ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕುಟುಂಬ ಸದಸ್ಯರ ವಿರುದ್ದ ಕೇಳಿಬಂದಿರುವ ಬಿಜೆಪಿ ಚುನಾವಣಾ ಟಿಕೆಟ್ ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧದ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪರಮೇಶ್ವರ್, ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಈ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಷಿ ಎಂಬುವರು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪರಮೇಶ್ವರ್ ವಿವರಿಸಿದರು. ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಷಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲು ಹೇಳುವುದು ಸರಿಯಲ್ಲ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ವರದಿ ಬಾರದೆ ಏನು ಹೇಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Year: 2024
ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ; ಪರಂ
ಬೆಂಗಳೂರು: ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ವಿಮಾನ ನಿಲ್ದಾಣ ಮಾಡಿದರೆ ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಲಕು ಬರಲಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂಬುದನ್ನು ತಿಳಿಸಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಬೇರೆಬೇರೆ ಹೊಸ ಯೋಜನೆಗಳನ್ನು ಇಟ್ಟುಕೊಳ್ಳಲಾಗಿದೆ. ತುಮಕೂರು ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿದ್ದು ಗ್ರೇಟರ್ ಬೆಂಗಳೂರು ಎಂದು ಪರಿಗಣಿಸುವಂತೆ ಕೇಳಿಕೊಳ್ಳಲಾಗಿದೆ. ನೆಲಮಂಗಲ, ದಾಬಸ್‌ಪೇಟೆವರೆಗೆ ಬೆಂಗಳೂರು ಬೆಳೆದಿದೆ. ತುಮಕೂರುವರೆಗೆ ಮೆಟ್ರೋ ರೈಲು…
ಮುಡಾ ಕಚೇರಿ ಮೇಲೆ ED ದಾಳಿ; ಇದಕ್ಕೆ ರಾಜಕೀಯ ಕಾರಣವಲ್ಲ ಎಂದ ಬಿಜೆಪಿ
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು. ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ…
ಮೀಸಲಾತಿ ಫೈಟ್; ಸೂಕ್ತ ನಿರ್ಧಾರದ ಭರವಸೆ ನೀಡಿದ ಸಿಎಂ; ಪಂಚಮಸಾಲಿ ಶ್ರೀಗಳ ಹೋರಾಟಕ್ಕೆ ಆರಂಭಿಕ ಜಯ
ಬೆಂಗಳೂರು: ಮೀಸಲಾತಿಯು ಸಮುದಾಯದ ಹಕ್ಕು ಆಗಿದ್ದು, ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಸುದೀರ್ಘ ಹೋರಾಟ ನಡೆಸುತ್ತಿರುವ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದರು. ಸಮುದಾಯದ ಅಹವಾಲು ಸ್ವೀಕರಿಸಿದ ಸಿಎಂ, ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಮೀಸಲಾತಿ ವಿಷಯದಲ್ಲಿ ಸರ್ಕಾರ ಮುಕ್ತಮನಸ್ಸು ಹೊಂದಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ಸರ್ಕಾರದ ನಿಲುವು. ಈ ವಿಚಾರದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಂತಿಮ ಶಿಫಾರಸ್ಸು ಕೈಸೇರಿದ ನಂತರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು…
ಬೆದರಿಕೆ ಸಂದೇಶಗಳ ಅವಾಂತರ: ಹಲವು ಸಾಮಾಜಿಕ ಜಾಲತಾಣ ಖಾತೆಗಳು ಬಂದ್
ನವದೆಹಲಿ: ದೇಶದ ಆತರಿಕ ಭದ್ರತೆಗೆ ಸಾಮಾಜಿಕ ಮಾಧ್ಯಮಗಳು ಸವಾಲಗಿ ಪರಿಣಮಿಸಿದೆ. ಅದರಲ್ಲೂ ಇತ್ತೀಚೆಗೆ ವಿಮಾನಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿರುವ ಪ್ರಕರಣ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ಈ ನಡುವೆ, ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ರವಾನಿಸಿದ್ದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಸೈಬರ್ ಭದ್ರತಾ ಏಜೆನ್ಸಿಗಳು ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸಿವೆ ಎಂದು ಮೂಲಗಳು ತಿಳಸಿವೆ. ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವು ವಿವಿಧ ಖಾತೆಗಳನ್ನು ಪರಿಶೀಲಿಸಿದ್ದು, ಹಲವಾರು ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗಾಜಾ ಸಮರ: ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಬಲಿ
ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದ್ದು, ಸೇನಾ ದಾಳಿಯಲ್ಲಿ ಹಮಾಸ್ ಮುಖ್ಯಸ್ಥನ ಹತ್ಯೆಯಾಗಿದೆ. ಗಾಜಾದಲ್ಲಿ ಐಡಿಎಫ್ ಕಾರ್ಯಾಚರಣೆ ವೇಳೆ 3 ಉಗ್ರರು ಸಾವನ್ನಪ್ಪಿದ್ದು ಇವರಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸೇರಿದ್ದಾನೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ. ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿಕೆ ನೀಡಿ, ಗಾಜಾದಲ್ಲಿನ ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾಹ್ಯಾ ಸಿನ್ವಾರ್ ಹತ್ಯೆಯಾಗಿರುವ ಬಗ್ಗೆ ಐಡಿಎಫ್ ತನಿಖೆ ನಡೆಸಿದೆ ಎಂದು ತಿಳಿಸಿದ್ದಾರೆ.
ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;
ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮೊದಲಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಇನ್ನು ಗೃಹಲಕ್ಷ್ಮಿ ಯೋಜನೆಯಿಂದ…
“ಒಂದು ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಲವು ವೈಶಿಷ್ಟ್ಯಗಳಿಂದ ಗಮನಸೆಳೆಯಿತು.ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ–2ರ ಆವರಣದಲ್ಲಿ ನಡೆದ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಸಾರಿಗೆ ಸಚಿವರು ಚಾಲನೆ ನೀಡಿದರು. ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಸಚಿವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು. ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿಲ್ಲ. ತಮ್ಮ ಸರ್ಕಾರ ಜಾರಿಗೆ ಬಂದ 18 ತಿಂಗಳು ಅವಧಿಯಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಈವರೆಗೆ 3417 ವಾಹನಗಳನ್ನು ಸೇರಿಸಲಾಗಿದೆ. ನಿಗಮವು ನೂತನವಾಗಿ…
ರಾಜ್ಯದ ಅತಿ ಎತ್ತರದ 63 ಅಡಿ ಶ್ರೀರಾಮಾಂಜನೇಯ ಮೂರ್ತಿ ಅ 23ರಂದು ಲೋಕರ್ಪಣೆ
ಬೆಂಗಳೂರು; ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ. 21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಮಾಧ್ಯಮಗೋಷ್ಟಿಯಲ್ಲಿ, ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಡಾ||ಹೆಚ್.ಎಂ.ಕೃಷ್ಣಮೂರ್ತಿ, ಶ್ರೀರಾಮ ಸೇವಾ ಮಂಡಳಿ ಅಧ್ಯಕ್ಷ ಕೆ.ಎಸ್.ಶ್ರೀಧರ್ , ಮಾಜಿ ಬಿಬಿಎಂಪಿ ಸದಸ್ಯ ಮೋಹನ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ ಎಂದರು. 21 ರಂದು ಸಂಜೆ ಗಣಪತಿಪೂಜೆ , ವಿದ್ವಜ್ಜನ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಕಳಸ ಪ್ರತಿಷ್ಟಾಪನೆ ಕಾರ್ಯ ಶುಭಾರಂಭವಾಗಲಿದೆ. 22 ರಂದು ಬೆಳಗ್ಗೆ 63ಅಡಿಯ ಶ್ರೀರಾಮಾಂಜನೇಯ ಚರಪ್ರತಿಷ್ಟಾನದ ಪೂಜೆ, ಹೋಮ ಸಂಕಲ್ಪವನ್ನು…
IMA ವಂಚನೆ ಪ್ರಕರಣದ ಪ್ರತಿಧ್ವನಿ; ಸಿದ್ದು ಸಂಪುಟದ ಸಚಿವರ ಬಂಧನಕ್ಕೆ ಯತ್ನಾಳ್ ಆಗ್ರಹ
ಬೆಂಗಳೂರು: IMA ವಂಚನೆ ಪ್ರಕರಣದಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರನ್ನು ಬಂಧಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಆಗ್ರಹಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆಕ್ಷೇಪಿಸಿ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು ನೀಡಿದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಪ್ರಭಾವಿಗಳನ್ನು ಸರ್ಕಾರ ರಕ್ಷಿಸದೇ IMA ಹಗರಣದಲ್ಲಿ ಭಾಗಿಯಾಗಿರುವ ಸಚಿವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಬಸನಗೌಡ ಪಾಟೀಲ್ ಯತ್ನಾಳ್, IMA ಸಂಸ್ಥೆಯಿಂದ ಸಚಿವ ಜಮೀರ್ ಅಹಮ್ಮದ್ ಅವರು ನಗದು (ಕ್ಯಾಶ್) ಮೂಲಕ ಸುಮಾರು 29.38 ಕೋಟಿ ಸ್ವೀಕರಿಸಿದ್ದರು ಹಾಗೂ 25 ಕೋಟಿ ರೂ ಅನ್ನು ಸಾಲವಾಗಿ ಪಡೆದಿದ್ದರು. ಈ ಸಾಲವನ್ನು ಜಮೀರ್ ಹಿಂದುರಿಗಿಸಿರಲಿಲ್ಲ. 25 ಕೋಟಿ ಸಾಲ ಮರುಪಾವತಿ ಮಾಡದೆ ಇದ್ದದ್ದಕ್ಕೆ IMA ಇಂದ ಯಾವುದೇ ಕಾನೂನು ಕ್ರಮ ಕೂಡ…
