ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನಗಳಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು. ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ…

ಮೀಸಲು ಅರಣ್ಯ ಒತ್ತುವರಿ ದೂರು; ತೇಜೋವಧೆ ಮಾಡುವ ಹುನ್ನಾರ ಎಂದ ಸಚಿವ ಬೋಸರಾಜು

ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್‌.ಓ.ಸಿ ನಂ. 16/2022-23 ನೋಟೀಸನ್ನು ಈಗಾಗಲೇ ಉಚ್ಚನ್ಯಾಯಾಲಯದ ಕಲಬುರ್ಗಿ ಪೀಠ ರದ್ದುಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಭೋಸರಾಜು, 1987 ರಲ್ಲಿ ನಾನು ಯಾವುದೇ ಹುದ್ದೆಯಲ್ಲೂ ಇರಲಿಲ್ಲ. ಕೃಷಿಗಾಗಿ ಅಂದಿನ ಕಾಲದಲ್ಲಿ ನನ್ನ ಕುಟುಂಬದಿಂದ ಭೂಮಿಯನ್ನು ಖರೀದಿಸಲಾಗಿತ್ತು. ಭೂಮಿ ಖರೀದಿಯ ಸಂಧರ್ಭದಲ್ಲಿ ಕಂದಾಯ ದಾಖಲೆಗಳು, ಕ್ರಯಪತ್ರಗಳು ಹಾಗೂ ಇನ್ನಿತರೆ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಲಾಗಿತ್ತು. ಪರಿಶೀಲನೆ ನಂತರ ಮೂಲ ಜಮೀನಿನ ಮಾಲೀಕರಿಂದ ಭೂಮಿಯನ್ನು ಖರೀದಿಸಲಾಗಿತ್ತು ಎಂದರು. ನಾನು ಇದೇ ಮೊದಲ ಬಾರಿಗೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೊದಲ ಬಾರಿ…

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕನಸು ಭಗ್ನವಾಗಿದೆ. ಸುಮಾರು ತಿಂಗಳಿಂದ ಸೆರೆವಾಸದಲ್ಲಿರುವ ಜೆಡಿಎಸ್‌ನ ಉಚ್ಛಾಟಿತ ನಾಯಕ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಚನ್ನಪಟ್ಟಣ ಕದನ ಕೌತುಕ; ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿಪಿವೈ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯು ಈಗಲೇ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೀಶ್ವರ್ ವಿಧಾನವಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌‌ಗಾಗಿ ಪಟ್ಟು ಹಿಡಿದಿದ್ದ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಸೋಮವಾರ ತಮ್ಮ ಶಾಸಕ ರಾಜೀನಾಮೆ ನೀಡಿದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ.

ಬಹುತೇಕ ಕಡೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ; ಹವಾಮಾನ ಇಲಾಖೆ

ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನವೂ ಏರುಪೇರಾಗಿದೆ. ಈ ನಡುವೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ಬೆಂಗಳೂರು ಸಹಿತ ರಾಜ್ಯದ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಕರಾವಳಿ ಮಲೆನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಮತ್ತು ಉತ್ತರ ಕನ್ನಡ, ಶಿವಮೊಗ್ಗ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಧಾರವಾಡ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ; ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ: ಜಿಲ್ಲಾಧಿಕಾರಿ ಘೋಷಣೆ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಆದೇಶಿಸಿದ್ದಾರೆ. ಆದರೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ…

ಭಾರೀ ಮಳೆ ತಂದ ಅವಾಂತರ; ರಾಜಧಾನಿ ಜನರ ಪರದಾಟ

ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನವೂ ಏರುಪೇರಾಗಿದೆ. ಈ ನಡುವೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಕೊನೆಯಿಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಪ ಚುನಾವಣೆ: ಶಿಗ್ಗಾವಿಗೆ ಬೊಮ್ಮಾಯಿ ಪುತ್ರ ಭರತ್, ಸಂಡೂರುಗೆ ಹನುಮಂತ್ ಅಭ್ಯರ್ಥಿ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಬೊಮ್ಮಾಯಿ ಪುತ್ರ ಭರತ್ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಿದೆ. ಘೋಷಿಸಿದೆ. ಸಂಡೂರು ಎಸ್‌ಟಿ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರಿಗೆ ಬಿಜೆಪಿ ಟಿಕೆಟ್ ಪ್ರಕಟಿಸಿದೆ.