ಬೆಂಗಳೂರು: ಬಿಗ್ ಬಾಸ್ ಸ್ವರ್ಥಿ, ಕಿರುತೆರೆ ಹಾಗೂ ಸಿನಿಮಾ ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟಿ ದೀಪಿಕಾ ದಾಸ್ ತಾಯಿ ಪದ್ಮಲತಾ ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು, ತುಮಕೂರು ರಸ್ತೆಯ ಅಪಾರ್ಟ್ ಮೆಂಟ್‌ನಲ್ಲಿ ವಾಸವಾಗಿದ್ದಾರೆ, 8 ತಿಂಗಳ ಹಿಂದೆ ಮಗಳು ದೀಪಿಕಾ ದಾಸ್ ದೀಪಕ್ ಕುಮಾರ್ ಜೊತೆ ಮದುವೆಯಾಗಿದ್ದು, ಒಂದು ತಿಂಗಳ ಆಕೆಯ ಅಳಿಯ ಮಗಳು ಇಂಗ್ಲೆಂಡ್ ಪ್ರವಾಸಕ್ಕೆ ಹೋಗಿದ್ದರು. ಕಳೆದ 7 ತಿಂಗಳಿಂದ ವ್ಯಕ್ತಿಯೊಬ್ಬ ಪದ್ಮಲತಾಗೆ ಯಶವಂತ್ ಎಂಬ ವ್ಯಕ್ತಿ ಪೋನ್ ಮಾಡಿ ನಿಮ್ಮ ಅಳಿಯ ದೀಪಕ್ ಕುಮಾರ್ ಜೈಲಿಗೆ ಹೋಗಿ ಬಂದಿದ್ದಾನೆ, ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಿ ಮೋಸ ಮಾಡಿದ್ದಾನೆಂದು ಹೇಳುತ್ತಿದ್ದಾರೆಂತೆ. ಕೆಲವು ದಿನಗಳ ನಂತರ ದೀಪಿಕಾ ದಾಸ್ ಗೂ ಪೋನ್ ನಿಮ್ಮ ಗಂಡನ…
Month: November 2024
ಸಂಸತ್ ಸದಸ್ಯೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮಾಣವಚನ
ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸತ್ ಸದನ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಿಯಾಂಕಾ ಅವರು ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ ವೈಖರಿ ಗಮನಸೆಳೆಯಿತು. ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು.ಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ. Congress General Secretary Smt. @priyankagandhi ji takes the oath as a Member of Parliament from…
ಯೋಗೇಶ್ವರ್ ಗೆದ್ದಿದ್ದಲ್ಲ, ಸ್ವಪಕ್ಷೀಯರೂ, ದೋಸ್ತಿ ನಾಯಕರೇ ‘ನಿಖಿಲ್’ರನ್ನು ಸೋಲಿಸಿದ್ದು?
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಸೋಲಿಗೆ ಬಿಜೆಪಿ-ಜೆಡಿಎಸ್ ನಾಯಕರೇ ಕಾರಣವೇ? ಇಂಥದ್ದೊಂದು ಚರ್ಚೆ ಆರಂಭವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಆರೆಸ್ಸೆಸ್ ವಿರುದ್ದ ಹಿಗ್ಗಾಮುಗ್ಗ ಬೈಯ್ಯುತ್ತಿದ್ದ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಲೋಕಸಭಾ ಚುನಾವಣೆಯಲ್ಲಿ ಅದೇ ಬಿಜೆಪಿ ಜೊತೆ ದೋಸ್ತಿ ಮಾಡಿಕೊಂಡಿದ್ದಾರೆ. ಈ ಬಾರಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲದೊಂದಿಗೆ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ವಿಧಾನಸಭೆ ಪ್ರವೇಶಿಸುತ್ತಿದ್ದರು. ಆದರೆ ತಮ್ಮ ಪಕ್ಷದವರೇ ಕೈಕೊಟ್ಟರೇ ಅಥವಾ ದೋಸ್ತಿ ಪಕ್ಷದವರು ಅಡ್ಡಗಾಲು ಹಾಕಿದರೋ ಗೊತ್ತಿಲ್ಲ. ಜೆಡಿಎಸ್ ಪಕ್ಷಕ್ಕೆ ಮಾತ್ರ ಹೀನಾಯ ಸೋಲಾಗಿದೆ. ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ ಸಹಿತ ಅನೇಕ ಮುಖಂಡರು ನಿಖಿಲ್ ಪರ ಪ್ರಚಾರದಿಂದ ದೂರ ಉಳಿದಿದ್ದರು. ಬಿಜೆಪಿ ನಾಯಕರೂ ಅಷ್ಟೊಂದು ಉತ್ಸಾಹದಿಂದ ಪ್ರಚಾರ ಕೈಗೊಂಡಿಲ್ಲ ಎಂಬುದು ಹೆಚ್ಡಿಕೆ ಆಪ್ತರ ಅಸಮಾಧಾನದ ಮಾತುಗಳು. ಡಿಕೆಶಿ ಬಾಂಬ್..! ಈ…
‘ರಿಸಲ್ಟ್ ಕ್ಲೀನ್ ಚಿಟ್ ಅಲ್ಲ; ಸಿಎಂ ವಿರುದ್ದದ ಲೂಟಿ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ’
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್ ಚಿಟ್ ಎನ್ನುತ್ತಿದ್ದಾರೆ. ಇದು ಕ್ಲೀನ್ ಚಿಟ್ ಅಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎಲ್ಲಿಯವರೆಗೆ ಬಡವರಿಗೆ ನ್ಯಾಯ ಸಿಗುವುದಿಲ್ಲವೋ, ಅಲ್ಲಿವರೆಗೆ ಪಾಪಿಗಳ ಸರ್ಕಾರ ಎಂದು ಹೇಳುತ್ತೇನೆ ಎಂದರು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಮೂರು ಸೀಟು ಗೆದ್ದಿದೆ. ಆದರೆ ಬಿಜೆಪಿ ಅಂದು 18 ಸೀಟು ಗೆದ್ದಿತ್ತು. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್ ಕೂಡ ಸೋತು ಮೂರು ನಾಮ ಹಾಕಿಕೊಳ್ಳಲಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಭಯದಿಂದಾಗಿ ಅನೇಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಇದು ಭವಿಷ್ಯ ಹೇಳುವ ಚುನಾವಣೆಯಲ್ಲ ಎಂದು ವಿಿಶ್ಲೇಷಿಸಿದರು. ಚುನಾವಣಾ ಫಲಿತಾಂಶವನ್ನು ಕ್ಲೀನ್ ಚಿಟ್ ಎನ್ನಲಾಗುವುದಿಲ್ಲ. ಕ್ಲೀನ್ ಚಿಟ್ ಅನ್ನು ನ್ಯಾಯಾಲಯ ಕೊಡಬೇಕಿದೆ. 14 ಸೈಟುಗಳನ್ನು ಲೂಟಿ ಮಾಡಿದ ಸಿಎಂ…
ಉಪಚುನಾವಣೆ: ಇದು ‘ಹಣದ ಗೆಲುವೇ ಹೊರತು ಕಾಂಗ್ರೆಸ್ ಗೆಲುವಲ್ಲ’ ಎಂದ ಅಶೋಕ್
ಬೆಂಗಳೂರು: ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಆಡಳಿತಾರೂಢ ಪಕ್ಷದಲ್ಲಿ ವಿಜಯೋತ್ಸವ ಸಂಭ್ರಮ ಮನೆಮಾಡಿದೆ. ಆದರೆ ಇದು ‘ಹಣದ ಗೆಲುವೇ ಹೊರತು ಕಾಂಗ್ರೆಸ್ ಗೆಲುವಲ್ಲ’ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್,ಅಶೋಕ್, ಈ ಉಪಚುನಾವಣೆ ಹಣದ ಗೆಲುವೇ ಹೊರತು ಕಾಂಗ್ರೆಸ್ ಗೆಲುವಲ್ಲ. ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್ ಅನವಶ್ಯಕವಾಗಿ ಬೀಗುತ್ತಿದೆ ಎಂದು ಬಣ್ಣಿಸಿದರು. ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋತಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂಬುದನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಒಪ್ಪುವುದಿಲ್ಲ. ಕಾಂಗ್ರೆಸ್‌ಗೆ ಅಭ್ಯರ್ಥಿಯ ಗತಿ ಇಲ್ಲ ಎಂಬ ಕಾರಣಕ್ಕೆ ಬಿಜೆಪಿಯಲ್ಲಿದ್ದವರನ್ನು ಕರೆಸಿಕೊಳ್ಳಲಾಗಿದೆ. ಈ ಸೋಲಿನಿಂದ ಬಿಜೆಪಿಗೆ ಯಾವುದೇ ರೀತಿಯ ಹಿನ್ನಡೆಯಾಗುವುದಿಲ್ಲ. ಇದು ಬಿಜೆಪಿಗೆ ಮಾನದಂಡವೂ ಅಲ್ಲ ಎಂದರು. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಈ ಸೋಲನ್ನೇ ಗೆಲುವಾಗಿ ಪರಿವರ್ತಿಸಲಾಗುವುದು ಎಂದವರು ಹೇಳಿದರು.
ವಯನಾಡಿನಲ್ಲಿ ಜಯಭೇರಿ; ಪ್ರಿಯಾಂಕಾಗೆ ಪೂಜಾರಿ ಅಭಿನಂದನೆ
ಮಂಗಳೂರು: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಜಯ ಸಾಧಿಸಿರುವುದಕ್ಕೆ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಗೆಲುವಿನ ಮೂಲಕ ಗಾಂಧಿ ಕುಟುಂಬದ ಮತ್ತೂಬ್ಬ ಮಹಿಳಾ ನಾಯಕಿ ಲೋಕಸಭೆ ಪ್ರವೇಶಿಸಿದ್ದಾರೆ ಎಂದು ಜನಾರ್ದನ ಪೂಜಾರಿ ಮಾಧ್ಯಮ ಹೇಳಿಕೆಯಲ್ಲಿ ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಜನತೆಗೆ ನೀಡಿದ ಗ್ಯಾರಂಟಿ ಯೋಜನೆಗಳು, ಉತ್ತಮ ಆಡಳಿತದಿಂದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ. ಅದರಂತೆ ಮತ ಚಲಾಯಿಸಿ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವಂತಾಗಿದೆ ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.
14 ರಾಜ್ಯಗಳ ಅಖಾಡದಲ್ಲೂ NDA ಮೇಲುಗೈ
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿದಾನಸಭೆಗಳ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸಾರಥ್ಯದ ಮೈತ್ರಿಕೂಟ ಜಯಭೇರಿ ಭಾರಿಸಿದೆ. ಇದೇ ಸಂದರ್ಭದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶವೂ ಗಮನಾರ್ಹ. 14 ರಾಜ್ಯಗಳ 48 ವಿಧಾನಸಭಾ ಸ್ಥಾನಗಳಲ್ಲಿ ಎನ್‌ಡಿಎ 28 ಸ್ಥಾನಗಳನ್ನು ಗೆದ್ದಿದೆ. ಇಂಡಿಯಾ ಮೈತ್ರಿಕೂಟ 20 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ (ನಾಂದೇಡ್) ಮತ್ತು ಕಾಂಗ್ರೆಸ್ (ವಯನಾಡ್) ಲೋಕಸಭಾ ಕ್ಷೇತ್ರಗಳ ಪೈಕಿ ತಲಾ ಒಂದೊಂದು ಸ್ಥಾನ ಗೆದ್ದುಕೊಂಡಿವೆ. ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೀಗಿದೆ: ರಾಜಸ್ಥಾನ: ಬಿಜೆಪಿ- 5; ಕಾಂಗ್ರೆಸ್-1; BAP- 1, ಉತ್ತರ ಪ್ರದೇಶ: ಬಿಜೆಪಿ-6 ಎಸ್‌ಪಿ-2; ಆರ್‌ಎಲ್‌ಡಿ- 1, ಪಶ್ಚಿಮ ಬಂಗಾಳ: ಟಿಎಂಸಿ 6, ಪಂಜಾಬ್: ಆಮ್ ಆದ್ಮಿ- 3; ಕಾಂಗ್ರೆಸ್-1, ಅಸ್ಸಾಂ: ಬಿಜೆಪಿ-3; ಯುಪಿಎಲ್-1; ಎಜಿಪಿ- 1, ಬಿಹಾರ: ಬಿಜೆಪಿ- 2; ಹಿಂದುಸ್ಥಾನ್ ಅವಾಮ್ ಮೋರ್ಚಾ -1; ಜೆಡಿ(ಯು)-1, ಛತ್ತೀಸ್‌ಗಢ: ಬಿಜೆಪಿ-1, ಗುಜರಾತ್: ಬಿಜೆಪಿ-…
ಅಮೆರಿಕ ಕೋರ್ಟ್ ಸಮನ್ಸ್; ಅದಾನಿಗೆ ಸಂಕಷ್ಟ?
ಹೊಸದಿಲ್ಲಿ: ಸೌರಶಕ್ತಿ ಯೋಜನೆಯ ಒಪ್ಪಂದಕ್ಕಾಗಿ 2,200 ಕೋಟಿ ರೂಪಾಯಿ ಲಂಚ ನೀಡಿರುವ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ಗೌತಮ್ ಅದಾನಿಗೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ಅದಾನಿ ಮತ್ತು ಅವರ ಅಳಿಯ ಸಾಗರ್ ಅದಾನಿಗೆ ಅಮೆರಿಕ ಕೋರ್ಟ್‌ನಿಂದ ಸಮನ್ಸ್ ಜಾರಿಯಾಗಿದೆ. ಅಹ್ಮದಾಬಾದ್‌ನಲ್ಲಿರುವ ಅದಾನಿ ನಿವಾಸಕ್ಕೆ ಈ ಸಮನ್ಸ್ ತಲುಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗುರುತರ ಆರೋಪಗಳ ಕುರಿತಂತೆ 21 ದಿನಗಳೊಳಗೆ ಉತ್ತರಿಸಬೇಕು ಎಂದು ಅಮೆರಿಕ ಸೂಚಿಸಿದೆ. ಒಂದು ವೇಳೆ ಸಮನ್ಸ್‌ಗೆ ಉತ್ತರ ನೀಡಲು ವಿಫಲವಾದರೆ ಉದ್ಯಮಿ ಅದಾನಿ ಅವರ ವಿರುದ್ದ ಅಮೆರಿಕ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ತಜ್ಞರು ವೇಳೆ ವಿಷ್ಲೇಶಿಸಿದ್ದಾರೆ.
ಜಾರ್ಖಂಡ್ ವಿಧಾನಸಭಾ ಚುನಾವಣೆ; ಇಂಡಿಯ ಬ್ಲಾಕ್ ಜಯಭೇರಿ
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಜೆಎಂಎಂ ಮಿತ್ರಪಕ್ಷಗಳು 56 ಸ್ಥಾನಗಳನ್ನು ಗೆದ್ದಿವೆ. ಬಿಜೆಪಿ ಮಿತ್ರಪಕ್ಷಗಳು 24 ಸ್ಥಾನಗಳನ್ನು ಗೆದ್ದುಕೊಂಡು ಪ್ರತಿಪಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಒಂದು ಸ್ಥಾನ ಇತರರ ಪಾಲಾಗಿದೆ. ಪ್ರಸ್ತುತ 81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ 50ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಇಂಡಿಯ ಬ್ಲಾಕ್ ಸರ್ಕಾರ ರಚಿಸಲಿದೆ.
ಉಪಚುನಾವಣೆಯ ಫಲಿತಾಂಶ; ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ 138ಕ್ಕೆ ಏರಿಕೆ
ಬೆಂಗಳೂರು: ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ನಂತರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ 138ಕ್ಕೆ ಏರಿಕೆಯಾಗಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಹೆಚ್ಚುವರಿ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಈ ಕೈ ಅಧಿಕಾರದಲ್ಲಿದ್ದ ಕಾರಣ ಜನರ ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆ ಜಾರಿ ಮಾಡಲಾಯಿತು. ಸಿದ್ದರಾಮಯ್ಯ ಅವರ ಸರ್ಕಾರದ ಪರಿಶುದ್ಧ ಆಡಳಿತಕ್ಕೆ ಜನ ಬೆಂಬಲ ನೀಡುತ್ತಿದ್ದಾರೆ ಎಂದರು. ಚನ್ನಪಟ್ಟಣದಲ್ಲಿ ಅಪೂರ್ವ ಸಹೋದರರ ಚುನಾವಣೆಯಲ್ಲ. ಇದು ಜನರ ಚುನಾವಣೆ, ಜನರ ಗೆಲುವು. ಕ್ಷೇತ್ರದಲ್ಲಿ ಜನ ಪ್ರಾರಂಭದಿಂದಲೂ ಜನರು ತಮ್ಮ ಬದುಕು ಕಟ್ಟಿಕೊಳ್ಳಬೇಕು. ಅಭಿವೃದ್ಧಿ ನೋಡಬೇಕು ಎಂದು ಜೆಡಿಎಸ್ ಗೆ ಅವಕಾಶ ನೀಡದೆ ಕಾಂಗ್ರೆಸ್ ಸರ್ಕಾರಕ್ಕೆ ಆಶೀರ್ವಾದ…