ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ ಎಚ್ಚರಿಕೆ

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು. ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ…

ಸಂದರ್ಭ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ: ಡಿಕೆಶಿ

ದೆಹಲಿ: ರಾಜ್ಯ ಸಂಪುಟ ವಿಸ್ತರಣೆಯು ಸಂದರ್ಭ ಬಂದಾಗ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಸಂಪುಟ ಪುನಾರಚನೆ ಕುರಿತಂತೆ ಡಿ.ಕೆ.ಶಿ. ಪ್ರತಿಕ್ರಿಯಿಸಿದರು. ಸಂಪುಟ ವಿಸ್ತರಣೆಯ ಬಗ್ಗೆ ಪತ್ರಕರ್ತರು ಕೇಳಿದಾಗ, “ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ” ಎಂದು ಡಿಕೆಶಿ ತಿಳಿಸಿದರು.

KPCC ಅಧ್ಯಕ್ಷರ ಆಯ್ಕೆ; ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕಾರಣ ನಡೆಯಲ್ಲ ಎಂದ ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕೀಯ ನಡೆಯುವುದಿಲ್ಲ ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ” ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ.…

ಮಹಿಳೆಯನ್ನು ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಅಧಿಕಾರಿ; ವೀಡಿಯೋ ವೈರಲ್

ಲಕ್ನೋ: ಉತ್ತರ ಪ್ರದೇಶದ ಕುಶಿನಗರದಲ್ಲಿ ಪೊಲೀಸರು ಮಹಿಳೆಯೊಬ್ಬಳ ಕೂದಲು ಹಿಡಿದು ಎಳೆದೊಯ್ದ ಆರೋಪ ಭಾರೀ ವಿವಾದವನ್ನು ಸೃಷ್ಟಿಸಿದೆ. ತಮ್ಕುಹಿರಾಜ್ ಸಮೀಪ ಬೇಡುಪರ್ ಮುಸ್ತಕಿಲ್ ಗ್ರಾಮದಲ್ಲಿ ಭೂ ವಿವಾದಕ್ಕೆ ಸಂಬಂಧ ಗುಂಪುಗಳ ನಡುವೆ ವಿವಾದ ಉಂಟಾಗಿದೆ. ಕುಟುಂಬಗಳ ನಡುವಿನ ಗಲಾಟೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯೊಬ್ಬಳನ್ನು ಕೂದಲು ಹಿಡಿದು ಎಳೆದೊಯ್ದಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳಾ ಪೊಲೀಸ್ ಅಧಿಕಾರಿ ಇದ್ದರೂ ಕೂಡ ಪುರುಷ ಪೊಲೀಸ್ ಅಧಿಕಾರಿಯು ಮಹಿಳೆಯನ್ನು ಈ ರೀತಿ ಎಳೆದೊಯ್ದ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. कुशीनगर पुलिस की कार्यशैली पर उठे गंभीर सवाल स्टे के बावजूद भी विवादित जमीन पर निर्माण कराने का आरोप पुलिस पर जबरिया निर्माण कराने का आरोप तरयासुजान थाने के बेदूपार एतमाली…

ನಾಡಿನ ಹಿತಕ್ಕಾಗಿ ಈ ಯುವಕರದ್ದು ಸದ್ದಿಲ್ಲದೆ ಸೇವಾ ಕಾರ್ಯ; ಬೆಳ್ತಂಗಡಿ ‘ವೀರ ಕೇಸರಿ’ ಯುವಕರಿಂದ ‘8ನೇ ಆಸರೆ ಮನೆ’ ಕೊಡುಗೆ

ಮಂಗಳೂರು: ನಾಡಿನ ಒಲಿತಿಗಾಗಿ ಒಂದಿಲ್ಲೊಂದು ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿಯ ‘ವೀರ ಕೇಸರಿ’ ಯುವಕರು ಕೈಗೊಂಡಿರುವ ‘ಆಸರೆ ಕಾರ್ಯಕ್ರಮ ಗಮನಸೆಳೆದಿದೆ. ‘ವೀರಕೇಸರಿ ಬೆಳ್ತಂಗಡಿ’ ಸಂಘಟನೆ ನಿರ್ಗತಿಕರಿಗಾಗಿ ಮನೆಗಳನ್ನು ನಿರ್ಮಿಸಿಕೊಡುತ್ತಿದ್ದು, ಇದೀಗ ಈ ಸೇವಾಯೋಜನೆ ದ್ವಿ ಶತಕ ತಲುಪಿದೆ. ವೈದಿಕ ಕೈಂಕರ್ಯಗಳೊಂದಿಗೆ ನಡೆದ 200ನೇ ಸೇವಾಯೋಜನೆಯಾದ 8ನೇ ಆಸರೆ ಮನೆಯ ಭೂಮಿಪೂಜಾ ಕಾರ್ಯಕ್ರಮವು ಗಮನಸೆಳೆಯಿತು. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಅಂತರಬೈಲು ಪಾದೆಮೇಲಿನಲ್ಲಿ ನವೆಂಬರ್ 25ರಂದು ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀನಿರಂಜನಿ ಮಾಯಾಪುರಿ ಹರಿದ್ವಾರ್‌ನ ಪಂಚಾಯಿತಿ ಅಖಾಡದ ನಾಗಸಾಧು ತಪೋನಿಧಿ ಬಾಬಾ ಶ್ರೀ ವಿಠ್ಠಲ್ ಗಿರಿ ಜಿ ಮಹಾರಾಜ್ ಅವರು ಭೂಮಿ ಪೂಜೆ ನೆರವೇರಿಸಿದರು. ‘ವೀರ ಕೇಸರಿ’ ಬಳಗದ ಯುವಕರೇ ಖರ್ಚಿನ ಹಣ ಪೇರಿಸಿ ಈ ಯೋಜನೆ ಸಾಕಾರಗೊಳಿಸುತ್ತಿರುವ ಮೂಲಕ ನಾಡಿಗೆ ಶಕ್ತಿಯಾಗಿ ಗುರುತಾಗಿದ್ದಾರೆ. ಇದರ ಜೊತೆಯಲ್ಲೇ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳ ಸದಸ್ಯರಿಗೆ…

KSRTC ಅಂತರ ನಿಗಮ ವರ್ಗಾವಣೆ; 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಪ್ರಕಟಿಸಿದ ರಾಮಲಿಂಗ ರೆಡ್ಡಿ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ KSRTC ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತು. ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ ಎಂದು ಸಾರಿಗೆ ಸಚಿವರು ಸಾಮಾಜಿಕ ಜಾಲತಾಣ…