ಬೆಂಗಳೂರು: ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತ ಉಪವಾಸ ಮುಷ್ಕರ ಕೈಗೊಳ್ಳುವ ಹಿಂದಿನ ದಿನವೇ ಮಧ್ಯರಾತ್ರಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲರನ್ನ ಪೊಲೀಸರು ಬಂಧಿಸಿದರೂ ಸಹ ಲೆಕ್ಕಿಸದೆ ಉಪವಾಸ ಮುಂದುವರಿಕೆ ನಾಲ್ಕನೇ ದಿನದಲ್ಲಿ ಮುಂದುವರಿದಿದೆ. ಬಂಧಿತ ರೈತ ನಾಯಕನನ್ನು ಬಿಡುಗಡೆ ಮಾಡಿ ದಲೈವಾಲರನ್ನು ಚಳುವಳಿ ಜಾಗಕ್ಕೆ ವಾಪಸ್ ಕರೆದುಕೊಂಡು ಬನ್ನಿ ನಂತರ ಸರ್ಕಾರದ ಜೊತೆ ಮಾತುಕತೆ ಎಂದು ಪಂಜಾಬ್ ಸರ್ಕಾರಕ್ಕೆ ಎಚ್ಚರಿಕೆಯನ್ನು ಚಳುವಳಿಗಾರರು ನೀಡಿದ್ದು, ಒತ್ತಡಕ್ಕೆ ಮಣಿದ ಮಣಿದ ಪೊಲೀಸರು ರೈತನಾಯಕರನ್ನು ವಾಪಸ್ ಕರೆತಂಡಿದ್ದಾರೆ. ಈ ಹೋರಾಟ ಕುರಿತಂತೆ ಮಾಹಿತಿ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯೆತರ ಸಂಘಟನೆಯ ದಕ್ಷಿಣ ಭಾರತ ಸಂಚಾಲಕ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಕರ್ನಾಟಕದಲ್ಲಿಯೂ ದೆಹಲಿಗೆ ರೈತ ಹೋರಾಟ ಬೆಂಬಲಿಸಿ ಡಿಸೆಂಬರ್ 6 ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಸತ್ಯಾಗ್ರಹ…
Day: November 30, 2024
Cult Movie Shooting Member Suicide Attempt Case
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ ಶೂಟಿಂಗ್ ತಂಡದ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ ಇದೀಗ ನಟ ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ. ‘ಕಲ್ಟ್’ ಸಿನಿಮಾದಲ್ಲಿ ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಕರಣ ನಂತರ ಇಡೀ ಚಿತ್ರ ತಂಡ ವಿವಾದದಲ್ಲಿ ಸಿಲುಕಿದೆ.
ಸ್ವಾಮೀಜಿ ಮೇಲೆ ಕೇಸ್; ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಎಂದ ವಿಜಯೇಂದ್ರ
ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿಗಳು ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ. ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ…