ಬೆಂಗಳೂರು: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಸಂಬಧ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Day: October 22, 2024
ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬೃಹತ್ ಸಮಾವೇಶ ಗಮನಸೆಳೆಯಿತು. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಕೊಡುಗೆಗಳ ಬಗ್ಗೆ ಅರ್ಚಕ ಸಮೂಹ ಮೆಚ್ಚುಗೆ ವ್ಯಕ್ತಪಡಿಸಿತು. ಈ ಒಕ್ಕೂಟದ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ಎ, ಬಿ ಮತ್ತು ಸಿ ವರ್ಗದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ ದುಮ್ಮಾನಗಳಿಗೆ ಸ್ಪಂದಿಸಿ ಸದಾ ಅವರ ಏಳಿಗೆಗಾಗಿ ಸುಮಾರು 50 ವರ್ಷಗಳಿಂದ ಸರ್ಕಾರದೊಡನೆ ಹೋರಾಡುತ್ತಿರುವ ಹಿಂದು ಧಾರ್ಮಿಕ ಸರ್ವ ಸಮಾಜದ ದೇವಾಲಯಗಳ ನೌಕರರನ್ನು ಒಳಗೊಂಡಿರುವ ಸಂಸ್ಥೆಯಾಗಿರುತ್ತದೆ. ಸೋಮವಾರ ನಡೆದ ಸಮಾವೇಶದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಅರ್ಚಕರುಗಳು ಕಿಕ್ಕಿರಿದು ನೆರೆದಿದ್ದರು. ಸಮಾವೇಶದಲ್ಲಿ ಮಾತನಾಡಿದ ಧಾರ್ಮಿಕ ಮುಖಂಡರು, ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ ನಮ್ಮ ಮುಜರಾಯಿ ಇಲಾಖೆಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯ…
ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಜಲಸಮಾಧಿ; ಒಂದು ಶವ ಪತ್ತೆ
ಬೆಂಗಳೂರು: ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿರುವ ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಒಂದು ಮೃತದೇಹ ಮಂಗಳವಾರ ಪತ್ತೆಯಾಗಿದೆ. ಬಿಬಿಎಂಪಿಯಲ್ಲಿ ಪೌರಕಾರ್ಮಿಕ ಮಹಿಳೆಯ ಮಕ್ಕಳು ಸಾವನ್ನಪ್ಪಿದ್ದು ಅವರನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು ಮಹಾಲಕ್ಷ್ಮಿ (13) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಇವರು ಕೆಂಗೇರಿ ಸಮೀಪದ ಹರ್ಷ ಲೇಔಟ್ ಬಳಿ ನೆಲೆಸಿದ್ದರು. ಕೆಲಸಕ್ಕೆಂದು ತಾಯಿ ಹೊರ ಹೋಗಿದ್ದ ಸಂದರ್ಭದಲ್ಲಿ ಈ ಮಕ್ಕಳು ಕೆರೆಯ ಬಳಿಗೆ ತೆರಳಿದ್ದರೆನ್ನಲಾಗಿದ್ದು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸುದೀರ್ಘ ಕಾರ್ಯಾಚರಣೆ ನಡೆಸಿದ್ದಾರೆ.
ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
ಹೈದರಾಬಾದ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೊಟೆಲ್ ಗೆ ಆಗಮಿಸಿದ್ದ ವ್ಯಕ್ತಿಯೋರ್ವ ನಾಯಿಯನ್ನು ಓಡಿಸುವ ಆತುರದಲ್ಲಿ ತಾನೇ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಚಂದಾನಗರದಲ್ಲಿ ಈ ಘಟನೆ ನಡೆದಿದ್ದು ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಏರೆ ಬಗ್ಗೆ ಪ್ರಕರಣ ದಾಖಲಿಸಿರುವ ಚಂದಾನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್, ಎರಡು ದಿನಗಳಲ್ಲಿ ತೀರ್ಮಾನ ಸಾಧ್ಯತೆ
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್ ಅವರಿಗೆ ಟಿಕೆಟ್ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್ ಸಿಗಬಹುದು ಎಂದರು. ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ…
ಮೀಸಲು ಅರಣ್ಯ ಒತ್ತುವರಿ ದೂರು; ತೇಜೋವಧೆ ಮಾಡುವ ಹುನ್ನಾರ ಎಂದ ಸಚಿವ ಬೋಸರಾಜು
ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್.ಓ.ಸಿ ನಂ. 16/2022-23 ನೋಟೀಸನ್ನು ಈಗಾಗಲೇ ಉಚ್ಚನ್ಯಾಯಾಲಯದ ಕಲಬುರ್ಗಿ ಪೀಠ ರದ್ದುಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಭೋಸರಾಜು, 1987 ರಲ್ಲಿ ನಾನು ಯಾವುದೇ ಹುದ್ದೆಯಲ್ಲೂ ಇರಲಿಲ್ಲ. ಕೃಷಿಗಾಗಿ ಅಂದಿನ ಕಾಲದಲ್ಲಿ ನನ್ನ ಕುಟುಂಬದಿಂದ ಭೂಮಿಯನ್ನು ಖರೀದಿಸಲಾಗಿತ್ತು. ಭೂಮಿ ಖರೀದಿಯ ಸಂಧರ್ಭದಲ್ಲಿ ಕಂದಾಯ ದಾಖಲೆಗಳು, ಕ್ರಯಪತ್ರಗಳು ಹಾಗೂ ಇನ್ನಿತರೆ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಲಾಗಿತ್ತು. ಪರಿಶೀಲನೆ ನಂತರ ಮೂಲ ಜಮೀನಿನ ಮಾಲೀಕರಿಂದ ಭೂಮಿಯನ್ನು ಖರೀದಿಸಲಾಗಿತ್ತು ಎಂದರು. ನಾನು ಇದೇ ಮೊದಲ ಬಾರಿಗೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೊದಲ ಬಾರಿ…