ಟಿ-20 ಕ್ರಿಕೆಟ್: ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಜಯಭೇರಿ

ಫ್ಲೋರಿಡಾದ ಲಾಡರ್ಹಿಲ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧ 4ನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಾತಿಯಿದ ಭಾರತ ಜೈಸ್ವಾಲ್ ಮತ್ತು ಶುಭ್ ಮನ್ ಗಿಲ್ ಗಿಲ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ವೆಸ್ಟ್ ಇಂಡೀಸ್ ನೀಡಿದ 179 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ 17 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 179 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಈ ಮೂಲಕ 2-2 ಅಂತರದಲ್ಲಿ ಸರಣಿ ಸಮವಾಗಿದೆ.

‘ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ’ ಇದು ಕಾಂಗ್ರೆಸ್ ಸರ್ಕಾರದ ಹೊಸ ಘೋಷಣೆ?

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ ಬೆನ್ನಲ್ಲೇ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಈ ಗೊಂದಲಗಳು ಪ್ರತಿಪಕ್ಷ ಬಿಜೆಪಿಗೆ ಅಸ್ತ್ರವೆನಿಸಿದೆ. ಇದೇ ಸಂದರ್ಭದಲ್ಲಿ ನೌಕರರಿಗೆ ವೇತನ ಪಾವತಿಯಲ್ಲಿ ವಿಳಂಬವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಸರ್ಕಾರದ ಹೊಸ ಘೋಷಣೆ. ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ’ ಎಂದು ಟೀಕಿಸಿದೆ. BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ, KSRTC ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ, ಮೂರು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರು ಸಂಬಳವನ್ನೇ ಕಂಡಿಲ್ಲ, ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೂ ಸಂಬಳ ಸಿಕ್ಕಿಲ್ಲ, ಸರ್ಕಾರಿ ಶಾಲಾ ಶಿಕ್ಷಕರಿಗೂ ತಿಂಗಳಾದರೂ ಖಾತೆಗೆ ಸಂಬಳ ಜಮೆ ಆಗಿಲ್ಲ, ಗುತ್ತಿಗೆ ಆಧಾರದ ಸರ್ಕಾರಿ ನೌಕರರಿಗೆ ಸಂಬಳ ತಲುಪಿಲ್ಲ ಎಂದು ಬೊಟ್ಟು ಮಾಡಿರುವ ಬಿಜೆಪಿ,…

ಮಲೇಷಿಯಾವನ್ನು ಮಣಿಸಿ 4ನೇ ಬಾರಿಗೆ ಹಾಕಿ ಟ್ರೋಫಿ ಗೆದ್ದು ಬೀಗಿದ ಭಾರತ

ಚೆನ್ನೈ: ಏಷ್ಯನ್ ಹಾಕಿ ಚಾಂಪಿಯನ್ಸ್ ಮಲೇಷಿಯಾವಿರುದ್ಧ ಭಾರತ 4-3 ಗೋಲುಗಳಿಂದ ಜಯಭೇರಿ ಭಾರಿಸುವ ಮೂಲಕ 4ನೇ ಬಾರಿಗೆ ಟ್ರೋಫಿ ಗೆದ್ದುಕೊಂಡಿದೆ. ಹಾಕಿ ತವರಿನಲ್ಲಿ ನಡೆದ ಈ ಹಣಾಹಣಿಯಲ್ಲಿ ಆತಿಥೇಯ ಭಾರತ ಗೆದ್ದು ಬೀಗಿದೆ. ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಏಷ್ಯನ್ ಚಾಂಪಿಯನ್ಸ್ ಮಲೇಷಿಯಾವನ್ನು 4-3 ಗೋಲುಗಳ ಮೂಲಕ ಮನಿಸಿದೆ. A joyous end to a wild journey in Chennai. Sreejesh bringing the cheering squad along 🤣#HockeyIndia #IndiaKaGame #HACT2023 pic.twitter.com/uP65ZD6KuB — Hockey India (@TheHockeyIndia) August 13, 2023 ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಕ್ರೀಡಾಂಗಣದಲ್ಲಿ ಇದು ಭಾರತಕ್ಕೆ ಸಿಕ್ಕಿದ ನಾಲ್ಕನೇ ಗೆಲುವು. ಭಾರತ ಗೆದ್ದು ಬೀಗುತ್ತಿದ್ದಂತೆಯೇ ಅಭಿಮಾನಿಗಳು ಸಂಭ್ರಮವೂ ಮುಗಿಲೆತ್ತ ರಾಚಿತ್ತು. Asian Champions…💪🏻..#asianhockey…

ಬೆಂಗಳೂರಿನಲ್ಲಿ ಒಕ್ಕಲಿಗ ಸಮಾಜ ವತಿಯಿಂದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಬೆಂಗಳೂರು: ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್‌ಹಾಲ್) ಜಾನಪದ ಸಂಭ್ರಮ, ರಾಜ್ಯಮಟ್ಟದ 2023ರ ಸಾಧಕರಿಗೆ ಮತ್ತು ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್‌ ವತಿಯಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರ.ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮಕ್ಷೇತ್ರದ ಜಗದ್ಗುರು ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಸಹಿತ ಗಣ್ಯರನೇಕರು ಭಾಗವಹಿಸಿದ್ದರು. ಪಂಚಮಸಾಲಿ ಜಗದ್ಗುರು ಜಯಮೃತ್ಯುಂಜಯ ಮಹಾಸ್ವಾಮಿಯವರನ್ನು ಈ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಐಆರ್‌ಎಸ್ ಅಧಿಕಾರಿ ಜಯರಾಮ್‌ ರಾಯಪುರ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ ಹನುಮಂತಯ್ಯ, ಉಪಾಧ್ಯಕ್ಷ ಎಲ್ ಶ್ರೀನಿವಾಸ್, ಕಿಮ್ಸ್ ಪ್ರಾದ್ಯಾಪಕ ಡಾ|| ಭಗವಾನ್ ಜಿ.ಪಿ, ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ ವಿ ದೇವರಾಜ್ ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಹೊಸ ದಿಲ್ಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ನೀಡಿದ್ದಾರೆ. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ ತಿದ್ದುಪಡಿ ಮಸೂದೆಗೆ ದತ್ತಾಂಶ ಸಂರಕ್ಷಣಾ ಕಾಯ್ದೆ, ಜನನ ಮತ್ತು ಮರಣಗಳ ನೋಂದಣಿ ತಿದ್ದುಪಡಿ ಮಸೂದೆ, ಜನ್ ವಿಶ್ವಾಸ್ ನಿಬಂಧನೆಗಳ ತಿದ್ದುಪಡಿ ಮಸೂದೆಗಳನ್ನೂ ಸಂಸತ್ತಿನಲ್ಲಿ ಅಂಗೀಕರಿಸಿ ರಾಷ್ಟ್ರಪತಿಗೆ ಕಳುಹಿಸಲಾಗಿತ್ತು. ಈ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಗುತ್ತಿಗೆದಾರರಿಗೆ ನ್ಯಾಯ ನೀಡಲು ರಾಜ್ಯಪಾಲರು ಮಧ್ಯಪ್ರವೇಶ ಮಾಡಲಿ; ಗೋಪಾಲಯ್ಯ ಆಗ್ರಹ

ಬೆಂಗಳೂರು: ಕಾಮಗಾರಿ ಬಿಲ್ ತಡೆ ಹಿಡಿದ ವಿಷಯದಲ್ಲಿ ಗೌರವಾನ್ವಿತ ರಾಜ್ಯಪಾಲರು ಮಧ್ಯಪ್ರವೇಶಿಸಿ ಗುತ್ತಿಗೆದಾರರಿಗೆ ನ್ಯಾಯ ಕೊಡಬೇಕು ಎಂದು ಮಾಜಿ ಸಚಿವ ಕೆ.ಗೋಪಾಲಯ್ಯ ಒತ್ತಾಯಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ|| ಸಿ.ಎನ್. ಅಶ್ವತ್ಥನಾರಾಯಣ್, ಬಿಡಿಎ ಮಾಜಿ ಅಧ್ಯಕ್ಷ ಮತ್ತು ಶಾಸಕ ಎಸ್.ಆರ್. ವಿಶ್ವನಾಥ್, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗೋಪಾಲಯ್ಯ ಕಾಂಗ್ರೆಸ್ ಸರ್ಕಾರ ಹಾಗೂ ಗುತ್ತಿಗೆದಾರರ ಸಂಘದ ಕೆಂಪಣ್ಣ ವಿರುದ್ದ ಹರಿಹಾಯ್ದರು. ಕೆಂಪಣ್ಣನವರು ಪ್ರಧಾನಿಗೂ ಮನವಿ ನೀಡಿದ್ದರು. ಅವರು ಗುತ್ತಿಗೆ ಕೆಲಸ ಮಾಡುತ್ತಿದ್ದರೆ 400- 500 ಜನರ ಪರವಾಗಿ ಇರುತ್ತಾರಾ? ಕಾಂಗ್ರೆಸ್ ಪರವಾಗಿ ನಿಲ್ಲುತ್ತಾರಾ? ಎಂದು ಗೋಪಾಲಯ್ಯ ಪ್ರಶ್ನಿಸಿದರು. 224 ಜನ ಶಾಸಕರಿದ್ದೀವಿ. ನೀವು ಯಾರಿಗೆ ಹಣ ಕೊಟ್ಟಿದ್ದೀರೆಂದು ಬಹಿರಂಗಪಡಿಸಿ ಎಂದು ಸವಾಲೆಸೆದ ಗೋಪಾಲಯ್ಯ 40 ಶೇಕಡಾವನ್ನು ಯಾರಿಗೆ ಕೊಟ್ಟಿದ್ದೀರೆಂದು ತಿಳಿಸಿ, ಇಲ್ಲವಾದರೆ ರಾಜ್ಯದ…

ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣದ ನ್ಯಾಯಾಂಗ ತನಿಖೆ ಬಗ್ಗೆ ಸಿಎಂ ಹೇಳಿಕೆ

ವಚನ ಪಾಲನೆ ಹಿನ್ನೆಲೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ; ಸಿಎಂ ಸ್ಪಷ್ಟನೆ ಬೆಂಗಳೂರು: ವಚನ ಪಾಲನೆ ಹಿನ್ನೆಲೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ BJP  ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ…

ದಾರೀಲಿ ಹೋಗೋರಿಗೆಲ್ಲ ಉತ್ತರ ಕೊಡೋಕೆ ಆಗಲ್ಲ; ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ ಎಂದ ಡಿಕೆಶಿ

ಬೆಂಗಳೂರು: ನಾನು ಯಾರ ಬಳಿಯಾದರು ಕಮಿಷನ್ ಕೇಳಿದ್ದರೆ ಇಂದೇ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಗುತ್ತಿಗೆದಾರರರ ಆರೋಪ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಪ್ರತಿಕ್ರಯೆ ನೀಡಿರುವ ಡಿಕೆಶಿ, ನಾನು ಕೇಳಿಲ್ಲವಾದರೆ ಬೊಮ್ಮಾಯಿ, ಅಶೋಕ್ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತಾರಾ? ಎಂದು ಪ್ರಶ್ನಿಸಿದರು. ‘ನಾನು ಅವರ ಸ್ಥಾನ ಹಾಗೂ ಹಿರಿತನಕ್ಕೆ ಗೌರವ ನೀಡಬೇಕು ನೀಡುತ್ತೇನೆ. ಅಶೋಕ್ ಏನೆಲ್ಲಾ ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ನನಗೆ ನನ್ನದೇ ಆದ ವ್ಯಕ್ತಿತ್ವ ಇದೆ’ ಎಂದು ಡಿಕೆಶಿ ಹೇಳಿದರು. ತನಿಖೆ ಒಂದೆರಡು ಕಡೆ ಮಾತ್ರ ಮಾಡುವುದಿಲ್ಲ. ಎಲ್ಲ ಕಡೆ ಮಾಡಲಾಗುತ್ತದೆ. ಕೆಲಸ ಮಾಡಿದ್ದರೆ ಬಿಲ್ ಪಾವತಿ ಆಗಲಿದೆ. ಈಗ ಒಂದೆರಡು ತಿಂಗಳು ಕಾಯಲು ಆಗುವುದಿಲ್ಲವೇ? ಎಂದ ಅವರು, ಗುತ್ತಿಗೆದಾರರು ನೇಣು ಹಾಕಿಕೊಳ್ಳುವುದು ಬೇಡ, ದಯಾ ಮರಣ ಕೇಳುವುದೂ ಬೇಡ. ಅವರ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಆರೋಪ…

ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಯಾಕೆ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ: ಡಿಕೆಶಿ ಪ್ರಶ್ನೆ

ಬೆಂಗಳೂರು: “ಗುತ್ತಿಗೆದಾರರ ಬಿಲ್ ವಿಚಾರವಾಗಿ ಬೊಮ್ಮಾಯಿ, ಅಶೋಕ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ ಯಾಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, “ಬೊಮ್ಮಾಯಿ ಅವರಿಗಾಗಲಿ, ಅಶೋಕ್ ಅವರಿಗಾಗಲಿ ಅವರ ಸರ್ಕಾರದಲ್ಲಿ ಗುತ್ತಿಗೆದಾರರ ಬಿಲ್ ಪಾವತಿ ಮಾಡಲು ಯಾರು ಅಡ್ಡಿ ಮಾಡಿದ್ದರು? ಅವರ ಬಳಿ ಹಣ ಇರಲಿಲ್ಲವೇ? ಕೆಲಸ ಸರಿ ಇರಲಿಲ್ಲವೇ? ಈ ಪ್ರಶ್ನೆಗೆ ಬಿಜೆಪಿ ನಾಯಕರು ಮೊದಲು ಉತ್ತರ ನೀಡಲಿ. ಉಳಿದಂತೆ ಗುತ್ತಿಗೆದಾರರಿಗೆ ನಾನು ಉತ್ತರ ನೀಡುತ್ತೇನೆ’ ಎಂದರು. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿಗಳು, ಕೆಂಪಣ್ಣ ಅವರ ದೂರಿನ ಆಧಾರದ ಮೇಲೆ ಕೆಲಸ ಆಗಿದೆಯೇ ಇಲ್ಲವೇ ಎಂದು ನೈಜತೆ ಪರಿಶೀಲನೆ ಮಾಡಿ ಎಂದು ತಿಳಿಸಿದರು. ಬಿಜೆಪಿ ನಾಯಕರು ಕೂಡ ಸದನದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ…