ರಾಮನನಗರ: ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂಬ ಪ್ರಕರಣ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ಕೈಗೊಂಡ ಆರ್.ಅಶೋಕ್, ಅಧಿಕಾರಿ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ. ಹಣ ನೀಡಿದರೆ ಮಾತ್ರ ಇಲ್ಲಿ ಬದುಕಲು ಸಾಧ್ಯ ಎಂದು ಟೀಕಿಸಿದರು. ಏನೇ ಕೇಳಿದರೂ ಎಸ್‌ಐಟಿ ರಚನೆ ಎಂದು ಹೇಳುತ್ತಾರೆ. ಯಾರು ಸತ್ತರೂ ಎಸ್‌ಐಟಿ…
Day: November 5, 2024
ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ; ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ದಂಪತಿಗಳನ್ನು ದೂರಮಾಡಿ ಅಸ್ತಿ ಕಬಳಿಸಲು ಸಚಿವ ಭೈರತಿ ಸುರೇಶ್ ಅಪ್ತರೆಂದು ಹೇಳಿಕೊಂಡು ಯುವಕರ ಗುಂಪು ದಾಂಧಲೆ ನಡೆಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ರೌಡಿಗಳ ಅಟ್ಟಹಾಸಕ್ಕೆ ಪೊಲೀಸರೂ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ. ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸೋಮವಾರ ದೂರು ಸಲ್ಲಿಕೆಯಾಗಿದೆ. ದಂಪತಿಗಳ ನಡುವಿನ ವಿರಸದ ಪ್ರಕರಣದ ಲಾಭ ಪಡೆಯಲು ರೌಡಿ ಗುಂಪು ಹೆಣ್ಣೂರು ಬಳಿ ನಿವೇಶನವೊಂದಕ್ಕೆ ಏಕಾಏಕಿ ನುಗ್ಗಿ ಪುಂಡಾಟ ಪ್ರದರ್ಶಿಸಿದೆ. ಹೆಣ್ಣೂರು ಗೋಪಿ ಮತ್ತು ಇಪ್ಪತ್ತು ಅಪರಿಚಿತ ವ್ಯಕ್ತಿಗಳ ದಾಂಧಲೆಯನ್ನು ಪ್ರತಿಭಟಿಸಿದ ಜಮೀನು ಮಾಲೀಕ ಶಾಜಿ ಜೋಸೆಫ್ ಅವರ ಕೊಲೆಗೆ ಯತ್ನ ನಡೆದಿದೆ. ಅಷ್ಟೇ ಅಲ್ಲ, ಮಾರಣಾಂತಿಕ ದಾಳಿ ನಡೆಸುವ ರಾಟ್‌ವೀಲರ್ ನಾಯಿಯನ್ನೂ ಕರೆತಂದು ದಾಳಿಗೆ ಯತ್ನಿಸಿದ್ದಾರೆಂದೂ ಸಂತ್ರಸ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.…
ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ
ಬೆಂಗಳೂರು: ಕರ್ನಾಟಕ ಬಲಿಜ ಜಾಗೃತಿ ವೇದಿಕೆ ವತಿಯಿಂದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣರವರಿಗೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಕಾಲಜ್ಞಾನಿ, ಮಹಾನ್ ಸಂತ ಕೈವಾರ ತಾತಯ್ಯ ಖ್ಯಾತಿಯ ಯೋಗಿ ನಾರೇಯಣ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಮುನಿರಾಜುರವರು, ಕಾರ್ಯದರ್ಶಿ ಜಿ.ಜ್ಞಾನೇಶ್, ಕನ್ನಡ ಪರ ಹೋರಾಟಗಾರ ಖಾಜಾ ಹುಸೇನ್ ಅವರ ನಿಯೋಗ ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದೆ.. ಈ ಸಂದರ್ಭದಲ್ಲಿ ಮಾತನಾಡಿ ಸಚಿವ ವಿ.ಸೋಮಣ್ಣ ಸರ್ವರಿಗೂ ಅನ್ನ ಅಕ್ಷರ, ಆಶ್ರಯ ಮೂರು ಸಿದ್ದಾಂತದ ಮೇಲೆ ಸಾಧು ಸಂತರು ನಾಡಿನ ಜನರ ಒಳಿತಿಗೆ ಶ್ರಮಿಸಿದರು. ಸಾಧು ಸಂತರ ಕೊಡುಗೆಯಿಂದ ನಾಡು ಶ್ರೀಮಂತಿವಾಗಿದೆ. ಕೈವಾರ ತಾತಯ್ಯ ಶ್ರೀ ಯೋಗಿ ನಾರೇಯಣರವರು ಲೋಕಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನ್…
ದೊಡ್ಡಬಳ್ಳಾಪುರ: ಅರಳು ಮಲ್ಲಿಗೆ ಕೆರೆ ಏರಿ ಮೇಲೆ ರಸ್ತೆ ಅಪಘಾತ: ಬೈಕ್ ಸವಾರ ಸಾವು
ದೊಡ್ಡಬಳ್ಳಾಪುರ: ಬೈಕ್‌ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ. ಲೋಕೇಶ್ (28) ಮೃತಪಟ್ಟ ಬೈಕ್ ಸವಾರ ಎನ್ನಲಾಗಿದೆ. ಲಾರಿಯು ಚಾಲಕನ ನಿರ್ಲಕ್ಷದಿಂದ ಮೊದಲು ಆಲಹಳ್ಳಿ ಬಳಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಲು ವೇಗವಾಗಿ ಸಾಗಿ ಕೆರೆ ಏರಿ ಮೇಲೆ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬೈಕ್ ಗೆ ಢಿಕ್ಕಿಯಾದ ಲಾರಿ ಅಲ್ಲಿಂದಲೂ ಪರಾರಿಯಾಗಿದೆ. ಇದನ್ನು ಕಂಡ ಮಧುರೆ ಹೋಬಳಿ ನಿವಾಸಿ ಚೇತನ್ ಎಂಬವರು ಲಾರಿಯನ್ನು ಹಿಂಬಾಲಿಸಿ ನೆಲಮಂಗಲದ ಬಿನ್ನಮಂಗಲದ ಬಳಿ ಲಾರಿ ಸಮೇತ ಚಾಲಕನನ್ನ ಹಿಡಿದು ನೆಲಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪಘಾತ ಘಟನೆ ಬಗ್ಗೆ ಪರಿಶೀಲಿಸಿರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ
ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು. ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.
HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ
ಬೆಂಗಳೂರು: ವಾಹನಗಳಿಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (ಹೆಚ್ಎಸ್ಆರ್ಪಿ) ನಂಬರ್ ಪ್ಲೇಟ್ ಅಳವಡಿಸಲು ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಿಸಿರುವ ಸರ್ಕಾರ ಇದೀಗ ಗಡುವನ್ನು ವಿಸ್ತರಿಸಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ 1.90 ಕೋಟಿ ಹಳೆಯ ವಾಹನಗಳ ಪೈಕಿ ಸುಮಾರು 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಅಂತಿಮ ಗಡುವು ಆಗಿದ್ದು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ಡಿಸೆಂಬರ್ 1ರಿಂದ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.