ಡಿಕೆಶಿ ಚನ್ನಪಟ್ಟಣದ ಮನೆ ಮಗನಾದರೆ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ:  ಆರ್‌.ಅಶೋಕ

ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ ಮಾತು ಆಡುತ್ತಾರೆ ಎಂದು ಪ್ರತಿಪಕ್ಷ ಆರ್‌.ಅಶೋಕ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್‌ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎರಡೂ ಪಕ್ಷ ಇರುವುದರಿಂದ ಗೆಲುವು ಸಮೀಪದಲ್ಲಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಈ ಹಿಂದೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಬಿಜೆಪಿಯ ಸಾಂಪ್ರದಾಯಿಕ ಮತಗಳೂ ಸಿಗುವುದರಿಂದ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಹಣವನ್ನು ಬೇರೆಡೆ ವರ್ಗಾಯಿಸಿರುವುದು ಮೊದಲಾದ ಕಾರಣಗಳಿಂದ ಜನರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸವಿಲ್ಲ ಎಂದರು. ಈ 16 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕಾಗಲೀ, ರಾಮನಗರಕ್ಕಾಗಲೀ ಭೇಟಿ ನೀಡಿಲ್ಲ. ಭೇಟಿ ನೀಡಲು ಕೂಡ ಸಮಯವಿಲ್ಲವೆಂದಾದರೆ ಅಭಿವೃದ್ಧಿ ಹೇಗೆ…

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

ಬೆಂಗಳೂರು: ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರಿಂದ ತಯಾರಿ ನಡೆದಿದೆ. ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್ ಆಂಜನೇಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಿದ್ದರಾಮಯ್ಯ ಅವರ ಸರ್ಕಾರ ಮುಂದಾಗಿದೆ. ಶೋಷಿತರ ಪರವಾಗಿ ದಿಟ್ಟ ತೀರ್ಮಾನ ತೆಗೆದುಕೊಂಡಿದೆ. ಏಕೆ ಸದಸ್ಯ ಆಯೋಗವನ್ನು ಈಗ ರಚನೆ ಮಾಡಿದ್ದು. ಈ ಆಯೋಗವು ಮೂರು ತಿಂಗಳಲ್ಲಿ ವರದಿಯನ್ನು ನೀಡಬೇಕು. ನಾಲ್ಕನೇ ತಿಂಗಳಲ್ಲಿ ಇದು ಅನುಷ್ಠಾನಕ್ಕೆ ಬರಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ಬಡವರ, ಶೋಷಿತರ, ತುಳಿತಕ್ಕೆ ಒಳಗಾದವರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಹರಿಕಾರರು. ಒಳ ಮೀಸಲಾತಿ ವಿಚಾರ ನಿರ್ಧಾರವಾಗುವ ತನಕ, ಹೊಸದಾಗಿ ನೇಮಕಾತಿ ಆದೇಶ ಹೊರಡಿಸಬಾರದು ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಒಳ ಮೀಸಲಾತಿ ಪರವಾಗಿ ನಿಂತ…

KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ

ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ ನೋಡಲಾಯಿತು. ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮುಂಭಾಗದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.‌ ಆರ್.‌ ಶ್ರೀನಿವಾಸ್‌ (ವಾಸು) ಹಾಗೂ ಉಪಾಧ್ಯಕ್ಷ ಮೊಹಮ್ಮದ್‌ ರಿಜ್ವಾನ್‌ ನವಾಬ್‌ ಉಪಸ್ಥಿತಿಯಲ್ಲಿ, ನೂತನ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವಾಗ ಅಪಘಾತಕ್ಕೆ ಒಳಪಟ್ಟು ಮೃತರಾದ 2 ಸಿಬ್ಬಂದಿಗಳ ಅವಲಂಭಿತರಿಗೆ ಸಾರಿಗೆ ಸುರಕ್ಷಾ ಪರಿಹಾರ ವಿಮಾ ಯೋಜನಡಿ ತಲಾ ರೂ.1 ಕೋಟಿ ಪರಿಹಾರ ಚೆಕ್‌ನ್ನು ಹಾಗೂ ಅಪಘಾತ ಹೊರತುಪಡಿಸಿ ಖಾಯಿಲೆ ಇತ್ಯಾದಿ ಕಾರಣಗಳಿಂದ ಮೃತರಾದ 5 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆ ಅಡಿ ತಲಾ…

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ತೂಗುದೀಪಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕೋರಿಕೆಯನ್ನು ಮನ್ನಿಸಿ ಹೈಕೋರ್ಟ್ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿರುವ ನಟ ದರ್ಶನ್​ಗೆ ಹೈಕೋರ್ಟ್ ಆದೇಶದಿಂದ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಜಾಮೀನು ಪಡೆದ ಬಳಿಕ ಪ್ರತಿ ವಾರವೂ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು. ಜೊತೆಗೆ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಸುಪರ್ದಿಗೆ ನೀಡಬೇಕು ಎಂದು ಸೂಚಿಸಿದೆ. ಈ ಜಾಮೀನು ಅವಧಿಯಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖನಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ“, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ , ಬೆಂಗಳೂರಿನ “ಪ್ರಜಾ ಸಂದೇಶ” ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ ” ಪ್ರಜಾ ಸಂದೇಶ ದತ್ತಿ ಪ್ರಶÀಸ್ತಿ “ ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು…

‘ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ’ 

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಸೇರಿದಂತೆ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಇದು ಜಾರಿಯಾಗಲು ಇಷ್ಟವಿಲ್ಲ. ಎಲ್ಲ ಅವಕಾಶವಿದ್ದರೂ ಮತ್ತೆ ಆಯೋಗ ರಚಿಸಿ, ಮೂರು ತಿಂಗಳವರೆಗೆ ಕಾಯಲು ನಿರ್ಧರಿಸಲಾಗಿದೆ. ಇನ್ನು ಜನಗಣತಿ ಆರಂಭವಾದರೆ ಆಗ ಮತ್ತೊಂದು ಸಬೂಬು ಹೇಳಬಹುದು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು. ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಒಪ್ಪಿತ್ತು. ಎಷ್ಟು ಮೀಸಲು ನೀಡಬೇಕೆಂದು ತಿಳಿಸಲಾಗಿತ್ತು. ಇನ್ನು ಯಾವುದೇ ಹುನ್ನಾರ ಮಾಡದೆ ಸರ್ಕಾರ ಒಳಮೀಸಲು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡುತ್ತಿರುವುದರಿಂದಲೇ ಭಯೋತ್ಪಾದನೆ, ಮತಾಂಧತೆ ನಡೆಯುತ್ತಿದೆ.…