ಉಕ್ರೇನ್ ಮೇಲೆ ರಷ್ಯಾ ಪ್ರಬಲ ಕ್ಷಿಪಣಿ ದಾಳಿ; 10ಕ್ಕೂ ಹೆಚ್ಚು ಮಂದಿ ಸಾವು

ಸಮ್ಮಿ: ಉಕ್ರೇನ್ ಮೇಲೆ ರಷ್ಯಾ ಸೇನೆ ಮತ್ತೆ ದಾಳಿ ನಡೆಸಿದೆ. ರಷ್ಯಾ ಕೈಗೊಂಡ ಕ್ಷಿಪಣಿ ದಾಳಿಯಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ‌. ಪ್ರಬಲ ಖಂಡಾಂತರ ಕ್ಷಿಪಣಿಯನ್ನು ಉಕ್ರೇನ್‌ ರಷ್ಯಾ ಉಡಾವಣೆ ಮಾಡಿದೆ. ಉಕ್ರೇನ್‌ನ ಉತ್ತರ ಭಾಗದ ಸಮ್ಮಿ ಎಂಬಲ್ಲಿ ಜನವಸತಿ ಪ್ರದೇಶದ ಮೇಲೆ ಈ ದಾಳಿ ನಡೆದಿದ್ದು 15ಕ್ಕೂ ಹೆಚ್ಚು ಕಟ್ಟಡಗಳು ಧ್ವಂಸವಾಗಿವೆ. ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯತ್ತ ರೈತರ ಚಿತ್ತ; ಮತ್ತೊಮ್ಮೆ ಬೃಹತ್ ಪ್ರತಿಭಟನೆಗೆ ನಿರ್ಧಾರ

ಚಂಡೀಗಢ: ಕೇಂದ್ರ ಸರ್ಕಾರದ ವಿರುದ್ಧ ರೈತರು ಮತ್ತೆ ರಣಕಹಳೆ ಮೊಳಗಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲು ಆಗ್ರಹಿಸಿ ದೆಹಲಿ ಚಲೋ ಘೋಷಿಸಿದ್ದಾರೆ. ಎಂಎಸ್‌ಪಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿರುವ ರೈತರು ಡಿಸೆಂಬರ್ 6 ರಂದು ದೆಹಲಿ ಚಲೋ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರು ಘೋಷಿಸಿದ್ದಾರೆ‌ ಚಂಡೀಗಢದಲ್ಲಿ ಸೋಮವಾರ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ದೆಹಲಿಯಲ್ಲಿ ಬೃಹತ್ ರ್ಯಾಲಿ ನಡೆಸಲಾಗುತ್ತದೆ ಎಂದು ರೈತ ನಾಯಕರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಮೇಲೆ ಕಲ್ಲು ತೂರಾಟ

ನಾಗ್ಪುರ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಅನಿಲ್ ದೇಶ್‌ಮುಖ್ ಅವರ ಕಾರಿನ ಮೇಲೆ ದುಷ್ಕರ್ಮಿಗಖು ಕಲ್ಲು ತೂರಾಟ ನಡೆಸಿರುವ ಘಟನೆ ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ದೇಶಮುಖ್ ಅವರಿಗೆ ಗಂಭೀರ ಗಾಯಗಳಾಗಿವೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ದೇಶಮುಖ್ ಅವರು, ಅಲ್ಲಿಂದ ಕಟೋಲ್‌ಗೆ ನಿರ್ಗಮಿಸಿದರು. ಅದಾಗಲೇ ಅಪರಿಚಿತರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ದೇಶಮುಖ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. राज्यात कायदा सुव्यवस्थेचे तीन तेरा वाजले आहेत. लोकशाहीचे धिंडवडे उडवले जात आहेत. याचे उदाहरण आज निवडणुकीच्या सांगता सभेवरून घरी परतताना राज्याचे माजी गृहमंत्री तसेच राष्ट्रवादी काँग्रेस पक्ष शरदचंद्र पवार पक्षाचे नेते अनिल…

ತೆರಿಗೆಯ 50℅ ಪಾಲನ್ನು ರಾಜ್ಯಕ್ಕೆ ನೀಡಿ: ಕೇಂದ್ರಕ್ಕೆ ತಮಿಳುನಾಡು ಆಗ್ರಹ

ಚೆನ್ನೈ: ರಾಜ್ಯಗಳಿಗೆ ನೀಡಲಾಗುವ ತೆರಿಗೆ ಅನುದಾನವನ್ನು ಹೆಚ್ಚಿಸಬೇಕೆಂದು ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಒತ್ತಾಯಿಸಿದೆ.‌ ಕೇಂದ್ರದ ನಿಧಿಯ ಹಂಚಿಕೆಯಲ್ಲಿನ ಕುಸಿತ ಮತ್ತು ತಮಿಳುನಾಡಿಗೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅಸಮಾಧಾನ ಹೊರಹಾಕಿದ್ದಾರೆ‌‌. 16ನೇ ಹಣಕಾಸು ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ತೆರಿಗೆಯ ಶೇ.50 ಪಾಲನ್ನು ತಮ್ಮ ರಾಜ್ಯಕ್ಕೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ದೇಶದಲ್ಲಿ ಗಮನಾರ್ಹ ಅಭಿವೃದ್ಧಿ ಕೈಗೊಂಡಿರುವ ತಮಿಳುನಾಡಿನಂಥ ರಾಜ್ಯಗಳಿಗೆ ಹೆಚ್ಚುವರಿ ಅನುದಾನವನ್ನು ಹಂಚಿಕೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ಮಣಿಪುರ ಹಿಂಸಾಚಾರದ ಪ್ರತಿಧ್ವನಿ; ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಕರೆದು ಸಮಸ್ಯೆ ಬಗರಹರಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಈ ತಿಂಗಳು ಸಂಸತ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೋಮವಾರ ನಡೆಸಿದ ಸುದ್ದಿಗೋಷ್ಠಿ ಗಮನಸೆಳೆಯಿತು. ಅಧಿವೇಶನಕ್ಕೆ ಮುನ್ನ ಗಲಭೆ ಸಂತ್ರಸ್ತ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡಬೇಕು ಎಂದು ಅವರು ಒತ್ತಾಯಿಸಿದರು. ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ಕೆ ಮೇಘಚಂದ್ರ ಸಿಂಗ್ ಹಾಗೂ ಎಐಸಿಸಿ ರಾಜ್ಯ ಉಸ್ತುವಾರಿ ಗಿರೀಶ್ ಚೋಡಂಕರ್ ಉಪಸ್ಥಿತಿಯಲ್ಲಿ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜೈರಾಮ್ ರಮೇಶ್, ಪ್ರಧಾನಿ ಮೋದಿಯವರು ಮೊದಲು ಮಣಿಪುರದ ಸರ್ವಪಕ್ಷಗಳ ನಿಯೋಗವನ್ನು ಭೇಟಿ ಮಾಡಬೇಕು, ನವೆಂಬರ್ 25 ರಿಂದ ಪ್ರಾರಂಭವಾಗುವ ಸಂಸತ್ ಅಧಿವೇಶನಕ್ಕೂ ಮುನ್ನ ದೇಶದ ಸರ್ವಪಕ್ಷಗಳ ನಾಯಕರ ಸಭೆಯನ್ನು ಕರೆಯಬೇಕು ಎಂದು ಆಗ್ರಹಿಸಿದರು. ಇದೇ ವೇಳೆ, ಮಣಿಪುರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರಿವ ಕೇಂದ್ರ ಗೃಹ ಸಚಿವ…