ಮೀಸಲಾತಿಗಾಗಿ ಹೋರಾಟ; ಸುವರ್ಣ ವಿಧಾನಸೌಧ ಮುತ್ತಿಗೆ ಬಗ್ಗೆ ವಕೀಲರ ಜೊತೆ ಕಾರ್ಯತಂತ್ರ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಬೆಳಗಾವಿ ಸುವರ್ಣ ಸೌಧ ಬಳಿ ಶಕ್ತಿ ಪ್ರದರ್ಶನಕ್ಕೆ ತುಅರಿ ನಡೆದಿದೆ. ಈ ಸಂಬಂಧ ಪಂಚಮಸಾಲಿ ಸಮುದಾಯದ ವಿವಿಧ ಘಟಕಗಳು ಪೂರ್ವಭಾವಿ ತಯಾರಿಯಲ್ಲಿ ತೊಡಗಿವೆ. ಇದೇ ವೇಳೆ ನವಂಬರ್ 16 ಶನಿವಾರದಂದು ಹುಬ್ಬಳ್ಳಿಯಲ್ಲಿ ಸಮುದಾಯದ ಮುಖಂಡರ ಹಾಗೂ ವಕೀಲರ ಪೂರ್ವಭಾವಿ ಸಭೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಪಂಚಮಸಾಲಿ ಸಮುದಾಯದ ಶ್ರೀಗಳಾದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಈ ಪೂರ್ವಭಾವಿ ಸಭೆಯಲ್ಲಿ ಹೋರಾಟದ ರೂಪುರೇಷೆ ಬಗ್ಗೆ ವರ್ಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.‌ ಪಂಚಮಸಾಲಿ- ಮಲೆಗೌಡ ದೀಕ್ಷಾ- ಗೌಡ ಲಿಂಗಾಯತರಿಗೆ 2A ಹಾಗೂ ಲಿಂಗಾಯತ OBC ಮೀಸಲಾತಿಗೆ ಹಕ್ಕೊತ್ತಾಯಿಸಿ ಆರಂಭಗೊಂಡಿರುವ 7ನೇ ಹಂತದ ಚಳುವಳಿ ಇದಾಗಿದ್ದು, ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿ.9 ರಂದು ಬೆಳಗಾವಿಯ ಸುವರ್ಣಾ ವಿಧಾನಸೌಧಕ್ಕೆ ಮುತ್ತಿಗೆ ಹಾಕಾಲಘುವುದು. ಪಂಚಮಸಾಲಿ ಸಮಾಜದಿಂದ ಹಾಗೂ ವಕೀಲರಿಂದ ಮುತ್ತಿಗೆ ಹಾಗೂ ಟ್ಯಾಕ್ಟರ್ Rally ನಡೆಸಲಾಗುವುದು…

‘ಇ ಖಾತಾ’ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಬೇಕಿದೆ

ಬೆಂಗಳೂರು: ‘ಇ ಖಾತಾ’ ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಇ ಖಾತಾ ಮಾಡುವ ಮುನ್ನ ಮಾಹಿತಿ ಪಡೆಯಬೇಕಿತ್ತು. ಇದಕ್ಕೆ ಬೇಕಾದ ದಾಖಲೆ ಯಾವುದು, ಯಾವ ವಿಭಾಗದಲ್ಲಿ ಎಷ್ಟು ಮಾಡಬಹುದು ಎಂದು ಆಲೋಚಿಸಬೇಕಿತ್ತು. ಏಕಾಏಕಿ ಇ ಖಾತಾ ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ. ಈಗಾಗಲೇ ಅಪ್‌ಲೋಡ್‌ ಮಾಡಿರುವ ಇ ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಎನ್‌ಆರ್‌ಐ ಮಾಲೀಕತ್ವದ ಆಸ್ತಿಗೆ ಅಫಿಡವಿಟ್‌ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದರು. ಜನರಿಗೆ ಮನೆ ಸಾಲ ಸಿಗಲು ಇ ಖಾತಾ ಬೇಕಾಗುತ್ತದೆ. ದಿನಕ್ಕೆ 5 ರಿಂದ 6 ರಷ್ಟು ಇ ಖಾತಾ ಮಾಡಲಾಗುತ್ತಿದೆ. ಸರ್ಕಾರ ಲಂಚಕ್ಕೆ ಅವಕಾಶ ನೀಡಿ, ಜನರಿಗೆ ತೊಂದರೆ ನೀಡುತ್ತಿದೆ. ಸರ್ಕಾರ…

2,500 ಕೋ.ರೂ.ಎಲ್ಲಿದೆ? ಖರೀದಿಸಲು ಮುಂದಾದವರು ಯಾರು? ಆರೋಪ ಬಗ್ಗೆ ED ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: 50 ಶಾಸಕರನ್ನು ಖರೀದಿಸಲು ಬೇಕಾದ 2,500 ಕೋಟಿ ರೂ. ಎಲ್ಲಿದೆ, ಯಾವ ವ್ಯಕ್ತಿ ಖರೀದಿಸಲು ಮುಂದಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ತಿಳಿಸಬೇಕು. ಈ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದ್ದು, ಅದಕ್ಕಾಗಿ ಶಾಸಕರಿಗೆ ದರ ನಿಗದಿ ಮಾಡಿದ್ದಾರೆ. ಗುಪ್ತಚರ ವಿಭಾಗ ಅವರ ಕೈಯಲ್ಲೇ ಇದ್ದು, ಎಲ್ಲಿ ಯಾರಿಗೆ ಎಷ್ಟು ಹಣ ನೀಡಲಾಗಿದೆ ಎಂಬ ವರದಿಯನ್ನು ಅವರು ತರಿಸಿಕೊಳ್ಳಬಹುದಿತ್ತು. ತಮ್ಮ ಸ್ಥಾನ ಅಸ್ಥಿರವಾಗಿರುವುದರಿಂದ ಹೀಗೆ ಮಾತಾಡಿದ್ದಾರೆ. ಹೊಸ ಸರ್ಕಾರ ರಚನೆಯಾಗಲು 50 ಕ್ಕೂ ಅಧಿಕ ಶಾಸಕರು ಪಕ್ಷ ಬಿಟ್ಟು ಹೊರಗೆ ಬರಬೇಕಾಗುತ್ತದೆ. ಆ ಲೆಕ್ಕದಲ್ಲೂ ಅವರು ತಪ್ಪಾಗಿ ಹೇಳಿದ್ದಾರೆ ಎಂದರು. 50 ಶಾಸಕರಿಗೆ ತಲಾ 50 ಕೋಟಿ ರೂ. ಎಂದರೆ 2,500 ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ಹಣ…

ಶಿಶುಗಳಲ್ಲಿ ಅನವಂಶಿಕ ಕಾಯಿಲೆ; ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆಗೆ ಸರ್ಕಾರ ಕ್ರಮ

ಬೆಂಗಳೂರು: ಅಪರೂಪದ ಮತ್ತು ಭಾರಿ ಸಮಸ್ಯೆಗಳಲ್ಲಿ ಬೆನ್ನು ಮೂಳೆ ಸ್ನಾಯು ಕ್ಷೀಣತೆಯೂ ಒಂದು, ಇದರಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಮೂಲಕ ಪರಿವರ್ತಕ ಆರೋಗ್ಯ ಚಿಕಿತ್ಸಾ ವಿಧಾನವನ್ನು ಹಾಗೂ ಉಚಿತ ಔಷಧವನ್ನು ವಿತರಿಸುವ ಮೂಲಕ ಸಮಾಜ ಸುರಕ್ಷತೆಗೆ ಆದ್ಯತೆ ನೀಡುತ್ತಿರುವುದು ಸ್ವಾಗತಾರ್ಹ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಟ್ರಸ್ಟ್ ಆಯೋಜಿಸಿದ್ದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವವರಿಗೆ ಉಚಿತ ಔಷಧ ನೀಡುವ ವಿಶೇಷ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಸಚಿವರು ಮಾತನಾಡಿದರು. ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಂಥ ಅಪರೂಪದ ಹಾಗೂ ಭಾರಿ ಅಪಾಯ ತಂದೊಡ್ಡುವ ರೋಗಗಳನ್ನು ನಿಯಂತ್ರಿಸುವುದಕ್ಕೆ ನಮ್ಮ ಸರ್ಕಾರ ಒತ್ತು ನೀಡುತ್ತಿದೆ. ಈ ರೀತಿಯ ಚಿಕಿತ್ಸಾ ವ್ಯವಸ್ಥೆಗಳು ಅಗಾಧವಾದ ಪ್ರಭಾವವನ್ನು ಬೀರುತ್ತವೆ. ಪ್ರಸವಪೂರ್ವ ರೋಗನಿರ್ಣಯ, ಆರಂಭಿಕ…

ಸಿದ್ದು ಸರ್ಕಾರ ಉರುಳಿಸಲು ಶಾಸಕರಿಗೆ 59 ಕೋ.ರೂ.ಆಮಿಷ ಆರೋಪ; ತನಿಖೆಗೆ ಹಿಂದೇಟು ಯಾಕೆ ಎಂದು ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಶಾಸಕರಿಗೆ ಬಿಜೆಪಿ ನಾಯಕರು 50 ಕೋಟಿ ರೂ ಆಮಿಷ ಒಡ್ಡಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಇದೇ ವೇಳೆ ಸಿಎಂ ಮಾಡಿರುವ ಆರೋಪ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.‌ 50 ಕೋಟಿ ರೂ ಆಮಿಷ ಬಗ್ಗೆ ತನಿಖೆ ನಡೆಸುವಂತೆ ವಿಜಯೇಂದ್ರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, 50 ಕೋಟಿ ರೂಪಾಯಿ ಆಮಿಷದ ಮೂಲ ಯಾವುದು ಎಂಬುದನ್ನು ತನಿಖೆ ನಡೆಸಿ ಬಹಿರಂಗಪಡಿಸಿ ಎಂದು ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರಿಗೂ ಸಲಹೆ ಎದಿರೇಟು ನೀಡಿದ್ದಾರೆ. ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಮಿಷ ನೀಡಲಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪ ನಿರಾಧಾರ ಎಂದು ವಿಜಯೇಂದ್ರ ಹೇಳಿದ್ದಾರೆ.

ಕೋವಿಡ್‌ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ; ಸರ್ಕಾರಕ್ಕೆ ಅಶೋಕ್ ಟಾಂಗ್

ಬೆಂಗಳೂರು: ಕೋವಿಡ್‌ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ಕಾರ್ಯವೈಖರಿ ಬಗ್ಗೆ ಕಿಡಿ ಕಾರಿದರು. ಅಬಕಾರಿ ಇಲಾಖೆಯಲ್ಲಿ ಹಗರಣ ಹಾಗೂ ವಕ್ಫ್‌ ಭೂ ಕಬಳಿಕೆ ಮುಂದುವರಿದಿದೆ. ಅಬಕಾರಿ ಇಲಾಖೆಯ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತಾಡಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸುವುದು ಸೂಕ್ತ. ಕೋವಿಡ್‌ ತನಿಖೆಯ ಭಾಗ 1 ಮಾತ್ರ ಬಂದಿದೆ. ನ್ಯಾ.ಕೆಂಪಣ್ಣ ಆಯೋಗದ ಭಾಗ 1 ಕೂಡ ಬಂದಿಲ್ಲ. ಅದರ ವರದಿ ಸಂಪೂರ್ಣವಾಗಿ ಹೊರಬರಲಿ ಎಂದರು. ಕೋವಿಡ್‌ ಇಡೀ ಜಗತ್ತಿನಲ್ಲಿತ್ತು. ಆಗ ಯಾವ ಸರಕು ಯಾವ ದರದಲ್ಲಿತ್ತು ಎಂಬುದನ್ನು ಮೊದಲು ತಿಳಿಸಲಿ. ಎಲ್ಲ ರಾಜ್ಯದಲ್ಲಿ ಕಿಟ್‌ಗಳನ್ನು ಎಷ್ಟು ದರಕ್ಕೆ ಖರೀದಿ ಮಾಡಲಾಗಿದೆ ಎಂದು ತಿಳಿಸಲಿ. ತುರ್ತು ಖರೀದಿ ಮಾಡದೆ 60 ದಿನಗಳ ಟೆಂಡರ್‌ಗೆ ಕಾದುಕೊಂಡು ಕೂತಿದ್ದರೆ ಎಲ್ಲವೂ…

ಮಕ್ಕಳಿಗಾಗಿ ಕಾಂಗ್ರೆಸ್ ಪಕ್ಷದಿಂದ ನೂತನ ಘಟಕ; ಡಿಕೆಶಿ

ಬೆಂಗಳೂರು: ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಜವಾಹರ್ ಲಾಲ್ ನೆಹರೂ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿ, ನೆಹರೂ ಅವರ ಕೊಡುಗೆ ಹಾಗೂ ಮಕ್ಕಳ ಏಳಿಗೆಗೆ ಕಾಂಗ್ರೆಸ್ ಪಕ್ಷದ ಕೊಡುಗೆಗಳನ್ನು ಸ್ಮರಿಸಿದರು. “ನೆಹರೂ ಅವರು ಬೆಂಗಳೂರಿನಲ್ಲಿ ಸಾರ್ವಜನಿಕ ಉದ್ದಿಮೆಗಳು ಹೆಚ್ಎಎಲ್, ಐಟಿಐ, ಬಿಇಎಂಎಲ್, ಬಿಇಎಲ್, ಇಸ್ರೋ ಸೇರಿದಂತೆ ಅನೇಕ ಉದ್ದಿಮೆಗಳು ಆರಂಭಿಸಿದರು. ಇಲ್ಲಿರುವ ಮಾನವ ಸಂಪನ್ಮೂಲ, ಗುಣಮಟ್ಟದ ಶಿಕ್ಷಣದ ಮೇಲೆ ವಿಶೇಷ ಆದ್ಯತೆ ನೀಡಿದರು. ಅವರು ಹಾಕಿಕೊಟ್ಟ ಅಡಿಪಾಯದಲ್ಲಿ ನಾವು ಇಂದು ಈ ದೇಶ ಕಟ್ಟುತ್ತಿದ್ದೇವೆ ಎಂದರು. ಮಕ್ಕಳಿಗೆ ಶಿಕ್ಷಣ ಸಿಗಬೇಕು, ಮಕ್ಕಳು ಶಾಲೆಯಿಂದ ವಿಮುಖರಾಗಬಾರದು ಎಂದು ಎಸ್ ಎಂ ಕೃಷ್ಣ ಅವರ…