ಮಹಾರಾಷ್ಟ್ರ ರಣಾಂಗಣದಲ್ಲಿ ‘ಮಹಾಯುತಿ’ ಪ್ರಚಾರದಬ್ಬರ; ಯುವಸೈನ್ಯಕ್ಕೆ ‘ರವಿ ಮೋಡಿ’ಯೇ ಅಸ್ತ್ರ

ಮುಂಬೈ: ಇಡೀ ದೇಶದ ಗಮನಸೆಳೆದಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ-ಶಿವಸೇನೆ ಮಿತ್ರಪಕ್ಷಗಳು ಶತಪ್ರಯತ್ನದಲ್ಲಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್-ಶಿವಸೇನೆ ಸಹಿತ ಅಘಾಡಿ ಮೈತ್ರಿ ಸೈನ್ಯ ಹರಸಾಹಸದಲ್ಲಿ ನಿರತವಾಗಿದೆ. ಬಿಜೆಪಿ ಹಾಗೂ ಮಿತ್ರಪಕ್ಷಗಳ (ಮಹಾಯುತಿ) ಅಭ್ಯರ್ಥಿಗಳ ಪರವಾಗಿ ಮಹಾರಾಷ್ಟ್ರ ಪ್ರದೇಶ ಬಿಜೆಪಿ ಮಾಜಿ ಉಸ್ತುವಾರಿ ನಾಯಕ ಕರ್ನಾಟಕದ ಶಾಸಕ ಸಿ.ಟಿ.ರವಿ ಭಾರೀ ಪ್ರಚಾರ ಕೈಗೊಂಡಿದ್ದಾರೆ. ಕಳೆದ ಹಲವು ದಿನಗಳಿಂದ ಚುನಾವಣಾ ಅಖಾಡದಲ್ಲಿ ಮೊಕ್ಕಂ ಹೂಡಿರುವ ಸಿ.ಟಿ.ರವಿ ಹಲವು ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಮತಬೇಟೆ ಕೈಗೊಂಡಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ ಚುನಾವಣಾ ಉಸ್ತುವಾರಿಯಾಗಿರುವ ಸಿ.ಟಿ.ರವಿಯಿಂದ ಮಹಾಯುತಿ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಶೈಲಿಯಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ವರ್ಷದ ಹಿಂದೆ ಪ್ರದೇಶ ಬಿಜೆಪಿ ಉಸ್ತುವಾರಿಯಾಗಿದ್ದ ಸಂದರ್ಭದಲ್ಲಿ ಸಂಘಟನಾ ಚತುರನಾಗಿ ಕಾರ್ಯನಿರ್ವಹಿಸಿದ್ದ ಸಿ.ಟಿ.ರವಿ ಅವರಿಗೆ ಮಹಾರಾಷ್ಟ್ರ ರಾಜಕಾರಣದ ವಾಸ್ತವ ಚಿತ್ರಣ ತಿಳಿದಿರುವುದರಿಂದಾಗಿ ಯುವಜನರನ್ನು ಸಂಘಟಿಸುವಲ್ಲೂ ಯಶಸ್ವಿಯಾಗಿದ್ದಾರೆ. ಈ…

ಕೋವಿಡ್‌ ಹಗರಣ: ಬಿಎಸ್‌ವೈ, ಶ್ರೀರಾಮುಲು ಬಗ್ಗೆ ತನಿಖೆಗೆ ಆಯೋಗ ಶಿಫಾರಸು; ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರು ಎಂದ ರಮೇಶ್ ಬಾಬು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್‌ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಹಿಂದಿನ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಆಗಿನ ಆರೋಗ್ಯ ಸಚಿವರನ್ನು ತನಿಖೆ ನಡೆಸಲು ಶಿಫಾರಸ್ಸು ಮಾಡಿದೆ. ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ…

ಈ ಅವಧಿ ಪೂರ್ಣಗೊಳ್ಳುವ ವರೆಗೂ ನಾನೇ ಮುಖ್ಯಮಂತ್ರಿ’; ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರು ‘ಈ ಅವಧಿ ಪೂರ್ಣಗೊಳ್ಳುವ ವರೆಗೂ ನಾನೇ ಮುಖ್ಯಮಂತ್ರಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಸಂಡೂರಿನಲ್ಲಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಸುತ್ತೇನೆ ಎಂದರು. ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ತಿಳಿದಿದೆ. ಹೀಗಾಗಿ ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ನನ್ನನ್ನು ಮುಗಿಸಲು ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು. ಇದೇ ವೇಳೆ, ನಾಯಕತ್ವ ಬದಲಾವಣೆ ವಿಚಾರವನ್ನು ಅವರು ತಳ್ಳಿಹಾಕಿದರು. ಉಪ ಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

‘ತೇಜಸ್ವಿ ಸೂರ್ಯ ಅವರು ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಹಾವೇರಿಯಲ್ಲಿ ರೈತ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಹಾವೇರಿಯ ರೈತನ ಆಸ್ತಿಯಲ್ಲಿ ವಕ್ಫ್ ಉಲ್ಲೇಖವಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಂಸದರು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ನಂತರ ಸರ್ಕಾರ ಸ್ಪಷ್ಟನೆ ನೀಡಿದ ನಂತರ ಅದನ್ನು ಡಿಲೀಟ್ ಮಾಡುತ್ತಾರೆ. ನಂತರ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಇದರಿಂದ ಸಮಾಜದಲ್ಲಿ ಘರ್ಷಣೆಗೆ ಪ್ರೇರಣೆಯಾಗಲಿದೆ ಎಂದು ದೂರು ನೀಡುತ್ತಾರೆ. ಈ ದೂರಿನನ್ವಯ ಪೊಲೀಸರು ತೇಜಸ್ವಿ ಸೂರ್ಯನ ಮೇಲೆ ಎಫ್ಐಆರ್ ದಾಖಲಿಸುತ್ತಾರೆ ಎಂದು ಪ್ರಕರಣದ ಹಿನ್ನೆಲೆಯನ್ನು ವಿವರಿಸಿದರು. ಇದಕ್ಕೆ ಹೆದರಿಕೊಂಡ ಆ ಪುಟ್ಟ, ‘ಪ್ರಿಯಾಂಕ್ ಖರ್ಗೆಗೆ ಕೆಲಸ ಇಲ್ಲ, ಎಫ್ಐಆರ್ ಹಾಕಿಸುವುದೇ ಕೆಲಸ”…

ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ; ಕೇಂದ್ರ ಹಣಕಾಸು ಸಚಿವೆ ಭರವಸೆ

ಕೃಷಿ ಉತ್ಪನ್ನಗಳ ಮೇಲಿನ ಜಿಎಸ್​ಟಿ ತೆರಿಗೆ ರದ್ದು ಮಾಡಿ. ರೈತ ಉತ್ಪಾದಕ ಸಂಸ್ಥೆಗಳ ವರಮಾನ ತೆರಿಗೆ ಹಾಗೂ ಎಂಐಟಿ ತೆರಿಗೆ ಕಾನೂನು ರದ್ದು ಮಾಡಿ ಎಂದು ರೈತ ಸಂಘಟನೆಗಳು ಮಾಡಿರುವ ಮನವಿಗೆ ಸ್ಪಂಧಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ರೈತರು ಖರೀದಿಸುವ ಕೃಷಿ ಬಳಕೆಗೆ ಹನಿ ನೀರಾವರಿ ಕೊಳವೆಗಳು. ಕೀಟನಾಶಕಗಳು. ರಸಗೊಬ್ಬರಗಳ ಮೇಲೆ ಜಿಎಸ್​ಟಿ ವಿಧಿಸಿರುವುರಿಂದ ರೈತರು ಖರೀದಿಸುವ ಬೆಲೆ ಹೆಚ್ಚಾಗುತ್ತಿದೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ ಇದನ್ನು ರದ್ದು ಮಾಡಬೇಕೆಂದು ಹಲವಾರು ವರ್ಷಗಳಿಂದ ರಾಜ್ಯ ಸರ್ಕಾರಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವಾರು ಮನವಿಗಳನ್ನು ಸಲ್ಲಿಸಿದ್ದೇವೆ ತಾವು ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಕೃಷಿ ಉಪಕರಣಗಳ ಖರೀದಿಯ ಮೇಲೆ ಜಿಎಸ್‌ಟಿಯನ್ನು ರದ್ದು ಮಾಡಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ. ಕೃಷಿ ಸಾಲಕ್ಕೆ ರೈತರ ಸಿಬಿಲ್ ಸ್ಕೋರ್ ಪರಿಗಣಿಸುವ…

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ? ಡಿಕೆಶಿ ಕೊಟ್ಟ ಉತ್ತರ ಇದು

ಮಂಡ್ಯ: ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ತಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ ಎಂಬ ಬಗ್ಗೆ ಈಗಿನ್ನೂ ಚರ್ಚೆ ಸಾಗಿದೆ. ಕಾಂಗ್ರೆಸ್ ನಾಯಕರ ಪಿತೂರಿಯಿಂದಲೇ ನಿಖಿಲ್ ಸೋತಿದ್ದಾರೆ ಎಂದು ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ನಿಖಿಲ್ ತಂದೆ ಕುಮಾರಸ್ವಾಮಿಯವರೂ ಅದೇ ರೀತಿಯ ವ್ಯಾಖ್ಯಾನವನ್ನು ನೀಡಿ ಕಾಂಗ್ರೆಸ್ ನಾಯಕರ ಉಬ್ಬೇರಿಸುವಂತೆ ಮಾಡಿದ್ದಾರೆ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಮನಗರದಲ್ಲಿ ಕುಮಾರಸ್ವಾಮಿ ಅವರೂ ಶಾಸಕರಾಗಿದ್ದರು, ಮುಖ್ಯಮಂತ್ರಿಯೂ ಆದರು. ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೂಡ ಶಾಸಕರಾಗಿದ್ದರು. ಆದರೂ ನಿಖಿಲ್ ರಾಮನಗರದಲ್ಲಿ ಯಾಕೆ ಸೋತರು? ಅವರು ಕೆಲಸ ಮಾಡಿದ್ದರೆ ಜನ ಸೋಲಿಸುತ್ತಿದ್ದರಾ? ಕೆಲಸ ಮಾಡಿ, ಜನರ ಸೇವೆ ಮಾಡಿದ್ದರೆ ಸೋಲುತ್ತಿರಲಿಲ್ಲ. 5 ವರ್ಷಕ್ಕೊಮ್ಮೆ ಬಂದು ಮತ ನೀಡಿ ಎಂದರೆ ಹೇಗೆ? ಮತದಾರರು…

ಕನಕಪುರದಲ್ಲಿ ಶಾಲೆಗಳಿಗೆ 25 ಎಕರೆ ಜಾಗ ದಾನ ಮಾಡಿದ್ದೇನೆ, ದೇವೇಗೌಡರ ಕುಟುಂಬದವರು ದಾನ ಮಾಡಿದ್ದಾರಾ?: ಡಿಕೆಶಿ

ರಾಮನಗರ: “ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ನಾವು ಕನಕಪುರದ ಮೂರು ಕಡೆಗಳಲ್ಲಿ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಶುಕ್ರವಾರ ಚಕ್ಕೆರೆ, ಹೊನ್ನನಾಯಕನಹಳ್ಳಿ ಮತ್ತಿತರ ಚುನಾವಣೆ ಪ್ರಚಾರ ಸಭೆ ನಡೆಸಿದ ಡಿಕೆಶಿ, ದೇವೇಗೌಡರ ಹೇಳಿಕೆ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ದೇವೇಗೌಡರು ಗುರುವಾರ ಭಾಷಣ ಮಾಡುತ್ತಾ, “ಒಂದು ಶಾಲೆ ಮಾಡಲು ಜಾಗ ಕೇಳಿದರೆ ಡಿ.ಕೆ. ಶಿವಕುಮಾರ್ ದುಡ್ಡು, ದುಡ್ಡು ಅಂತಾರೆ” ಎಂದು ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ದೇವೇಗೌಡರು ನಿನ್ನೆ ಚುನಾವಣೆ ಪ್ರಚಾರ ಮಾಡುತ್ತಾ ಡಿ.ಕೆ. ಸಹೋದರರು ಜಮೀನು ಕಬ್ಜ ಮಾಡಿಕೊಂಡಿದ್ದು, ಶಾಲೆ…

ಬಿಜೆಪಿ ಸರ್ಕಾರದ ಅವಧಿಯಲ್ಲೆ ನೋಟೀಸ್ ನೀಡಲಾಗಿತ್ತು; ‘ಲ್ಯಾಂಡ್ ಜಿಹಾದ್’ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಎದಿರೇಟು

ಬೆಂಗಳೂರು: ಹಾವೇರಿ ರೈತನ ಹೆಸರಲ್ಲೂ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ವಕ್ಫ್ ವಿವಾದ ಕುರಿತಂತೆ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಆಕ್ಷೇಪ ವ್ಯಕ್ತಪಡಿಸಿದರು. ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಲ್ಯಾಂಡ್ ಜಿಹಾದ್ ಎಂದು ಹೇಳುತ್ತಿದ್ದಾರಲ್ಲ. ಅವರು ಈಗಲೇ ಯಾಕೆ ಮಾತನಾಡುತ್ತಿದ್ದಾರೆ? ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ? ಶಶಿಕಲಾ ಜೊಲ್ಲೆ ಅವರ 2021ರಲ್ಲಿ ನೀಡಿರುವ ಹೇಳಿಕೆಯಲ್ಲಿ, ‘ಅನ್ವರ್ ಮಾನ್ಪಡಿ ವರದಿ ನೀಡಿದ್ದು, ವರದಿ ನೀಡಿ 9 ವರ್ಷವಾಗಿದ್ದರೂ ಯಾವುದೇ ಕ್ರಮವಾಗಿಲ್ಲ. ಅದಕ್ಕೆ ಅಂದಿನ ಸಿಎಂ ಯಡಿಯೂರಪ್ಪ ಅವರು ಹಾಗೂ ಅವರ ಕುಟುಂಬದವರು ಕಾಂಗ್ರೆಸ್ ನಾಯಕರೊಂದಿಗೆ ಶಾಮೀಲಾಗಿರುವುದೇ ಕಾರಣ ಎಂದು ಅನ್ವರ್ ಮಾನ್ಪಡೆ ಅವರು…