ಬೆಂಗಳೂರು: ರಾಜ್ಯದಿಂದ ವೈಷ್ಣೋದೇವಿ ಯಾತ್ರೆಗೆ ತೆರಳುವ ಆಸ್ತಿಕರಿಗೆ ರಾಜ್ಯ ಸರ್ಕಾರ ಬಂಪರ್ ನೆರವು ಪ್ರಕಟಿಸಿದೆ. ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನವನ್ನು ಸರ್ಕಾರ ಘೋಷಿಸಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ನೀಡುವ ತೀರ್ಮಾನವನ್ನು ಪ್ರಕಟಿಸಾಲಗಿದೆ. 13-11-2024 ರಂದು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ.5000 ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು ತೀರ್ಮಾನಿಸಲಾಯಿತು. 120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ…