ಉಡುಪಿ: ಕಡಲತಡಿಯ ನಗರಿ, ದೇವರ ನಾಡು ಉಡುಪಿಯಲ್ಲಿ ‘ಸಂಗೀತ ಸುಗ್ಗಿ’ಯೊಂದು ನಾಡಿನ ಗಮನಸೆಳೆಯಿತು. ಗಾನ ಸರಸ್ವತಿಯರನ್ನು ಉತ್ತೇಜಿಸುವ, ಸಂಗೀತ ಸಾಮ್ರಾಟರನ್ನು ಗುರುತಿಸಿ ಸನ್ಮಾನಿಸುವ ಅನನ್ಯ ಸಂಗೀತ ವೈಭವ ಕಲಾಜಗತ್ತಿನ ಕುತೂಹಲದ ಕೇಂದ್ರಬಿಂದುವಾಯಿತು. ‘ನನ್ನ ನಾಡು ನನ್ನ ಹಾಡು’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನೆರವೇರಿತು. ಗಾನ ಕೋಗಿಲೆಗಳಿಗಾಗಿಯೇ ಸಂಗೀತ ಸ್ಪರ್ಧೆ ಆಯೋಜಿಸುವ ಮೂಲಕ ಸಂಗೀತಾಸಕ್ತರ ಮೆಚ್ಚುಗೆಗೂ ಈ ಕಾರ್ಯಕ್ರಮ ಪಾತ್ರವಾಯಿತು. . ಉಡುಪಿ ಜಿಲ್ಲೆಯ ಲಯನ್ಸ್ (317 ಸಿ) ಹಾಗೂ ರೋಟರಿ ಕ್ಲಬ್ (ಜಿಲ್ಲೆ 3182) ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ ಮಣಿಪಾಲ ‘ಶ್ರೀ ದುರ್ಗಾ ಮ್ಯೂಸಿಕ್ ಮೀಟ್’ ಸಹಯೋಗದೊಂದಿಗೆ ಆಯೋಜಿತವಾದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯಯಲ್ಲೂ ಅನೇಕ…
Month: November 2024
ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅಧಿಕಾರ ಸ್ವೀಕಾರ
ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸೋಮವಾರ ಅವರು ಪ್ರಮಾಣವಚನ ಸ್ವೀಕರಿಸಿದರು. ಈವರೆಗೂ ಸಿಜೆಐ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನವನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಅಲಂಕರಿಸಿದ್ದಾರೆ. 1980ರಲ್ಲಿ ದೆಹಲಿ ವಿವಿಯಿಂದ ಕಾನೂನು ಪದವಿಪಡೆದಿರುವ ಇವರು, ಈವರೆಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿಟ್ಟಿದ್ದರು. ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಸಹಿತ ಹಲವು ಪ್ರಕರಣಗಲ್ಲಿ ನ್ಯಾಯಮುರ್ತಿ ಸಂಜೀವ್ ಖನ್ನಾ ಅವರು ನೀಡಿರುವ ತೀರ್ಪು ಗಮನಾರ್ಹ. ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಇವರು ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ.
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸುಪ್ರೀಂಕೋರ್ಟ್’ನಲ್ಲೂ ವಜಾ
ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್’ನಲ್ಲಿ ಜಾಮೀನು ಸಿಗದ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ಸೋಮವಾರ ವಿಚಾರಣೆಗೆ ಬಂದಿದ್ದು ನ್ಯಾಯಪೀಠವು ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ತಮ್ಮ ಕಕ್ಷಿದಾರರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದಲ್ಲಿ ವರ್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರ ಆರೋಪ ಮಾಡಲಾಗಿದೆ ಎಂದು ವಾದಿಸಿದರು. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರಾದರೂ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ, ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
DL, RCಗೂ ಶೀಘ್ರದಲ್ಲೇ ಕ್ಯೂಆರ್ ಕೋಡ್; ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಎಲ್ಲ RTOಗಳಲ್ಲೂ ಇ ಆಡಳಿತಕ್ಕೆ ಕ್ರಮ; ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಅಮೂಲಾಗ್ರ ಪರಿವರ್ತನೆ ಮಾಡಲಾಗುತ್ತಿದ್ದು, ವ್ಯವಸ್ಥೆ, ಸೌಲಭ್ಯಗಳಲ್ಲೂ ಸುಧಾರಣೆ ತರಲಾಗಿದೆ. ಅದರಂತೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಹಾಗೂ ವಾಹನ ನೋಂದಣಿ (ಆರ್‌ಸಿ) ಕಾರ್ಡ್‌ಗಳಿಗೆ ಹೈಟೆಕ್ ಸ್ಪರ್ಶ ಸಿಗಲಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ DL, RC ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಪ್ರಸ್ತುತ ಕೊಡುತ್ತಿರುವ ಆರ್‌ಸಿ ಹಾಗೂ ಡಿಎಲ್‌ಗಳು ಪಾಲಿ ವಿನೈಲ್ ಕ್ಲೋರೈಡ್ (ಪಿವಿಸಿ) ಕಾರ್ಡ್‌ಗಳಾಗಿವೆ. ಹೊಸ ಯೋಜನೆಯಲ್ಲಿ ಪಾಲಿ ಕಾರ್ಬನೇಟ್ ಕಾರ್ಡ್ (ಪಿಸಿಸಿ)ಗಳನ್ನು ವಿತರಣೆ ಮಾಡಲಾಗುತ್ತದೆ. ಇವು ಬ್ಯಾಂಕ್‌ಗಳು ವಿತರಿಸುವ ಕಾರ್ಡ್‌ಗಳ ಮಾದರಿಯಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಕಾರ್ಡ್‌ಗಳಾಗಿರುತ್ತವೆ ಎಂದವರು ಮಾಹಿತಿ ಒದಗಿಸಿದ್ದಾರೆ. ಈವರೆಗಿನ ಕಾರ್ಡ್‌ಗಳಲ್ಲಿ ಹಳೆಯದಾಗುತ್ತಿದ್ದಂತೆ ಕಾರ್ಡ್ ಮೇಲಿರುವ ಅಕ್ಷರಗಳು ಅಳಿಸಿ ಹೋಗುತ್ತಿತ್ತು. ಆದರೆ, ಪಿಸಿಸಿ ಕಾರ್ಡ್‌ಗಳಲ್ಲಿ ಲೇಸರ್ ಇನ್‌ಗ್ರೀಡಿಂಗ್…
ಕೋವಿಡ್ ಹಗರಣ ಆರೋಪ; ಆಯೋಗದ ವರದಿಯಿಂದ ಏನೂ ಆಗಲ್ಲ ಎಂದ ಮಾಜಿ ಸಿಎಂ
ಬಳ್ಳಾರಿ: ಕಾನೂನು ಚೌಕಟ್ಟಿನಲ್ಲೇ ಕೋವಿಡ್ ಸೋಂಕು ನಿರ್ವಹಣಾ ಕೆಲಸ ನಡೆದಿದ್ದು, ಯಾವುದೇ ಹಗರಣ ನಡೆದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೋವಿಡ್ ಅಕ್ರಮ ಕುರಿತ ಆಯೋಗದ ವರದಿ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ವರದಿಯಿಂದ ಏನೂ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್ ಅಕ್ರಮ ಕುರಿತು ಕಾಂಗ್ರೆಸ್ ನಾಯಕರು ಆರೋಪ ಮೈನಾಡುತ್ತಿದ್ದಾರೆ. ದುರುದ್ದೇಶದಿಂದ ನನ್ನ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿದ್ದಾರೆ ಎಂದ ಬಿ.ಎಸ್.ವೈ, ಇದರಿಂದ ಯಾವುದೇ ಪ್ರಯೋಜನವಾಗದು ಎಂದರು.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬೀಳಲಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯವಾಗಲಿದೆ. ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಮೂರೂ ಕ್ಷೇತ್ರಗಳ ಚುನಾವಣಾ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಅಖಾಡವಾಗಿದ್ದು, ನಾಯಕರು ಅಂತಿಮ ಕ್ಷಣದ ಪ್ರಚಾರದಲ್ಲಿ ತೊಡಗಿದ್ದಾರೆ.
ವಕ್ಫ್ ಆಸ್ತಿ ವಿವಾದ; ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್
ಬೆಂಗಳೂರು: ವಕ್ಫ್ ಆಸ್ತಿ ವಿವಾದ ಹಿನ್ನೆಲೆಯಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಾ ಆದೇಶಿಸಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು, ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸಿಎಂ ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಸಿಎಂ ಸೂಚಿಸಿದ್ದಾರೆ. ಇದೀಗ ಈ ಸಂಬಂಧ ಅಧಿಕೃವಾಗಿ ಆದೇಶ ಹೊರಬಿದ್ದಿರುವುದರಿಂದ ನಾವು ನಿರಾಳರಾಗಿದ್ದೇವೆ ಎಂದು ರೈತರು ಹೇಳಿದ್ದಾರೆ.
ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಗೆಲುವು ಖಚಿತ : ಡಾ.ಮಂಜುನಾಥ್ ಭಂಡಾರಿ ವಿಶ್ವಾಸ
ವಯನಾಡ್: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಇಡೀ ದೇಶದ ಗಮನಸೆಳೆದಿದೆ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು ಅವರನ್ನು ಗೆಲ್ಲಿಸಲು ಪಕ್ಷದ ನಾಯಕರು ಅವಿರತ ಶ್ರಮ ವಹಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಗೆಲ್ಲಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರೂ ಶ್ರಮವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಕರಾವಳಿಯ ಶಾಸಕ ಡಾ.ಮಂಜುನಾಥ್ ಭಂಡಾರಿ ತಮ್ಮ ಕಾರ್ಯಕರ್ತ ಸೈನ್ಯದೊಂದಿಗೆ ವಯನಾಡಿನ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ ರಾಹುಲ್ ಸಹೋದರಿಯನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಬಹಳಷ್ಟು ಮಂದಿ ವಯನಾಡಿನಲ್ಲಿದ್ದು ಅವರ ಮತಗಳನ್ನು ಪೇರಿಸಲು ಡಾ.ಮಂಜುನಾಥ್ ಭಂಡಾರಿ ಪ್ರಯತ್ನ ನಡೆಸಿದ್ದಾರೆ. ಇದೇ ವೇಳೆ, ವಯನಾಡ್ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಕೋಟತ್ತಾರ ಗ್ರಾಮ ಪಂಚಾಯತ್’ನಲ್ಲಿ ಪ್ರಿಯಾಂಕಾ ಗಾಂಧಿ ಪರ…
‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ
ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಶುಕ್ರವಾರ ಅವರು ಮುಂಬೈನ ಕಾಲೇಜ್ ಫೆಸ್ಟ್’ನಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮೆಟ್ಟಿಲುಗಳಿಂದ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮುಂಬೈನ ಮಿಥಿಬಾಯಿ ಕಾಲೇಜ್’ನಲ್ಲಿ ನಟ ವಿಜಯ್ ದೇವರಕೊಂಡ ಅವರು ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. Why do we fall, sir (#Kushi, #FamilyStar) So that we can learn to pick ourselves up (#VD12, #VD14)#VijayDevarakonda falls during #Sahiba promotions in Mumbai. But, nothing happened#VD #JasleenRoyal pic.twitter.com/rlqS2go6QD — Vishnu Writess (@VWritessss) November 8, 2024
ಕಣಿವೆ ರಾಜ್ಯದಲ್ಲಿ ಉಗ್ರರ ಕಿತಾಪತಿ; ಸೇನೆಯ ಗುಂಡಿಗೆ ಶಂಕಿತ ಬಳಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರಿದಿದೆ. ಸೇನೆ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ. ಕಣಿವೆ ರಾಜ್ಯದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಗುರುವಾರ ಗುಂಡಿನ ಚಕಮಕಿ ನಡೆದಿದೆ. ಸೋಪೋರ್‌ನ ರಾಮ್‌ಪೋರಾ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆ ಮಾಡಿದ ಪೊಲೀಸರು ಮತ್ತು ಭದ್ರತಾ ಪಡೆ ಯೋಧರು ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು, ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
