ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ. ಈ ಬೆಳವಣಿಗೆಯಿಂದಾಗಿ ಡಿಕೆಶಿ ಅವರು ಸ್ವಲ್ಪ ನಿರಾಳರಾಗಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪ ಕುರಿತ ಸಿಬಿಐ ತನಿಖೆಯ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿ ಸೋಮವಾರ ವಿಚಾರಣೆಗೆ ಬಂದಿತ್ತು. ಆದರೆ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿತು. ಇದೇ ವೇಳೆ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಸಲ್ಲಿಸಿರುವ ಅರ್ಜಿ ಕೂಡಾ ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಪೀಠವು ವಿಚಾರಣೆಯನ್ನು ನಾಲ್ಕು…
Day: November 4, 2024
ಮುಡಾ ನಿವೇಶನ ಅಕ್ರಮ ಆರೋಪ; ಸಿಎಂಗೆ ಲೋಕಾಯುಕ್ತ ನೋಟೀಸ್
ಬೆಂಗಳೂರು: ಮುಡಾ ಹಗರಣ ಆರೋಪ ಕುರಿತಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಮೊದಲ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ವಿಚಾರಣೆಗೆ ಗುರಿಪಡಿಸಿರುವ ಲೋಕಾಯುಕ್ತ ಪೊಲೀಸರು ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೂ ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6ರಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ
ಹಾವೇರಿ: ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಕ್ಫ್ ವಿವಾದ ಕುರಿತು ಬಿಜೆಪಿ ನಡೆಸಿರುವ ಪ್ರತಿಭಟನೆ ಬಗ್ಗೆ ಹಾವೇರಿ ಜಿಲ್ಲೆ ಶಿಗ್ಗಾವಿ ಬಳಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿಯವರು ಉಪ ಚುನಾವಣೆಗೋಸ್ಕರ ರಾಜಕೀಯ ಮಾಡ್ತಿದ್ದಾರೆ ಎಂದು ಆರೋಪಿಸಿದರು. ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದಾರೆ ಎಂದು ಆರೋಪಿಸಿದರು. ಯಾವ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್ನವರು ಯಾವ ಕಾರಣಕ್ಕೂ ಖಾಲಿ ಮಾಡಿಸುವುದಿಲ್ಲ ಎಂದು ಭರವಸೆ ನೀಡಿದ ಸಿಎಂ, ಕಂದಾಯ ದಾಖಲೆಗಳಲ್ಲಿ ಇರುವ ವಕ್ಫ್ ಹೆಸರುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ…
ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು
ರಾಮನಗರ (ಉತ್ತರಾಖಂಡ): ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಬಸ್ಸೊಂದು ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಉರುಳಿಬಿದ್ದಿದ್ದು ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ನಡುವೆ, ಅಪಘಾತ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೆರವು ಪ್ರಕಟಿಸಿದೆ.
ವಕ್ಫ್ ಮಂಡಳಿಯ ಎಲ್ಲ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಿ; ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು: ಕರ್ನಾಟಕದ ವಕ್ಫ್ ಮಂಡಳಿಗೆ ಸಂಬಂಧಿಸಿದ ಎಲ್ಲ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್.ಅಶೋಕ ಕೇಂದ್ರ ಸಚಿವರಿಗೆ ಹಾಗೂ ವಕ್ಫ್ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ. ರೈತರ ಜಮೀನು ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು…
ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ
ಬೆಂಗಳೂರು: ವಕ್ಫ್ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಬಿಜೆಪಿ ಆಗ್ರಹಿಸಿದೆ. ವಕ್ಫ್ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್.ಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕ ಆರ್.ಅಶೋಕ್ ,ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್ ಅಹ್ಮದ್ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ…