ಬೆಂಗಳೂರು:ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. ಈ ಉಪಚುನಾವಣೆಗಳ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆಯೇ ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ಮೂರು ಉಪಚುನಾವಣೆಗಳ ಫಲಿತಾಂಶ ಬಂದಿದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯೋದಿಲ್ಲ, ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ…
Month: November 2024
ಉಪಚುನಾವಣಾ ಫಲಿತಾಂಶ ಹಿನ್ನೆಲೆ: ವಿಪಕ್ಷ ನಾಯಕರ ರಾಜೀನಾಮೆಗೆ ರಮೇಶ್ ಬಾಬು ಆಗ್ರಹ
ಬೆಂಗಳೂರು: ರಾಜ್ಯದಲ್ಲಿನ ಉಪಚುನಾವಣೆಯ ಫಲಿತಾಂಶವು ಪ್ರದೇಶ ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಿದೆ. ಮಹಾ ತೀರ್ಪನ್ನು ಸ್ವಾಗತಿಸಿರುವ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ರಾಜ್ಯದ 3 ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ನೀಡುವ ಮೂಲಕ ಮತದಾರರು ನಮ್ಮ ಪಕ್ಷದ ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ದ್ವೇಷಪೂರಿತ ಭಾಷಣಗಳನ್ನು ತಿರಸ್ಕರಿಸಿ, ಸುಳ್ಳು ಪ್ರಚಾರಗಳಿಗೆ ಒಳಗಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ನಾಯಕತ್ವಕ್ಕೆ ಮನ್ನಣೆ ನೀಡಿರುತ್ತಾರೆ. ಕರ್ನಾಟಕದ ಬಿಜೆಪಿ ಬಾಲಭವನದ ನಾಯಕ ವಿಜಯೇಂದ್ರ, ಅಸಮರ್ಥ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಅವಕಾಶವಾದದ ನಾಯಕ ಹೆಚ್.ಡಿ.ಕುಮಾರಸ್ವಾಮಿ ರವರ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಮೇಲಿನ ಆರೋಪಗಳಿಗೆ ಉಪಚುನಾವಣೆಯ ಫಲಿತಾಂಶದ ಮೂಲಕ ಮತದಾರರು ಉತ್ತರ ನೀಡಿರುತ್ತಾರೆ ಎಂದಿರುವ ರಮೇಶ್ ಬಾಬು , ಕರ್ನಾಟಕ ಪ್ರದೇಶ ಕಾಂಗ್ರೆಸ್…
ನಿಖಿಲ್ ಕುಮಾರಸ್ವಾಮಿಗೆ ಸತತ ಸೋಲು; ಮಗನ ರಾಜಕೀಯ ಭವಿಷ್ಯ ಬಗ್ಗೆ HDKಗೆ ಚಿಂತೆ
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಾಷ್ಟ್ರದ ಗಮನ ಸೆಳೆದಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುತ್ರ ಸ್ಪರ್ದಿಸಿರುವ ಈ ಕ್ಷೇತ್ರದ ಗೆಲುವು ಕೇಂದ್ರದ ಆಡಳಿತಾರೂಢ NDAಗೆ ಅನಿವಾರ್ಯವಾಗಿತ್ತು. ಆದರೆ ಬಿಜೆಪಿಯ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನೇ ಸೆಳೆದು ಕೈ ಚಿಹ್ನೆಯಡಿ ಕಣಕ್ಕಿಳಿಸಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,886 (ಶೇ.88.81) ಮತಗಳು ಚಲಾವಣೆಗೊಂಡಿವೆ. ಮತಗಳ ಎಣಿಕೆ ಶನಿವಾರ ನಡೆದಿದ್ದು. ಕಾಂಗ್ರೆಸ್ ಅಭ್ಯರ್ಥಿ ಸಿ,ಪಿ,ಯೋಗೇಶ್ವರ್ ಜಯಭೇರಿ ಭಾರಿಸಿದೆ. ಈವರೆಗೂ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲುಂಡಿದೆ. ಅಷ್ಟೇ ಅಲ್ಲ, ದೇವೇಗೌಡರ ಕುಟುಂಬದ ಕುಡಿ ನಿಖಿಲ್ ಕುಮಾರಸ್ವಾಮಿ ಅವರಿಯು ಸತತ ಸೋಲುಂಡಿದ್ದು ಅವರ ರಾಜಕೀಯ ಭವಿಷ್ಯ ಬಗ್ಗೆ ಕುಮಾರಸ್ವಾಮಿ ಅವರಿಗೆ ಚಿಂತೆಯಾಗಿ ಕಾಡಿದೆ.
ಹಾವೇರಿ ಸೋಲು; ಬೊಮ್ಮಾಯಿ ಕುಟುಂಬ ರಾಜಕಾರಣ ತಿರಸ್ಕರಿಸಿದ ಮತದಾರ?
ಹಾವೇರಿ: ಪ್ರತಿಷ್ಠೆಯ ಅಖಾಡವೆನಿಸಿರುವ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಅಹ್ಮದ್ ಖಾನ್ ಪಠಾಣ್ ಜಯಗಳಿಸಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಹೀನಾಯ ಸೋಲು ಉಂಟಾಗಿದ್ದು ಬಿಜೆಪಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆದಿದೆ. ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಯಾಸೀರ್‌ಅಹ್ಮದ್ ಖಾನ್ ಪಠಾಣ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರವಿ ಕೃಷ್ಣಾ ರೆಡ್ಡಿ ಸೇರಿದಂತೆ 8 ಅಭ್ಯರ್ಥಿಗಳು ಅಖಾಡದಲ್ಲಿದ್ದರು. ಈ ಪೈಕಿ ಭರತ್ ಬೊಮ್ಮಾಯಿ ಮತ್ತು ಯಾಸೀರ್ ಅಹ್ಮದ್‌ಖಾನ್ ಪಠಾಣ್ ನಡುವೆ ನೇರ ಪೈಪೋಟಿ ಇತ್ತಾದರೂ ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಅಹ್ಮದ್ ಖಾನ್ ಪಠಾಣ್ ಗೆದ್ದು ಬೀಗಿದ್ದಾರೆ. ಈ ಮೂಲಕ ಬಿಜೆಪಿಯು ಈ ಕ್ಷೇತ್ರವನ್ನು ಕಳೆದುಕೊಂಡಿದೆ. ಈ ನಡುವೆ ಭರತ್ ಬೊಮ್ಮಾಯಿ ಸೋಲಿನ ಬಗ್ಗೆ ಬಿಜೆಪಿ…
ಗ್ಯಾರಂಟಿ ಯೋಜನೆಗಳು, ಸಮರ್ಥ ಆಡಳಿತ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿವೆ: ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿರುವುದು ನಮ್ಮ ಸರ್ಕಾರದ ಸಮರ್ಥ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಉಪ ಚುನಾವಣೆಯ ಫಲಿತಾಂಶದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಉಪ ಚುನಾವಣೆ ಫಲಿತಾಂಶಗಳು 2028 ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಹಾಗೂ ಮೈಸೂರು ಕರ್ನಾಟಕ ಭಾಗದ ಚನ್ನಪಟ್ಟಣದಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಜೈ ಎಂದಿದ್ದಾರೆ. ಇದರೊಂದಿಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಸುಳ್ಳು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಕರ್ನಾಟಕ ಬಿಜೆಪಿ ನಾಯಕರು ಬರೀ ಸುಳ್ಳು ಆರೋಪಗಳನ್ನು ಮಾಡುತ್ತಿದ್ದರು. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ವಕ್ಫ್ ಕುರಿತು ಜನರನ್ನು ದಿಕ್ಕು ತಪ್ಪಿಸಲು ಬಿಜೆಪಿಗರು…
ವಯನಾಡ್: ದಾಖಲೆ ಮತಗಳ ಅಂತರದಿಂದ ಪ್ರಿಯಾಂಕಾ ಗಾಂಧಿ ದಿಗ್ವಿಜಯ
ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಜಯಭೇರಿ ಬಾರಿಸಿ ಲೋಕಸಭೆ ಪ್ರವೇಶಿಸಿದ್ದಾರೆ. ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಪ್ರಿಯಾಂಕ ಸೋದರ ರಾಹುಲ್ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದರು. ನಿರೀಕ್ಷೆಯಂತೆ ಅವರು ಜಯಗಳಿಸಿದ್ದಾರೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ, ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಕಣಕ್ಕಿಳಿದಿದ್ದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಸ್ಪರ್ಧಿಸಿದ್ದರು. ಕಾಂಗ್ರೆಸ್ ಹುರಿಯಾಳು ಪ್ರಿಯಾಂಕಾ ವಾದ್ರಾ ಅವರು 6 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ರಾಹುಲ್ ಗಾಂಧಿ ಅವರು ಈ ಹಿಂದೆ 3.64 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಮಹಾರಾಷ್ಟ್ರದಲ್ಲಿ ‘ಮಹಾಯುತಿ ಸುನಾಮಿ; ಬಿಜೆಪಿ ನೇತೃತ್ವದಲ್ಲಿ ನವಯುಗ
ಮುಂಬಯಿ: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸಲಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟ ಮಹಾಯುತಿ ಜಯಭೇರಿ ಭಾರಿಸಿದ್ದು ಮತ್ತೊಮ್ಮೆ ಅಧಿಕಾರಕ್ಕೇರಲು ರಂಗ ಸಜ್ಜಾಗಿದೆ. ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಶನಿವಾರ ನಡೆದಿದ್ದು, ಎಣಿಕೆಯುದ್ದಕ್ಕೂ ಮುನ್ನಡೆ ಕಾಯ್ದುಕೊಂಡು ಬಂದ ಎನ್‌ಡಿಎ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಗೆದ್ದುಕೊಂಡಿದೆ. ಫಲಿತಾಂಶ: ಎನ್‌ಡಿಎ – 235, ಎಂವಿಎ – 49 ಇತರರು -4 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಬೇಕಿರುವ ಮ್ಯಾಜಿಕ್ ಸಂಖ್ಯೆ 145. ಇದೀಗ ಬಹುಮತ ಗಳಿಸಿರುವ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯಲಿದೆ
ಸಂಡೂರು ಉಪಚುನಾವಣೆ: ಕ್ಷೇತ್ರವನ್ನು ಉಳಿಸಿಕೊಂಡ ಕಾಂಗ್ರೆಸ್
ಬಳ್ಳಾರಿ : ಸಂಡೂರು ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಕಾಂಗ್ರೆಸ್‌ನ ಭದ್ರಕೋಟೆಯೆಂದು ಬಿಂಬಿತವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಜಯಗಳಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಲಿಗೆ ತೀವ್ರ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿತ್ತು. ಕಾಂಗ್ರೆಸ್‌ನ ಸಚಿವ ಸಂತೋಷ್ ಲಾಡ್ ಹಾಗೂ ಬಿಜೆಪಿಯ ಶಾಸಕ ಜಿ. ಜನಾರ್ದನ ರೆಡ್ಡಿ ನಡುವೀಣೆ ವೈಯಕ್ತಿಕ ವರ್ಚಸ್ಸಿನ ಪ್ರಶ್ನೆಯ ಕಣವಾಗಿ ಗುರುತಾಗಿದ್ದ ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಕನಸು ಭಗ್ನವಾಗಿದೆ. ಕಾಂಗ್ರೆಸ್ ಸಂಸದ ಇ.ತುಕಾರಾಮ್ ರಾಜೀನಾಮೆಯಿಂದಾಗಿ ತೆರವಾಗಿದ್ದ ಸಂಡೂರಿನಲ್ಲಿ ಉಪಚುನಾವಣೆ ನಡೆದಿದೆ. ಕಾಂಗ್ರೆಸ್ ಪಕ್ಷವು ತುಕಾರಾಂ ಪತ್ನಿ ಅನ್ನಪೂರ್ಣ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ಬಂಗಾರು ಹನುಮಂತು ಅವರನ್ನು ಕಣಕ್ಕಿಳಿಸಿತ್ತು. ಆದರೆ ವಿಜಯಮಾಲೆ ಕಾಂಗ್ರೆಸ್ ಅಭ್ಯರ್ಥಿಯ ಕೊರಳಿಗೆ ಬಿದ್ದಿದೆ.
ಹಾವೇರಿ ಉಪಚುನಾವಣೆ; ಕಾಂಗ್ರೆಸ್ ಜಯಭೇರಿ; ಬೊಮ್ಮಾಯಿ ಪುತ್ರನಿಗೆ ಮುಖಭಂಗ
ಹಾವೇರಿ: ಪ್ರತಿಷ್ಠೆಯ ಅಖಾಡವೆನಿಸಿರುವ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಅಹ್ಮದ್ ಖಾನ್ ಪಠಾಣ್ ಜಯಗಳಿಸಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಹೀನಾಯ ಸೋಲು ಉಂಟಾಗಿದ್ದು ಬಿಜೆಪಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆದಿದೆ. ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಯಾಸೀರ್‌ಅಹ್ಮದ್ ಖಾನ್ ಪಠಾಣ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರವಿ ಕೃಷ್ಣಾ ರೆಡ್ಡಿ ಸೇರಿದಂತೆ 8 ಅಭ್ಯರ್ಥಿಗಳು ಅಖಾಡದಲ್ಲಿದ್ದರು. ಈ ಪೈಕಿ ಭರತ್ ಬೊಮ್ಮಾಯಿ ಮತ್ತು ಯಾಸೀರ್ ಅಹ್ಮದ್‌ಖಾನ್ ಪಠಾಣ್ ನಡುವೆ ನೇರ ಪೈಪೋಟಿ ಇತ್ತಾದರೂ ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಅಹ್ಮದ್ ಖಾನ್ ಪಠಾಣ್ ಗೆದ್ದು ಬೀಗಿದ್ದಾರೆ. ಈ ಮೂಲಕ ಬಿಜೆಪಿಯು ಈ ಕ್ಷೇತ್ರವನ್ನು ಕಳೆದುಕೊಂಡಿದೆ.
ರಾಮನಗರ ಉಪ ಚುನಾವಣೆ: ಜೆಡಿಎಸ್ ಪಕ್ಷಕ್ಕೆ ಮುಖಭಂಗ; ಕಾಂಗ್ರೆಸ್’ನ ಯೋಗೇಶ್ವರ್ ಜಯಭೇರಿ
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಾಷ್ಟ್ರದ ಗಮನ ಸೆಳೆದಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುತ್ರ ಸ್ಪರ್ದಿಸಿರುವ ಈ ಕ್ಷೇತ್ರದ ಗೆಲುವು ಕೇಂದ್ರದ ಆಡಳಿತಾರೂಢ NDAಗೆ ಅನಿವಾರ್ಯವಾಗಿತ್ತು. ಆದರೆ ಬಿಜೆಪಿಯ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನೇ ಸೆಳೆದು ಕೈ ಚಿಹ್ನೆಯಡಿ ಕಣಕ್ಕಿಳಿಸಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,886 (ಶೇ.88.81) ಮತಗಳು ಚಲಾವಣೆಗೊಂಡಿವೆ. ಮತಗಳ ಎಣಿಕೆ ಶನಿವಾರ ನಡೆದಿದ್ದು. ಕಾಂಗ್ರೆಸ್ ಅಭ್ಯರ್ಥಿ ಸಿ,ಪಿ,ಯೋಗೇಶ್ವರ್ ಜಯಭೇರಿ ಭಾರಿಸಿದೆ. ಈವರೆಗೂ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲುಂಡಿದೆ. ಅಷ್ಟೇ ಅಲ್ಲ, ದೇವೇಗೌಡರ ಕುಟುಂಬದ ಕುಡಿ ನಿಖಿಲ್ ಕುಮಾರಸ್ವಾಮಿ ಅವರಿಯು ಸತತ ಸೋಲುಂಡಿದ್ದು ಅವರ ರಾಜಕೀಯ ಭವಿಷ್ಯ ಬಗ್ಗೆ ಕುಮಾರಸ್ವಾಮಿ ಅವರಿಗೆ ಚಿಂತೆಯಾಗಿ ಕಾಡಿದೆ.