ನವದೆಹಲಿ: ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ದೀಪಾವಳಿ ಹೊತ್ತಲ್ಲಿ ಗಗನಮುಖಿಯಾಗಿದ್ದ ಆಭರಣ ಲೋಹದ ಧಾರಣೆ ಗುರುವಾರ ಚಿನಿವಾರ ಪೇಟೆಯಲ್ಲಿ ಬಹಳಷ್ಟು ಇಳಿಕೆಉಅಗಿತ್ತು. ಬೆಂಗಳೂರಿನಲ್ಲಿ ಸುಮಾರು 20 ದಿನಗಳ ಬಳಿಕ 10 ಗ್ರಾಂ ಚಿನ್ನದ ಬೆಲೆ 80 ಸಾವಿರದ ಗಡಿಯಿಂದ ಕೆಳಗಿಳಿದಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1790 ರೂ. ಇಳಿಕೆಯಾಗಿ 78560 ರೂಪಾಯಿಗೆ ತಲುಪಿದೆ.
Month: November 2024
‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು
ರಿಯಾಲಿಟಿ ಶೋ ‘ಬಿಗ್‌ಬಾಸ್’ ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್, ಉಗ್ರಂ ಮಂಜು ಅಭಿನಯದ ‘ಟೆನಂಟ್’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳ 22ರಂದು ಈ ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ಬಿಗ್‌ಬಾಸ್’ ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್, ಉಗ್ರಂ ಮಂಜು ಅವರು ಇದೀಗ ರಿಯಾಲಿಟಿ ಶೋ ಮನೆಯೊಳಗಿದ್ದಾರೆ. ಅವರಷ್ಟೇ ಅಲ್ಲ, ತಿಲಕ್, ರಾಕೇಶ್ ಮಯ್ಯ, ಸೋನು ಗೌಡ ಸಹಿತ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ಪಾತ್ರಗಳನ್ನು ಹಂಚಿಕೊಂಡಿವೆ. ಮಾಸ್ಟರ್ ಚಾಯ್ಸ್ ಕ್ರಿಯೇಶನ್‌ನಡಿ ನಾಗರಾಜ್ ಟಿ. ನಿರ್ಮಾಣ ಮಾಡಿರಿವ ಈ ಸಿನಿಮಾಕ್ಕೆ ಶ್ರೀಧರ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ.
ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ; ಆರೋಪಿಗಾಗಿ ಪೊಲೀಸ್ ಬಲೆ
ಮುಂಬೈ: ಬಾಲಿವುಡ್ ತಾರೆಯರಿಗೆ ಜೀವ ಬೆದರಿಕೆಯ ಪ್ರಕರಣ ಮರುಕಳಿಸುತ್ತಲಿದ್ದು, ನಟ ಸಲ್ಮಾನ್ ಖಾನ್ ಬಳಿಕ ಶಾರುಖ್ ಖಾನ್ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಮುಂಬೈ ಪೊಲೀಸರು ಆರೋಪಿಗಾಗಿ ಬಲೇ ಬೀಸಿದ್ದಾರೆ. ನಟ ಶಾರುಖ್ ಖಾನ್ ಅವರಿಗೆ ಕರೆ ಮಾಡಿದ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನವೆಂಬರ್ 5 ರಂದು ಪ್ರಕರಣ ದಾಖಲಿಸಿಕೊಂಡ ಬಾಂದ್ರಾ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಛತ್ತೀಸ್ ಘಡದ ರಾಯ್‌ಪುರದಲ್ಲಿ ಇರಬಹುದೆಂಬ ಸುಳಿವು ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PRCI: ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ
ಬೆಂಗಳೂರು: ಪ್ರತಿಷ್ಠಿತ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) 18ನೇ ಜಾಗತಿಕ ಸಂವಹನ ಸಮಾವೇಶ 2024ರ ನವೆಂಬರ್ 8 ಮತ್ತು 9ರಂದು ಮಂಗಳೂರಿನಲ್ಲಿ ನಡೆಯಲಿದೆ. PRCI ಸಂಸ್ಥೆಯು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ವೃತ್ತಿಪರತೆಯ ಪ್ರಮಾಣಿತ ಮಾನದಂಡಗಳನ್ನು ಉತ್ತೇಜಿಸುವ ಪ್ರಮುಖ ಸಂಸ್ಥೆಯಾಗಿದ್ದು ಈ ಬಾರಿ ಕಡಲತಡಿಯ ನಗರಿಯಲ್ಲಿ ಆಯೋಜಿಸಲಾಗಿದ್ದು ದೇಶ ವಿದೇಶಗಳ ಪ್ರತಿನಿಧಿಗಳ ಸಮಾಗಮಕ್ಕೆ ಈ ಸಮಾವೇಶ ಸಾಕ್ಷಿಯಾಗಲಿದೆ. . 2004ರ ಮಾರ್ಚ್ 3 ರಂದು PRCIಯು ಸ್ಥಾಪನೆಯಾಗಿದ್ದು, ಅದಕ್ಕೂ ಮೊದಲು 17 ಜಾಗತಿಕ ಸಂವಹನ ಸಮಾವೇಶಗಳನ್ನು ಜಯಪುರ, ಪುಣೆ, ಕೊಲ್ಕತ್ತಾ, ನವದೆಹಲಿ, ಮುಂಬೈ, ಹೈದರಾಬಾದ್, ಚಂಡೀಗಢ್, ಬೆಂಗಳೂರು ಮತ್ತು ಗೋವಾ ನಗರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ದೇಶದಾದ್ಯಂತ ಮತ್ತು ವಿಶ್ವದ ಪ್ರಮುಖ ಉದ್ಯಮಗಳಿಂದ 500ಕ್ಕೂ ಹೆಚ್ಚು ಸಂವಹನ ವೃತ್ತಿಪರರು ಮತ್ತು ನಿರ್ಧಾರಮೇಕರ್‌ಗಳು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಹೊಸ ವಿಚಾರಗಳು, ಮತ್ತು…
ಕೆಐಎಡಿಬಿ ಅವ್ಯವಹಾರ: ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ವಿರುದ್ಧ ಮೋದಿ, ಷಾಗೆ CRF ದೂರು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ. ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು…
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಂದುವರಿಸಬೇಕು ಹಾಗೂ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜಕೀಯ ಪಕ್ಷಗಳು ಆಗ್ರಹಿಸಿವೆ. ಈ ಆಗ್ರಹದಿಂದಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಗುರುವಾರ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನಕ್ಕೆ ಕೆಲವು ಶಾಸಕರು ಒತ್ತಾಯಿಸಿದರೆ ಕೆಲವರು ವಿರೋಧಿಸಿದ್ದಾರೆ. ವಿಶೇಷ ಸ್ಥಾನಮಾನ ಕುರಿತು ಬುಧವಾರ ಕೈಗೊಂಡ ನಿರ್ಣಯವನ್ನು ಬಿಜೆಪಿ ಶಾಸಕರು ಗುರುವಾರ ವಿರೋಧಿಸಿದರು. ಈ ಸಂದರ್ಭದಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ಯನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಬ್ಯಾನರ್ ಕಿತ್ತು ಹಾಕಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ಗದ್ದಲ ಹಿನ್ನೆಲೆ ಕಲಾಪವನ್ನು ಕೆಲಕಾಲ…
ನಟ ದರ್ಶನ್ ವಿರುದ್ಧ ಬಿಗ್ ಬಾಸ್ ಸ್ಪರ್ಧಿಯಿಂದ ದೂರು
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಜಗದೀಶ್ ಅವರು ಈ ದೂರು ಸಲ್ಲಿಸಿದ್ದಾರೆ. ತಮ್ಮ ಬಗ್ಗೆ ಸಾಮಾಜಿಕ ಜಾನತಾಣಗಳಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿರುವ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ಜಗದೀಶ್ ಅವರು ಬಿಗ್‌ಬಾಸ್ ಸ್ಪರ್ಧಿಯಾಗಿದ್ದಾಗ ವಿವಾದಾತ್ಮಕ ಮಾತುಗಳಿಂದಾಗಿ ಸ್ಪರ್ಧೆಯಿಂದ ಹೊರಬಂದಿದ್ದಾರೆ. ನಟ ದರ್ಶನ್ ಪ್ರಕರಣ ಬಗ್ಗೆಯೂ ಮಾತನಾಡಿರುವ ಜಗದೀಶ್ ಅವರು ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದ್ದು, ಜಗದೀಶ್ ಬಗ್ಗೆ ದರ್ಶನ್ ಅಭಿಮಾನಿಗಳು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ…
ಬೆಂಗಳೂರು: ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ, ಇದೀಗ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸದ್ದಾರೆ. ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ ಎಂದು ದೂರಿದರು. ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ. ಲಂಚವನ್ನು ರುದ್ರಣ್ಣ ಅವರಿಂದ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪತ್ರ ಬರೆದ ಮಾದರಿಯಲ್ಲೇ ರುದ್ರಣ್ಣ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಸಂದೇಶ ಕಳುಹಿಸಿದ್ದಾರೆ. ಪಿಎಸ್‌ಐ ಪರಶುರಾಮ್ ಸತ್ತ ಬಳಿಕ ಯಾರನ್ನೂ…
ಅಬಕಾರಿ ಲಂಚಾವತಾರ; ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ…
ಅರ್ಜುನ್ ಜನ್ಯ ಅವರ ‘45’ ಸಿನಿಮಾದಲ್ಲಿ ಶಿವಣ್ಣ-ಉಪ್ಪಿ
ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದ್ದು ಬಿಡುಗಡೆಗೆ ತಯಾರಿ ನಡೆದಿದೆ. ದೀಪಾವಳಿ ಹಬ್ಬದ ನಡುವೆಯೇ ಟೀಸರ್ ಬಿಡುಗಡೆಯಾಗಿದ್ದು ‘45’ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಒಟ್ಟಿಗೆ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರೂ ಕಾಣಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಉಪೇಂದ್ರ ಅವರ ಫರ್ಸ್ಟ್ ಲುಕ್ ಅನಾವರಣಗೊಳಿಸುವ ‘45’ ಸಿನಿಮಾ ಬಗ್ಗೆ ಕುತೂಹಲವನ್ನು ಚಿತ್ರ ತಂಡ ಹೆಚ್ಚಿಸಿದೆ.
