ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ; ಬಿಜೆಪಿಯ ಕಿಶೋರ್ ಕುಮಾರ್ ಜುಭೇರಿ

ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯಗಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅಕ್ಟೋಬರ್ 21 ರಂದು ಮತದಾನ ನಡೆದಿತ್ತು. 5,906 ಮತದಾರರು ಮತ ಚಲಾಯಿಸಿದ್ದರು. ಗುರುವಾರ ಬೆಳಿಗ್ಗೆ ಮತ ಎಣಿಕೆ ನಡೆದಿದೆ. ಬಿಜೆಪಿಯಿಂದ ಕಿಶೋರ್ ಕುಮಾರ್, ಕಾಂಗ್ರೆಸ್​​ನಿಂದ ರಾಜು ಪೂಜಾರಿ, ಎಸ್‌ಡಿಪಿಐನಿಂದ ಅನ್ವರ್ ಸಾದತ್ ಮತ್ತು ಸ್ವತಂತ್ರ ಅಭ್ಯರ್ಥಿ ದಿನಕರ ಉಳ್ಳಾಲ್ ನಡುವೆ ಸ್ಪರ್ದೆ ಏರ್ಪಟ್ಟಿತ್ತು. ಕಿಶೋರ್ ಕುಮಾರ್ ಅವರು 1600ಕ್ಕೂ ಅಧಿಕ ಮತಗಳಿಂದ ಅವರು ಜಯ ಸಾಧಿಸುವ ಮೂಲಕ ಪರಿಷತ್ ಸದಸ್ಯತ್ವವನ್ನು ಬಿಜೆಪಿ ಉಳಿಸಿಕೊಂಡಿದೆ.

ಬಾಬುಸಾಪಾಳ್ಯ ಕಟ್ಟಡ ಕುಸಿತ ದುರಂತ: ಮಾಲೀಕ, ಗುತ್ತಿಗೆದಾರನ ಬಂಧನ

ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ನಡೆದ ದುರಂತದಲ್ಲಿ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು ಅವರ ರಕ್ಷಣೆಗೆ ಸುದೀರ್ಘ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆ ವೇಳೆ ಮತ್ತೆ 8 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ, ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಮಾಲೀಕ ಮತ್ತು ಕಂಟ್ರಾಕ್ಟರ್‌ನನ್ನು ಬಂಧಿಸಿದ್ದಾರೆ.

ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡರೇ ಸಿ.ಪಿ.ಯೋಗೇಶ್ವರ್‌? 

ಬೆಂಗಳೂರು: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದರು. ಈಗ ಬಿಜೆಪಿ-ಜೆಡಿಎಸ್‌ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಜೆಡಿಎಸ್‌ಗೆ ಅವಕಾಶ ನೀಡಲಾಗಿದೆ. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಸ್ಪರ್ಧಿಸಿದ್ದರು. ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅಲ್ಲಿ ಗೆದ್ದರು. ಇಲ್ಲಿ ಬಿಜೆಪಿ, ಜೆಡಿಎಸ್‌ ಎಂಬುದಕ್ಕಿಂತ ಎನ್‌ಡಿಎ ಗೆಲ್ಲಬೇಕು ಎಂಬ ಉದ್ದೇಶ…

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು,: ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಡಿಕೆಶಿ, “ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರು ಬುಧವಾರ (ಇಂದು) ಬೆಳಿಗ್ಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದರು. ಇಷ್ಟು ದಿನ ಎನ್ ಡಿಎಯಲ್ಲಿದ್ದೂ, ಮತ್ತೆ ಕಾಂಗ್ರೆಸ್ಸಿಗನಾಗಿ ಮುಂದುವರೆಯಬೇಕು ಎಂದು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದರು. “ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ದೂರವಾಣಿಯಲ್ಲಿ ಚರ್ಚೆ ಮಾಡಿದೆ. ನಂತರ ಪಕ್ಷದ ಎಲ್ಲ ಮುಖಂಡರ ಬಳಿ ಸಮಾಲೋಚನೆ ನಡೆಸಿದೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲದೇ ಇರುವ ಕಾರಣಕ್ಕೆ ಬುಧವಾರ ಬೆಳಿಗ್ಗೆಯೇ ಮುಖ್ಯಮಂತ್ರಿಗಳ ನಿವಾಸದಲ್ಲಿ…

ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ; ಕಾಂಗ್ರೆಸ್ ಪಕ್ಷ ಸೇರಿದ ‘ಸೈನಿಕ’

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ‌. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಾ.ಎಂ.ಸಿ. ಸುಧಾಕರ್, ಮಾಜಿ ಸಂಸದ ಡಿ ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ.ಜಿ.ಸಿ. ಚಂದ್ರಶೇಖರ್, ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಮೊದಲಾದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಯೋಗೇಶ್ವರ್, ನನ್ನ ರಾಜಕೀಯ ಜೀವನವನ್ನು ನಾವು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆರಂಭಿಸಿದ್ದೆ. ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ ಮನೆಯಲ್ಲಿ ನಾವು…

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ನಡೆದ ದುರಂತದಲ್ಲಿ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು ಅವರ ರಕ್ಷಣೆಗೆ ಸುದೀರ್ಘ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆ ವೇಳೆ ಮತ್ತೆ 8 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ, ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಮಾಲೀಕ ಮತ್ತು ಕಂಟ್ರಾಕ್ಟರ್‌ನನ್ನು ಬಂಧಿಸಿದ್ದಾರೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ; ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆ‌ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಸಂಬಧ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ‌ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬೃಹತ್ ಸಮಾವೇಶ ಗಮನಸೆಳೆಯಿತು. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಕೊಡುಗೆಗಳ ಬಗ್ಗೆ ಅರ್ಚಕ ಸಮೂಹ ಮೆಚ್ಚುಗೆ ವ್ಯಕ್ತಪಡಿಸಿತು. ಈ ಒಕ್ಕೂಟದ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ಎ, ಬಿ ಮತ್ತು ಸಿ ವರ್ಗದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ ದುಮ್ಮಾನಗಳಿಗೆ ಸ್ಪಂದಿಸಿ ಸದಾ ಅವರ ಏಳಿಗೆಗಾಗಿ ಸುಮಾರು 50 ವರ್ಷಗಳಿಂದ ಸರ್ಕಾರದೊಡನೆ ಹೋರಾಡುತ್ತಿರುವ ಹಿಂದು ಧಾರ್ಮಿಕ ಸರ್ವ ಸಮಾಜದ ದೇವಾಲಯಗಳ ನೌಕರರನ್ನು ಒಳಗೊಂಡಿರುವ ಸಂಸ್ಥೆಯಾಗಿರುತ್ತದೆ. ಸೋಮವಾರ ನಡೆದ ಸಮಾವೇಶದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಅರ್ಚಕರುಗಳು ಕಿಕ್ಕಿರಿದು ನೆರೆದಿದ್ದರು. ಸಮಾವೇಶದಲ್ಲಿ ಮಾತನಾಡಿದ ಧಾರ್ಮಿಕ ಮುಖಂಡರು, ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ ನಮ್ಮ ಮುಜರಾಯಿ ಇಲಾಖೆಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯ…

ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಜಲಸಮಾಧಿ; ಒಂದು ಶವ ಪತ್ತೆ

ಬೆಂಗಳೂರು: ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿರುವ ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಒಂದು ಮೃತದೇಹ ಮಂಗಳವಾರ ಪತ್ತೆಯಾಗಿದೆ. ಬಿಬಿಎಂಪಿಯಲ್ಲಿ ಪೌರಕಾರ್ಮಿಕ ಮಹಿಳೆಯ ಮಕ್ಕಳು ಸಾವನ್ನಪ್ಪಿದ್ದು ಅವರನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮಿ (13)‌ ಎಂದು‌ ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಇವರು ಕೆಂಗೇರಿ ಸಮೀಪದ ಹರ್ಷ ಲೇಔಟ್ ಬಳಿ ನೆಲೆಸಿದ್ದರು. ಕೆಲಸಕ್ಕೆಂದು ತಾಯಿ‌ ಹೊರ ಹೋಗಿದ್ದ ಸಂದರ್ಭದಲ್ಲಿ ಈ ಮಕ್ಕಳು ಕೆರೆಯ ಬಳಿಗೆ ತೆರಳಿದ್ದರೆನ್ನಲಾಗಿದ್ದು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸುದೀರ್ಘ ಕಾರ್ಯಾಚರಣೆ ನಡೆಸಿದ್ದಾರೆ.

ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

ಹೈದರಾಬಾದ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೊಟೆಲ್ ಗೆ ಆಗಮಿಸಿದ್ದ ವ್ಯಕ್ತಿಯೋರ್ವ ನಾಯಿಯನ್ನು ಓಡಿಸುವ ಆತುರದಲ್ಲಿ ತಾನೇ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಚಂದಾನಗರದಲ್ಲಿ ಈ ಘಟನೆ ನಡೆದಿದ್ದು ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಏರೆ ಬಗ್ಗೆ ಪ್ರಕರಣ ದಾಖಲಿಸಿರುವ ಚಂದಾನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.