ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯು ಈಗಲೇ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೀಶ್ವರ್ ವಿಧಾನವಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಸೋಮವಾರ ತಮ್ಮ ಶಾಸಕ ರಾಜೀನಾಮೆ ನೀಡಿದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ.
Year: 2024
ಬಹುತೇಕ ಕಡೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ; ಹವಾಮಾನ ಇಲಾಖೆ
ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನವೂ ಏರುಪೇರಾಗಿದೆ. ಈ ನಡುವೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ಬೆಂಗಳೂರು ಸಹಿತ ರಾಜ್ಯದ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಕರಾವಳಿ ಮಲೆನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಮತ್ತು ಉತ್ತರ ಕನ್ನಡ, ಶಿವಮೊಗ್ಗ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಧಾರವಾಡ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಹಿನ್ನೆಲೆ; ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ: ಜಿಲ್ಲಾಧಿಕಾರಿ ಘೋಷಣೆ
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಆದೇಶಿಸಿದ್ದಾರೆ. ಆದರೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ…
ಭಾರೀ ಮಳೆ ತಂದ ಅವಾಂತರ; ರಾಜಧಾನಿ ಜನರ ಪರದಾಟ
ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನವೂ ಏರುಪೇರಾಗಿದೆ. ಈ ನಡುವೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಕೊನೆಯಿಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಪ ಚುನಾವಣೆ: ಶಿಗ್ಗಾವಿಗೆ ಬೊಮ್ಮಾಯಿ ಪುತ್ರ ಭರತ್, ಸಂಡೂರುಗೆ ಹನುಮಂತ್ ಅಭ್ಯರ್ಥಿ
ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಬೊಮ್ಮಾಯಿ ಪುತ್ರ ಭರತ್ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಿದೆ. ಘೋಷಿಸಿದೆ. ಸಂಡೂರು ಎಸ್‌ಟಿ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರಿಗೆ ಬಿಜೆಪಿ ಟಿಕೆಟ್ ಪ್ರಕಟಿಸಿದೆ.
‘ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾದಂತೆ, ‘ಕೈ’ ನಾಯಕರ ಕುರ್ಚಿ ಗುದ್ದಾಟದಲ್ಲಿ ರೈತರು ಅನಾಥರಾದರೇ?
ಬೆಂಗಳೂರು: ರಾಜಧಾನಿ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಬೆಳೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಕೈಯಿಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಎದುರಾಗಿದೆ. ಹಲವಾರು ಕಡೆ ಕಟಾವಿಗೆ ಬಂದಿದ್ದ ಬೆಳೆಗಳು ಮಳೆಯಿಂದ ನಾಶವಾಗಿವೆ. ಅನೇಕ ಕಡೆ ಬೆಳೆಗಳಿಗೆ ಕೊಳೆರೋಗ, ಸುಟ್ಟರೋಗ ಬಂದು ಹಾಳಾಗಿವೆ. ರೈತರು ಇಂತಹ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದರೂ ಮುಖ್ಯಮಂತ್ರಿಗಳಾಗಲಿ, ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಾಗಲಿ, ಕಂದಾಯ ಸಚಿವ ಕೃಷ್ಣ ಬೈರೇಗೌಡರಾಗಲೀ ರೈತರ ಸಂಕಷ್ಟದ ಬಗ್ಗೆ ಈವರೆಗೂ ಚಕಾರ ಎತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ರೈತರ ಜಮೀನುಗಳಿಗೆ ಹೋಗಿ ಧೈರ್ಯ ಹೇಳಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರುಗಳ, ಶಾಸಕರು ಈವರೆಗೂ…
ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್.ಎಂ. ಕೃಷ್ಣ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಎಸ್.ಎಂ. ಕೃಷ್ಣ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿಯಾಗಿ ಅರೋಗ್ಯ ವಿಚಾರಿಸಿದ್ದಾರೆ.
ED ಆರೋಪಿಗಳ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿ; EDಗೆ ಮನವಿ
ಬೆಂಗಳೂರು: ಮುಡಾ ಹಗರಣದ ಆರೋಪಿಗಳಾಗಿರುವ ಅಧಿಕಾರಿಗಳು, ಸಂಭವನೀಯ ಸಾಕ್ಷಿದರರ ಹಾಗೂ ಪ್ರಭಾವಿಗಳ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ ಎಂದು ಅಶೋಕ್ ಹೇಳಿದ್ದಾರೆ. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ…
