ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್ ಕೂಡಾ ಖಂಡಿಸಿದ್ದರು; ಸಿದ್ದು ಸರ್ಕಾರಕ್ಕೆ ಸಿ.ಟಿ.ರವಿ ಚಾಟಿ

ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ‌ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ಟಿವಿ ಹೇಳಿದ್ದಾರೆ. ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ‌ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ. ಧರ್ಮಾಧಾರಿತ ಮೀಸಲಾತಿಯನ್ನು ಸಂವಿಧಾನ ರಚನಾ ಸಭೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಖಡಾಖಂಡಿತವಾಗಿ ಖಂಡಿಸಿದ್ದರು. ಮತ ಆಧಾರಿತ ಮೀಸಲಾತಿ ಅಸಂವಿಧಾನಿಕವಾದದ್ದು, ಸಂವಿಧಾನಕ್ಕೆ ವಿರುದ್ಧವಾದುದು.… pic.twitter.com/Smp9JZdqGA — BJP Karnataka (@BJP4Karnataka) November 12, 2024 ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯಸರ್ಕಾರದ ಕಾರ್ಯವೈಖರಿ ಬಗ್ಗೆ ಕಟು ಟೀಕೆ ಮಾಡಿದರು. ಮುಸ್ಲಿಮರಿಗೆ ಕಾಮಗಾರಿ ಗುತ್ತಿಗೆಯಲ್ಲೂ ಮೀಸಲಾತಿ ಕಲ್ಪಿಸಲು ಮುಂದಾಗಿರುವ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಖಂಡಿಸಿರುವ ಸಿ.ಟಿ.ರವಿ, ಧರ್ಮಾಧಾರಿತ ಮೀಸಲಾತಿಯನ್ನು ಸಂವಿಧಾನ ರಚನಾ ಸಭೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು…

ಶಿಗ್ಗಾವಿ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ದಾಖಲಿಸಿದೆ. ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಗೆ ಮತದಾನ ನಡೆಯುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ರೌಡಿ ಶೀಟ್​ ಪ್ರಕರಣ ಇದ್ದು, ಆದರೆ ಅವರು ನಾಮಪತ್ರದ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಏಜೆಂಟ್ ಎಸ್ ಕೆ ಅಕ್ಕಿ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ಇ–ಮೇಲ್ ಮೂಲಕ ದೂರು ನೀಡಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ; 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಇಂದು ನಡೆಯುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಮೂರು ಕ್ಷೇತ್ರಗಳಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ. ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಸಿ.ಪಿ.ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಹುರಿಯಲಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಪಠಾಣ್ ಯಾಸೀರ್ ಅಹ್ಮದ್‌ಖಾನ್‌ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ. ಸಂಡೂರು ವಿಧಾನಸಭಾ…

ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ವಿಜಯನಗರದಲ್ಲಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

DRDO ಮತ್ತೊಂದು ಯಶೋಗಾಥೆ: ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಿದೆ. LRLACM ಒಡಿಶಾದ ಚಂಡೀಪುರ ಪರೀಕ್ಷಾ ಕೇಂದ್ರದಿಂದ (ಮೊಬೈಲ್ ಆರ್ಟಿಕ್ಯುಲೇಟೆಡ್ ಲಾಂಚರ್‌ನಿಂದ) ಪರೀಕ್ಷಿಸಲಾಗಿದ್ದು ಈ ಪರೀಕ್ಷೆ ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ದೀರ್ಘ ಶ್ರೇಣಿಗಳಲ್ಲಿ ನೆಲ ಆಧಾರಿತ ಗುರಿಗಳನ್ನು ಹೊಡೆಯಲು ನಿಖರವಾದ ಸ್ಟ್ರೈಕ್ ಸಾಮರ್ಥ್ಯಕ್ಕಾಗಿ LRLACM ಅನ್ನು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. Maiden flight-test of Long Range Land Attack Cruise Missile (LRLACM) was conducted today from the Integrated Test Range (ITR), Chandipur off the coast of Odisha. During the test, all sub-systems performed as per expectation and met the primary mission objectives…

‘ಶಕ್ತಿಯಿಂದ KSRTC ಆದಾಯ ಹೆಚ್ಚಿದೆ, ಆದ್ರೆ ಆದಾಯವೇ ಬೇರೆ ಲಾಭವೇ ಬೇರೆ’; ಟಿಕೆಟ್ ದರ ಏರಿಕೆ ಕುರಿತ ಟೀಕೆಗೆ ರಾಮಲಿಂಗ ರೆಡ್ಡಿ ಎದಿರೇಟು

ಬೆಂಗಳೂರು: ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ‌ ಎಂದವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ 3,930 ಕೋಟಿ ರೂಪಾಯಿ ದಾಖಲೆ ಆದಾಯ ಬರುತ್ತದೆ ಎಂದು ಬೊಗಳೆ ಬಿಟ್ಟು ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದ ಕಾಂಗ್ರೆಸ್ ಸರ್ಕಾರ ಈಗ ಕಳೆದ ತ್ರೈಮಾಸಿಕದಲ್ಲಿ ₹295 ಕೋಟಿ ನಷ್ಟವಾಗಿದೆ ಎಂಬ ನೆಪವೊಡ್ಡಿ ಟಿಕೆಟ್ ದರವನ್ನ ಶೇ.25%ರಷ್ಟು ಹೆಚ್ಚಿಸಲು ಮುಂದಾಗಿದೆ’ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಟೀಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು…