ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ವಿರುದ್ದದ ಹೋರಾಟದ ವೇಳೆ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ನಾಡಿನ ಗಣ್ಯರು ಶ್ರದ್ದಾಂಜಲಿ ಸಮರ್ಪಿಸಿದರು. ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಕರ್ನಾಟಕ ಮೂಲ ಯೋಧ 29 ವರ್ಷದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ (Captain Pranjal) ಹುತಾತ್ಮರಾಗಿದ್ದಾರೆ. ಬೆಂಗಳೂರು ಹೊರವಲಯದ ಜಿಗಣಿ ಬಳಿ ಇಂದು ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ , ಕೆ.ಜೆ ಜಾರ್ಜ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಹಿತ ಗಣ್ಯರನೇಕರು ವೀರ ಯೋಧನ ಅಂತಿಮ ದರ್ಶನ ಪಡೆದರು. ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಹುತಾತ್ಮ ಯೋಧನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ರಾಷ್ಟ್ರರಕ್ಷಣೆಯಲ್ಲಿ ಪ್ರಾಂಜಲ್…
Year: 2023
ಡಿಕೆಶಿ ಪ್ರಕರಣ ಹಿಂತೆಗೆತದ ಪ್ರತಿಧ್ವನಿ; ಜನಸಾಮಾನ್ಯರ ಬಗ್ಗೆ ‘ಹೈ’ ತೀರ್ಪು ಒಪ್ಪದ ಸರ್ಕಾರಕ್ಕೆ ‘ಲೀಗಲ್-ಐ’ ಚಾಟಿ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನದ ಬಳಿಕ ಇತರ ಪ್ರಕರಣಗಳ ವಿಚಾರದಲ್ಲೂ ಜನಹಿತ ಕ್ರಮ ಕೈಗೊಳ್ಳಿ ಎಂಬ ಆಗ್ರಹ ಪ್ರತಿಧ್ವನಿಸಿದೆ. ಇದೀಗ ರೌಡಿ ಪಟ್ಟಿ ವಿಚಾರ ರಾಜ್ಯ ಸರ್ಕಾರಕ್ಕೆ ಸವಾಲು ಎಂಬಂತಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಯ ಆದೇಶ ಹಿಂಪಡೆಯುವ ಸಂಪುಟ ಸಭೆ ತೀರ್ಮಾನದಂತೆಯೇ ಇತರ ಪ್ರಕರಣಗಳಲ್ಲೂ ಜನಹಿತ ಕ್ರಮ ಕೈಗೊಳ್ಳಲು ಕೋರಿ ವಕೀಲರ ಸಮೂಹದ ಸಂಸ್ಥೆ “ಲೀಗಲ್-ಐ’ ಮುಖ್ಯಸ್ಥ ಶಾಜಿ ಟಿ ವರ್ಗೀಸ್ (Shaji T Verghese) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಕುತೂಹಲದ ಕೇಂದ್ರಬಿಂದುವಾಗಿದೆ. ಅದರಲ್ಲೂ ಅಮಾಯಕರು ರೌಡಿ ಶೀಟರ್ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದು ಅವರಿಗೆ ನ್ಯಾಯ ಸಿಗಬೇಕೆಂಬ ಪ್ರತಿಪಾದನೆ ಕುತೂಹಲಕಾರಿ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವು ರೌಡಿ ಶೀಟರ್ ವಿಚಾರದಲ್ಲಿ ಹೈಕೋರ್ಟ್ ಆದೇಶವನ್ನೇ ಅನುಷ್ಠಾನಗೊಳಿಸಿಲ್ಲ. ನ್ಯಾಯಬದ್ಧ ಕ್ರಮಕ್ಕ್ಕಾಗಿ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು…
ನಟ ಡಾರ್ಲಿಂಗ್ ಕೃಷ್ಣ-ಸೋನಾಲ್ ಮೊಂಟೇರಿಯೋ ಸಾಂಗತ್ಯದ ‘ಶುಗರ್ ಫ್ಯಾಕ್ಟರಿ’
ನಟ ಸಂಪತ್ ಮೈತ್ರೇಯ ಮತ್ತು ‘ಮೂರನೇ ಕೃಷ್ಣಪ್ಪ’
ಗ್ಯಾರೆಂಟಿ ‘ಶಕ್ತಿ’ಯ ಶತಕೋಟಿ ಸಂಭ್ರಮ; ಸಿಬ್ಬಂದಿ ಸಮೂಹಕ್ಕೆ ಚಿನ್ನದ ಪದಕದ ಸಂತಸ
ಬೆಂಗಳೂರು: ರಾಜ್ಯ ಸರ್ಕಾರದ ಮ್ಹವಾಕಾಂಕ್ಷಿ ‘ಗ್ಯಾರೆಂಟಿ’ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ’ಯ ಶತಕೋಟಿ ಸಂಭ್ರಮ ಸಮಾರಂಭ ಗಮನಸೆಳೆಯಿತು. ‘ಶಕ್ತಿ’ ಯೋಜನೆಯ ಪರಿಪೂರ್ಣ ಜಾರಿಯ ಜೊತೆಯಲ್ಲೇ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದ KSRTC ಚಾಲಕರನ್ನು ಅಭಿನಂಧಿಸಿ ಗೌರವಿಸಿದ ಸನ್ನಿವೇಶವೂ ಈ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿತು. ರಾಜ್ಯದ ಆಡಳಿತದ ‘ಶಕ್ತಿ’ಕೇಂದ್ರ ವಿಧಾನಸೌಧದಲ್ಲಿ ಶುಕ್ರವಾರ ‘ಶಕ್ತಿ’ ಗ್ಯಾರೆಂಟಿಯ ಶತಮಾನ ಸಂಭ್ರಮ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಹಿತ ಮಂತ್ರಿಗಳು, ಶಾಸಕರು, ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲಿ ಸಾರಿಗೆ ಸಂಸ್ಥೆಗಳ (KSRTC ಸಮೂಹ) ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಲಾಯಿತು. ಏನಿದು ಚಿನ್ನದ ಪದಕದ ಪುರಸ್ಕಾರ? ಗ್ರಾಮಾಂತರ ಸಾರಿಗೆಗಳಲ್ಲಿ 15 ವರ್ಷಗಳ ಅಪಘಾತ…
ಡಿಕೆಶಿ ಕೇಸ್; ಅಧಿವೇಶನದಲ್ಲಿ ಚರ್ಚೆಗೆ ಸಿದ್ದ ಎಂದ ಕಾಂಗ್ರೆಸ್
ಬೆಂಗಳೂರು: ಡಿ,ಕೆ.ಶಿವಕುಮಾರ್ ವಿರುದ್ಧ ಹಿಂದಿನ ಸರ್ಕಾರ ಹೊರಡಿಸಿದ್ದ ಸಿಬಿಐ ತನಿಖೆ ಆದೇಶವನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿದೆ. ಈ ಕುರಿತ ಸಂಪುಟ ನಿರ್ಧಾರಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು ಈ ವಿಚಾರದಲ್ಲಿ ಅಧಿವೇಶನದಲ್ಲಿ ಚರ್ಚೆಗೆ ಸಿದ್ದ ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ (ಡಿಎ) ಪ್ರಕರಣವನ್ನು ಹಿಂಪಡೆಯುವ ಸಂಪುಟ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ಬಿಜೆಪಿ ನಾಯಕರ ಟೀಕೆ ಕುರಿತಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಈ ವಿಚಾರವಾಗಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುರಿತಂತೆ ಬಿಜೆಪಿ ನಾಯಕರು ಅನಗತ್ಯ ಟೀಕೆ ಮಾಡುತ್ತಿದ್ದಾರೆ ಎಂದರು. ಕರ್ನಾಟಕದ ಇತಿಹಾಸದಲ್ಲಿ ಯಡಿಯೂರಪ್ಪ ಅವರ ಪ್ರಕರಣ ಸೇರಿದಂತೆ ಯಾವುದೇ…
ರಸ್ತೆ ಕಳಪೆ ಡಾಂಬರೀಕರಣ ಆರೋಪ: BJPಗೆ ತಿರುಗೇಟು ನೀಡಿದ ಜಿ.ಪಂ. ಮಾಜಿ ಸದಸ್ಯ ಚುಂಚೇಗೌಡ
ಬೆಂಗಳೂರು: ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ವೆಚ್ಚದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ರಸ್ತೆಗೆ ಹಾಕಲಾಗಿದ್ದ ಡಾಂಬರ್ , ಕಳಪೆಯಾಗಿದೆ ಎಂದು ಕೆಲ ಬಿಜೆಪಿ ಮುಖಂಡರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ಹೇಳಿದರು. ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನು ತಳ್ಳಿ ಹಾಕಿದರು. ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ.…
ದೊಡ್ಡಬಳ್ಳಾಪುರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳು ಇಂದು (ಶುಕ್ರವಾರ) ಕ್ಷಿಪ್ರ ಕಾರ್ಯಾಚರಣೆ ನಡೆಸಿದೆ. COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿರುವ ಅಧಿಕಾರಿಗಳು ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂಪಾಯಿ ದಂಡವನ್ನು ಸಂಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಆರೋಗ್ಯ ಸಿಬ್ಬಂದಿ ಧನಂಜಯ್ ಹಾಗೂ ಪೊಲೀಸ್ ಸಿಬ್ಬಂದಿ ನಾಗರಾಜು ಹಾಜರಿದ್ದರು.
‘ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ’: ಬಿವೈವಿ
ಬೆಂಗಳೂರು: ಅಕ್ರಮ ಆಸ್ತಿ ಕುರಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಹಿಂದಿನ ಸರ್ಕಾರ ಆದೇಶಿಸಿದ್ದ ಸಿಬಿಐ ತನಿಖೆಯ ತೀರ್ಮಾನವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆಯುವ ನಿರ್ದಾರ ಕೈಗೊಂಡಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷ ನಾಯಕರ ನಡುವೆ ವಾಗ್ದಾಳಿ ಆರಂಭವಾಗಿದೆ. ಸಂಪುಟ ಸಭೆಯಲ್ಲಿ ಡಿಕೆಶಿ ಕೇಸ್ ವಾಪಸ್ ಪಡೆಯುವ ಬಗ್ಗೆ ತೀರ್ಮಾನಿಸಿರುವ ಸಿದ್ದರಾಮಯ್ಯ ಸರ್ಕಾರದ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗಮಾಡಿದ ಹಲವು ಮಹನೀಯರು ಗೌರವದ ರಾಜಕಾರಣಕ್ಕೆ ಇತಿಹಾಸ ಬರೆದು ಹೋಗಿದ್ದಾರೆ ಎಂದಿದ್ದಾರೆ. ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ…
ಡಿಕೆಶಿ ವಿರುದ್ದದ ಸಿಬಿಐ ತನಿಖೆಯ ಆದೇಶ ಹಿಂಪಡೆಯುವ ತೀರ್ಮಾನ ಕಾನೂನು ಬಾಹಿರ; ಅಶೋಕ್
ಬೆಂಗಳೂರು: ಅಕ್ರಮ ಆಸ್ತಿ ಕುರಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಹಿಂದಿನ ಸರ್ಕಾರ ಆದೇಶಿಸಿದ್ದ ಸಿಬಿಐ ತನಿಖೆಯ ತೀರ್ಮಾನವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆಯುವ ನಿರ್ದಾರ ಕೈಗೊಂಡಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷ ನಾಯಕರ ನಡುವೆ ವಾಗ್ದಾಳಿ ಆರಂಭವಾಗಿದೆ. ಸಂಪುಟ ಸಭೆಯಲ್ಲಿನ ತೀರ್ಮಾನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಇದು ಕಾನೂನುಬಾಹಿರ ಕ್ರಮ ಎಂದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಅಶೋಕ್, ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ. ಇದನ್ನು ಖಂಡಿಸುತ್ತೇನೆ ಎಂದಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ @DKShivakumar ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ. ಇದನ್ನು ಖಂಡಿಸುತ್ತೇನೆ. — R. Ashoka (ಮೋದಿ…