ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. 18-09-2024ರಿಂದ ಏರ್ಪಡಿಸಲಾಗಿದ್ದ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲು 07-11-2024 ರಿಂದ 11-11-2024 ರವರೆಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ನಿಗಮ ನಡೆಸಲಿದೆ. ಈ ಸಂಬಂಧ ನಿಗಮ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ. ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು 18-09-2024 ರಿಂದ ನಡೆಸಲಾಗುತ್ತದೆ. ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್. ಎಂ.ಎಸ್ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್-ಸೈಟ್‌ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿ…
Day: November 1, 2024
ಬೆಂಗಳೂರಿನ BGS ಆಸ್ಪತ್ರೆಗೆ ನಟ ದರ್ಶನ್ ದಾಖಲು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದರ್ಶನ್ ಅವರು ಶನಿವಾರ ದಾಖಲಾಗಿದ್ದಾರೆ. ದರ್ಶನ್ ಆಗಮನ ಹಿನಯ ಆಸ್ಪತ್ರೆಗೆ ಬಳಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ಕಾರಣದಿಂದಾಗಿ ಆಸ್ಪತ್ರೆ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!
ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಬರೆದಿರುವ ಪತ್ರ ಗಮನಸೆಳೆದಿದೆ. ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. “ದೇಶದಾದ್ಯಂತ ರೈತರ, ದೇವಸ್ಥಾನಗಳ, ಟ್ರಸ್ಟ್‌ಗಳ ಮತ್ತು ಮಠಗಳ ಜಮೀನುಗಳ ಮೇಲೆ ವಕ್ಫ್ ಮಂಡಳಿಯು ಹಕ್ಕು ಸಾಧಿಸುತ್ತಿರುವುದು ವಿಷಾದದ ಸಂಗತಿ. ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು” –ಯತ್ನಾಳ್ ಆಗ್ರಹ. Karnataka BJP MLA Basanagouda R Patil writes a letter to PM Narendra Modi “I humbly request your esteemed office to consider nationalizing Waqf properties…
ಆಂಗ್ಲರ ನಾಡಲ್ಲೂ ಕರುನಾಡ ವೈಭವ; ‘ಕನ್ನಡ ಡಿಂಡಿಮ’ಕ್ಕೆ ಸಾಕ್ಷಿಯಾದ ಲಂಡನ್ ಮಂದಿ
📝 ಡಾ.ನೀರಜ್ ಪಾಟೀಲ್, ಯುನೈಟೆಡ್ ಕಿಂಗ್‌ಡಮ್ ಸಾಗರೋತ್ತರ ರಾಷ್ಟ್ರ, ಆಂಗ್ಲರ ನಾಡಿನಲ್ಲೂ ಕನ್ನಡದ ಕಂಪು ಆವರಿಸಿದೆ. ಲಂಡನ್‌ಗೂ ಕರುನಾಡಿನ ಆರಾಧ್ಯ ದೈವ ವಿಶ್ವಗುರು ಬಸವೇಶ್ವರರನ್ನು ಕೊಂಡೊಯ್ದಿರುವ ಕನ್ನಡಿಗರು, ಇದೀಗ ಕನ್ನಡ ರಾಜ್ಯೋತ್ಸವವನ್ನೂ ನಾಡಭಕ್ತಿಯ ವೈಭವದೊಂದಿಗೆ ಆಚರಿಸಿದ್ದಾರೆ. ಕನ್ನಡ ರಾಜೋತ್ಸವದ ಮುನ್ನಾದಿನದಂದು, ಲಂಡನ್‌ನಲ್ಲಿರುವ ಕನ್ನಡಿಗರು ಕರುನಾಡಿನ ಶ್ರೀಮಂತ ಪರಂಪರೆ, ಭಾಷೆ ಮತ್ತು ಸಂಸ್ಕೃತಿ ವೈಭವದ ಪ್ರತೀಕವಾಗಿ ಆಚರಿಸಿದರು. ಪ್ರತೀ ವರ್ಷ ನವೆಂಬರ್ 1 ರಂದು ಲಂಡನ್‌ನಲ್ಲೂ ಅನಿವಾಸಿ ಕನ್ನಡಿಗರು ಕನ್ನಡ ರಾಜೋತ್ಸವ ಆಚರಿಸಿ ಕರ್ನಾಟಕ ರಚನೆಯನ್ನು ಸ್ಮರಿಸುತ್ತಾರೆ. ಇದು ವಿಶ್ವಾದ್ಯಂತ ಕನ್ನಡಿಗರಿಗೆ ಹೆಮ್ಮೆ ಮತ್ತು ಏಕತೆಯ ದಿನವಾಗಿದೆ. ಈ ಸಂದರ್ಭವು ಕರ್ನಾಟಕ ಮತ್ತು ಭಾರತವನ್ನು ತಮ್ಮ ಮನೆ ಎಂದು ಕರೆಯುವ ಪ್ರತಿಯೊಬ್ಬರ ಏಕತೆ, ಹೆಮ್ಮೆ ಮತ್ತು ಹಂಚಿಕೆಯ ಹೆಗ್ಗುರುತನ್ನು ಪ್ರತಿನಿಧಿಸುತ್ತದೆ. ಕರ್ನಾಟಕದ ವೈವಿಧ್ಯಮಯ ಸಂಪ್ರದಾಯಗಳು, ಕಲಾ ಪ್ರಕಾರಗಳು ಮತ್ತು ಭಾಷಾ ಪರಂಪರೆಗೆ ಗೌರವವಾಗಿ, ನಾವು ಕನ್ನಡ ಭಾಷೆ ಮತ್ತು…
ದೆಹಲಿಯಲ್ಲಿ ಕನ್ನಡದ ಕಂಪು; ರಾಜ್ಯೋತ್ಸವ ಸಮಾರಂಭ
ನವದೆಹಲಿ: ೬೯ನೇ ಕನ್ನಡ ರಾಜ್ಯೋತ್ಸವವನ್ನು ನವದೆಹಲಿಯಲ್ಲಿ ಆಚರಿಸಲಾಯಿತು. ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೇಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭಾಗವಹಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ದ್ವಜಾರೋಹಣ ನಡೆಸಿದರು. ಭಾರತ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸದ ನಿಮಿತ್ತ ದೆಹಲಿಯಲ್ಲಿ ತಂಗಿದ್ದೆ, ದೆಹಲಿಯಲ್ಲಿ ತಾಯಿ ಕನ್ನಡಾಂಭೆಯ ಪೂಜೆ ಮಾಡುವ ಮತ್ತು ಧ್ವಜಾರೋಹಣ ಮಾಡುವ ಸದಾವಕಾಶ ನನಗೆ ಲಭ್ಯವಾಗಿದೆಯೆಂದು ಸಚಿವ ವಿ. ಸೋಮಣ್ಣ ಅತ್ಯಂತ ಹರ್ಷ ವ್ಯಕ್ತ ಪಡೆಸಿದರು. ದೆಹಲಿ ಕರ್ನಾಟಕ ಸಂಘದಲ್ಲಿ ಕನ್ನಡಾಂಬೆಯ ಕಾರ್ಯಕ್ರಮವನ್ನು ಆಯೋಜಿಸಿದ್ದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಇನ್ನು ಮುಂದೆಯು ಕನ್ನಡ ಪರ ಹತ್ತಾರು ಕಾರ್ಯಕ್ರಮಗಳನ್ನು ವಿಶೇಷ ರೀತಿಯಿಂದ ಆಯೋಜಿಸುವಂತೆ ಸಲಹೆ ನೀಡಿದರು ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನಿಯರ ವ್ಯಕ್ತಿತ್ವವನ್ನು ರಾಷ್ಟ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ…
69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ 69 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ನೆರವೇರಿಸಿ, ಶಾಲ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಮಾತನಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಾಲಾ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.
“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..
ನಟ ಡಾಲಿ ಧನಂಜಯ್ ಅವರು ವೈದ್ಯೆಯನ್ನು ವಿವಾಹವಾಗಲಿದ್ದಾರೆ. ತಾವು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಎಂಬವರೊಂದಿಗೆ ವಿವಾಹವಾಗುವ ಮಾಹಿತಿಯನ್ನು ಧನಂಜಯ್ ಹಂಚಿಕೊಂಡಿದ್ದಾರೆ. ಪ್ರೀತಿಯ ಕರುನಾಡಿಗೆ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯ ಕೋರಿ ಪೋಸ್ಟ್ ಹಾಕಿರುವ ಧನಂಜಯ್, ‘ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ’ ಎಂದು ಕೋರಿದ್ದಾರೆ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗೋಕು ಎಂದೂ ಬರೆದುಕೊಂಡಿದ್ದಾರೆ. ಸ್ತ್ರೀರೋಗ ತಜ್ಞೆಯಾಗಿರುವ ಧನ್ಯತಾ ಜೊತೆ ಡಾಲಿ ಧನಂಜಯ ಅವರು ಅನೇಕ ವರ್ಷಗಳ ಪರಿಚಯ ಹೊಂದಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಇವರು ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ. View this post on Instagram A post shared by Daali Dhananjaya (@dhananjaya_ka)…
ದೇವಾಲಯದ ಆಸ್ತಿಗೂ ವಕ್ಫ್ ಕಣ್ಣು! ಸಾರ್ವಜನಿಕರ ಆಕ್ರೋಶ
ಮಂಡ್ಯ: ರಾಜ್ಯದ ಹಲವೆಡೆ ವಿವಾದದ ಬಿರುಗಾಳಿ ಎಬ್ಬಿಸಿರುವ ವಕ್ಫ್ ಜಮೀನು ವಿಚಾರ ಮಂಡ್ಯ ಜಿಲ್ಲೆಯಲ್ಲೂ ಆಕ್ರೋಶದ ಅಲೆ ಎಬ್ಬಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಜಮೀನಿನ ಪಹಣಿಯಲ್ಲೂ ವಕ್ಫ್ ಹೆಸರು ಕಾಣಿಸಿಕೊಂಡಿದೆ. ಸರ್ವೆ ನಂಬರ್ 74 ರಲ್ಲಿರುವ ದೇಗುಲ ಹಾಗೂ ದೇಗುಲಕ್ಕೆ ಸೇರಿ 6 ಗುಂಟೆ ಜಾಗ ವಕ್ಫ್ ಆಸ್ತಿ ಎಂದು ನಮೂದಾಗಿದೆ. ದೇವಸ್ಥಾನದ ಆಸ್ತಿ ವಕ್ಫ್ ಹೆಸರಿಗೆ ಸೇರ್ಪಡೆ ಆಗಿದ್ದಾದರೂ ಹೇಗೆ ಎಂಬ ನಿಗೂಢತೆ ಜನರನ್ನು ಕಾಡಿದೆ. ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಹೆಸರು ಕಳೆದ ಹಲವು ವರ್ಷಗಳಿಂದ ಪಹಣಿಯಲ್ಲಿ ನಮೂದಾಗುತ್ತಿತ್ತು. ಹಲವು ದಶಕಗಳ ಹಿಂದೆಯೇ ಈ ದೇಗುಲ ನಿರ್ಮಾಣವಾಗಿರುವುದು. ಆದರೆ, ಒಂದು ವರ್ಷದ ಹಿಂದೆ ದಿಢೀರಾಗಿ ‘ವಕ್ಫ್ ಆಸ್ತಿ’ ಎಂದು ನಮೂದಿಸಲಾಗಿದೆ. ವಕ್ಫ್ ಒಡೆತನದಲ್ಲಿ ದೇಗುಲವಿದೆ ಎಂಬ ದಾಖಲೆ ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನಮ್ಮೂರಲ್ಲಿ ಮುಸ್ಲಿಂ ಪ್ರಾಬಲ್ಯವೂ…