ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;

ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮೊದಲಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಇನ್ನು ಗೃಹಲಕ್ಷ್ಮಿ ಯೋಜನೆಯಿಂದ…

ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣದ ಪವಿತ್ರ ಕಾಲದಲ್ಲಿ ‘ಬ್ರಹ್ಮಕುಂಡಿಕೆ’ಯು ಕಾವೇರಿ ಮಾತೆಯು ತೀರ್ಥಸ್ವರೂಪಿಣಿಯಾಗಿ ದರ್ಶನ ನೀಡಿದ ಅನನ್ಯ ಸನ್ನಿವೇಶವನ್ನು ಅಪಾರ ಸಂಖ್ಯೆಯ ಭಕ್ತರು ಕಣ್ತುಂಬಿಕೊಂಡರು. ತೀರ್ಥೋದ್ಭವ ಸಂದರ್ಭದಲ್ಲಿ ಬ್ರಹ್ಮಕುಂಡಿಕೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಬೆಳಗಿ ಕಾವೇರಿ ಮಾತೆಯನ್ನು ಸ್ವಾಗತಿಸಿದ ಕ್ಷಣವೂ ಗಮನಸೆಳೆಯಿತು. ಕೊಡಗು ಜಿಲ್ಲೆಯ ಬ್ರಹ್ಮಗಿರಿ ತಪ್ಪಲಿನ ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ ಸಾವಿರಾರು ಭಕ್ತರ ಭಾವೋದ್ವೇಗದ ನಡುವೆ ನಡುರಾತ್ರಿ 12 ಗಂಟೆ 57 ನಿಮಿಷಕ್ಕೆ ನಿಗಧಿತ ಮುಹೂರ್ತಕ್ಕಿಂತ ಎರಡು ನಿಮಿಷ ಮುನ್ನವೇ ನೆರವೇರಿತು. VC: @mysuruonline pic.twitter.com/RM3UUFEKb3 — Prathap Simha (@mepratap) October 18,…

“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಲವು ವೈಶಿಷ್ಟ್ಯಗಳಿಂದ ಗಮನಸೆಳೆಯಿತು.ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ–2ರ ಆವರಣದಲ್ಲಿ ನಡೆದ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಸಾರಿಗೆ‌ ಸಚಿವರು ಚಾಲನೆ ನೀಡಿದರು. ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಸಚಿವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು. ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿಲ್ಲ. ತಮ್ಮ ಸರ್ಕಾರ ಜಾರಿಗೆ ಬಂದ 18 ತಿಂಗಳು ಅವಧಿಯಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಈವರೆಗೆ 3417 ವಾಹನಗಳನ್ನು ಸೇರಿಸಲಾಗಿದೆ. ನಿಗಮವು ನೂತನವಾಗಿ…

ರಾಜ್ಯದ ಅತಿ ಎತ್ತರದ 63 ಅಡಿ ಶ್ರೀರಾಮಾಂಜನೇಯ ಮೂರ್ತಿ ಅ‌ 23ರಂದು ಲೋಕರ್ಪಣೆ

ಬೆಂಗಳೂರು; ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ. 21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಮಾಧ್ಯಮಗೋಷ್ಟಿಯಲ್ಲಿ, ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಡಾ||ಹೆಚ್.ಎಂ.ಕೃಷ್ಣಮೂರ್ತಿ, ಶ್ರೀರಾಮ ಸೇವಾ ಮಂಡಳಿ ಅಧ್ಯಕ್ಷ ಕೆ.ಎಸ್.ಶ್ರೀಧರ್ , ಮಾಜಿ ಬಿಬಿಎಂಪಿ ಸದಸ್ಯ ಮೋಹನ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ ಎಂದರು. 21 ರಂದು ಸಂಜೆ ಗಣಪತಿಪೂಜೆ , ವಿದ್ವಜ್ಜನ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಕಳಸ ಪ್ರತಿಷ್ಟಾಪನೆ ಕಾರ್ಯ ಶುಭಾರಂಭವಾಗಲಿದೆ. 22 ರಂದು ಬೆಳಗ್ಗೆ 63ಅಡಿಯ ಶ್ರೀರಾಮಾಂಜನೇಯ ಚರಪ್ರತಿಷ್ಟಾನದ ಪೂಜೆ, ಹೋಮ ಸಂಕಲ್ಪವನ್ನು…

IMA ವಂಚನೆ ಪ್ರಕರಣದ ಪ್ರತಿಧ್ವನಿ; ಸಿದ್ದು ಸಂಪುಟದ ಸಚಿವರ ಬಂಧನಕ್ಕೆ ಯತ್ನಾಳ್ ಆಗ್ರಹ

ಬೆಂಗಳೂರು: IMA ವಂಚನೆ ಪ್ರಕರಣದಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರನ್ನು ಬಂಧಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಆಗ್ರಹಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆಕ್ಷೇಪಿಸಿ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು ನೀಡಿದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಪ್ರಭಾವಿಗಳನ್ನು ಸರ್ಕಾರ ರಕ್ಷಿಸದೇ IMA ಹಗರಣದಲ್ಲಿ ಭಾಗಿಯಾಗಿರುವ ಸಚಿವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಬಸನಗೌಡ ಪಾಟೀಲ್ ಯತ್ನಾಳ್, IMA ಸಂಸ್ಥೆಯಿಂದ ಸಚಿವ ಜಮೀರ್ ಅಹಮ್ಮದ್ ಅವರು ನಗದು (ಕ್ಯಾಶ್) ಮೂಲಕ ಸುಮಾರು 29.38 ಕೋಟಿ ಸ್ವೀಕರಿಸಿದ್ದರು ಹಾಗೂ 25 ಕೋಟಿ ರೂ ಅನ್ನು ಸಾಲವಾಗಿ ಪಡೆದಿದ್ದರು. ಈ ಸಾಲವನ್ನು ಜಮೀರ್ ಹಿಂದುರಿಗಿಸಿರಲಿಲ್ಲ. 25 ಕೋಟಿ ಸಾಲ ಮರುಪಾವತಿ ಮಾಡದೆ ಇದ್ದದ್ದಕ್ಕೆ IMA ಇಂದ ಯಾವುದೇ ಕಾನೂನು ಕ್ರಮ ಕೂಡ…

ವಿಮಾನಗಳಿಗೆ ಬಾಂಬ್ ಗುಮ್ಮಾ; 8 FIR ದಾಖಲು

ನವದೆಹಲಿ: ವಿಮಾನಗಳಲ್ಲಿ ಬಾಂಬ್ ಬೆದರಿಕೆಯ ಪ್ರಕರಣಗಳ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಕುರಿತು 8 ಎಫ್‌ಐಆರ್‌ಗಳನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ವಿವಿಧ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಆರೋಪ; ಅಧಿಕಾರಿಗಳ ಅಮಾನತು

ಬೆಂಗಳೂರು: ಸಾಮಾಜಿಕ ಜಾಲತಾಗಳಲ್ಲಿ ಹಂಚಿಗೊಂಡ ವೀಡಿಯೋದಲ್ಲಿ, ಕೆಲ ಇಲಾಖಾ ಅಧಿಕಾರಿಗಳು ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಸಂಬಂದ ಬಂದ ದೂರಿನ ಹಿನ್ನೆಲೆಯಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಸಂಭಾಷಣೆಯಲ್ಲಿ, ಬೆಂಗಳೂರು ಜಯನಗರದ ವಿನಾಯಕ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರು ಪ್ರಸ್ತಾಪವಾಗಿದೆ. ಅವರು ಸೋಮಶೇಖರ್ ಅವರ ಸೂಚನೆ ಮೇರೆಗೆ, ದೇವಾಲಯದಿಂದ 25,000 ರೂ.ಗಳನ್ನು ದೇವಾಲಯದ ಸ್ವಚ್ಛತೆ ಕಾರ್ಯ, ಬೀಗದ ಕೀಲಿ ರಿಪೇರಿ ಮತ್ತು ಹಬ್ಬದ ಖರೀದಿಗಳ ಹೆಸರಲ್ಲಿ ದುರುಪಯೋಗಪಡಿಸಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಟಿ.ಎನ್. ಮಂಜುಳ ಮತ್ತು ಗಿರೀಶ್ ರವರನ್ನು ಮುಜರಾಯಿ ಇಲಾಖೆ ಆಯುಕ್ತ ಡಾ.ವೆಂಕಟೇಶ್ ಅವರು ಮುಜರಾಯಿ ಸಚಿವರ ನಿರ್ದೇಶನದಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 ಮತ್ತು 2002ರ…