಗೆ ಸಕಾಲದಲ್ಲೇ ವೇತನ ಪಾವತಿ; ನಿಗಮದ ಸ್ಪಷ್ಟನೆ

ಬೆಂಗಳೂರು: ‘ಸರ್ಕಾರಿನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ’ ಎಂಬ ಬಿಜೆಪಿಯ ಟ್ವೀಟಾಸ್ತ್ರ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, .ಈ ಕುರಿತಂತೆ KSRTC ಕೂಡಾ ಸ್ಪಷ್ಟನೆ ನೀಡಿದೆ. ಕೆಎಸ್ಸಾರ್ಟಿಸಿ ನೌಕರರಿಗೆ ಸಂಬಳ ನೀಡುವ ವಿಚಾರದಲ್ಲಿ ವಿಳಂಬವಾಗಿಲ್ಲ ಎನ್ನುವ ಮೂಲಕ ತಮ್ಮ ನಿಗಮದ ಸಿಬ್ಬಂದಿಗೆ ವೇತನ ವಿಚಾರದಲ್ಲಿ ಅನ್ಯಾಯವಾಗಿಲ್ಲ ಎಂದು ಸ್ಷಷ್ಟಪಡಿಸಿದೆ. ಏನಿದು ಸಂಬಳ ಸಂಘರ್ಷ..? ಗ್ಯಾರಂಟಿ ಜಾರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಟೀಕಾಸ್ತ್ರ ಪ್ರಯೋಗಿಸುತ್ತಿರುವ ಪ್ರತಿಪಕ್ಷ ಬಿಜೆಪಿ, ಇದೀಗ ನೌಕರರ ವೇತನ ವಿಳಂಬ ವಿಚಾರವನ್ನು ಮುಂದಿಟ್ಟು ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಸರ್ಕಾರದ ಹೊಸ ಘೋಷಣೆ. ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ’ ಎಂದು ಟೀಕಿಸಿದೆ. BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ, KSRTC…

ಆ.15ರಂದು BJPಯಿಂದ ವಿಶಿಷ್ಟ ರೀತಿ ರಾಷ್ಟ್ರಧ್ವಜಾಹೋಹಣ; 14ರಂದು ದುರಂತ ಕಥೆಯ ಪ್ರದರ್ಶಿನಿ

ಬೆಂಗಳೂರು: ಬಿಜೆಪಿ ವತಿಯಿಂದ ಆಗಸ್ಟ್ 15ರ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲ ತಾಲ್ಲೂಕು, ಗ್ರಾಮ ಪಂಚಾಯಿತಿ, ಎಲ್ಲ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರ ಯೋಧರ, ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸುವ ಕಾರ್ಯವನ್ನು ದೇಶ ಮತ್ತು ಕರ್ನಾಟಕದಲ್ಲಿ ಅಭೂತಪೂರ್ವವಾಗಿ ನಡೆಸಲಿದೆ ಎಂದು ವಿವರಿಸಿದರು. ಆ.15ರಂದು ಬೆಳಿಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಧ್ವಜಾಹೋಹಣ ಮಾಡಲಿದ್ದಾರೆ. ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಲಿದ್ದಾರೆ. ಜಿಲ್ಲೆ, ಮಂಡಲಗಳಲ್ಲಿ ಶಾಸಕರು, ಸಂಸದರು, ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದರು. ಆ.14ರ ರಾತ್ರಿ ನಮ್ಮ ದೇಶಕ್ಕೆ ಸ್ವಾತಂತ್ರ್ಯದ ಖುಷಿ, ಸಂತಸದ ಜೊತೆಗೇ ಅಷ್ಟೇ ಪ್ರಮಾಣದಲ್ಲಿ ದುಃಖ ಆಗಿತ್ತು.…

ಸ್ವಾತಂತ್ರ್ಯೋತ್ಸವ ತಯಾರಿ ಸಡಗರ; ಸೇನಾ ಕಸರತ್ತಿನ ರೋಮಾಂಚನ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ಐತಿಹಾಸಿಕ ಕೆಂಪು ಕೋಟೆಯಲ್ಲಿ ಯೋಧರು ಸಮವಸ್ತ್ರದೊಂದಿಗೆ ನಡೆಸಿದ ರಿಹರ್ಸಲ್ ಗಮನಸೆಳೆಯಿತು. ಈ ಅಭ್ಯಾಸದ ಅವಧಿಯಲ್ಲಿ ಭಾರತೀಯ ವಾಯುಪಡೆ, ಭಾರತೀಯ ಸೇನೆ ಮತ್ತು ಭಾರತೀಯ ನೌಕಾಪಡೆಯ ಸದಸ್ಯರ ಕವಾಯತು ಕುತೂಹಲದ ಕೇಂದ್ರಬಿಂದುವಾಯಿತು. ಅಗಸ್ಟ್15ರ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ರಾಷ್ಟ್ರ ರಾಜಧಾನಿಯ ಕೆಂಪುಕೋಟೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. ಈ ವರ್ಷ, ಭಾರತವು ತನ್ನ 77 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಆಗಸ್ಟ್15ರ ವರ್ಣರಂಜಿತ ಸಮಾರಂಭವನ್ನು ಯಶಸ್ವಿಗೊಳಿಸುವ ಸಂಬಂಧ ಭಾನುವಾರ ಬೆಳಿಗ್ಗೆ ಪೂರ್ವಾಭ್ಯಾಸ ನಡೆಸಲಾಯಿತು. ಕೆಂಪು ಕೋಟೆಯಲ್ಲಿ ಭಾರತೀಯ ವಾಯುಪಡೆ, ಭಾರತೀಯ ಸೇನೆ ಮತ್ತು ಭಾರತೀಯ ನೌಕಾಪಡೆಯ ಸಿಬ್ಬಂದಿಗಳ ಸಿಂಕ್ರೊನೈಸ್ಡ್ ಮೆರವಣಿಗೆಯನ್ನು ಪ್ರದರ್ಶಿಸಿತು. #WATCH | Full dress rehearsal of different armed forces underway at Red Fort in Delhi, ahead…

ಕೋಟೆನಾಡಿನಲ್ಲಿ ಭೀಕರ ಅಪಘಾತ; ನಾಲ್ವರ ಸಾವು

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಹೊರವಲಯದ ಮಲ್ಲಾಪುರ ಮೇಲ್ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರು ಹಾಗೂ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.  8 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯೊಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ‌ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿದವರನ್ನು ವಿಜಯಪುರ ನಿವಾಸಿಗಳಾದ ಭೀಮಾಶಂಕರ (26 ವರ್ಷ), ಕಾರು ಚಾಲಕ ಸಂಗನ ಬಸಪ್ಪ (36 ವರ್ಷ), ರೇಖಾ  (29 ವರ್ಷ), ಅಗಸ್ತ್ಯ (8 ವರ್ಷ) ಎಂದು ಗುರುತಿಸಲಾಗಿದೆ. ಸಂಗನ ಬಸಪ್ಪ ಅವರ ಮಕ್ಕಳಾದ 6 ವರ್ಷದ ಅನ್ವಿತಾ, 4 ವರ್ಷದ ಆದರ್ಶ ಹಾಗೂ ಸಂಬಂಧಿ ಭೀಮಾ ಶಂಕರ್ (26)…