ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ‘ಪುಷ್ಪ-2’ ತಂಡದಿದ 2 ಕೋ.ರೂ.ಪರಿಹಾರ ಘೋಷಣೆ

ಹೈದರಾಬಾದ್: ‘ಪುಷ್ಪ-2’ ಸಿನಿಮಾ ಪ್ರದರ್ಶನ ವೇಳೆ ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಚಿತ್ರತಂಡ 2 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ. ಚಿತ್ರ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆ ಮೃತಪಟ್ಟು ಮಗು ಗಾಯಗೊಂಡಿತ್ತು. ಹೈದರಾಬಾದ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ‘ಪುಷ್ಪ 2’ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಬುಧವಾರ 2 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ನಟ ಶಿವಣ್ಣ ಶೀಘ್ರ ಗುಣಮುಖರಾಗಲಿ; ಸಿಎಂ ಶುಭ ಹಾರೈಕೆ

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಬೇಗನೆ ಚೇತರಿಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ತಾವು ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. . ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ‘ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.… pic.twitter.com/dTNCjYFwME…

ಕಾಲ್ತುಳಿತ ಪ್ರಕರಣ; ಪೊಲೀಸರಿಂದ ನಟ ಅಲ್ಲು ಅರ್ಜುನ್ ಸುದೀರ್ಘ ವಿಚಾರಣೆ

ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಮಂಗಳವಾರ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರನ್ನು ಮೂರುವರೆ ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ಪುಷ್ಪಾ ತಾರೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಗಿ ಭದ್ರತೆಯ ನಡುವೆ ಚಿಕ್ಕಡ್‌ಪಲ್ಲಿ ಪೊಲೀಸ್ ಠಾಣೆಯಿಂದ ಅವರ ಮನೆಗೆ ತೆರಳಿದರು. ತನಿಖಾಧಿಕಾರಿಗಳು ನಟನನ್ನು ಅವರ ವಕೀಲರ ಸಮ್ಮುಖದಲ್ಲಿ ವಿಚಾರಣೆ ನಡೆಸಿದರು. ಡಿಸೆಂಬರ್ 4 ರಂದು “ಪುಷ 2: ದಿ ರೂಲ್” ಪ್ರೀಮಿಯರ್ ಶೋ ಸಮಯದಲ್ಲಿ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹೊರಹೊಮ್ಮಿದ ಹೊಸ ಸಿಸಿಟಿವಿ ಪುರಾವೆಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಅವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ ಪೊಲೀಸರು 10 ನಿಮಿಷಗಳ ವೀಡಿಯೊ ಮತ್ತು ಜೈಲಿನಿಂದ ಬಿಡುಗಡೆಯಾದ ನಂತರ ಮತ್ತು ಡಿಸೆಂಬರ್ 21 ರಂದು ಅಲ್ಲು ಅರ್ಜುನ್ ನೀಡಿದ ಹೇಳಿಕೆಗಳನ್ನು ಆಧರಿಸಿ ಅಲ್ಲು ಅರ್ಜುನ್…

ಮಗಳು ಆರಾಧ್ಯಳ ಶಾಲಾ ಕಾರ್ಯಕ್ರಮದಲ್ಲಿ ಐಶ್ವರ್ಯಾ-ಅಭಿಷೇಕ್

ಮುಂಬೈ: ಬಾಲಿವುಡ್ ತಾರೆಯರಾದ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ತಮ್ಮ ಮಗಳು ಆರಾಧ್ಯಳ ಶಾಲಾ ವಾರ್ಷಿಕೋತ್ಸವದ ಎರಡನೇ ದಿನದಂದು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ವಿಚ್ಛೇದನದ ಬಗ್ಗೆ ನಡೆಯುತ್ತಿರುವ ವದಂತಿಗಳ ನಡುವೆಯೇ ಈ ತಾರಾ ದಂಪತಿ ತಮ್ಮ ಸ್ಟೈಲಿಶ್ ನೋಟದಿಂದ ಗಮನ ಸೆಳೆದರು. ಐಶ್ವರ್ಯಾ ಅವರ ತಾಯಿ ಕೂಡ ಅವರೊಂದಿಗೆ ಇದ್ದರು. ಅವರ ಉಪಸ್ಥಿತಿಯನ್ನು ಸೆರೆಹಿಡಿಯುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. In this new clip Aishwarya Rai appears completely uninterested and seems to ignore both Abhishek and Amitabh Bachchan#AishwaryaRaiBachchan pic.twitter.com/HO8vReoAZ9 — Surajit (@surajit_ghosh2) December 24, 2024    ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ, ಐಶ್ವರ್ಯಾ ಕಪ್ಪು ಉಡುಪನ್ನು ಸ್ಲಿಂಗ್ ಬ್ಯಾಗ್‌ನೊಂದಿಗೆ ಧರಿಸಿರುವುದು ಕಂಡುಬಂದಿದೆ, ಆದರೆ ಅಭಿಷೇಕ್ ಕ್ಯಾಶುಯಲ್ ಹಸಿರು ಮೇಳದಲ್ಲಿ ಕಾಣುತ್ತಿದ್ದಾರೆ. ಐಶ್ವರ್ಯಾ ತನ್ನ ತಾಯಿಯ…

ಕೊಲೆ ಪ್ರಕರಣ: ದರ್ಶನ್ ಗೆಳತಿ ಪವಿತ್ರಾ ಗೌಡ ಜೈಲುವಾಸ ಅಂತ್ಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಆರು ತಿಂಗಳ ಹಿಂದೆ ನಟ ದರ್ಶನ ಹಾಗೂ ಇತರ ಆರೋಪಿಗಳೊಂದಿಗೆ ಜೈಲು ಸೇರಿದ್ದ ಪವಿತ್ರಾ ಗೌಡ ಇದೀಗ ಬಂಧಮುಕ್ತರಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶಸ್ತ್ರ ಚಿಕಿತ್ಸೆ ಕಾರಣಕ್ಕಾಗಿ ಮಧ್ಯಂತರ ಜಾಮೀನಿನಲ್ಲಿರುವ ನಟ ದರ್ಶನ್ ಅವರಿಗೆ ಇದೀಗ ಅಧಿಕೃತವಾಗಿ ಜಾಮೀನು ಮಂಜೂರಾಗಿದೆ. ಅಷ್ಟೇ ಅಲ್ಲ ಇತರ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಶುಕ್ರವಾರ ಆದೇಶಿಸಿದೆ.

‘ಪುಷ್ಪ-2: ದಿ ರೂಲ್’ ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್ ಬಂಧನ

ಹೈದರಾಬಾದ್: ‘ಪುಷ್ಪ-2: ದಿ ರೂಲ್’ ಚಿತ್ರದ ಗೆಲುವಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಇದೀಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ-2: ದಿ ರೂಲ್’ ಚಿತ್ರ ಪ್ರದರ್ಶನ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಈ ಡಿಸೆಂಬರ್ 4ರಂದು ಸಂಭವಿಸಿದ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಪ್ರಕರಣ ದಾಖಲಿಸಿರುವ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿ ನಾಂಪಲ್ಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಅಲ್ಲು ಅರ್ಜುನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರ ಜನವರಿ 10 ರಂದು ಬಿಡುಗಡೆ

ಶ್ರೀನಗರ ಕಿಟ್ಟಿ, ರಚಿತಾರಾಮ್ ನಟಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸಂಜು ವೆಡ್ಸ್ ಗೀತಾ ಸಿನಿಮಾ ಹಿಟ್ ಆದ ನಂತರದಲ್ಲಿ ಇದೀಗ ‘ಸಂಜು ವೆಡ್ಸ್ ಗೀತಾ 2’ ತೆರೆಗೆ ಬರಲು ಸಜ್ಜಾಗಿದೆ. ರಮ್ಯಾ ಅವರ ಸ್ಥಾನದಲ್ಲಿ ರಚಿತಾರಾಮ್ ಗಮನಸೆಳೆಯಲಿದ್ದು, ಈ ಸಿನಿಮಾ ಸ್ವಿಟ್ಜರ್ಲೆಂಡ್‌ನ ಸುಂದರವಾದ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿದೆ. ಚಲಪತಿ ಕುಮಾರ್, ನಾಗಶೇಖರ್ ಮೂವೀಸ್, ಪವಿತ್ರಾ ಇಂಟರ್ನ್ಯಾಷನಲ್ ಮೂವೀಸ್ ಮತ್ತು ಮಹಾನಂದಿ ಕ್ರಿಯೇಷನ್ಸ್ ಸಹಯೋಗದೊಂದಿಗೆ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ನಿರ್ಮಾಣಗೊಂಡಿದೆ. ಸಾಧು ಕೋಕಿಲ ಮತ್ತು ರಂಗಾಯಣ ರಘು ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ದೆಹಲಿ ಗಡಿಯಲ್ಲಿ ಹೋರಾಟ; ಒತ್ತಡಕ್ಕೆ ಮಣಿದು ಬಂಧಿತ ರೈತ ನಾಯಕರನ್ನು ಸತ್ಯಾಗ್ರಹ ಸ್ಥಳಕ್ಕೆ ಕರೆತಂದ ಪೊಲೀಸ್

ಬೆಂಗಳೂರು: ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತ ಉಪವಾಸ ಮುಷ್ಕರ ಕೈಗೊಳ್ಳುವ ಹಿಂದಿನ ದಿನವೇ ಮಧ್ಯರಾತ್ರಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲರನ್ನ ಪೊಲೀಸರು ಬಂಧಿಸಿದರೂ ಸಹ ಲೆಕ್ಕಿಸದೆ ಉಪವಾಸ ಮುಂದುವರಿಕೆ ನಾಲ್ಕನೇ ದಿನದಲ್ಲಿ ಮುಂದುವರಿದಿದೆ. ಬಂಧಿತ ರೈತ ನಾಯಕನನ್ನು ಬಿಡುಗಡೆ ಮಾಡಿ ದಲೈವಾಲರನ್ನು ಚಳುವಳಿ ಜಾಗಕ್ಕೆ ವಾಪಸ್ ಕರೆದುಕೊಂಡು ಬನ್ನಿ ನಂತರ ಸರ್ಕಾರದ ಜೊತೆ ಮಾತುಕತೆ ಎಂದು ಪಂಜಾಬ್ ಸರ್ಕಾರಕ್ಕೆ ಎಚ್ಚರಿಕೆಯನ್ನು ಚಳುವಳಿಗಾರರು ನೀಡಿದ್ದು, ಒತ್ತಡಕ್ಕೆ ಮಣಿದ ಮಣಿದ ಪೊಲೀಸರು ರೈತನಾಯಕರನ್ನು ವಾಪಸ್ ಕರೆತಂಡಿದ್ದಾರೆ. ಈ ಹೋರಾಟ ಕುರಿತಂತೆ ಮಾಹಿತಿ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯೆತರ ಸಂಘಟನೆಯ ದಕ್ಷಿಣ ಭಾರತ ಸಂಚಾಲಕ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಕರ್ನಾಟಕದಲ್ಲಿಯೂ ದೆಹಲಿಗೆ ರೈತ ಹೋರಾಟ ಬೆಂಬಲಿಸಿ ಡಿಸೆಂಬರ್ 6 ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಸತ್ಯಾಗ್ರಹ…

Cult Movie Shooting Member Suicide Attempt Case

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ ಶೂಟಿಂಗ್ ತಂಡದ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ ಇದೀಗ ನಟ ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ. ‘ಕಲ್ಟ್’ ಸಿನಿಮಾದಲ್ಲಿ ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಕರಣ ನಂತರ ಇಡೀ ಚಿತ್ರ ತಂಡ ವಿವಾದದಲ್ಲಿ ಸಿಲುಕಿದೆ.