ಅದಿರು ಅಕ್ರಮ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯಾಗಿದೆ. ಪ್ರಕರಣ ಸಂಬಂಧ ಶನಿವಾರ ಶಿಕ್ಷೆಯ ಪ್ರಮಾಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ ಮೂರನೇ ಪ್ರಕರಣದಲ್ಲಿ ಕೋರ್ಟ್ ಈ ಶಿಕ್ಷೆ ಪ್ರಕಟಿಸಿದೆ. ಇನ್ನುಳಿದ ಪ್ರಕರಣಗಳಲ್ಲಿಯೂ ಶಿಕ್ಷೆ ಹಾಗೂ ದಂಡ ಪ್ರಕಟಿಸಲಾಗಿದೆ. ಪ್ರಕರಣ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಕ್ಟೋಬರ್​ 24 ರಂದು ತೀರ್ಪು ಪ್ರಕಟಿಸಿ ಶಾಸಕ ಸತೀಶ್​ ಸೈಲ್​ ಅವರನ್ನು ದೋಷಿ ಎಂದು ಘೋಷಿಸಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಿದೆ.

ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ. ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ತಾಕೀತು ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪಟಾಕಿ ದುರಂತಗಳಿಗೆ ಅವಕಾಶ ನೀಡಬಾರದು. ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು. ರಾತ್ರಿ 8 ರಿಂದ 10 ರವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌

ದೊಡ್ಡಬಳ್ಳಾಪುರ: ಕೂಗೇನಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ

ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕೆಯ ಕೆನ್ನಾಲಿಗೆಗೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ದೊಡ್ಡಬಳ್ಳಾಪುರ ತಾಲೂಕು ಕೂಗೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆಗೆ ಹೋಗುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದೆ. ಪಿಕಾಪ್ ಇಲ್ಲದಿರುವುದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ನಂತರ ಗ್ಯಾರೇಜ್ ಬಳಿ ಟೆಸ್ಟ್ ಡ್ರೈವ್ ಗೆ ಹೋಗಿ ವಾಪಸ್ ಆಗುವ ವೇಳೆ ಘಟನೆ ನಡೆದಿದೆ.‌ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಮರ ಸಂತ್ರಸ್ತ ಗಾಜಾದಲ್ಲಿ ಇಸ್ರೇಲ್ ಬೀಕರ ದಾಳಿ; 38 ಮಂದಿ ಸಾವು

ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದೆ. ಸಮರ ಸಂತ್ರಸ್ತ ಗಾಜಾ ಮೇಲೆ ಇಸ್ರೇಲ್​ ಸೇನೆ ಮತ್ತೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಗಾಜಾ ಪ್ರದೇಶದ ಖಾನ್ ಯೂನಿಸ್‌ ಎಂಬಲ್ಲಿ ಬಹುಮಹಡಿ ವಸತಿ ಕಟ್ಟಡಗಳ ಇಸ್ಯೇಲ್ ವಾಯುಪಡೆ ಶುಕ್ರವಾರ ವೈಮಾನಿಕ ದಾಳಿ ನಡೆಸಿದೆ. ಸರಣಿ ಬಾಂಬ್ ದಾಳಿಯಲ್ಲಿ 14 ಮಕ್ಕಳು ಸೇರಿ 35ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ಟೀನ್ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತಪಟ್ಟ 14 ಮಕ್ಕಳ ಪೈಕಿ 13 ಮಕ್ಕಳು ಒಂದೇ ಕುಟುಂಬದವರಾಗಿದ್ದು, ಇಸ್ರೇಲಿ ಕ್ಷಿಪಣಿಗಳಿಂದ ಹರಬಂದ ಹೊಗೆಯಿಂದ ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ತಿಳಿಸಿದೆ.

ಕೃತಕ ನೆರೆಯ ಆತಂಕ ಇವರಿಗಿಲ್ಲ, ಉದ್ಯಾನ ನಗರಿಯ ಈ ಪ್ರದೇಶದಲ್ಲಿ ಅಧ್ವಾನವೇ ಇಲ್ಲ! ರಾಮಲಿಂಗಾ ರೆಡ್ಡಿ ದೂರದೃಷ್ಠಿ ಯೋಜನೆಗೆ ಜನರ ಸಮ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾದರೆ ಸಾಕು ಯದ್ಯಾನ ನಗರಿ ಅಧ್ವಾನಕ್ಕೆ ಸಾಕ್ಷಿಯಾಗುತ್ತದೆ. ಆದರೆ ಸಲಿಕಾನ್ ಸಿಟಿಯ ಬಿಟಿಎಂ ಲೇಔಟ್ ಈಗ ಅಂತಹಾ ಅವಾಂತಗಳಿಂದ ದೂರ ಇದೆ. ಈ ಕ್ಷೇತ್ರವನ್ನು ಪ್ರತಿನಿಧಿಸುವ ಸಚಿವ ರಾಮಲಿಂಗ ರೆಡ್ಡಿ ಅವರ ಇಚ್ಛಾಶಕ್ತಿಯ ಪರಿಣಾಮವಾಗಿ ಬಡಾವಣೆಯ ಪರಿಸ್ಥಿತಿ ಗಣನೀಯವಾಗಿ ಸುಧಾರಣೆಯಾಗಿದೆ. ಮಳೆ ಬಂದಾಗ ಆಗುವ ಆನಾಹುತಗಳನ್ನು ನೋಡಿದ ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ನಾಡಿನ ಗಮನಸೆಳೆದಿದೆ. ಕೋರಮಂಗಲ ಸಮೀಪದ ಪ್ರದೇಶವೊಂದು ಹಿಂದೆ ಹೇಗಿತ್ತು? ಈಗ ಹೇಗಿದೆ ಎಂಬ ಚಿತ್ರಣವು ಜನನಾಯಕ ಮನಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿ ನಿಂತಂತಿದೆ. ಕೋರಮಂಗಲ, ST BED, ಈಜಿಪುರ, ರಾಜೇಂದ್ರ ನಗರ, National Games Village ಮತ್ತು ವೆಂಕಟೇಶ್ವರ ಬಡಾವಣೆ ಮಡಿವಾಳ, ಪ್ರದೇಶಗಳಲ್ಲಿ ಮಳೆ ಬಂತೆಂದರೆ ಅಕ್ಷರಶಃ ನರಕ ಸದೃಶ ದೃಶ್ಯ ಕಾಣಸಿಗುತ್ತಿತ್ತು. ಕಳೆದ 20 ವರ್ಷಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡ ರೀತಿ …

ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಸೈಯದ್ ಅಜ್ಜಂ ಪೀರ್ ಖಾದ್ರಿ ಅವರು ನಾಮಪತ್ರ ಹಿಂಪಡೆಯಲಿದ್ದು, ಎಲ್ಲರೂ ಒಟ್ಟಾಗಿ ಪಕ್ಷದ ಪರವಾಗಿ ಚುನಾವಣೆ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಶಿಗ್ಗಾಂವಿಯಲ್ಲಿ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಗ್ಗೆ ಪ್ರತಿಕ್ರಿಯಿಸಿ,, “ನಾನು ಖಾದ್ರಿ ಅವರು ಹಾಗೂ ಅವರ ಕಾರ್ಯಕರ್ತರ ಜತೆ ಮಾತನಾಡಿದ್ದೇನೆ. ಈ ವಿಚಾರವಾಗಿ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ರೆಹಮಾನ್ ಖಾನ್ ಸೇರಿದಂತೆ ಆ ಜಿಲ್ಲೆಯ ನಾಯಕರ ಜತೆ ಚರ್ಚೆ ಮಾಡಿದ್ದು, ನಾಮಪತ್ರ ಹಿಂಪಡೆದು ಒಟ್ಟಾಗಿ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

ಹರಕೆ ಕುರಿಯಾದರೇ ಸಿ.ಪಿ.ಯೋಗೇಶ್ವರ್‌? ಚನ್ನಪಟ್ಟಣದ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌?

ಬೆಂಗಳೂರು: ಸಿ.ಪಿ.ಯೋಗೇಶ್ವರ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಜೆಡಿಎಸ್‌ ಪಕ್ಷ ಕಾರ್ಯಕರ್ತರ ಸಭೆ ನಡೆಸಿ, ಒಮ್ಮತದಿಂದ ಅಭ್ಯರ್ಥಿಯನ್ನು ಆರಿಸಲಾಗಿದೆ. ಆದರೆ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳದೆ ಸಿ.ಪಿ.ಯೋಗೇಶ್ವರ್‌ ಅವರನ್ನು ಆರಿಸಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದು, ಅದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಎಸ್‌ಸಿ, ಎಸ್‌ಟಿ ಸಮುದಾಯದ ಹಣ ದುರ್ಬಳಕೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಗಣಿ ಹಗರಣದಲ್ಲಿ ಶಾಸಕ ಸತೀಶ್‌ ಸೈಲ್‌…

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಝಣಝಣ ಕಾಂಚಾಣ; ಬರೋಬ್ಬರಿ 139 ಕೋಟಿ ರೂ ಚಿನ್ನಾಭರಣ ವಶ

ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆಯ ನಡುವೆ ರಣಾಂಗಣದಲ್ಲಿ ಝಣಝಣ ಕಾಂಚಾಣದ ಸದ್ದು ಮೊಳಗಿದೆ. ಮತದಾನದ ಅಖಾಡದಲ್ಲಿ ಅಕ್ರಮವಾಗಿ ಚಿಣ್ಣಾಭರಣ ಸಾಗಿಸುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಚುನಾವಣಾ ಅಧಿಕಾರಿಗಳು ಶುಕ್ರವಾರ ಭರ್ಜರಿ ಭೇಟೆಯಾಡಿದ್ದು, ಪುಣೆಯ ಲಾಜಿಸ್ಟಿಕ್ ಸೇವಾ ಸಂಸ್ಥೆಯೊಂದರ ವಾಹನದಲ್ಲಿ ಸಾಗಿಸುತ್ತಿದ್ದ 139 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಇದು ತಮಗೆ ಸೇರಿದ್ದು, ಕಾನೂನು ಬದ್ದವಾಗಿಯೇ ಸಾಗಿಸಲಾಗುತ್ತಿತ್ತು ಎಂದು ಜ್ಯುವೆಲ್ಲರ್ಸ್ ಸಂಸ್ಥೆಯೊಂದು ಸ್ಪಷ್ಟನೆ ನೀಡಿದೆ.

ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು..!

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬಂದ ನಂತರ ಬ್ರ್ಯಾಂಡ್‌ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು. ಕಾಂಗ್ರೆಸ್‌ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.…

ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ-ಜೆಡಿಎಸ್ ನಾಯಕರು ಘೋಷಿಸಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಘೋಷಣೆ ಮಾಡಿದರು.