ದೇವನಹಳ್ಳಿ: ಹಳೇ ದ್ವೇಷದ ಹಿನ್ನೆಲೆ ಸೆಕ್ಯುರಿಟಿ ಗಾರ್ಡ್ ಬರ್ಬರ ಕೊಲೆ

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನ ಬರ್ಭರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ. ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಘರ್ಷಣೆ ನಡೆಯುತ್ತಿತ್ತು ಎನ್ನಲಾಗಿದೆ‌. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಗೋವಿಂದ್ ಗ್ಯಾಂಗ್ ಗುರುವಾತ ರಾತ್ರಿ ಸೆಕ್ಯೂರಿಟಿ ಗಾರ್ಡ್ ಕೆಲಸ‌ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ‌ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ರಾತ್ರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿರುವ ವಿಶ್ವನಾಥಪುರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

5.8 ಕೋಟಿ ಕಾರ್ಡ್ ರದ್ದು ಖಂಡಿಸಿ ಕೇಂದ್ರದ ವಿರುದ್ದ ಪ್ರತಿಭಟಿಸುತ್ತೀರ? ಬಿಜೆಪಿ ನಾಯಕರಿಗೆ ರಾಮಲಿಂಗಾ ರೆಡ್ಡಿ ತರಾಟೆ

ಬೆಂಗಳೂರು: ಕೇಂದ್ರ ಸರ್ಕಾರವು 5.8 ಕೋಟಿ ಕಾರ್ಡ್ ರದ್ದು ಮಾಡಲು ಹೊರಟಿರುವ ಬಗ್ಗೆ ಬಿಜೆಪಿ ನಾಯಕರು ಚಕಾರ ಎತ್ತುತ್ತಿಲ್ಲ ಆದರೆ ರಾಜ್ಯದಲ್ಲಿ BPL ರದ್ದಾಗಲ್ಲ ಎಂದು ಸಿಎಂ ಹೇಳಿದರೂ ಹೋರಾಟ ನಡೆಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ನಡೆ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಕಟು ಟೀಕೆ ಮಾಡಿರುವ ರಾಮಲಿಂಗಾ ರೆಡ್ಡಿ, ಬಿಜೆಪಿಯವರು ಜನರನ್ನು ದಾರಿತಪ್ಪಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಚಾಳಿ ಹೊಂದಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹಾಗೂ ಮಾನ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು ಮಾತ್ರ ರದ್ದು ಮಾಡಲಾಗುತ್ತದೆ. ಇಷ್ಟು ಸ್ಪಷ್ಟವಾಗಿ ಹೇಳಿದ್ದಾಗ್ಯೂ ಸಹ ಬಿಜೆಪಿಯವರಿಗೆ ವಿಷಯಾಂತರ ಮಾಡಿ ಜನರನ್ನು…

ರೈತರ ಜಮೀನಿಗೆ ವಕ್ಫ್ ಮಂಡಳಿ‌ ಕನ್ನ; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ರೈತರ ಜಮೀನಿಗೆ ವಕ್ಫ್ ಮಂಡಳಿ‌ ಕನ್ನ ಹಾಕಿರುವ ಬೆಳವಣಿಗೆ ಬಗ್ಗೆ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಅನೇಕ ನಾಯಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಆಗ್ರಹಿಸಿದರು.

ನ.26ರಂದು ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರ ಪ್ರತಿಭಟನೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ದಕ್ಷಿಣ ರಾಜ್ಯಗಳಲ್ಲಿ 26 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರ ಮೌನ ದರಣಿ ನಡೆಸಲಾಗುವುದು ಎಂದು ರೈತ ನಾಯಕರು ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೆವಾಲ, ಕೇಂದ್ರ ಸರ್ಕಾರ ಸಮಸ್ಯೆಗೆ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳದಿದ್ದರೆ ದೇಶಾದ್ಯಂತ ರೈತರು ಬೀದಿಗಿಳಿಯ ಬೇಕಾಗುತ್ತದೆ. ಎರಡು ದಿನ ಕಾದು ನೋಡುತ್ತೇವೆ ಎಂದರು. ದೆಹಲಿಯ ಕನೂರಿ ಬಾರ್ಡರ್.ಶಂಬು ಬಾರ್ಡರ್ ಗಳಲಿ.ರೈತರ ಹೂರಾಟ ಗಂಬೀರ ಸ್ವರೂಪ ಪಡೆಯುತಿದೆ. ಸಂಸತ್ ಆದೀವೆಶನ ಆರಂಬವಾಗುತಿರುವ ಹಿನ್ನೆಲೆಯಲ್ಲಿ ನವಂಬರ್ 26 ರಿಂದ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ಧಲೇವಾಲ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವಲ್ಲಿಯೆ ಕೆಂದ್ರ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು. ಕುರುಬೂರು ಎಚ್ಚರಿಕೆ: ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ…

ವಕ್ಫ್‌ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: BJP ಆಗ್ರಹ

ಬೆಂಗಳೂರು: ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ‌ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ವಕ್ಫ್‌ ಮಂಡಳಿಗೆ ನ್ಯಾಯಾಂಗದ ಅಧಿಕಾರ* ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್‌ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ ಎಂದು ದೂರಿದರು. ಬೌರಿಂಗ್‌ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ…